ರಾಜಕಾರಣದಲ್ಲಿ ಪಕ್ಷಾಂತರ ಸಾಮಾನ್ಯ – ಭಿನ್ನಮತ ಶಮನವಾಗಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಮಂಗಳೂರು, ಏಪ್ರಿಲ್ 13: ರಾಜಕಾರಣದಲ್ಲಿ ಪಕ್ಷ ಬದಲಿಸೋದು ಸಾಮಾನ್ಯ ಆಗ್ತಾ ಇರುತ್ತೆ. ಅಸಮಾಧಾನಗೊಂಡವರ ಮನವೊಲಿಕೆ ಮಾಡುತ್ತೇವೆ.  ಪಕ್ಷದಲ್ಲಿ ಎದ್ದಿರುವ ಅಸಮಾಧಾನ ಸರಿಪಡಿಸಲಾಗುತ್ತಿದೆ.  ಕಾರ್ಯಕರ್ತರು ಗಟ್ಟಿ ಇದ್ದಾರೆ, ಇದರಿಂದ ಯಾವುದೇ ಹಾನಿಯಾಗುವುದಿಲ್ಲ  ಬಹುತೇಕ ಕಡೆ ಪಕ್ಷದ ಭಿನ್ನಮತ ಶಮನ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಅಸಮಾಧಾನಗೊಂಡ ನಾಯಕರ ಜೊತೆ ಪಕ್ಷದ ಹಿರಿಯರು ಮಾತನಾಡುತ್ತಿರುವುದಾಗಿ ತಿಳಿಸಿದರು. ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಾಗಿದೆ.  ಇನ್ನೂ 12 ಕ್ಷೇತ್ರ ಉಳಿದಿದೆ.  ಕೆಲವೆಡೆ … Read more

ಇಡಿ ದಾಳಿ: 17 ಕೋಟಿ ರೂ. ಮೌಲ್ಯದ ಆಸ್ತಿ ವಶ

ಸುದ್ದಿ360 ಮಂಗಳೂರು ಜ.12: ಮುಕ್ಕ ಗ್ರೂಪ್ ಆಫ್ ಕಂಪೆನೀಸ್ ನ ಮೊಹಮ್ಮದ್ ಹ್ಯಾರಿಸ್ ಅವರ ಹೆಸರಿನಲ್ಲಿದ್ದ 17.34 ಕೋಟಿ ರು. ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ವಶಪಡಿಸಿಕೊಂಡಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಉಲ್ಲಂಘನೆ ಆರೋಪದಲ್ಲಿ ಹ್ಯಾರಿಸ್‍ ಅವರ ಹೆಸರಿನಲ್ಲಿದ್ದ ಆಸ್ತಿಯನ್ನು ವಶಪಡಿಸಿಕೊಂಡಿರುವ  ಜಾರಿ ನಿರ್ದೇಶನಾಲಯ, ಮಂಗಳೂರಿನಲ್ಲಿರುವ ಎರಡು ಫ್ಲ್ಯಾಟ್ ಗಳು ಮತ್ತು ಒಂದು ಕೈಗಾರಿಕಾ ನಿವೇಶನ ವಶಕ್ಕೆ ಪಡೆದಿದೆ. ಹ್ಯಾರಿಸ್ ಅವರು ಫೆಮಾ  (ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ) ನಿಬಂಧನೆಗಳನ್ನು ಉಲ್ಲಂಘಿಸಿ ವಿದೇಶದಲ್ಲಿ ಸ್ಥಿರಾಸ್ತಿ, … Read more

ರಾಜಕೀಯ ಕಾರಣಕ್ಕೆ ಕೊಲೆಗಳಾಗುತ್ತಿರುವುದು ನಮ್ಮ ದೌರ್ಬಾಗ್ಯ: ಸಚಿವ ಜೆ.ಸಿ. ಮಾಧುಸ್ವಾಮಿ

ಚುನಾವಣಾ ವರ್ಷವಾದ್ದರಿಂದ ಪ್ರಚೋದನೆಗಳು ಹೆಚ್ಚಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಲಿದೆ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ಸುದ್ದಿ360, ದಾವಣಗೆರೆ ಜು.30: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿಲ್ಲ. ಕೆಲವೇ ಘಟನೆ ಹೊರತುಪಡಿಸಿದರೆ, ಕಾಂಗ್ರೆಸ್ ಕಾಲದಲ್ಲಿ ನಡೆದಷ್ಟು ಪ್ರತಿಭಟನೆ, ಹೋರಾಟ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿಲ್ಲ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೊಲೆಗಳಾಗಿದ್ದಕ್ಕೆ … Read more

