ಮಹಾರಾಷ್ಟ್ರ ಮುಖ್ಯಮಂತ್ರಿಗಳು ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸ ಮಾಡಬಾರದು: ಸಿಎಂ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360, ಬೆಂಗಳೂರು, ನ. 22: ರಾಜ್ಯ ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿಗಳು ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ವಿಶೇಷ ಅನುದಾನಗಡಿ ಅಭಿವೃದ್ಧಿ ಪ್ರಾಧಿಕಾರವು ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕೆನ್ನುವ ತೀರ್ಮಾನ ಮಾಡಲಾಗಿದೆ. ಏಕೀಕರಣ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಹಾಗೂ ಗೋವಾ ವಿಮೋಚನೆಗೆ ಕೆಲಸ ಮಾಡಿದ ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ದಾಖಲೆಗಳನ್ನು ತರಿಸಿ … Read more

ಜಿಎಂಐಟಿ ಕಾಲೇಜಿನ 15 ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆ

ಸುದ್ದಿ360 ದಾವಣಗೆರೆ ನ.18:  ಇತ್ತೀಚೆಗೆ ನಡೆದ ವಿವಿಧ ಕಂಪನಿಗಳ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಕಾಲೇಜಿನ 15 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಟೆಕ್ ಮಹೇಂದ್ರ ಕಂಪನಿಯ ವತಿಯಿಂದ ಐದು ವಿದ್ಯಾರ್ಥಿಗಳು, ಹೆಕ್ಸಾವೇರ್ ಕಂಪನಿ ವತಿಯಿಂದ ಮೂರು ವಿದ್ಯಾರ್ಥಿಗಳು ಮತ್ತು ಆಪ್ಟಂ ಸಲ್ಯೂಷನ್ ಕಂಪನಿ ವತಿಯಿಂದ ಬಯೋಟೆಕ್ನಾಲಜಿ ವಿಭಾಗದ ಏಳು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇನ್ನೂ ಅನೇಕ ಕಂಪನಿಗಳು 2023ಕ್ಕೆ ಹೊರ ಹೋಗುವ ವಿದ್ಯಾರ್ಥಿಗಳಿಗೆ ಸರದಿಯಲ್ಲಿದ್ದು, ಎಲ್ಲಾ ಅರ್ಹ … Read more

ಮಾಜಿ ಸಿಎಂ ಸಿದ್ಧರಾಮಯ್ಯಗೆ ಯಾವ ಕ್ಷೇತ್ರವೂ ಸುರಕ್ಷಿತವಾಗಿಲ್ಲ: ಸಚಿವ ಗೋವಿಂದ ಕಾರಜೋಳ ಲೇವಡಿ

ಚಾಮುಂಡೇಶ್ವರಿ ಕ್ಷೇತ್ರದ ಜನರು ಕೈಬಿಟ್ಟಾಗ ಬಾದಾಮಿ ಜನರು ಸಿದ್ದರಾಮಯ್ಯ ಕೈ ಹಿಡಿದಿದ್ದರು. ಅವರ ಸೇವೆ ಮಾಡುವುದು ಬಿಟ್ಟು ಈಗ ಬೇರೆ ಕ್ಷೇತ್ರ ಕ್ಕೆ ಹೋಗುತ್ತಿದ್ದಾರೆ. ಕೋಲಾರದಲ್ಲಿ ಸ್ಥಿತಿ ಸರಿಯಿಲ್ಲ, ಅಲ್ಲಿ ಮುನಿಯಪ್ಪನವರನ್ನು ಕಾಂಗ್ರೆಸ್ ನವರೇ ಸೋಲಿಸಿದ್ದಾರೆ. ಈ ಸರತಿ ಎಲ್ಲರಿಗೂ ಬರಲಿದೆ ಎಂದು ಹೇಳಿದ ಅವರು, ಕಷ್ಟ ಕಾಲದಲ್ಲಿ ಕೈ ಹಿಡಿದವರನ್ನು ಮರೆಯಬಾರದು’ .

ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ ಖ್ಯಾತಿ ನೆಹರು  ಅವರದ್ದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ನವೆಂಬರ್ 14: ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿರುವ ಖ್ಯಾತಿ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಸಲ್ಲುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು  ಭಾರತದ ಪ್ರಥಮ ಪ್ರಧಾನಿ ಪಂಡಿತ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿರುವ ಅವರ  ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಾತ್ಸಲ್ಯದಿಂದ ಕಾಣುತ್ತಿದ್ದ ನಮ್ಮ ರಾಷ್ಟ್ರದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ … Read more

ಕೇಸರಿ ಕಂಡರೆ ಏಕೆ ಸಿಟ್ಟು? ಎಲ್ಲದರಲ್ಲೂ ರಾಜಕಾರಣ ಸಲ್ಲದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ನವೆಂಬರ್ 14: ಎಲ್ಲದರಲ್ಲೂ ರಾಜಕಾರಣ ಮಾಡುವುದು ಬಹಳ ಕೆಳ ಮಟ್ಟದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುತ್ತಿರುವುದನ್ನು ಕಾಂಗ್ರೆಸ್ ವಿರೋಧಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇದೆ.  ಕೇಸರಿ ಕಂಡರೆ ಏಕೆ ಸಿಟ್ಟು? ಸ್ವಾಮಿ ವಿವೇಕಾನಂದರ ಹೆಸರಿನಲ್ಲಿಯೇ ಶಾಲಾ ಕೊಠಡಿಗಳನ್ನು  … Read more

