ಬೈಕ್ ಕಳ್ಳನ ಬಂಧನ 5 ಬೈಕ್ ವಶ
ಸುದ್ದಿ360ದಾವಣಗೆರೆ: ಬೈಕ್ ಕಳವು ಮಾಡುತ್ತಿದ್ದ ಆರೋಪಿಯನ್ನು ನಗರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣದಿಂದ ಈ ಕೃತ್ಯ ಬೆಳಕಿಗೆ ಬಂದಿದ್ದು, ನಗರದ ರಾಮ ಮಂದಿರ ಪಾರ್ಕ್ ಬಳಿ ಜು.7ರಂದು ನಿಲ್ಲಿಸಿದ್ದ ಬೈಕ್ ಕಳುವಾದ ಬಗ್ಗೆ ಪವನ್ ಎಂಬುವರು ಬಡಾವಣೆ ಠಾಣೆಗೆ ದೂರು ನೀಡಿದ್ದರು. ನಗರವಾಸಿ ಶಾಹೀದ್(21)ಬಂಧಿತ ಆರೋಪಿಯಾಗಿದ್ದು, ಈತನಿಂದ 1.30 ಲಕ್ಷ ರೂ. ಮೌಲ್ಯದ ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನುಮಾನಸ್ಪದವಾಗಿ ಓಡಾಡುತ್ತಿದ್ದ ಈತನನ್ನು ತಡೆದು ವಿಚಾರಿಸಿದಾಗ ಕಳ್ಳತನ ಒಪ್ಪಿಕೊಂಡಿದ್ದಾನೆ. … Read more