ಕಲಾಕುಂಚ: ವಿಶ್ವ ಪರಿಸರ ದಿನಾಚರಣೆ – ಉಚಿತ ಚಿತ್ರ ಬರೆಯುವ ಸ್ಪರ್ಧೆ ಫಲಿತಾಂಶ

ಸುದ್ದಿ360 ದಾವಣಗೆರೆ, ಜೂನ್ 18: ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಉಚಿತ ಚಿತ್ರ ಬರೆಯುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಇದರ  ಫಲಿತಾಂಶ ಪ್ರಕಟಿಸಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ  ತಿಳಿಸಿದ್ದಾರೆ. ರಾಜ್ಯ ಮಟ್ಟದ ಈ ಉಚಿತ ಚಿತ್ರ ಬರೆಯುವ ಸ್ಪರ್ಧೆಗೆ ಕರ್ನಾಟಕ ವಿವಿಧ ಜಿಲ್ಲೆಗಳೂ ಸೇರಿದಂತೆ ನೆರೆ ರಾಜ್ಯಗಳಿಂದಲೂ ಸ್ಪರ್ಧಿಗಳು ಪಾಲ್ಗೊಂಡಿದ್ದರು. ಸುಮಾರು ಒಂದು ಸಾವಿರದ ಎಂಟುನೂರ ಆರವತ್ತಮೂರು ಚಿತ್ರಗಳು ಬಂದಿದ್ದವು ಎಂದು ಗಣೇಶ್‍ ಶೆಣೈ … Read more

ಯಕ್ಷರಂಗದಿಂದ ಯಕ್ಷಗಾನ ತರಬೇತಿ ಶಿಬಿರ

ಸುದ್ದಿ360 ದಾವಣಗೆರೆ, ಜೂನ್ 18: ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಯಕ್ಷರಂಗ-ಯಕ್ಷಗಾನ ಸಂಸ್ಥೆಯ ಆಶ್ರಯದಲ್ಲಿ ನಿರಂತರ ಯಕ್ಷಗಾನ ತರಬೇತಿ ಶಿಬಿರ ಹಮ್ಮಿಕೊಂಡಿದೆ. ತರಬೇತಿಯು ನಗರದ ಕೆ.ಬಿ. ಬಡಾವಣೆ, ಕುವೆಂಪು ರಸ್ತೆಯಲ್ಲಿರುವ (ಲಾಯರ್ ರಸ್ತೆ), ಕಲಾಕುಂಚ ಕಛೇರಿಯ ಸಭಾಂಗಣದಲ್ಲಿ ಪ್ರತೀ ಭಾನುವಾರ ಬೆಳಿಗ್ಗೆ 6-30 ರಿಂದ 9-00 ಗಂಟೆಯವರೆಗೆ ನಡೆಯಲಿದ್ದು, ಈ ಶಿಬಿರವನ್ನು ಖ್ಯಾತ ವೃತ್ತಿನಿರತ ಯಕ್ಷಗಾನ ಕಲಾವಿದ ಹಟ್ಟಿಯಂಗಡಿ ಆನಂದಶೆಟ್ಟಿಯವರು ನಡೆಸಿಕೊಡಲಿದ್ದಾರೆ ಎಂದು ಸಂಸ್ಥೆಗಳ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. ಯಾವುದೇ ವಯಸ್ಸಿನ … Read more

ಇಂದು ಜೈನ್ ಕಾಲೇಜಲ್ಲಿ ಎಥ್ನಿಕ್ ಡೇ

ಸುದ್ದಿ360 ದಾವಣಗೆರೆ, ಜೂನ್ 18: ನಗರದ ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಜನಾಂಗಿಯ ದಿನ (ಎಥ್ನಿಕ್ ಡೇ)ವನ್ನು ಜೂ.18 ರ ಇಂದು ಆಯೋಜಿಸಲಾಗಿದ್ದು, ಕಾಲೇಜಿನ ಎಲ್ಲಾ‌ ವಿಭಾಗದ ವಿದ್ಯಾರ್ಥಿಗಳು ಸಾಂಪ್ರಾದಾಯಿಕ ಉಡುಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಡಿ.ಬಿ. ಗಣೇಶ್ ತಿಳಿಸಿದ್ದಾರೆ.

