ಜು.9ಕ್ಕೆ ವೃದ್ಧರಿಗೆ, ವಿಕಲಚೇತನರಿಗೆ ಉಚಿತ ತಪಾಸಣೆ

ಸುದ್ದಿ360 ದಾವಣಗೆರೆ.ಜು.06: ಹಿರಿಯ ನಾಗರೀಕರಿಗೆ ಮತ್ತು ಅಂಗವಿಕಲರಿಗೆ ಉಚಿತ ಕಿವಿ ಮೂಗು ಮತ್ತು ಗಂಟಲು ತಪಾಸಣೆ ಶಿಬಿರವು ಜುಲೈ 9ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1: 30 ಗಂಟೆವರೆಗೆ ನಗರದ ಎವಿಕೆ ಕಾಲೇಜು ರಸ್ತೆಯಲ್ಲಿರುವ ಶ್ರೀ ಭಗವಾನ್ ಮಹಾವೀರ ಜೈನ್ ಆಸ್ಪತ್ರೆ (ಹಳೆ ಅಶ್ವಿನಿ ಆಸ್ಪತ್ರೆ)ಯಲ್ಲಿ ನುರಿತ ಕಿವಿ, ಮೂಗು ಮತ್ತು ಗಂಟಲು ಶಸ್ತ್ರಚಿಕಿತ್ಸೆ ತಜ್ಞ ವೈದ್ಯರಿಂದ ನಡೆಯಲಿದೆ. ಶಿಬಿರದಲ್ಲಿ ವೈದ್ಯರ ಸಲಹೆ ಮೇರೆಗೆ ಉಚಿತವಾಗಿ ಔಷಧಿ ವಿತರಣೆ ಮತ್ತು ಉಚಿತವಾಗಿ ಶ್ರವಣಯಂತ್ರಗಳನ್ನು ನೀಡಲಾಗುತ್ತಿದ್ದು, ಶಾ … Read more

ಒಕ್ಕಲಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ.ಜು.06: ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.80 ಕ್ಕಿಂತ ಅಧಿಕ ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಿದೆ. ಜಿಲ್ಲಾ ಒಕ್ಕಲಿಗರ ಸಂಘದಿಂದ ಜುಲೈ 24 ರಂದು ನಗರದ ಸರಕಾರಿ ಬಸ್ ನಿಲ್ದಾಣ ಪಕ್ಕ ಇರುವ ಶ್ರೀ ಸಾಯಿ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಜುಲೈ 15 ರೊಳಗೆ ಅಂಕಪಟ್ಟಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿ ಭವನ ವೃತ್ತದಲ್ಲಿರುವ ಸಂಘದ … Read more

ಜು.12: ಶ್ರೀ ಜಯದೇವ ಮುರುಘರಾಜೇಂದ್ರ ಶ್ರೀಗಳ 65ನೇ ಸ್ಮರಣೋತ್ಸವ

ಸುದ್ದಿ360 ದಾವಣಗೆರೆ.ಜು.06: ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 65ನೇ ಸ್ಮರಣೋತ್ಸವ ಪ್ರಯುಕ್ತ ಜು.12ರಿಂದ 14ರವರೆಗೆ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ತಿಳಿಸಿದರು. ನಗರದ ಶ್ರೀ ಶಿವಯೋಗಾಶ್ರಮದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಶ್ರೀಗಳು ಮಾಹಿತಿ ನೀಡಿದರು. ಶ್ರೀಗಳ 65ನೇ ಸ್ಮರಣೋತ್ಸವ ಪ್ರಯುಕ್ತ ವಿವಿಧ ಧಾರ್ಮಿಕ ಹಾಗೂ  ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಶರಣ ಸಂಸ್ಕೃತಿ ಉತ್ಸವ, ಮಹಾ ತಪಸ್ವಿ ಶ್ರೀ ಮುರುಘೇಂದ್ರ ಶಿವಯೋಗಿಗಳವರ ಲಿಂಗೈಕ್ಯ ಶತಮಾನೊತ್ಸವ, ಜಯದೇವಶ್ರೀ ಶೂನ್ಯಪೀಠ … Read more

ಜು.8 ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವ

ಸುದ್ದಿ360 ದಾವಣಗೆರೆ.ಜು.06: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮ ಜು.8ರಂದು ಜರುಗಲಿದೆ ಎಂದು ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲೆಯ ನಿಕಟಪೂರ್ವ ಅಧ್ಯಕ್ಷ  ಎಸ್ ಗುರುಮೂರ್ತಿ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಮಾರ್ಚ್ 25ರಂದು ನಡೆದ ರಾಜ್ಯ ಪರಿಷತ್ತಿನ ಮಹಾಸಭೆಯಲ್ಲಿನ ನಿರ್ಣಯದಂತೆ ಸುವರ್ಣ ಮಹೋತ್ಸವವು ಬೆಂಗಳೂರಿನ ವಿಜಯನಗರದ  ಎಂ.ಸಿ. ಲೇಔಟ್ ನ ಹೊಸಹಳ್ಳಿ ಮೆಟ್ರೋ ಸ್ಟೇಷನ್ ಸಮೀಪದ ಬಾಲಗಂಗಾಧರನಾಥ ಸ್ವಾಮೀಜಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು. ಆದಿಚುಂಚನಗಿರಿಯ ಡಾ. … Read more