ರಾಷ್ಟ್ರೀಯ  ತನಿಖಾ ದಳಕ್ಕೆ ಪ್ರವೀಣ್ ಹತ್ಯೆ ಪ್ರಕರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು. 29: ಸುಳ್ಯದ ಬಿಜೆಪಿ ಮುಖಂಡ  ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ  ತನಿಖಾ ದಳಕ್ಕೆ (NIA) ವಹಿಸಲು ತೀರ್ಮಾನಿಸಲಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ  ಶಕ್ತಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರವೀಣ್ ಹತ್ಯೆ ವ್ಯವಸ್ಥಿತವಾಗಿ ಆಗಿದೆ ಹಾಗೂ ಇದೊಂದು  ಅಂತರರಾಜ್ಯ ವಿಚಾರವಾಗಿದೆ. ಡಿಜಿ, ಐಜಿ ಅವರ ಬಳಿ ಚರ್ಚಿಸಲಾಗಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಪಡೆಯಲು ಸೂಚಿಸಲಾಗಿದೆ. ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಮಾಹಿತಿ ಪಡೆದ ನಂತರ ಗೃಹ … Read more

ಸುರತ್ಕಲ್: ಯುವಕನ ಬರ್ಬರ ಹತ್ಯೆ – ಬಿಗಿ ಬಂದೋಬಸ್ತ್

ಸುದ್ದಿ360 ಮಂಗಳೂರು ಜು.28 : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ ಮುಡಾ ಮಾರ್ಕೆಟ್ ಬಳಿ ಕಾರಿನಲ್ಲಿ ಬಂದ ಅಪರಿಚಿತರ ತಂಡವೊಂದು ಮಾರಕಾಸ್ತ್ರಗಳಿಂದ ಯುವಕೊಬ್ಬನ ಮೇಲೆರಗಿ ಕೊಲೆ ಮಾಡಿ ಪರಾರಿಯಾಗಿದೆ. ದಾಳಿಯಿಂದ  ಗಂಭೀರ ಗಾಯಗೊಂಡ ಯುವಕನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಕಾಟಿಪಳ್ಳ ಮಂಗಳಪೇಟೆ ನಿವಾಸಿ ಮಹಮ್ಮದ್ ಫಾಝಿಲ್ (23) ಹತ್ಯೆಗೀಡದ ಯುವಕ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ 7.30ರ ಸುಮಾರಿಗೆ ಫಾಝಿಲ್ ಚಪ್ಪಲಿ ಖರೀದಿಸಲೆಂದು ಮುಡಾ ಮಾರ್ಕೆಟ್ ಬಳಿಯ ಚಪ್ಪಲಿ ಅಂಗಡಿಗೆ … Read more

ಕರ್ನಾಟಕಕ್ಕೆ ಎನ್ ಐ ಎ ಅಗತ್ಯತೆ ಕುರಿತು ಕೇಂದ್ರಕ್ಕೆ ಮನವರಿಕೆ

ಪಿಎಫ್ಐ ಬ್ಯಾನ್ ಕೇಂದ್ರದಿಂದ ಶೀಘ್ರ ಕ್ರಮ: ಮುಖ್ಯಮಂತ್ರಿ ವಿಶ್ವಾಸ ಸುದ್ದಿ360 ಮಂಗಳೂರು, ಜುಲೈ 28 : ಕರ್ನಾಟಕ ರಾಜ್ಯಕ್ಕೆ ರಾಷ್ಟ್ರೀಯ ತನಿಖಾ ದಳವನ್ನು ಒದಗಿಸಲು ಕೋರಲಾಗಿದೆ. ವಿಶೇಷವಾಗಿ ಮಂಗಳೂರು ಭಾಗಕ್ಕೆ ಎನ್ ಐ ಎ ಯ ಅವಶ್ಯಕತೆ ಇದೆ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ಮಾಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಾಥಮಿಕ ತನಿಖಾ … Read more

ಪ್ರವೀಣ್ ಹತ್ಯೆ ಯೋಜನಾಬದ್ಧವಾದ ಭಯೋತ್ಪಾದಕ ಕೃತ್ಯ: ಮುಖ್ಯಮಂತ್ರಿ ಬೊಮ್ಮಾಯಿ

ಸರ್ಕಾರ ಮತ್ತು ಬಿಜೆಪಿ ಪಕ್ಷದಿಂದ ತಲಾ 25 ಲಕ್ಷ ರೂ ಚೆಕ್ ಪ್ರವೀಣ್ ಕುಟುಂಬಕ್ಕೆ ಸುದ್ದಿ360 ಮಂಗಳೂರು, ಜು. 28 : ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಅವರು ಇಂದು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ಮಾಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರವೀಣ್ ತಮ್ಮ … Read more

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆ ಕೊಲೆ ಪ್ರಕರಣ: ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾಹಿತಿ

