ಮಾಸಾಶನ ಪಡೆಯುತ್ತಿರುವ ಕಲಾವಿದರು  ಜೀವಂತ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ದಾವಣಗೆರೆ; ಏ.13: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಶಾಸನ ಪಡೆಯುತ್ತಿರುವ ಸಾಹಿತಿ ಮತ್ತು ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರವನ್ನು ಏಪ್ರಿಲ್ 25 ರೊಳಗಾಗಿ ಸಲ್ಲಿಸಬೇಕು. ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಇತ್ತೀಚಿನ ಭಾವಚಿತ್ರ ಮತ್ತು ಬ್ಯಾಂಕ್ ಪಾಸ್ ಬುಕ್‍ನೊಂದಿಗೆ ಜೀವಿತಾವಧಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಬ್ಯಾಂಕ್ ಮ್ಯಾನೇಜರ್ ಸಹಿ ಪಡೆದು ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ.27 ರಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಮತ್ತು ಹೆಚ್ಚಿನ … Read more

ಡಾ.ಬಿ.ಆರ್ ಅಂಬೇಡ್ಕರ್ ರವರ 132ನೇ ಜಯಂತಿ ಸರಳ ಆಚರಣೆ

ದಾವಣಗೆರೆ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏಪ್ರಿಲ್ 14 ರಂದು ಬೆಳಿಗ್ಗೆ 10.30 ಗಂಟೆಗೆ ಡಾ. ಬಿ.ಆರ್ ಅಂಬೇಡ್ಕರ್ ರವರ 132ನೇ ಜಯಂತಿ ಆಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುತ್ತದೆ. ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಆಚರಣೆಯನ್ನು ಸರಳವಾಗಿ ಆಚರಿಸಲು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ

ದಾವಣಗೆರೆ: ಅಕ್ರಮ ಚುನಾವಣಾ ಪ್ರಚಾರ ಆರೋಪ – ಕಾರ್ಯಕರ್ತರ ಜಟಾಪಟಿ

59 ಲ್ಯಾಪ್ ಟಾಪ್ ಜಪ್ತಿ – ವಿಚಾರಣೆ ದಾವಣಗೆರೆ, ಸುದ್ದಿ 360: ಅನುಮತಿ ಪಡೆಯದೆ ಟೆಲಿಕಾಲಿಂಗ್ ಮೂಲಕ‌ ಮತಬೇಟೆಯ ತಂತ್ರದಲ್ಲಿ‌ ತೊಡಗಿದ್ದ ಬಿಜೆಪಿಯ ತಂತ್ರಗಾರಿಕೆಯನ್ನು ಕಾಂಗ್ರೆಸ್ ಬಟಾಬಯಲು ಮಾಡಿದೆ. ನಗರದ ಚೇತನಾ ಹೋಟೆಲ್ ಎದುರಿನ ಜೆಪಿ‌ ಫಂಕ್ಷನ್ ಹಾಲ್ನಲ್ಲಿ ಟೆಲಿಕಾಲಿಂಗ್ ಮೂಲಕ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿತ್ತು. ಇದರ ಸುಳಿವು‌ ಪತ್ತೆ ಹಚ್ಚಿದ ಕಾಂಗ್ರೆಸ್‌ ಮುಖಂಡರು ಪ್ರಕರಣ ಕುರಿತಾಗಿ‌‌ ದೂರು ನೀಡಿದ ಹಿನ್ನೆಲೆಯಲ್ಲಿ ದಾಳಿ ಮಾಡಿರುವ ಚುನಾವಣಾಧಿಕಾರಿಗಳು 59 ಲ್ಯಾಪ್ ಟಾಪ್ ಸೇರಿದಂತೆ ಕೆಲವರ  ಮೊಬೈಲ್ ಗಳನ್ನು … Read more

ಏ.6ಕ್ಕೆ ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಸಮಾವೆಶ

ಸುದ್ದಿ360 ದಾವಣಗೆರೆ, ಏ.5: ಬಿಜೆಪಿ ರೈತ ಮೋರ್ಚಾ ಜಿಲ್ಲಾ ಸಮಾವೇಶ ಏ.6ರಂದು ಮಧ್ಯಾಹ್ನ 3 ಗಂಟೆಗೆ ನಗರದ ಮಾಗನೂರು ಬಸಪ್ಪ ಮೈದಾನದಲ್ಲಿ ಆಯೋಜಿಸಲಾಗಿರುವುದಾಗಿ ಮೋರ್ಚಾ ಜಿಲ್ಲಾಧ್ಯಕ್ಷ ಲೋಕಿಕೆರೆ ನಾಗರಾಜ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಂಸದೆ ಶೋಭಾ ಕರಂದ್ಲಾಜೆ, ರೈತ ಮೋರ್ಚಾದ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ, ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕ ಎಸ್.ಎ. ರವಿಂದ್ರನಾಥ್ ಸೇರಿದಂತೆ ಬಿಜೆಪಿ ಶಾಸಕರು, ಸಚಿವರು ಪಾಲ್ಗೊಳ್ಳಲಿರುವುದಾಗಿ ಹೇಳಿದರು. … Read more