ಪಠ್ಯದ ಜೊತೆ ಸಾಹಿತ್ಯ, ಸಂಸ್ಕೃತಿ, ಲಲಿತಕಲೆಗಳು ಶಿಕ್ಷಣಕ್ಕೆ ಭದ್ರ ಬುನಾದಿ: ಸಾಲಿಗ್ರಾಮ ಗಣೇಶ್ ಶೆಣೈ ಅಭಿಮತ

ಸುದ್ದಿ360 ದಾವಣಗೆರೆ.ಜು.05: ಶಿಕ್ಷಣ ಕೇವಲ ಅಂಕಪಟ್ಟಿ, ರ‍್ಯಾಂಕ್ ಮಾನದಂಡವಲ್ಲ, ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ, ಲಲಿತಕಲೆಗಳ ಎಲ್ಲಾ ಪ್ರಕಾರಗಳು ಪೂರ್ಣ ಪ್ರಮಾಣದಲ್ಲಿ ಭದ್ರವಾದ ಬುನಾದಿ ಇತ್ತೀಚಿನ ದಿನಮಾನಗಳಲ್ಲಿ ಆಧುನಿಕ ತಂತ್ರಜ್ಞಾನದ ಭರಾಟೆಯಲ್ಲಿ ಸಾಹಿತ್ಯ ಕಲಾಪ್ರಕಾರಗಳು ಮರೆಯಾಗುತ್ತಿರುವುದು ವಿಷಾದದ ಸಂಗತಿ. ಮಕ್ಕಳು ವಿದ್ಯಾಭ್ಯಾಸದ ಜತೆಯಲ್ಲಿ ಕವನ ರಚನೆ, ಸಾಹಿತ್ಯದ ಕಡೆ ಹೆಚ್ಚು ಒಲವು ತೋರಿದರೆ ಶಿಕ್ಷಣಕ್ಕೆ ಸಾರ್ಥಕತೆ ಬರುತ್ತದೆ ಮತ್ತು ಮುಂದಿನ ಜೀವನದಲ್ಲಿ ಸಾಧನೆಗಳ ಹಾದಿ ಸುಗಮವಾಗುತ್ತದೆ ಎಂದು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ … Read more

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಬಳಕೆಯಾಗದ ಸ್ವಚ್ಛತಾ ಪರಿಕರಗಳು: ನಿರ್ಲಕ್ಷ್ಯಕ್ಕೆ ಕೈ ಸದಸ್ಯರ ಆಕ್ರೋಶ

ಸುದ್ದಿ360 ದಾವಣಗೆರೆ.ಜು.05: ನಗರದ ಸ್ವಚ್ಛತೆಗೆ ಅನುಕೂಲವಾಗಲೆಂದು ಸರ್ಕಾರದ ಅನುದಾನದಿಂದ ಬಂದಿರುವ ಕೋಟ್ಯಂತರ ರೂಪಾಯಿ ವೆಚ್ಚದ ವಾಹನಗಳು ಹಾಗೂ ಪರಿಕರಗಳು ತುಕ್ಕು ಹಿಡಿಯುತ್ತಿದ್ದು, ಮಹಾನಗರ ಪಾಲಿಕೆ ಆಡಳಿತ ವರ್ಗದ ನಿರ್ಲಕ್ಷ್ಯಕ್ಕೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹಾಗೂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲೆಕ್ಟ್ರಿಕಲ್ ಆಟೋಗಳು, ಮುಕ್ತಿವಾಹಿನಿ, ಮಿನಿ ಹಿಟಾಚಿ ಕೊಂಡೊಯ್ಯುವ ಲಾರಿ, ಜಟ್ಟಿಂಗ್ ಸ್ಪ್ರೇ, ಕಸ ತುಂಬುವ ಕಾಂಪ್ಯಾಕ್ಟರ್, ತಳ್ಳು ಗಾಡಿಗಳು, ಕಾರ್ಡನ್ ಡಸ್ಟ್ ಸೇರಿದಂತೆ ಪರಿಕರಗಳು ಮಹಾನಗರ ಪಾಲಿಕೆಗೆ ಬಂದಿವೆ. ಆದರೆ ಬಳಕೆ‌ ಮಾಡುವುದನ್ನು ಬಿಟ್ಟು … Read more