ಎಪಿಸಿ ಕಪ್ ಚದುರಂಗ ಸ್ಪರ್ಧೆ ತನುಶ್ ಜೆ ಗೆ ಪ್ರಥಮ ಸ್ಥಾನ

ಸುದ್ದಿ360 ದಾವಣಗೆರೆ ನ. 13: ನಗರದ ವಿನಾಯಕ ಬಡಾವಣೆ ಯಲ್ಲಿರುವ ಆನಂದ್ ಪಿಯು ಕಾಲೇಜ್ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ಮಕ್ಕಳಿಗೆ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಏರ್ಪಡಿಸಲಾಗಿತ್ತು  ಆನಂದ್ ಪಿಯು ಕಾಲೇಜಿನ ಅಧ್ಯಕ್ಷರಾದ ಆನಂದ್  ಚದುರಂಗ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳ ಬುದ್ಧಿವಂತಿಕೆ ಶಕ್ತಿ ಬೆಳವಣಿಗೆಗೆ ಚೆಸ್ ಸಹಕಾರಿಯಾಗಲಿದೆ. ಇದು ಬುದ್ಧಿವಂತರ ಆಟ ಅಲ್ಲ ಮಕ್ಕಳನ್ನು ಬುದ್ಧಿವಂತರನ್ನಾಗಿ ಮಾಡುವ ಆಟ ಎಂದರು. ಇದೇ ರೀತಿ ಪ್ರತಿ ವರ್ಷವೂ ಎಪಿಸಿ ಕಪ್ ಚದುರಂಗ ಸ್ಪರ್ಧೆಯನ್ನು  … Read more

ನ.13ರಂದು ದಾವಣಗೆರೆ ಜಿಲ್ಲಾ ಸಿಪಿಐ ಸರ್ವ ಸದಸ್ಯರ ಸಭೆ

ಸುದ್ದಿ360 ದಾವಣಗೆರೆ ನ.12: ಭಾರತ ಕಮ್ಯುನಿಸ್ಟ್ ಪಕ್ಷದ ದಾವಣಗೆರೆ ಜಿಲ್ಲಾ ಸರ್ವ ಸದಸ್ಯರ ಸಭೆಯು ನವೆಂಬರ್ 13ರ ಭಾನುವಾರ ನಡೆಯಲಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ತಿಳಿಸಿದ್ದಾರೆ. ದಾವಣಗೆರೆ ಈರುಳ್ಳಿ ಮಾರ್ಕೆಟ್ ರಸ್ತೆಯಲ್ಲಿರುವ ಶೇಖರಪ್ಪ ನಗರದ ಕಾಂ. ಹೆಚ್ ಅಡಿವೆಪ್ಪ ಸಮುದಾಯ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಆರಂಭವಾಗುವ ಸಿಪಿಐ ಸರ್ವ ಸದಸ್ಯರ ಸಭೆಯನ್ನು ಸಿಪಿಐ ರಾಜ್ಯ ಕಾರ್ಯದರ್ಶಿ ಕಾಂ. ಸಾತಿ ಸುಂದರೇಶ್ ಉದ್ಘಾಟಿಸಲಿದ್ದಾರೆ. ಪಕ್ಷದ ದಾವಣಗೆರೆ ಜಿಲ್ಲಾ ಮಂಡಳಿ ಉಸ್ತುವಾರಿಗಳಾದ ಕಾಂ. … Read more

ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಅಜಯ್ ದ್ವಿತೀಯ

ಸುದ್ದಿ360 ಶಿವಮೊಗ್ಗ ನ. 12: ಶಿವಮೊಗ್ಗದ ಆಕ್ಸ್ ಫರ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಹಾಗೂ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದಲ್ಲಿ  ಕರಾಟೆ ತರಬೇತಿ ದಾರರಾದ  ಸನ್ ಸೈ  ಶ್ರೇಯಸ್ ರವರ ವಿದ್ಯಾರ್ಥಿ ಯಾದ  ಅಜಯ್ ಮಂಗಳೂರಿನ ಕಟೀಲಿನಲ್ಲಿ ನಡೆಯುತ್ತಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ 60 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು  ಪಡೆದಿದ್ದಾರೆ. ವಿಜೇತ ಕ್ರೀಡಾಪಟುವಿಗೆ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಅಭಿನಂದಿಸಿದ್ದಾರೆ.

ಅಯೊಧ್ಯೆಗೆ ಸೀತೆಯ ದೊಡ್ಡ ನಮಸ್ಕಾರ !?

ಹೆಣ್ಣಿನ ಕ್ರಿಯಾಶೀಲತೆ ಸಹಿಸದ ಗಂಡಿನಿಂದ ದೌರ್ಜನ್ಯ: ಬಂಡಾಯ ಸಾಹಿತಿ ಡಾ. ಕಾಳೇಗೌಡ ಅಭಿಮತ

ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಸಿಂಗ್ ನೇಮಕ

ಸುದ್ದಿ360 ಶಿವಮೊಗ್ಗ,ನ.11: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಸಿಂಗ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಮಾಡಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ದೀಪಕ್ ಸಿಂಗ್ ಅವರು ತಕ್ಷಣ ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ.

error: Content is protected !!