ಪಿಎಸ್‌ಐ ಭ್ರಷ್ಟಾಚಾರದಲ್ಲಿ ಭಾಗಿಯಾದವರಿಗೆ ತಕ್ಕ ಪಾಠ: ಗೃಹ ಮಂತ್ರಿ

ದಾವಣಗೆರೆ, ಜೂ.೦೮: ಪಿಎಸ್‌ಐ ಭ್ರಷ್ಟಾಚಾರಕ್ಕೆ ಸಂಬಂಧ ಪಟ್ಟಂತೆ ಯಾರನ್ನೂ ಬಿಡುವುದಿಲ್ಲ. ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಇಲಾಖೆಯ ಡಿವೈಎಸ್ಪಿಯವರನ್ನು ಕೂಡ ಬಂಧಿಸಲಾಗಿದೆ. ಅಲ್ಲದೆ ಸಿಐಡಿಯಿಂದ ಉತ್ತಮ ಟೀಮ್ ವರ್ಕ್ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಅವರು ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಪೊಲೀಸ್ ಘಟಕದ ಪರಿವೀಕ್ಷಣಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಎಕ್ಸಾಮಿನೇಷನ್ ಎಂದರೆ ಇಂತಹ ಭ್ರಷ್ಟಾಚಾರಗಳನ್ನು ಮಾಡಬಹುದು ಎಂದು ಕೆಲವರು ಅಂದುಕೊಂಡಿದ್ದಾರೆ. ಇದು ಇಂದಿನದಲ್ಲ … Read more

ಎಂ.ಬಿ. ತಿಪ್ಪಣ್ಣ ನಿಧನ

ದಾವಣಗೆರೆ, ಜೂ.೦೭: ಬೆಳ್ಳಿಗನೋಡು ಗ್ರಾಮದ ಎಂ.ಬಿ.ತಿಪ್ಪಣ್ಣನವರು(೬೬), ರಿಟೈರ್ಡ್ ಅಡಿಷನಲ್ ಡೈರೆಕ್ಟರ್, ಬಿಬಿಎಂಪಿ, ಬೆಂಗಳೂರು ಇವರು ಮಂಗಳವಾರ ಬೆಳಿಗ್ಗೆ ೧೧.೨೫ ಗಂಟೆಗೆ ದೈವಾಧೀನರಾಗಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಮಂಗಳವಾರ ಸಂಜೆ ೪ ಗಂಟೆಯವರೆಗೆ ವಾಸಸ್ಥಳ ಬೆಂಗಳೂರಿನ ಯಲಹಂಕದ ತರಳಬಾಳು ಎನ್‌ಕ್ಲೇವ್‌ನಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬುಧವಾರ ಬೆಳಿಗ್ಗೆ ೧೦ ಗಂಟೆಗೆ ದಾವಣಗೆರೆಯ ವಿದ್ಯಾನಗರದಲ್ಲಿನ ಸ್ವಗೃಹದಲ್ಲಿ ದರ್ಶನಕ್ಕೆ ಇರಿಸಲಾಗುವುದು. ಹಾಗೂ ಅಂತ್ಯಕ್ರಿಯೆಯನ್ನು ಶಿರಮಗೊಂಡನಹಳ್ಳಿ ಫಾರ್ಮ್, ದಾವಣಗೆರೆಯಲ್ಲಿ ಜೂ.೮ರ ಬುಧವಾರ ಮಧ್ಯಾಹ್ನ … Read more

