ಡಾ.ಬಿ.ಆರ್ ಅಂಬೇಡ್ಕರ್ ರವರ 132ನೇ ಜಯಂತಿ ಸರಳ ಆಚರಣೆ

ದಾವಣಗೆರೆ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏಪ್ರಿಲ್ 14 ರಂದು ಬೆಳಿಗ್ಗೆ 10.30 ಗಂಟೆಗೆ ಡಾ. ಬಿ.ಆರ್ ಅಂಬೇಡ್ಕರ್ ರವರ 132ನೇ ಜಯಂತಿ ಆಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುತ್ತದೆ. ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಆಚರಣೆಯನ್ನು ಸರಳವಾಗಿ ಆಚರಿಸಲು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ

ದಾವಣಗೆರೆ: ಅಕ್ರಮ ಚುನಾವಣಾ ಪ್ರಚಾರ ಆರೋಪ – ಕಾರ್ಯಕರ್ತರ ಜಟಾಪಟಿ

59 ಲ್ಯಾಪ್ ಟಾಪ್ ಜಪ್ತಿ – ವಿಚಾರಣೆ ದಾವಣಗೆರೆ, ಸುದ್ದಿ 360: ಅನುಮತಿ ಪಡೆಯದೆ ಟೆಲಿಕಾಲಿಂಗ್ ಮೂಲಕ‌ ಮತಬೇಟೆಯ ತಂತ್ರದಲ್ಲಿ‌ ತೊಡಗಿದ್ದ ಬಿಜೆಪಿಯ ತಂತ್ರಗಾರಿಕೆಯನ್ನು ಕಾಂಗ್ರೆಸ್ ಬಟಾಬಯಲು ಮಾಡಿದೆ. ನಗರದ ಚೇತನಾ ಹೋಟೆಲ್ ಎದುರಿನ ಜೆಪಿ‌ ಫಂಕ್ಷನ್ ಹಾಲ್ನಲ್ಲಿ ಟೆಲಿಕಾಲಿಂಗ್ ಮೂಲಕ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿತ್ತು. ಇದರ ಸುಳಿವು‌ ಪತ್ತೆ ಹಚ್ಚಿದ ಕಾಂಗ್ರೆಸ್‌ ಮುಖಂಡರು ಪ್ರಕರಣ ಕುರಿತಾಗಿ‌‌ ದೂರು ನೀಡಿದ ಹಿನ್ನೆಲೆಯಲ್ಲಿ ದಾಳಿ ಮಾಡಿರುವ ಚುನಾವಣಾಧಿಕಾರಿಗಳು 59 ಲ್ಯಾಪ್ ಟಾಪ್ ಸೇರಿದಂತೆ ಕೆಲವರ  ಮೊಬೈಲ್ ಗಳನ್ನು … Read more

ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ – ಫಸ್ಟ್ ರಿಯಾಕ್ಷನ್ ಏನು?

ಶಿವಮೊಗ್ಗ ಏ. 11:  ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಉಪಮುಖ್ಯಮಂತ್ರಿ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪ ಧಿಡೀರ್ ಬೆಳವಣಿಗೆಯಲ್ಲಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿಸಿಕೊಂಡಿದ್ದಾರೆ. ಕಳೆದ 40ಕ್ಕೂ ಹೆಚ್ಚು ವರ್ಷದ … Read more

ಶಿವಮೊಗ್ಗ: ಏ.10ರಂದು ಚೆಕ್ ಪೋಸ್ಟ್ ಗಳಲ್ಲಿ ಸಿಕ್ಕಿದ್ದು 30.60 ಲಕ್ಷ ನಗದು

ಶಿವಮೊಗ್ಗ,ಏ.11: ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆ ನಡೆಸಲಾಗುತ್ತಿದ್ದು, ಏ.10ರಂದು ಮೂರು ಪ್ರತ್ಯೇಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಒಟ್ಟು ರೂ 30,64,000/- ನಗದು ಹಣವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ 27,60,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ … Read more

