ಕೊಡಗು ಘಟನೆಗೆ  ಮಹಬೂಬ್ ಭಾಷಾ ತೀವ್ರ ಖಂಡನೆ

ಸುದ್ದಿ360 ದಾವಣಗೆರೆ, ಆ.22: ಕೊಡಗಿಗೆ ಜನರ ಸಮಸ್ಯೆ ಆಲಿಸಲು ಹೋಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ತೀವ್ರವಾಗಿ ಖಂಡಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಭದ್ರತೆ ಒದಗಿಸುವುದರಲ್ಲಿ ವಿಫಲವಾಗಿರುವುದನ್ನು ನೋಡಿದರೆ ಈ ಸರ್ಕಾರ ವಿರೋಧ ಪಕ್ಷಗಳ ನಾಯಕರನ್ನು ಅಪಮಾನಿಸುವ ದುರುದ್ದೇಶ ಹೊಂದಿರುವುದು ಸ್ಪಷ್ಟವಾಗಿದೆ. ಈ ದೇಶಕ್ಕೆ ಪ್ರಜಾಪ್ರಭುತ್ವದ ಗಟ್ಟಿ ಅಡಿಪಾಯವಿದೆ. ಅಭಿಪ್ರಾಯ, ವಿಚಾರ ಹಂಚಿಕೊಳ್ಳಲು ಸಂವಿಧಾನದಲ್ಲಿಯೇ ಪ್ರತಿಯೊಬ್ಬರಿಗೂ ಅವಕಾಶವಿದೆ. … Read more

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ – ಸಂಪೂರ್ಣ ತನಿಖೆಗೆ ಸಿಎಂ ಆದೇಶ

ಸುದ್ದಿ360 ಬೆಂಗಳೂರು, ಆ.19: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಒಡ್ಡಿರುವ  ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಹಾಗೂ ಸಂಪೂರ್ಣ ತನಿಖೆ ಮಾಡಿಸುವುದಾಗಿ  ಭರವಸೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶುಕ್ರವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರೊಂದಿಗೆ ನೇರವಾಗಿ ಮಾತನಾಡಿದ್ದು, ಅವರಿಗೆ  ಅಥವಾ  ಸಿಬ್ಬಂದಿಗೆ ಬೆದರಿಕೆ ಕರೆಗಳು ಬಂದಿದ್ದರೆ ವಿವರಗಳನ್ನು  ನೀಡಲು ತಿಳಿಸಿದ್ದೇನೆ ಎಂದರು. ಅದರ ಜೊತೆಗೆ ಡಿಜಿ ಅವರನ್ನು … Read more

ಮುಖ್ಯಮಂತ್ರಿಗಳು ನಾಳೆ ದಾವಣಗೆರೆಗೆ ಬರುತ್ತಿಲ್ಲ. .

shimoga-riots-were-the-result-of-the-governments-appeasement-policy-basavaraj-bommai

ಶಿಗ್ಗಾವಿ, ಸವಣೂರಿನಲ್ಲಿ ವಕೀಲರ ಸಂಘಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ಸುದ್ದಿ360 ಬೆಂಗಳೂರು, ಆ. 20: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಭಾನುವಾರ) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಶಿಕ್ಷಣ ಸೇವೆಯಲ್ಲಿ 75 ಸಾರ್ಥಕ ವಸಂತಗಳನ್ನು ಕಳೆದು ಲಕ್ಷಾಂತರ ವಿದ್ಯಾರ್ಥಿಗಳ ಬಾಳು ಹಸನು ಮಾಡುತ್ತಾ ಬಂದಿರುವ ಸಂತ ಪೌಲರ ಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಮುಖ್ಯಮಂತ್ರಿಗಳ ಹಾವೇರಿ ಹಾಗೂ … Read more

ಆ.20, 21 ಸಂತ ಪೌಲರ ಶಾಲೆ ಅಮೃತ ಮಹೋತ್ಸವ

ಸುದ್ದಿ360 ದಾವಣಗೆರೆ, ಆ.19: ಸ್ವಾತಂತ್ರ್ಯ ಪೂರ್ವದಿಂದಲೂ ಶಿಕ್ಷಣ ಸೇವೆ ಸಲ್ಲಿಸುತ್ತಾ ಬಂದಿರುವ ಖ್ಯಾತಿಯನ್ನು ಹೊಂದಿರುವ ಸಂತ ಪೌಲರ ಶಾಲೆಯ ಅಮೃತ ಮಹೋತ್ಸವ ಸಮಾರಂಭ ಆ.20, 21ರಂದು ನಡೆಯಲಿರುವುದಾಗಿ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಗರದ ಚರ್ಚ್ ರಸ್ತೆಯಲ್ಲಿರುವ ಸಂತ ಪೌಲರ ಶಾಲೆ ಆವರಣದಲ್ಲಿ ಆ.21ರಂದು ಸಂಜೆ 5 ಗಂಟೆಗೆ ನಡೆಯುವ ಅಮೃತ ಮಹೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯ … Read more

