ದಾವಣಗೆರೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಪಥಸಂಚಲನ–ಸಾಂಸ್ಕೃತಿಕ ಕಾರ್ಯಕ್ರಮ ವಿಜೇತ ತಂಡಗಳು

ದಾವಣಗೆರೆ: ಗಣರಾಜ್ಯೋತ್ಸವ ಅಂಗವಾಗಿ ಆಯೋಜಿಸಲಾದ ಪಥಸಂಚಲನ ಕಾರ್ಯಕ್ರಮದಲ್ಲಿ ಪೊಲೀಸ್, ಗೃಹರಕ್ಷಕ ದಳ, ಅಗ್ನಿಶಾಮಕ ದಳ, ಎನ್‌ಸಿಸಿ, ಸ್ಕೌಟ್ಸ್ & ಗೈಡ್ಸ್ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ಶಿಕ್ಷಣ ಸಂಸ್ಥೆಗಳ ತಂಡಗಳು ಭಾಗವಹಿಸಿ ಶಿಸ್ತುಬದ್ಧ ಮತ್ತು ಆಕರ್ಷಕ ಪ್ರದರ್ಶನ ನೀಡಿದವು. ಕಾರ್ಯಕ್ರಮವು ರಾಷ್ಟ್ರಭಕ್ತಿ, ಏಕತೆ ಮತ್ತು ಶಿಸ್ತು ಎಂಬ ಮೌಲ್ಯಗಳನ್ನು ಪ್ರತಿಬಿಂಬಿಸುತ್ತಾ ಅತ್ಯಂತ ಸಂಭ್ರಮದಿಂದ ನಡೆಯಿತು. ವಿವಿಧ ಇಲಾಖೆ, ಶಿಕ್ಷಣ ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ವಿಜೇತ ತಂಡಗಳಿಗೆ ಜಿಲ್ಲಾಡಳಿತ ವತಿಯಿಂದ … Read more

ದಾವಣಗೆರೆ ಅಭಿವೃದ್ಧಿಗೆ ಬಜೆಟ್‌ನಲ್ಲಿ ವಿಶೇಷ ಆದ್ಯತೆ: ನೀರಾವರಿ–ಆರೋಗ್ಯ–ಶಿಕ್ಷಣಕ್ಕೆ ಹೆಚ್ಚಿನ ಒತ್ತು – ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ದಾವಣಗೆರೆ, ಜನವರಿ 26: ಮುಂಬರುವ ರಾಜ್ಯ ಬಜೆಟ್‌ನಲ್ಲಿ ದಾವಣಗೆರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ವಿಶೇಷವಾಗಿ ನೀರಾವರಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳ ಬಲವರ್ಧನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ. ಸೋಮವಾರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದ ನಂತರ ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯ … Read more

ದಾವಣಗೆರೆ ನೇತಾರನ ಅಂತಿಮ ದರ್ಶನ

ದಾವಣಗೆರೆ: ಮಾಜಿ ಸಚಿವರು ಹಾಗೂ ಶಾಸಕರಾದಡಾ ಶಾಮನೂರು ಶಿವಶಂಕರಪ್ಪನವರ ಪಾರ್ಥಿವ ಶರೀರವನ್ನು ಇಂದು ಸೋಮವಾರ ದಾವಣಗೆರೆ ಮನೆಯಲ್ಲಿ ಬೆಳೆಗ್ಗೆ 7 ಗಂಟೆಯಿಂದ 10.30 ಗಂಟೆ ತನಕ ಪೂಜಾ ವಿಧಿವಿದಾನ ಹಾಗೂ ಕುಟುಂಬಸ್ಥರಿಗೆ ದರ್ಶನಕ್ಕೆ ಅನುವುಮಾಡಲಾಗಿದೆ. ಸಾರ್ವಜನಿಕರಿಗೆ ಅಂತಿಮದರ್ಶನ: ದಾವಣಗೆರೆ ಹೈ ಸ್ಕೂಲ್ ಮೈದಾನದಲ್ಲಿ ಸೋಮವಾರ ಮಾಧ್ಯಾಹ್ನ12 ಗಂಟೆಯಿಂದ – 3 ಗಂಟೆವರೆಗೆ ಸಾರ್ವಜನಿಕರು ಅಂತಿಮದರ್ಶನ ಮಾಡಬಹುದಾಗಿದೆ.ಅಂತಿಮ ವಿಧಿವಿಧಾನ :ಇಂದು ಸಂಜೆ 4.30 ಗಂಟೆಗೆ ಅಂತಿಮ ವಿಧಿವಿಧಾನಗಳನ್ನು ದಾವಣಗೆರೆಯ ಬಂಬೂಬಜಾರ್ ರಸ್ತೆಯ ಕಲ್ಲೇಶ್ವರ ಮಿಲ್ ಆವರಣದಲ್ಲಿ ನೆರವೇರಲಿದೆ ಎಂದು … Read more

ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನೆಲೆ ದಾವಣಗೆರೆ ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದಾವಣಗೆರೆ: ಮಾಜಿ ಸಚಿವರು ಹಾಗೂ ಶಾಸಕರಾದ ಸನ್ಮಾನ್ಯ ಶಾಮನೂರ್ ಶಿವಶಂಕರಪ್ಪನವರು ನಿಧನರಾದ ಪ್ರಯುಕ್ತ ಅವರ ಗೌರವಾರ್ಥವಾಗಿ ದಿನಾಂಕ 15.12.2025 ರ ಸೋಮವಾರದಂದು ದಾವಣಗೆರೆ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ – ಪದವಿ ಪೂರ್ವ ಕಾಲೇಜುಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ರಜೆ ಘೋಷಿಸಲಾಗಿದೆ. ಈ ರಜೆಯನ್ನು ಮುಂದಿನ ಶನಿವಾರ 27.12.2025 ರಂದು ಪೂರ್ತಿ ದಿನ ಶಾಲೆಯನ್ನು ನಡೆಸಿ ಸರಿದೂಗಿಸಲು ತಿಳಿಸಲಾಗಿದೆ.

ಹಿರಿಯ ರಾಜಕಾರಣಿ, ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

ದಾವಣಗೆರೆ: ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ದಾವಣಗೆರೆ ದಣಿ ಎಂದೇ ಕರೆಯಲ್ಪಡುತ್ತಿದ್ದ ಶಾಮನೂರು ಶಿವಶಂಕರಪ್ಪ (95) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಅವರು, ಕುಟುಂಬಸ್ಥರು, ಅಪಾರ ಬೆಂಬಲಿಗರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.ಶಾಮನೂರು ನಿವಾಸದಲ್ಲಿ ದುಃಖ ಮಡುಗಟ್ಟಿದೆ. ದೀರ್ಘಕಾಲದವರೆಗೆ ಜನಸೇವೆಯಲ್ಲಿದ್ದ ಅವರು, 6 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿದ್ದ ಶಾಮನೂರು ಶಿವಶಂಕರಪ್ಪ, ಇತ್ತೀಚೆಗೆ 95ನೇ ವರ್ಷಕ್ಕೆ ಪದಾರ್ಪಣೆ ಮಾಡಿದ್ದರು. ಹುಟ್ಟುಹಬ್ಬಕ್ಕೆ ಸಿಎಂ … Read more