ಏ.6ಕ್ಕೆ ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಸಮಾವೆಶ

ಸುದ್ದಿ360 ದಾವಣಗೆರೆ, ಏ.5: ಬಿಜೆಪಿ ರೈತ ಮೋರ್ಚಾ ಜಿಲ್ಲಾ ಸಮಾವೇಶ ಏ.6ರಂದು ಮಧ್ಯಾಹ್ನ 3 ಗಂಟೆಗೆ ನಗರದ ಮಾಗನೂರು ಬಸಪ್ಪ ಮೈದಾನದಲ್ಲಿ ಆಯೋಜಿಸಲಾಗಿರುವುದಾಗಿ ಮೋರ್ಚಾ ಜಿಲ್ಲಾಧ್ಯಕ್ಷ ಲೋಕಿಕೆರೆ ನಾಗರಾಜ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಂಸದೆ ಶೋಭಾ ಕರಂದ್ಲಾಜೆ, ರೈತ ಮೋರ್ಚಾದ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ, ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕ ಎಸ್.ಎ. ರವಿಂದ್ರನಾಥ್ ಸೇರಿದಂತೆ ಬಿಜೆಪಿ ಶಾಸಕರು, ಸಚಿವರು ಪಾಲ್ಗೊಳ್ಳಲಿರುವುದಾಗಿ ಹೇಳಿದರು. … Read more

ದಾವಣಗೆರೆ: ಅಶೋಕ ಅಂಡರ್‌ ಪಾಸ್ ಸಂಚಾರಕ್ಕೆ ಮುಕ್ತ – ತೊಡಕು ಜೀವಂತ

ಸುದ್ದಿ360 ದಾವಣಗೆರೆ ಏ.04: ನಗರದ ಅಶೋಕ ರಸ್ತೆ ರೈಲ್ವೆ ಗೇಟ್  ಮೂಲಕ ಹಾದು ಹೋಗುವ ವಾಹನ ಸವಾರರು ಇದೀಗ ಕೊಂಚ ರಿಲೀಫ್ ಆಗಿದ್ದಾರೆ.  ಇದರಿಂದ ಜನ ರೈಲ್ವೇ ಗೇಟ್ ಕಾಯುವುದು ತಪ್ಪಿರುವುದು ಎಷ್ಟು ಸತ್ಯವೋ ಹಾಗೆಯೇ ಕೆಲವು ಸಮಸ್ಯೆಗಳು ಉದ್ಭವಿಸಿರುವುದು ಅಷ್ಟೇ ಸತ್ಯವಾಗಿದೆ. ಹೌದು ವಾಹನ ದಟ್ಟಣೆ ನಿಯಂತ್ರಿಸಲು ನಿರ್ಮಿಸಿರುವ ಅಂಡರ್ ಪಾಸ್ ಸೋಮವಾರದಿಂದ ಸಂಚಾರಕ್ಕೆ ಮುಕ್ತವಾಗಿದೆ. ಇದರಿಂದ ನಾಗರೀಕರ ಹಲವು ದಶಕಗಳ ಬೇಡಿಕೆ ಈಡೇರಿದಂತಾಗಿದೆ. ಅಶೋಕ ಟಾಕೀಸ್ ಎದುರು ಎಡಕ್ಕೆ ಯು ಟರ್ನ್ ತೆಗೆದುಕೊಳ್ಳುವುದು ತುಂಬಾ … Read more

ಈ ಬಾರಿ ಲಿಂಗಾಯತ ಮುಖ್ಯಮಂತ್ರಿ: ಶಾಮನೂರು ಶಿವಶಂಕರಪ್ಪ

ದಾವಣಗೆರೆ ಉತ್ತರ-ದಕ್ಷಿಣದಲ್ಲಿ ನಮ್ಮದೇ ಮೇಲುಗೈ – ಬೇರೆ ಯಾರು ಬಂದರೂ ಸೋಲು ಖಚಿತ –  ಎಸ್ ಎಸ್ ಸುದ್ದಿ360 ದಾವಣಗೆರೆ ಏ. 4: ದಾವಣಗೆರೆಯ ದಕ್ಷಿಣ ಮತ್ತು ಉತ್ತರ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಲಿದ್ದು, ಇಲ್ಲಿ ಯಾರೇ ಬಂದು ನಿಂತರೂ ಅವರಿಗೆ ಸೋಲು ಖಚಿತ  ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಗಳ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ. ಚುನಾವಣೆ ಬಳಿಕ … Read more