ಪ್ರಾಧಿಕಾರದಿಂದ ಉದ್ದೇಶಿತ ವಿಮಾನ ನಿಲ್ದಾಣದ ಸ್ಥಳ ಪರಿಶೀಲನೆ

ದಾವಣಗೆರೆ  ಜೂ.3: ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಶುಕ್ರವಾರ ದಾವಣಗೆರೆ ಜಿಲ್ಲೆಯ ಉದ್ದೇಶಿತ ವಿಮಾನ ನಿಲ್ದಾಣದ ಸ್ಥಳ ಪರಿಶೀಲನೆ ನಡೆಸಿದರು. ಹಾಲುವರ್ತಿ,ಅನಗೋಡು ಮತ್ತು ಉಳುಪಿನ ಕಟ್ಟೆ ಗ್ರಾಮಗಳ ಸುತ್ತಲಿನ 359 ಎಕರೆ ಪ್ರದೇಶವನ್ನು  ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿತು. ಸುಮಾರು 52 ಸರ್ವೆ ನಂಬರುಗಳ ಭಾಗಶಃ ಪ್ರದೇಶದಲ್ಲಿ ಮಣ್ಣಿನ ನಮೂನೆ, ಹೈ ಟೆನ್ ಶನ್ ವಿದ್ಯುತ್ ಮಾರ್ಗ ಹಾದುಹೋಗಿರುವುದು, ಭೂಮಿಯ ಸಮತಟ್ಟು ಮುಂತಾದವು ಗಳನ್ನು ವೀಕ್ಷಿಸಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಾಧಿಕಾರದ ಅಧಿಕಾರಿಗಳು … Read more

ಪಠ್ಯ ಪರಿಷ್ಕರಣೆ ಸಮಿತಿ ರದ್ದತಿಗೆ ಆಗ್ರಹ: ಕರವೇ ಪ್ರತಿಭಟನೆ

ದಾವಣಗೆರೆ: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಮರು ಪರಿಷ್ಕರಣೆ ಸಮಿತಿಯನ್ನು ಸರ್ಕಾರ ಈ ಕೂಡಲೇ ರದ್ದುಪಡಿಸಿ ಹಿಂದಿನ ವರ್ಷದ ಪಠ್ಯವನ್ನು ಮಕ್ಕಳಿಗೆ ವಿತರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು. ಮಹಾನಗರ ಪಾಲಿಕೆ ಆವರಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಉಪ ವಿಭಾಗಾಧಿಕಾರಿ ಕಚೇರಿ ತಲುಪಿ ಎಸಿ ಅವರ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರವು ಈ ಹಿಂದೆ ಪೆÇ್ರ.ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪುಸ್ತಕ … Read more

ಪದವಿ ಪ್ರಾರಂಭದಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧಗೊಳಿಸಿ: ಡಾ. ಎಂ.ಜಿ. ಈಶ್ವರಪ್ಪ

ದಾವಣಗೆರೆ, ಮೇ ೨೪: ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಅಧ್ಯಾಪಕರು ಹೆಚ್ಚು ಜವಾಬ್ದಾರರಾಗಿದ್ದಾರೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಧ್ಯಾಪಕರು ಜಡ್ಡುಗಟ್ಟಿದ ನಿಂತ ನೀರಾಗದೆ ಸದಾ ಹರಿಯುವ ನೀರಾಗಬೇಕು ಎಂದು ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಡಾ.ಎಂ.ಜಿ. ಈಶ್ವರಪ್ಪ ಹೇಳಿದರು. ನಗರದ ಎವಿ ಕಮಲಮ್ಮ ಮಹಿಳಾ ಕಾಲೇಜಿನ ಆಂತರಿಕ ಗುಣಮಟ್ಟ ಕೋಶ ಘಟಕದ ವಾರ್ಷಿಕ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧಿಸಲೇ ಬೇಕಿದೆ. ಪ್ರಥಮ ವರ್ಷದ ಪದವಿ ಹಂತದಲ್ಲೇ ವಿದ್ಯಾರ್ಥಿಗಳನ್ನು … Read more

