ಭಾರತೀಯ ಮೌಲ್ಯ ಎತ್ತಿ ಹಿಡಿಯುವ ಶಿಕ್ಷಣ ಅವಶ್ಯ: ಮಂಜುನಾಥ್ ಏಕಬೋಟೆ
ಸುದ್ದಿ360 ದಾವಣಗೆರೆ, ಡಿ.30: ಭಾರತೀಯ ಮೌಲ್ಯಗಳ ಪರಿಕಲ್ಪನೆಯಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈಶ್ವರಮ್ಮ ಶಾಲೆಯೂ ಒಂದು ಆದರ್ಶ. ಶಾಲೆಗೆ ಕೇವಲ ಅಂಕ ಗಳಿಕೆಗಾಗಿ ಶಿಕ್ಷಣ ನೀಡದೆ ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿಯುವಂತಹ ಶಿಕ್ಷಣ ಗುರುತಿಸಿ ಮಕ್ಕಳಿಗೆ ನೀಡುತ್ತಿರುವುದು ಅತ್ಯುತ್ತಮ ಕಾರ್ಯವಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್ ಏಕಬೋಟೆ ಹೇಳಿದರು. ನಗರದ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಲೆಗಳು ಸಮಾಜದ … Read more