ಯೋಗ ನಡಿಗೆಗೆ ವಚಾನಾನಂದ ಶ್ರೀಗಳಿಂದ ಚಾಲನೆ- ಮಕ್ಕಳಿಗೆ ಸುಲಭ ಯೋಗಾಸನ

ಸುದ್ದಿ360 ದಾವಣಗೆರೆ, ಜೂನ್ 18: ಅಂತರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿಯಾಗಿ ಇಂದು (ಜೂ.18) ಬೆಳಿಗ್ಗೆ 7 ಗಂಟೆಗೆ ನಗರದ  ಹೈಸ್ಕೂಲ್ ಮೈದಾನದಿಂದ ಪ್ರಾರಂಭವಾದ ಯೋಗನಡಿಗೆ  ಮೋತಿ ವೀರಪ್ಪ ಕಾಲೇಜು ಕ್ರೀಡಾಂಗಣ ತಲುಪಿತು. ಹರಿಹರ ಪಂಚಮಸಾಲಿ ಪೀಠದ ಶ್ರೀವಚನಾನಂದ ಸ್ವಾಮೀಜಿ ಯೋಗ ನಡಿಗೆಗೆ ಚಾಲನೆ ನೀಡಿದರು. ನಗರದ 4 ವಲಯಗಳ 50ಕ್ಕೂ ಹೆಚ್ಚು ಶಾಲೆಗಳ 2000ಕ್ಕೂ ಅಧಿಕ ಮಕ್ಕಳು ಯೋಗನಡಿಗೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸ್‍ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‍, ಸ್ಮಾರ್ಟ್ ಸಿಟಿ ಎಂ.ಡಿ ರವೀಂದ್ರ ಮಲ್ಲಾಪುರ, ಬಿ.ಸಿ. … Read more

ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಸರ್ಕಾರದಿಂದ ದ್ವೇಶದ ರಾಜಕಾರಣ

ಕಾಂಗ್ರೆಸ್‌ನಿಂದ ಪ್ರತಿಭಟನೆ – ರಾಷ್ಟ್ರಪತಿಗಳಿಗೆ ಮನವಿ ಸುದ್ದಿ360 ದಾವಣಗೆರೆ, ಜೂ.17: ಕೇಂದ್ರ ಬಿಜೆಪಿ ಸರಕಾರ ಇ.ಡಿ.ಯನ್ನು ದುರ್ಭಳಕೆ ಮಾಡಿಕೊಳ್ಳುತ್ತಿದ್ದು, ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಸೂಕ್ತ ಮಾರ್ಗದರ್ಶನ ನೀಡುವಂತೆ ಆಗ್ರಹಿಸಿ, ಕೆಪಿಸಿಸಿ ಜಿಲ್ಲಾ ಘಟಕ ಹಾಗೂ ಪಕ್ಷದ ಎಲ್ಲಾ ವಿಭಾಗಗಳ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ನಂತರ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ನಗರದ ಕೆಇಬಿ ವೃತ್ತದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಅಲ್ಲಿಂದ … Read more

ಜೂ.19: ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 115ನೇ ಜಯಂತ್ಯುತ್ಸವ – ಗುರುವಂದನೆ

ಸುದ್ದಿ360 ದಾವಣಗೆರೆ, ಜೂ.17: ನಡೆದಾಡುವ ದೇವರು ಖ್ಯಾತಿಯ ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೫ನೇ ಜಯಂತ್ಯುತ್ಸವ ಹಾಗೂ ಗುರುವಂದನೆ ಕಾರ್ಯಕ್ರಮ ನಗರದ ಅಕ್ಕಮಹಾದೇವಿ ರಸ್ತೆಯ ಎವಿಕೆ ಕಾಲೇಜು ಬಳಿಯ ಜಿಲ್ಲಾ ಗುರುಭವನದಲ್ಲಿ ಜೂ.೧೯ರಂದು ಬೆಳಗ್ಗೆ ೧೦.೩೦ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಜಿ.ಹೆಚ್. ರಾಜಶೇಖರ್ ಗುಂಡಗಟ್ಟಿ ತಿಳಿಸಿದರು. ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚುಟುಕು ಸಾಹಿತ್ಯ ಪರಿಷತ್, ಕನ್ನಡ ಮತ್ತು ಸಂಸ್ಕೃತಿ … Read more

ಪವರ್ ಲಿಫ್ಟಿಂಗ್‌: ತಂದೆ-ಮಗ ಸಾಧನೆ – ರಾಷ್ಟ್ರಮಟ್ಟಕ್ಕೆ ಆಯ್ಕೆ

ಸುದ್ದಿ360 ದಾವಣಗೆರೆ, ಜೂ16:  ಮೈಸೂರಿನಲ್ಲಿ ಜೂ.10ರಿಂದ 12ರವರೆಗೆ ನಡೆದ ರಾಜ್ಯ ಮಟ್ಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ದಾವಣಗೆರೆಯ ಕನ್ನಿಕಾಪರಮೇಶ್ವರಿ ಕೋ-ಆಪರೇಟಿವ್ ಬ್ಯಾಂಕ್ ಉದ್ಯೋಗಿ ವಿ. ರಕ್ಷಿತ್ ಚಿನ್ನದ ಪದಕ ಮತ್ತು ರಕ್ಷಿತ್ ತಂದೆ, ಶ್ರೀ ಬೀರೇಶ್ವರ ವ್ಯಾಯಾಮ ಶಾಲೆ ಕ್ರೀಡಾಪಟು ಪಿ. ವಿಶ್ವನಾಥ್ ಕಂಚಿನ ಪದಕಕ್ಕೆ ಭಾಜನರಾಗುವ ಮೂಲಕ ತಂದೆ-ಮಗ  ಇಬ್ಬರೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಈ ಮೂಲಕ ಹೈದರಾಬಾದ್‌ನಲ್ಲಿ ಜು.೫ರಿಂದ ೧೦ರವರೆಗೆ ನಡೆಯಲಿರುವ ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ. ತಂದೆ ಮತ್ತು ಮಗ … Read more