ಸುದ್ದಿ360 ಮಂಗಳೂರು, ಜು.28: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರವೀಣ್ ಪರಿವಾರಕ್ಕೆ ಸಾಂತ್ವನ ಹೇಳುವ ಮತ್ತು ಅವರೊಂದಿಗೆ ಮಾತುಕತೆ ನಡೆಸಿ, ಪರಿಸ್ಥಿತಿಯ ಅವಲೋಕಿಸುವ ಉದ್ದೇಶದಿಂದ ಮಂಗಳೂರಿಗೆ ತೆರಳಿ ಅಲ್ಲಿಂದ ಬೆಳ್ಳಾರೆ ಗ್ರಾಮಕ್ಕೆ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮುಖ್ಯಮಂತ್ರಿ ಬೊಮ್ಮಾಯಿಯವರು ಮಾತನಾಡಿದರು. ಇದರ ಒಂದು ವೀಡಿಯೋ ಬೈಟ್ ನಿಮಗಾಗಿ.

ಪಬ್ ನಲ್ಲಿ‌ ವಿದ್ಯಾರ್ಥಿಗಳ ಪಾರ್ಟಿ: ಬಜರಂಗದಳ ಕಾರ್ಯಕರ್ತರಿಂದ ತಡೆ –ತಹಬದಿಗೆ ತಂದ ಪೊಲೀಸರು

ಸುದ್ದಿ360 ಮಂಗಳೂರು, ಜು.25: ನಗರದ ಬಲ್ಮಠದ ಪಬ್ ವೊಂದರಲ್ಲಿ‌‌ ಕಾಲೇಜು ವಿದ್ಯಾರ್ಥಿಗಳು ಪಾನಮತ್ತರಾಗಿ ಅಸಭ್ಯವಾಗಿ ವರ್ತಿಸುತ್ತಿದ್ದರೆಂಬ ಕಾರಣದಿಂದ ಬಜರಂಗದಳ ಕಾರ್ಯಕರ್ತರು ಧಾಳಿ ನಡೆಸಿ ತಡೆಯೊಡ್ಡಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಎಲ್ಲರನ್ನೂ ಚದುರಿಸಿದ್ದಾರೆ. ನಗರದ ಬಲ್ಮಠದ ರಿ-ಸೈಕಲ್ ದಿ ಲಾಂಜ್ ಪಬ್ ನಲ್ಲಿ ನಗರದ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಬೀಳ್ಕೊಡುಗೆ ಕಾರ್ಯಕ್ರಮದ ಅಂಗವಾಗಿ ಪಾರ್ಟಿ ಆಯೋಜಿಸಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪಾನಮತ್ತರಾಗಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂಬ ಆರೋಪ ಹಿನ್ನಲೆಯಲ್ಲಿ ಬಜರಂಗದಳ ಕಾರ್ಯಕರ್ತರು … Read more

ಮುಳುಗಿತೇ ಮಂಗಳೂರಿನ ಸ್ಮಾರ್ಟ್ !?

ಸುದ್ದಿ360 ಮಂಗಳೂರು, ಜೂ.30:  ಸ್ಮಾರ್ಟ್ ಸಿಟಿಯಾಗಲು ದಾಪುಗಾಲು ಇಟ್ಟಿರುವ ಮಂಗಳೂರು ನಗರ ಈ ಹಿಂದಿನ ವರ್ಷಗಳಂತೆಯೇ ಜಲಾವೃತಗೊಂಡಿದೆ. ಮಳೆಗಾಲ ಪ್ರಾರಂಭವಾದರೆ ಮಂಗಳೂರು ಜಲಾವೃತಗೊಳ್ಳುವುದು ಕಳೆದ ಹಲವು ವರ್ಷಗಳಿಂದ ಸಾಮಾನ್ಯವಾಗಿಬಿಟ್ಟಿದೆ. ಬುದ್ದಿವಂತರ ಜಿಲ್ಲೆ ಮಂಗೂಳೂರಿನ ಈ ಸಮಸ್ಯೆಯನ್ನು ಬಗೆಹರಿಸುವಲ್ಲಿ ಇಚ್ಛಾಶಕ್ತಿಯ ಕೊರತೆ ಎದ್ದು ಕಾಣುತ್ತಿದೆ. ಚರಂಡಿ ವ್ಯವಸ್ಥೆಯೇ ಇಲ್ಲದ ಹೆದ್ದಾರಿಗಳು, ಅವೈಜ್ಞಾನಿಕ ಕಾಮಗಾರಿಗಳು, ಹೊಂಡದಿಂದ ಕೂಡಿದ ರಸ್ತೆಗಳು, ಮಳೆಗಾಲಕ್ಕೂ ಮುನ್ನ ನೀರು ಸರಾಗವಾಗಿ ಹರಿಯುವಂತೆ ಚರಂಡಿಗಳನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳದ ಪಾಲಿಕೆ ಅಧಿಕಾರಿಗಳು, ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಬಿಸಾಡುವ ಸಾರ್ವಜನಿಕರು … Read more

error: Content is protected !!