ಜಿಎಂಐಟಿ: ಕಿರ್ಲೋಸ್ಕರ್ ಟೊಯೋಟಾ ಕಂಪನಿಗೆ ಮೆಕ್ಯಾನಿಕಲ್ ವಿಭಾಗದ 27 ವಿದ್ಯಾರ್ಥಿಗಳು ಆಯ್ಕೆ

ಸುದ್ದಿ360 ದಾವಣಗೆರೆ ಏ.4: ನಗರದ ಜಿ ಎಮ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಕಿರ್ಲೋಸ್ಕರ್ ಟೊಯೋಟಾ ಟೆಕ್ಸ್ಟೈಲ್ ಮಷೀನರಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಂದರ್ಶನ ಪ್ರಕ್ರಿಯೆಯಲ್ಲಿ ಒಟ್ಟು 27 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಎಂಐಟಿ ಕಾಲೇಜಿನ ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮತ್ತು ಅಂತಿಮ ವರ್ಷದ ವಿವಿಧ ಕಾಲೇಜಿನ ಡಿಪ್ಲೋಮೋ ಮೆಕ್ಯಾನಿಕಲ್ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಈ ಸಂದರ್ಶನ … Read more

ಅಧಿಕಾರಕ್ಕೆ ಬರದ ಕಾಂಗ್ರೆಸ್‍ನಲ್ಲಿ ಸಿಎಂ ಸ್ಥಾನಕ್ಕಾಗಿ ಹೋರಾಟ – ಬಸವರಾಜ ಬೊಮ್ಮಾಯಿ

ಬೆಂಗಳೂರು ಏ.4: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೋದ ಕಡೆಯಲ್ಲಿ ನಾನೇ ಸಿಎಂ ನನಗೆ ಆಶೀರ್ವಾದ ಮಾಡಿ ಎಂದು  ಹೇಳಿಕೊಂಡು ತಿರುಗುತ್ತಿದ್ದಾರೆ. ಸಿದ್ದರಾಮಯ್ಯ ಅವರು ನಾನೇ ಸಿಎಂ ಹೇಳುತ್ತಾರೆ.  ಮುಖ್ಯಮಂತ್ರಿ ಮಾಡೋದು ಜನ. ಆದರೆ ಜನರ  ಮನಸ್ಸಿನಲ್ಲಿ ಇವರಿಬ್ಬರೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ  ಮುಖ್ಯಮಂತ್ರಿ ಸ್ಥಾನದ   ಕನಸು ಕಾಣುತ್ತಿದ್ದಾರೆ.  ಆ ಕನಸು ನನಸಾಗೋದಿಲ್ಲ ಎಂದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ … Read more

ಕಾಂಗ್ರೆಸ್ಸಿಗೆ  ಅಂಬೇಡ್ಕರ್‌ ಮೇಲೆ ಪ್ರೀತಿ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಬೆಂಗಳೂರು, ಏಪ್ರಿಲ್ 03: ಕಾಂಗ್ರೆಸ್ ಗೆ ಅಂಬೇಡ್ಕರ್‌ ಅವರ ಮೇಲೆಯಾಗಲಿ ,  ಅವರು ಬರೆದಿರುವ ಸಂವಿಧಾನದ ಮೇಲೆಯಾಗಲಿ  ನಂಬಿಕೆ ಇಲ್ಲ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಂಗ್ರೆಸ್ ವಕ್ತಾರರು ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ  ಅವರು ಮೀಸಲಾತಿ ಬಗ್ಗೆ  ಟ್ವೀಟ್ ಮಾಡಿರುವ ಕುರಿತು  ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮೀಸಲಾತಿ ನೀಡಿರುವುದು ಕಾನೂನು ಬಾಹಿರ, ಸಂವಿಧಾನ ವಿರೋಧಿ ಎಂದು   ಕೆಳಮಟ್ಟದ ಶಬ್ದಗಳನ್ನು  ಬಳಸಿದ್ದಾರೆ.  ಜನಸಂಖ್ಯೆ ಆಧಾರಿತವಾಗಿ ಮೀಸಲಾತಿ ನೀಡಬೇಕು  ಎಂದು ಅಂಬೇಡ್ಕರ್ … Read more

error: Content is protected !!