ದಾವಣಗೆರೆ: ಅಶೋಕ ಅಂಡರ್‌ ಪಾಸ್ ಸಂಚಾರಕ್ಕೆ ಮುಕ್ತ – ತೊಡಕು ಜೀವಂತ

ಸುದ್ದಿ360 ದಾವಣಗೆರೆ ಏ.04: ನಗರದ ಅಶೋಕ ರಸ್ತೆ ರೈಲ್ವೆ ಗೇಟ್  ಮೂಲಕ ಹಾದು ಹೋಗುವ ವಾಹನ ಸವಾರರು ಇದೀಗ ಕೊಂಚ ರಿಲೀಫ್ ಆಗಿದ್ದಾರೆ.  ಇದರಿಂದ ಜನ ರೈಲ್ವೇ ಗೇಟ್ ಕಾಯುವುದು ತಪ್ಪಿರುವುದು ಎಷ್ಟು ಸತ್ಯವೋ ಹಾಗೆಯೇ ಕೆಲವು ಸಮಸ್ಯೆಗಳು ಉದ್ಭವಿಸಿರುವುದು ಅಷ್ಟೇ ಸತ್ಯವಾಗಿದೆ. ಹೌದು ವಾಹನ ದಟ್ಟಣೆ ನಿಯಂತ್ರಿಸಲು ನಿರ್ಮಿಸಿರುವ ಅಂಡರ್ ಪಾಸ್ ಸೋಮವಾರದಿಂದ ಸಂಚಾರಕ್ಕೆ ಮುಕ್ತವಾಗಿದೆ. ಇದರಿಂದ ನಾಗರೀಕರ ಹಲವು ದಶಕಗಳ ಬೇಡಿಕೆ ಈಡೇರಿದಂತಾಗಿದೆ. ಅಶೋಕ ಟಾಕೀಸ್ ಎದುರು ಎಡಕ್ಕೆ ಯು ಟರ್ನ್ ತೆಗೆದುಕೊಳ್ಳುವುದು ತುಂಬಾ … Read more

ಈ ಬಾರಿ ಲಿಂಗಾಯತ ಮುಖ್ಯಮಂತ್ರಿ: ಶಾಮನೂರು ಶಿವಶಂಕರಪ್ಪ

ದಾವಣಗೆರೆ ಉತ್ತರ-ದಕ್ಷಿಣದಲ್ಲಿ ನಮ್ಮದೇ ಮೇಲುಗೈ – ಬೇರೆ ಯಾರು ಬಂದರೂ ಸೋಲು ಖಚಿತ –  ಎಸ್ ಎಸ್ ಸುದ್ದಿ360 ದಾವಣಗೆರೆ ಏ. 4: ದಾವಣಗೆರೆಯ ದಕ್ಷಿಣ ಮತ್ತು ಉತ್ತರ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಲಿದ್ದು, ಇಲ್ಲಿ ಯಾರೇ ಬಂದು ನಿಂತರೂ ಅವರಿಗೆ ಸೋಲು ಖಚಿತ  ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಗಳ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ. ಚುನಾವಣೆ ಬಳಿಕ … Read more

ಜಿಎಂಐಟಿ: ಕಿರ್ಲೋಸ್ಕರ್ ಟೊಯೋಟಾ ಕಂಪನಿಗೆ ಮೆಕ್ಯಾನಿಕಲ್ ವಿಭಾಗದ 27 ವಿದ್ಯಾರ್ಥಿಗಳು ಆಯ್ಕೆ

ಸುದ್ದಿ360 ದಾವಣಗೆರೆ ಏ.4: ನಗರದ ಜಿ ಎಮ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಕಿರ್ಲೋಸ್ಕರ್ ಟೊಯೋಟಾ ಟೆಕ್ಸ್ಟೈಲ್ ಮಷೀನರಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಂದರ್ಶನ ಪ್ರಕ್ರಿಯೆಯಲ್ಲಿ ಒಟ್ಟು 27 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಎಂಐಟಿ ಕಾಲೇಜಿನ ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮತ್ತು ಅಂತಿಮ ವರ್ಷದ ವಿವಿಧ ಕಾಲೇಜಿನ ಡಿಪ್ಲೋಮೋ ಮೆಕ್ಯಾನಿಕಲ್ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಈ ಸಂದರ್ಶನ … Read more

ದಾವಣಗೆರೆ: ಅಭಿವೃದ್ಧಿ – ಮತದಾನ ಕುರಿತು ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದೇನು?