ದಾವಣಗೆರೆ ಪಿಬಿವಿ ವಿದ್ಯಾಲಯದಲ್ಲಿ ಕೃಷ್ಣಜನ್ಮಾಷ್ಟಮಿ – ಚಿಣ್ಣರ ಕಲರವ

ಸುದ್ದಿ360 ದಾವಣಗೆರೆ, ಆ.19: ನಗರದ ದೇವರಾಜ ಅರಸು ಬಡಾವಣೆ ‘ಸಿ’ ಬ್ಲಾಕ್ ನಲ್ಲಿರುವ ದೈವಜ್ಞ ವಿದ್ಯಾಸಂಸ್ಥೆ, ಪಿಬಿವಿ ವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು. ರಾಘವೇಂದ್ರಸ್ವಾಮಿ ಮಠದ ಪ್ರಧಾನ ಅರ್ಚಕರು ಹಾಗೂ ಸಂಸ್ಕೃತ ಉಪನ್ಯಾಸಕರಾದ ಕೃಷ್ಣರಾಜಾ ಆಚಾರ್ಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಶ್ರೀ ಕೃಷ್ಣನ ಬಾಲ ಲೀಲೆಗಳು ಮತ್ತು ಕೃಷ್ಣನ ಅವತಾರ ಮತ್ತು  ಉಡುಗೆಯ ಮಹತ್ವ ಕುರಿತು ಪ್ರವಚನ ನೀಡಿದರು. ಶಾಲೆಯ ಮಕ್ಕಳು ಕೃಷ್ಣ-ರಾಧೆಯರ ವೇಷಭೂಷಣದಲ್ಲಿ ಕಂಗೊಳಿಸಿದರು. ಕೃಷ್ಣನ ಲೀಲೆಯನ್ನು ಸಾರುವ ವಿವಿಧ … Read more

ಗಾಂಧೀವಾದಿ ಮೀರಾತಾಯಿ ಕೊಪ್ಪೀಕರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಸುದ್ದಿ360, ಬೆಂಗಳೂರು, ಆ.19: ಸ್ವಾತಂತ್ರ್ಯ ಹೋರಾಟಗಾರ್ತಿ, ಗಾಂಧೀವಾದಿ ಮೀರಾತಾಯಿ ಕೊಪ್ಪಿಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಇಂದಿಗೂ ಪಾಲಿಸುತ್ತ ಬದುಕಿದ ಮೀರಾತಾಯಿ ಕೊಪ್ಪಿಕರ್ ಅವರು ವಿನೋಬಾ ಭಾವೆಯವರ ಅನುಯಾಯಿಯಾಗಿದ್ದರು. ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ವಾತ್ಸಲ್ಯ ಧಾಮವನ್ನು ಕಟ್ಟಿಕೊಂಡಿದ್ದ ಮೀರಾತಾಯಿ ಅವರು ಸರಳ ಜೀವನ, ಶ್ರಮದಾನ, ಹೈನುಗಾರಿಕೆ ಹಾಗೂ ಸಾವಯವ ಕೃಷಿಯನ್ನೇ ನೆಚ್ಚಿಕೊಂಡು ಜೀವನ ನಡೆಸುತ್ತಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿಕೊಂಡಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿಯೊಂದಿಗೆ ನೀಡಿದ್ದ ನಗದು ಬಹುಮಾನವನ್ನು ಬಡವರಿಗಾಗಿ … Read more

ಗುರು ಅನ್ನದಾನ ಮಹಾಶಿವಯೋಗಿಗಳ ಮತ್ತು ಡಾ. ಅಭಿನವ ಅನ್ನದಾನ ಶ್ರೀಗಳ ಪುಣ್ಯಾರಾಧನೆ – 249ನೇ ಶಿವಾನುಭವ ಸಂಪದ