ಡಿಆರ್‌ಆರ್ ಪಾಲಿಟೆಕ್ನಿಕ್ ಕಾಲೇಜಿಗೆ ಪ್ರವೇಶ ಪ್ರಾರಂಭ

ದಾವಣಗೆರೆ, ಮೇ ೨೩: ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರವೇಶ ಪಡೆಯುವ ಮೂಲಕ ಅತ್ಯಂತ ಕಡಿಮೆ ಖರ್ಚಿನಲ್ಲಿ ತಾಂತ್ರಿಕ ಶಿಕ್ಷಣ ಪಡೆಯಬಹುದಾಗಿದ್ದು, ನಗರದ ಡಿಆರ್‌ಆರ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿರುವುದಾಗಿ ಪ್ರಾಂಶುಪಾಲ ಜಿ.ಬಿ. ಸದಾನಂದಪ್ಪ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರುವ ಆಸಕ್ತರು ಮೇ ೨೬ರೊಳಗೆ ಅರ್ಜಿ ಸಲ್ಲಿಸಬೇಕು. ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದ ದಿನದಿಂದಲೇ ಅರ್ಜಿ ಸ್ವೀಕರಿಸಲಾಗುತ್ತಿದೆ. ವಿದ್ಯಾರ್ಥಿಗಳು ತಾವು ಗಳಿಸಿರುವ … Read more

ಜನಾದೇಶಕ್ಕೆ ತಲೆಬಾಗುತ್ತೇವೆ- ಜಿ. ಎಸ್. ಮಂಜುನಾಥ್ ಗಡಿಗುಡಾಳ್

ದಾವಣಗೆರೆ, ಮೇ. 22: ಮಹಾನಗರ ಪಾಲಿಕೆಯ 28 ನೇ ವಾರ್ಡ್ ಭಗತ್ ಸಿಂಗ್ ನಗರ ಹಾಗೂ 37 ನೇ ವಾರ್ಡ್ ನ ಮತದಾರರ ತೀರ್ಪಿಗೆ ನಾವು ತಲೆಬಾಗುತ್ತೇವೆ. ಕಾಂಗ್ರೆಸ್ ಪಕ್ಷಕ್ಕೆ ಮತ ‌ನೀಡಿದ ಎರಡೂ ವಾರ್ಡ್ಗಳ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇವೆ. ಚುನಾವಣೆ ಎಂದ ಮೇಲೆ ಸೋಲು ಗೆಲುವು ಸಹಜ. ಕೇಂದ್ರ, ರಾಜ್ಯ, ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಹಾಗಾಗಿ ಉಪಚುನಾವಣೆಯಲ್ಲಿ ನಮಗೆ ಸೋಲಾಗಿದೆ. ಉಪಚುನಾವಣೆಗಳು ಯಾವಾಗಲೂ ಆಡಳಿತ ಪಕ್ಷದ ಪರ ಇರುತ್ತದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಕಾಂಗ್ರೆಸ್ … Read more

ಪೆನ್ಷನ್ ಬದಲಿಗೆ ಸರ್ಕಾರಕೆ ತೆರಿಗೆ ಕಟ್ಟುವಂತೆ ಬೆಳೆಯಿರಿ

ವಿಕಲಚೇತನರ ಉದ್ಯೋಗಮೇಳದಲ್ಲಿ ಡಾ. ಮಹಾಂತೇಶ ಜಿ. ಕಿವಡಸಣ್ಣವರ ಆಶಯ ದಾವಣಗೆರೆ, ಮೇ ೨೦: ಎಲ್ಲಾ ಇದ್ದು ಏನೂ ಮಾಡಲಾಗದ ಸನ್ನಿವೇಶದಲ್ಲಿ ಇಲ್ಲ ಎನ್ನುವುದರ ಮದ್ಯೆ ಎಲ್ಲವನ್ನೂ ಹುಡುಕಿಕೊಳ್ಳಲು ಹೊರಟಿರುವ ವಿಕಲಚೇತನರ ಉದ್ಯೋಗಮೇಳ ನಮಗೆ ಸ್ಪೂರ್ಥಿದಾಯಕವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎ. ಚನ್ನಪ್ಪ ಅಭಿಪ್ರಾಯಪಟ್ಟರು. ಸಮರ್ಥನಂ ಅಂಗವಿಕಲ ಸಂಸ್ಥೆ ವತಿಯಿಂದ ನಗರದ ದೇವರಾಜ ಅರಸು ಬಡಾವಣೆಯಲ್ಲಿನ ಅಂಧಮಕ್ಕಳ ಸರ್ಕಾರಿ ಪಾಠ ಶಾಲೆಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಯುವ ವಿಕಲಚೇತನರ ಉದ್ಯೋಗ ಮೇಳವನ್ನು ಗಿಡಕ್ಕೆ ನೀರೆರೆಯುವ … Read more