ದಾವಣಗೆರೆ, ಏ. 1: ಅಭಿವೃದ್ಧಿಯ ವಿಷಯ ಬಂದಾಗ ನೆನಪಾಗುವ ಮಲ್ಲಿಕಾರ್ಜುನ್, ಮತದಾನದ ಸಂದರ್ಭದಲ್ಲಿ ನೆನಪಾಗದಿರುವುದು ಬೇಸರದ ಸಂಗತಿ ಎಂದು ಎಸ್ ಎಸ್. ಮಲ್ಲಿಕಾರ್ಜುನ್ ಅವರ ಪತ್ನಿ  ಡಾ. ಪ್ರಭಾ ಮಲ್ಲಿಕಾರ್ಜುನ್ ಬೇಸರ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಸೇಂಟ್ ಜಾನ್ಸ್  ಶಾಲಾ ಆವರಣದಲ್ಲಿ 34ನೇ ವಾರ್ಡ್ ವ್ಯಾಪ್ತಿಯ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಡಾ. ಪ್ರಭಾ ಮಲ್ಲಿಕಾರ್ಜುನ ರವರು ಅಭಿವೃದ್ಧಿಯ ವಿಷಯ ಬಂದಾಗ ನೆನಪಾಗುವ ಮಲ್ಲಿಕಾರ್ಜುನ್, ಮತದಾನದ ಸಂದರ್ಭದಲ್ಲಿ ನೆನಪಾಗದಿರುವುದು ಮಾತ್ರ ಬೇಸರವಾಗುತ್ತದೆ … Read more

ಹುತಾತ್ಮರ ಆದರ್ಶಗಳನ್ನು ಎಲ್ಲರೂ ಸೇರಿ ಮುನ್ನಡೆಸೋಣ – ಹುತಾತ್ಮರ ದಿನಾಚರಣೆಯಲ್ಲಿ ಆವರಗೆರೆ ಚಂದ್ರು

ದಾವಣಗೆರೆ, ಏ.1: ಹುತಾತ್ಮರ ಆದರ್ಶಗಳನ್ನು  ಮುನ್ನಡೆಸಲು ಎಲ್ಲರೂ ಸೇರಿ ಪಣತೊಡೋಣ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ಹೇಳಿದರು. ಸಿ ಪಿ ಐ ಮತ್ತು ಎ ಐ ಟಿ ಯು ಸಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ  ನಗರಕ್ಕೆ ಸಮೀಪದ ಆವರಗೆರೆಯಲ್ಲಿ ಇಂದು ನಡೆದ ಹುತಾತ್ಮ ಕಾಂ ಶೇಖರಪ್ಪ, ಕಾಂ ಸುರೇಶ್ ರವರ 53 ನೇ ವರ್ಷದ ಹುತಾತ್ಮರ ದಿನಾಚರಣೆ ಮತ್ತು ಮಾಜಿ ಶಾಸಕರಾದ ಕಾಂ. ಪಂಪಾಪತಿ ಯವರ 21 ನೇ ವರ್ಷದ ಸ್ಮರಣೆ ಕಾರ್ಯಕ್ರಮದಲ್ಲಿ … Read more

ದಾವಣಗೆರೆ: ಬರ್ಬರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು – ಪತ್ನಿ ಪ್ರಿಯಕರ ಅಂದರ್

ದಾವಣಗೆರೆ ಮಾ:28: ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತನ ಪತ್ನಿ ಮತ್ತು ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿ ಮಾ23ರಂದು ದಾಖಲಾಗಿದ್ದ ಈ ಪ್ರಕರಣವನ್ನು ಬೇಧಿಸಲು ದಾವಣಗೆರೆ ನಗರ ಉಪ ವಿಭಾಗದ ಡಿವೈಎಸ್‌ಪಿ  ಮಲ್ಲೇಶ್ ದೊಡ್ಡಮನಿ ಹಾಗೂ ಡಿ.ಸಿ.ಆರ್.ಬಿ ಡಿವೈಎಸ್‌ಪಿ  ಸೈಯದ್ ರೋಷನ್ ಜಮೀರ್ ಎಸ್ ಇವರ ಮಾರ್ಗದರ್ಶನದಲ್ಲಿ   ಪ್ರಭಾವತಿ ಸಿ ಶೇತಸನದಿ  ಪೊಲೀಸ್ ಇನ್ಸ್ಪೆಕ್ಟರ್ ವಿದ್ಯಾನಗರ ಪೊಲೀಸ್ ಠಾಣೆ, ನೇತೃತ್ವದಲ್ಲಿ ಡಿ.ಸಿ.ಆರ್.ಬಿ ವಿಭಾಗದ ಸಿಬ್ಬಂದಿ ಹಾಗೂ … Read more

error: Content is protected !!