ಕಿಕ್ ಬಾಕ್ಸಿಂಗ್‌: ದಾವಣಗೆರೆಗೆ 3 ಚಿನ್ನ, 4 ಬೆಳ್ಳಿ, 3 ಕಂಚು

ಜಿಲ್ಲೆಗೆ ಕೀರ್ತಿ ತಂದ ಕ್ರೀಡಾಪಟುಗಳಿಗೆ ಅಭಿನಂದನೆಗಳ ಮಹಾಪೂರ ಸುದ್ದಿ360 ದಾವಣಗೆರೆ, ಜೂ16:  ಮೈಸೂರಿನಲ್ಲಿ ಜೂ.೧೧, ೧೨ರಂದು ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ನಡೆದ ೨ನೇ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ನಗರದ ಈಗಲ್ ಫಿಟ್ನೆಸ್ ಕೇಂದ್ರದ ವಿದ್ಯಾರ್ಥಿಗಳು 3 ಚಿನ್ನ, 4 ಬೆಳ್ಳಿ ಹಾಗೂ 3 ಕಂಚಿನ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕಿಕ್ ಲೈಟ್ ಇವೆಂಟ್‌ನ 7-9 ವರ್ಷದ ವಿಭಾಗದಲ್ಲಿ ಯು. ಅದಿತ್ಯ ಮತ್ತು ಎ.ಬಿ. ಅಧಿತಿ ಹಾಗೂ 11-13 ವರ್ಷದ … Read more

ಇ.ಡಿ. ದುರ್ಬಳಕೆ ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ಇಂದು

ಸುದ್ದಿ360 ದಾವಣಗೆರೆ, ಜೂ16: ಎ.ಐ.ಸಿ.ಸಿ.  ಅಧ್ಯಕ್ಷರಾದ  ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಕೇಂದ್ರ ಬಿ.ಜೆ.ಪಿ ಸರ್ಕಾರ ರಾಜಕೀಯ ದುರುದ್ದೇಶದಿಂದ ಇ. ಡಿ. ನೋಟಿಸ್ ನೀಡಿದೆ ಎಂದು ಆರೋಪಿಸಿರುವ ಕಾಂಗ್ರೆಸ್‍ ಸಮಿತಿ, ಕೇಂದ್ರ ಸರ್ಕಾರದ ಈ ನಡೆಯನ್ನು ಖಂಡಿಸಿ ದಿನಾಂಕ ಜೂ.17ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಂಜಪ್ಪ ರವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ದೆಹಲಿಯಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಇ.ಡಿ.ಯನ್ನು ದುರ್ಬಳಕೆ  ಮಾಡಿಕೊಂಡು ಕಾಂಗ್ರೆಸ್ ನಾಯಕರಿಗೆ ನೀಡುತ್ತಿರುವ ಕಿರುಕುಳದ ವಿರುದ್ಧ ಕಾಂಗ್ರೆಸ್ ಸಂಸದರು … Read more

ಜೂ.18ಕ್ಕೆ ‘ಅತ್ಯುತ್ತಮ ಶಾಲೆ ಪ್ರಶಸ್ತಿ’ ವಿತರಣೆ

ಜಿ.ಎಂ. ಹಾಲಮ್ಮ ಪದವಿಪೂರ್ವ ಕಾಲೇಜಿನಿಂದ ಕಾರ್ಯಕ್ರಮ ಆಯೋಜನೆ ಸುದ್ದಿ360 ದಾವಣಗೆರೆ, ಜೂ16: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜೂ.೧೮ರಂದು ಬೆಳಗ್ಗೆ ೯.೩೦ಕ್ಕೆ ‘ಅತ್ಯುತ್ತಮ ಶಾಲೆ ಪ್ರಶಸ್ತಿ’ ವಿತರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಎಂ . ಹಾಲಮ್ಮ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಹಾಗೂ ಸಿಇಒ ಡಾ.ವಿ. ವೆಂಕಟರಾಯಡು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜಿ.ಎಂ. ಹಾಲಮ್ಮ ಪದವಿಪೂರ್ವ ಕಾಲೇಜು ವತಿಯಿಂದ ಹಮ್ಮಿಕೊಳ್ಳಲಾಗಿರುವ ಈ ಸಮಾರಂಭದಲ್ಲಿ ದಾವಣಗೆರೆ ಒಳಗೊಂಡಂತೆ ಸುತ್ತಮುತ್ತಲ ಜಿಲ್ಲೆಯ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.೧೦೦ ಫಲಿತಾಂಶ ಪಡೆದ ೧೦೦ ಶಾಲೆಗಳ … Read more

error: Content is protected !!