ದಾವಣಗೆರೆಯಲ್ಲಿ 24*7 ನೀರಿಗೆ ಜೂನ್ 2022ರ ಗಡುವು-ಸಂಸದ ಜಿ.ಎಂ.ಸಿದ್ದೇಶ್ವರ

ತಪ್ಪಿದಲ್ಲಿ ಕಂಟ್ರಾಕ್ಟರ್ ಹಾಗೂ ಅಧಿಕಾರಿಗಳೇ ಹೊಣೆ ದಾವಣಗೆರೆ: ದಾವಣಗೆರೆ ನಗರಕ್ಕೆ ಕುಡಿಯುವ ನೀರು ಪೂರೈಸುವ ಜಲಸಿರಿ ಕಾಮಗಾರಿಯನ್ನು ಜೂನ್ 2022 ಕ್ಕೆ ಪೂರ್ಣಗೊಳಿಸಿ ನಗರದ ಜನತೆಗೆ 24*7 ಕುಡಿಯುವ ನೀರನ್ನು ಸರಬರಾಜು ಮಾಡಲೇಬೇಕು, ಇಲ್ಲದಿದ್ದ ಪಕ್ಷದಲ್ಲಿ ಕಂಟ್ರಾಕ್ಟರ್ ಹಾಗೂ ಅಧಿಕಾರಿಗಳೇ ಇದರ ಹೊಣೆ ಹೊರಬೇಕಾಗುತ್ತದೆಂದು ಸಂಸದರಾದ ಜಿ.ಎಂ. ಸಿದ್ದೇಶ್ವರ ಹೇಳಿದರು. ಸ್ಮಾರ್ಟ್ ಸಿಟಿ ಕಛೇರಿಯಲ್ಲಿ ಗುರುವಾರ ನಡೆದ ಜಲಸಿರಿ, ಸ್ಮಾರ್ಟ್ ಸಿಟಿ, ಏರ್ ಪೋರ್ಟ್‍ಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತಾನಾಡಿದ ಅವರು ಸ್ಮಾರ್ಟ್ ಸಿಟಿ ಅಧಿಕಾರಿಗಳು … Read more

ದಾವಣಗೆರೆ: ಜ. 31ರವರೆಗೆ ವೀಕೆಂಡ್ ಕರ್ಫ್ಯೂ ಮುಂದುವರಿಕೆ

ದಾವಣಗೆರೆ: ಕೋವಿಡ್ ಪ್ರಕರಣಗಳು ದಿಢೀರನೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಜ. 04 ರಂದು ಹೊರಡಿಸಿದ್ದ ಮಾರ್ಗಸೂಚಿ ಜ. 31 ರವರೆಗೂ ಮುಂದುವರೆಯಲಿದ್ದು, ವೀಕೆಂಡ್ ಕರ್ಫ್ಯೂ ಕೂಡ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ವಾರಾಂತ್ಯ ಕಫ್ರ್ಯೂ, ಚಿತ್ರಮಂದಿರ, ಹೋಟೆಲ್, ರೆಸ್ಟೋರೆಂಟ್ ಮುಂತಾದೆಡೆ ಶೇ. 50 ಆಸನ ಸಾಮರ್ಥ್ಯದೊಂದಿಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಸೇರಿದಂತೆ ಹಲವು ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಮಾರ್ಗಸೂಚಿಯನ್ನು ತಪ್ಪದೆ ಪಾಲಿಸುವುದರ ಮೂಲಕ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ … Read more

error: Content is protected !!