102 ಕೆ.ಜಿ. ಬೆಳ್ಳಿ ಕಾಲ್ಗೆಜ್ಜೆ ಪೊಲೀಸರ ವಶ – ಇಬ್ಬರ ಬಂಧನ

ಸುದ್ದಿ360,ದಾವಣಗೆರೆ,ಜು.05: ತಮಿಳುನಾಡಿನ ಸೇಲಂನಿಂದ ನಗರಕ್ಕೆ 102 ಕೆ.ಜಿ ಬೆಳ್ಳಿ ಕಾಲ್ಗೆಜ್ಜೆಗಳನ್ನು ಅಕ್ರಮವಾಗಿ ತಂದಿದ್ದ 20 ಲಕ್ಷ ರೂ. ಮೌಲ್ಯದ 102 ಕೆಜಿ ಬೆಳ್ಳಿ ಕಾಲ್ಗೆಜ್ಜೆಗಳನ್ನು ನಗರದ ಬಡಾವಣೆ ಠಾಣೆ ಪೊಲೀಸರು ವಶಕ್ಕೆ ಪಡೆದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಡಾವಣೆ ಪೊಲೀಸ್ ಠಾಣೆ ಆವರಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಸಿ.ಬಿ. ರಿಷ್ಯಂತ್, ಆರೋಪಿಗಳಾದ ಸೆಲ್ವಿ ಮತ್ತು ಬಾಲಾಜಿ ಎಂಬುವರು ತಮಿಳುನಾಡಿನ ಸೇಲಂನಿಂದ ನಗರಕ್ಕೆ 102 ಕೆ.ಜಿ ಬೆಳ್ಳಿ … Read more

ಪ್ರತಿಭಾ ಪುರಸ್ಕಾರಕ್ಕೆ ಆರ್ಜಿ ಆಹ್ವಾನ

ಸುದ್ದಿ360,ದಾವಣಗೆರೆ,ಜು.05: ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರಕಾರಿ ನೌಕರರ ಮಕ್ಕಳಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಘದ ಜಿಲ್ಲಾಧ್ಯಕ್ಷ ಬಿ. ಪಲಾಕ್ಷಿ, ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90 ಹಾಗೂ ಅದಕ್ಕೂ ಹೆಚ್ಚು ಅಂಕ ಗಳಿಸಿರುವ ಸರಕಾರಿ ನೌಕರರ ಮಕ್ಕಳಿಗೆ ಕೇಂದ್ರ ಸಂಘದಿಂದ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯ … Read more

ಪಠ್ಯಪುಸ್ತಕ ಪರಿಷ್ಕರಣೆ ಲೋಪ ವಿರೋಧಿಸಿ ಎನ್.ಎಸ್.ಯು.ಐ ನಿಂದ ತಿರಂಗ ರ‍್ಯಾಲಿ

ಸುದ್ದಿ360,ದಾವಣಗೆರೆ,ಜು.05: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆಯ ಲೋಪದಿಂದ ರಾಜ್ಯದ ವಿದ್ಯಾರ್ಥಿಗಳ ಮೇಲೆ ಅಗಾಧ ಪರಿಣಾಮ ಬೀರಿದೆ. ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಿಂಚಿತ್ತೂ ಯೋಚನೆ ಮಾಡದ ರಾಜ್ಯ ಬಿಜೆಪಿ ಸರ್ಕಾರ ಪ್ರತಿಯೊಂದು ಹಂತದ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಎನ್.ಎಸ್‌.ಯು.ಐ ಘಟಕ ಮಂಗಳವಾರ ಜನಜಾಗೃತಿ ರ‍್ಯಾಲಿ ನಡೆಸಿತು. ಮೂರು ನೂರು ಅಡಿಗಳ ತಿರಂಗದೊಂದಿಗೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ರ‍್ಯಾಲಿಯಲ್ಲಿ ಭಾಗವಹಿಸಿದ್ದರು.  ನಗರದ ಎವಿಕೆ ಕಾಲೇಜು ಸಮೀಪದಿಂದ ಆರಂಭಗೊಂಡ ರ‍್ಯಾಲಿ ಬಿ.ಎಸ್.ಚನ್ನಬಸಪ್ಪ ಅಂಗಡಿಯ ಮುಂಭಾಗದಿಂದ … Read more

ಮಂಗಳಮುಖಿಯರು ಜೇಬಿಗೆ ಕೈಹಾಕಿದ್ರೆ ದೂರು ಕೊಡಿ!

ಸುದ್ದಿ360,ದಾವಣಗೆರೆ,ಜು.05: ನಗರದ ಹೊರವಲಯ ಬಾಡ ಕ್ರಾಸ್ ಬಳಿ ಮಂಗಳಮುಖಿಯರ ಕಾಟ ಹೆಚ್ಚಾಗಿದೆ ಎಂಬ ದೂರುಗಳು ಬಂದಿದ್ದು ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್‌ಪಿ ಸಿ.ಬಿ. ರಿಷ್ಯಂತ್  ತಿಳಿಸಿದ್ದಾರೆ. ನಗರದ ಬಡಾವಣೆ ಪೊಲೀಸ್ ಠಾಣೆ ಆವರಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸಾರ್ವಜನಿಕರ ವಾಹನ ಅಡ್ಡಗಟ್ಟಿ, ಹಣ ಕೇಳುವುದು, ಮೈ ಮುಟ್ಟುವುದು, ಜೇಬಿಗೆ ಕೈ ಹಾಕಿ ಹಣ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿಈ ಸಂಬಂಧ ಅವರೊಂದಿಗೆ ಮಾತುಕತೆ ನಡೆಸಿದ್ದು, ಹಣ ಕೇಳುವ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡದಂತೆ ಎಚ್ಚರಿಕೆ … Read more

error: Content is protected !!