ಶ್ರೀಗಂಧದಲ್ಲಿ ಮಂತ್ರಮುಗ್ಧಗೊಳಿಸಿದ ತಂದೆ-ಮಗಳ ಸಂಗೀತ ಸುಧೆ

shrigandha-residency-sangeetha-shrigandha-davangere

ದಾವಣಗೆರೆ: ನಗರದ ಪಿ.ಬಿರಸ್ತೆಯಲ್ಲಿರುವ ಶ್ರೀ ಗಂಧ ರೆಸಿಡೆನ್ಸಿಯ ಗಿಹಾನ್‍ ಸಭಾಂಗಣದಲ್ಲಿ ಭಾನುವಾರ ಸಂಜೆ  ಮನೋಲ್ಲಾಸ ನೀಡುವಂತಹ ಸಂಗೀತ ಕಾರ್ಯಕ್ರಮ ಕಲಾರಸಿಕರನ್ನು ಮಂತ್ರಮುಗ್ಧಗೊಳಿಸಿತು. ಡಾ.ಪಂ. ಪುಟ್ಟರಾಜ ಸೇವಾ ಸಮಿತಿ ರಿ. ಗದಗ, ಶ‍್ರೀಗಂಧ ರೆಸಿಡಿನ್ಸಿ, ಪಿ.ಬಿ.ರಸ್ತೆ, ದಾವಣಗೆರೆ ಹಾಗೂ ಕಲಾ ವಿಕಾಸ ಪರಿಷತ್‍ ರಿ. ಗದಗ  ಇವರ ಸಂಯುಕ್ತಾಶ್ರಯದಲ್ಲಿ ನಡೆದ ‘ಸಂಗೀತ ಶ‍್ರೀಗಂಧ’ ಮಾಸಿಕ ಕಾರ್ಯಕ್ರಮ-2ರಲ್ಲಿ ಅಂತರಾಷ್ಟ್ರೀಯ ಖ್ಯಾತಿಯನ್ನು ಪಡೆದ, ಆಕಾಶವಾಣಿ ಕಲಾವಿದರೂ ಆದ ಪಂ. ಸಾತಲಿಂಗಪ್ಪ ದೇಸಾಯಿ ಕಲ್ಲೂರು, ಧಾರವಾಡ ಇವರ ತಬಲಾ ಸಾಥ್‍ನಲ್ಲಿ ಸ್ವತಃ ತಮ್ಮ … Read more

ಮಾನಸಿಕ ಖಿನ್ನತೆಗಳ ಮನಸ್ಸುಗಳನ್ನು ಪುಳಕಿತಗೊಳಿಸುವ ಶಕ್ತಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿದೆ- ಡಾ. ಸತೀಶ್‌ಕುಮಾರ್ ಪಿ.ವಲ್ಲೇಪುರೆ

ದಾವಣಗೆರೆ: ಮಾನವನು ಕೇವಲ ಹೊಟ್ಟೆಪಾಡಿಗೆ ಸೀಮಿತವಾಗದೇ ಸಾಂಸ್ಕೃತಿಕ, ಸಮಾಜ ಸೇವೆಗಳಿಗೆ ತೊಡಗಿಕೊಂಡರೆ ನಮ್ಮ ನಿಮ್ಮೆಲ್ಲರ ಜೀವನಕ್ಕೆ ಸಾರ್ಥಕತೆ ಬರುತ್ತದೆ. ಮಾನಸಿಕ ಖಿನ್ನತೆಗಳ ಮನಸ್ಸುಗಳನ್ನು ಪುಳಕಿತಗೊಳಿಸುವ ಶಕ್ತಿ ಸಾಂಸ್ಕೃತಿಕ ಚಟುವಟಿಕೆಗಳಿಲ್ಲಿದೆ. ವಾಣಿಜ್ಯ ನಗರಿಯನ್ನು ಸಾಂಸ್ಕೃತಿಕ ನಗರವನ್ನಾಗಿ ಪರಿವರ್ತಿಸಿದ ಸಾಧನೆ  ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಕಳೆದ ಮೂರುವರೆ ದಶಕಗಳಿಂದ ನಿರಂತರವಾಗಿ ಕಠಿಣ ಪರಿಶ್ರಮದಿಂದ ಸಾಧನೆ ಮಾಡಿದ ಸಾಲಿಗ್ರಾಮ ಗಣೇಶ್ ಶೆಣೈ ಯವರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದು ದಾವಣಗೆರೆಯ ವಿಶ್ವವಿದ್ಯಾಲಯದ ದೃಶ್ಯಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸತೀಶ್‌ಕುಮಾರ್ ಪಿ.ವಲ್ಲೇಪುರೆ ತಮ್ಮ ಅಂತರಾಳದ … Read more