ಸುದ್ದಿ360 ದಾವಣಗೆರೆ, ಆ.18: ಗುರು ಅನ್ನದಾನ ಮಹಾಶಿವಯೋಗಿಗಳವರ 45ನೇ ಪುಣ್ಯಾರಾಧನೆ ಮತ್ತು ಕಾಯಕಯೋಗಿ ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಅಭಿನವ ಅನ್ನದಾನ ಮಹಾಸ್ವಾಮಿಗಳ ಪ್ರಥಮ ವರ್ಷದ ಪುಣ್ಯಾರಾಧನೆಯನ್ನು ಇದೇ ಆಗಸ್ಟ್ 20 ಮತ್ತು 21ರಂದು ದಾವಣಗೆರೆಯಲ್ಲಿ ಆಯೋಜಿಸಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಶ್ರೀ ಅನ್ನದಾನೇಶ್ವರ ಸಾರ್ವಜನಿಕ ಸೇವಾ ಟ್ರಸ್ಟ್ ಅಧ್ಯಕ್ಷ ಅಥಣಿ ವೀರಣ್ಣ ಮಾತನಾಡಿ, 21ರ ಭಾನುವಾರ ಬೆಳಿಗ್ಗೆ 10ಕ್ಕೆ ನಗರದ ಶ್ರೀ ದೇವರಾಜ ಅರಸು ಬಡಾವಣೆಯ ಬಿ ಬ್ಲಾಕ್ ನಲ್ಲಿರುವ ಅನ್ನದಾನೇಶ್ವರ ಶಾಖಾಮಠದಲ್ಲಿ ಉಭಯ ಗುರುಗಳ … Read more

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಗ್ರಾಂಡ್ ಫಿನಾಲೆಗೆ ಜಿಎಂಐಟಿ ಕಾಲೇಜಿನ ಎರಡು ತಂಡಗಳು

ಸುದ್ದಿ360 ದಾವಣಗೆರೆ ಆ.17: ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಗ್ರಾಂಡ್ ಫಿನಾಲೆಗೆ ನಗರದ ಜಿಎಂಐಟಿ ಕಾಲೇಜಿನ ಎರಡು ತಂಡಗಳು ಆಯ್ಕೆಯಾಗಿವೆ. ಇದೆ ಆಗಸ್ಟ್ 25 ಮತ್ತು 26 ರಂದು ಮಹಾರಾಷ್ಟ್ರದಲ್ಲಿ ನಡೆಯುವ ಗ್ರಾಂಡ್ ಫಿನಾಲೆಯಲ್ಲಿ ತಂಡಗಳು ಭಾಗವಹಿಸಲಿರುವುದಾಗಿ ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಒಟ್ಟು 12 ತಂಡಗಳು ಮೊದಲನೇ ಸುತ್ತಿನಲ್ಲಿ ಭಾಗವಹಿಸಿ ಕೊನೆಗೆ ಎರಡು ಅತ್ಯುತ್ತಮ ತಂಡಗಳು ಗ್ರಾಂಡ್ ಫಿನಾಲೆಗೆ ಆಯ್ಕೆಯಾದವು ಎಂದು ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕರು ಮತ್ತು ಸ್ಮಾರ್ಟ್ … Read more

ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ರಕ್ಷಾಬಂಧನ ಕಾರ್ಯಕ್ರಮ

ಸುದ್ದಿ360 ದಾವಣಗೆರೆ ಆ.17: ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ರಕ್ಷಾಬಂಧನ, ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆ.18ರ ಬೆಳಿಗ್ಗೆ 10.30ಕ್ಕೆ ನಗರದ ಶ್ರೀಡಿ.ದೇವರಾಜ ಅರಸು ಬಡಾವಣೆಯ ಸಿ ಬ್ಲಾಕಿನಲ್ಲಿ ಇರುವ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಶಿವಧ್ಯಾನ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಈಶ್ವರೀಯ ವಿಶ್ವವಿದ್ಯಾಲಯದ ಬ್ರಹ್ಮಾಕುಮಾರಿ ಲೀಲಾಜಿ ತಿಳಿಸಿದರು. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪಿತ ಬ್ರಹ್ಮಾಕುಮಾರಿ, ಈಶ್ವರೀಯ ವಿಶ್ವವಿದ್ಯಾಲಯದ ಹುಬ್ಬಳ್ಳಿ ವಲಯದ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ನಿರ್ಮಲಾಜಿ ಸಾನಿಧ್ಯ ವಹಿಸುವರು. ದಾವಣಗೆರೆಯ ಬ್ರಹ್ಮಾ … Read more

ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಬಿ ಎಸ್ ವೈ ನೇಮಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಸ

ಸುದ್ದಿ360 ಬೆಂಗಳೂರು ಆ.17: ನಿಕಟ ಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿ ಸಭೆಯ ಸದಸ್ಯರಾಗಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ. ಬಿಜೆಪಿಯ ಅತ್ಯಂತ ಉನ್ನತ ಎನಿಸಿರುವ ಸಂಸದೀಯ ಮಂಡಳಿಗೆ ತಮ್ಮನ್ನು  ನೇಮಕ ಮಾಡುವುದರ ಮೂಲಕ ಪಕ್ಷ ತಮಗೆ ಅತಿ ದೊಡ್ಡ ಗೌರವದ ಸ್ಥಾನ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರ ನೇಮಕಾತಿ ಆದೇಶ ಹೊರ ಬರುತ್ತಿದ್ದಂತೆಯೆ ಸಿಎಂ ಅವರು ಕರೆ … Read more

error: Content is protected !!