ಹಾರಂಗಿ: ಸಂಗೀತ ಕಾರಂಜಿ ವೇಳೆ ಕಾಡಾನೆ ಪ್ರತ್ಯಕ್ಷ – ಪ್ರವಾಸಿಗರು ದಿಕ್ಕಾಪಾಲು

ಸುದ್ದಿ360 ಮಡಿಕೇರಿ, ಜು.23: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹಾರಂಗಿ ಉದ್ಯಾನವನದಲ್ಲಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಪ್ರವಾಸಿಗರು ದಿಕ್ಕಾಪಾಲಾಗಿ ಓಡಿ ಹೋದ ಘಟನೆ ಶನಿವಾರ ಸಂಜೆ ನಡೆದಿದೆ. ಉದ್ಯಾನವನದಲ್ಲಿ ಸಂಗೀತ ಕಾರಂಜಿ ನಡೆಯುವ ವೇಳೆ ಈ ಕಾಡಾನೆ ಪ್ರವೇಶಿಸಿದೆ.  ಹಾರಂಗಿ ಅಣೆಕಟ್ಟೆಗೆ ಹೊಂದಿಕೊಂಡಂತೆ ಇರುವ ಅತ್ತೂರು ಮೀಸಲು ಅರಣ್ಯ ಪ್ರದೇಶದಿಂದ ಉದ್ಯಾನವನ ಪ್ರವೇಶಿಸಿದ ಕಾಡಾನೆ ಪ್ರವಾಸಿಗರನ್ನು ಭಯಭೀತಗೊಳಿಸಿದೆ. ಜಲಾಶಯದ ಭದ್ರತಾಪಡೆಯ ಸಿಬ್ಬಂದಿಗಳು ಪ್ರವಾಸಿಗರನ್ನು ಸುರಕ್ಷಿತವಾಗಿ ಉದ್ಯಾನವನದಿಂದ ಹೊರ ಕಳುಹಿಸಿದ್ದಾರೆ. ನಂತರ ಹಾರಂಗಿ ಗ್ರಾಮದ ಕಿರು ಸೇತುವೆಯ ಬಳಿಯ … Read more

ಮಡಿಕೇರಿಯಲ್ಲಿ ಭಾರೀ ಸದ್ದಿನೊಂದಿಗೆ ಭೂಕಂಪನದ ಅನುಭವ

ಸುದ್ದಿ360 ಮಡಿಕೇರಿ ಜು.2: ತಾಲೂಕಿನ ಪರಾಜೆ ಗ್ರಾಮದಲ್ಲಿ ಶನಿವಾರ ರಾತ್ರಿ 8.25ರ ಸುಮಾರಿಗೆ ಭೂಮಿಯಿಂದ ಭಾರೀ ಪ್ರಮಾಣದ ಶಬ್ಧ ಕೇಳಿ ಬಂದಿದ್ದು, ಗ್ರಾಮಸ್ಥರನ್ನು ಭಯಬೀತಗೊಳಿಸಿದೆ. ಭೂಕಂಪನದ ಭಯದಿಂದ ಮನೆಯೊಳಗಡೆ ಇದ್ದವರು ಹೊರಗೆ ಓಡಿ ಬಂದಿದ್ದಾರೆ. ಇಲ್ಲಿನ ಚೆಂಬು, ಸಂಜಾಜೆ, ಗೂನಡ್ಕ ಭಾಗಗಳಲ್ಲಿ ಈ ಶಬ್ಧ ಕೇಳಿ ಬಂದಿದ್ದು, ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಇದು ಭೂಕಂಪನ ಹೌದೋ ಇಲ್ಲೋ ಎಂದು ಇನ್ನು ಸ್ಪಷ್ಟಪಡಿಸಿಲ್ಲ.

error: Content is protected !!