ದಸರಾ ಮಹೋತ್ಸವ- ನಗರದೇವತೆ ಶ್ರೀ ದುರ್ಗಾಂಭಿಕಾ ಸನ್ನಿದಿಯಲ್ಲಿ ಸಾಮೂಹಿಕ ವಿವಾಹ

ದಾವಣಗೆರೆ: ದಸರಾ ಮಹೋತ್ಸವದ ಪ್ರಯುಕ್ತ ನಗರದೇವತೆ ಶ್ರೀ ದುರ್ಗಾಂಭಿಕಾ ದೇವಸ್ಥಾನದಲ್ಲಿ ಸಾಮೂಹಿಕ ವಿವಾಹವನ್ನು ಹಮ್ಮಿಕೊಳ್ಳಲಾಗಿತ್ತು.ಪ್ರತಿವರ್ಷವೂ ನವರಾತ್ರಿ ಹಬ್ಬದ ಅಂಗವಾಗಿ ಸಾಮೂಹಿಕ ವಿವಾಹ ಏರ್ಪಡಿಸುತ್ತಾ ಬಂದಿದ್ದು, ಈ ಬಾರಿಯೂ ಸಹ ಸಾಮೂಹಿಕ ವಿವಾಹದಲ್ಲಿ 21 ಜೋಡಿ ನೂತನ ದಾಂಪತ್ಯಕ್ಕೆ ಅಡಿಯಿಟ್ಟರು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಆಶೀರ್ವಾದದಿಂದ ನವಜೋಡಿಯ ದಾಂಪತ್ಯ ಜೀವನವು ಸುಖ, ಶಾಂತಿ ಮತ್ತು ಸಮೃದ್ಧಿಯಿಂದ ಕೂಡಿರಲಿ ಎಂದು ಹಾರೈಸಿದರು.ಈ ಸಂದರ್ಭದಲ್ಲಿ ಆವರಗೊಳ್ಳ ಓಂಕಾರ ಶಿವಾಚಾರ್ಯ ಮಹಾಸ್ವಾಮಿಗಳು, … Read more

ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

kendriya vidyalaya davangere

ದಾವಣಗೆರೆ: ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ 1 ನೇ ತರಗತಿ ಮತ್ತು ಬಾಲ್ವಾಟಿಕ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಪೋಶಕರು ಜಾಲತಾಣದಲ್ಲಿ ಕೊಟ್ಟಿರುವ ಸೂಚನೆಗಳನ್ನು ಅನುಸರಿಸುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶವಿರುತ್ತದೆ.1ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಬಳಸಿರಿ. https://kvsonlineadmission.kvs.gov.in/index.html ದಾವಣಗೆರೆಯಲ್ಲಿ 2023-24 ರಿಂದ ಬಾಲ್ವಾಟಿಕ -3 (ಯುಕೆಜಿ) ಪ್ರಾರಂಭಿಸಲಾಗಿದೆ. ಬಾಲ್ವಾಟಿಕ-3 ಪ್ರವೇಶಾತಿಗೆ ಈ ಕೆಳಗಿನ‌ ಲಿಂಕ್ ಬಳಸಬಹುದಾಗಿದೆ. … Read more

ಜಿಲ್ಲಾ ಉಸ್ತುವಾರಿ ಸಚಿವರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ

ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ನಗರದ ವಿವಿಧ ಭಾಗಗಳಲ್ಲಿ ಅಂದಾಜು ರೂ. 6.ಕೋಟಿ ವೆಚ್ಚದಲ್ಲಿ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು. ನಗರದ ವಾರ್ಡ್ ನಂ.44 ರಲ್ಲಿ ಬರುವ ಮಹಾಲಕ್ಷ್ಮೀ ಬಡಾವಣೆ ಮುಖ್ಯ ರಸ್ತೆಯಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿ, ವಾರ್ಡ್ ನಂ.19 ದಾವಣಗೆರೆ ಮಹಾನಗರ ಪಾಲಿಕೆಯ ಚಾಮರಾಜಪೇಟೆ ಸರ್ಕಲ್ ಹತ್ತಿರ ಇರುವ ಕೆ.ಆರ್. ಮಾರುಕಟ್ಟೆ ಕಟ್ಟಡಕ್ಕೆ ರ್ಯಾಂಪ್ ನಿರ್ಮಾಣ ಕಾಮಗಾರಿ, … Read more

error: Content is protected !!