ಬೇಡಿಕೆಗಳ ಈಡೇರಿಕೆಗಾಗಿ ತೀವ್ರ ಹೋರಾಟದ ಅಗತ್ಯವಿದೆ : ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಎಂ ಸಿ ಡೋಂಗ್ರೆ

ಸುದ್ದಿ360 ಶಿವಮೊಗ್ಗ, ಜು.25: ಬೆಲೆ ಏರಿಕೆ ನಿಯಂತ್ರಿಸಲಾಗದೆ ಜನಸಾಮಾನ್ಯರ ಬದುಕು ದುಸ್ತರವಾಗಿಸಿರುವ ಸರ್ಕಾರಗಳ ಮುಂದೆ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ತೀವ್ರ ಹೋರಾಟದ ಅಗತ್ಯವಿದೆ. ಮತ್ತು ಅದಕ್ಕಾಗಿ ರೂಪರೇಷೆ ಸಿದ್ದಪಡಿಸಿಕೊಳ್ಳಬೇಕೆಂದು ಎಐಟಿಯುಸಿ ರಾಜ್ಯ ಸಮಿತಿ ಉಪಾಧ್ಯಕ್ಷರಾದ ಎಂ ಸಿ ಡೋಂಗ್ರೆ ಹೇಳಿದರು. ಶಿವಮೊಗ್ಗ ನಗರದ ಭೋವಿಭವನದಲ್ಲಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಶನ್(ಎಐಟಿಯುಸಿ ಸಂಯೋಜಿತ) ರಾಜ್ಯ ಸಮಿತಿ ಆಯೋಜಿಸಿದ್ದ ಬಿಸಿಯೂಟ ತಯಾರಕ ಮಹಿಳೆಯರಿಗಿರುವ ಸಮಸ್ಯೆಗಳು ಸವಾಲುಗಳು ಮತ್ತು ಪರಿಹಾರ ಕುರಿತು ಏರ್ಪಡಿಸಿದ್ದ ರಾಜ್ಯಮಟ್ಟದ ಸಂಘಟನಾ ಸಮಾವೇಶ ಉದ್ಘಾಟಿಸಿ ಅವರು … Read more

ಸಚಿವ ಉಮೇಶ್ ಕತ್ತಿಯಿಂದ ಕುಟುಂಬ ರಾಜಕಾರಣ ಸಮರ್ಥನೆ

ಕುಟುಂಬ ರಾಜಕಾರಣದ ‘ಕತ್ತಿ’ ಝಳಪಿಸಿದ ಸಚಿವ ಉಮೇಶ್ ಕತ್ತಿ ಸುದ್ದಿ360 ವಿಜಯಪುರ, ಜು.25: ಪ್ರಧಾನಿ ಮೋದಿ ಹಾಗೂ ಯೋಗಿ ಇವರು ಕುಟುಂಬ ಇಲ್ಲದ ನಾಯಕರು. ನಾವೆಲ್ಲ ಕುಟುಂಬ ರಾಜಕಾರಣದಿಂದಲೇ ಬಂದವರು. ಕುಟುಂಬ ರಾಜಕಾರಣ ಇರೋದೆ ನಿಜ ಎಂದು ಅರಣ್ಯ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಪ್ರತಿಕ್ರಿಯಿಸಿದ್ದಾರೆ. ಇಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ನಾವೆಲ್ಲ ಕುಟುಂಬ ರಾಜಕಾರಣದಿಂದ ಬಂದವರು. ನನ್ನ ತಂದೆ ರಾಜಕಾರಣದಲ್ಲಿ ಇದ್ದರು, ಈಗ ನಾನೂ ಇದ್ದೇನೆ. ಯಡಿಯೂರಪ್ಪ ರಾಜಕಾರಣದಲ್ಲಿದ್ದರು, … Read more

ಸಾಯಲು ನೀರಿಗೆ ದುಮುಕಿದವಗೆ ಗರಿಗೆದರಿದ ಜೀವದ ಆಸೆ – ಅದೃಷ್ಟವಶಾತ್ ಬದುಕುಳಿದ ಜೀವ

ಸುದ್ದಿ360, ಬಾಗಲಕೋಟೆ ಜು.25: ಆತ್ಮಹತ್ಯೆಗೆ ಯತ್ನಿಸಿ ಸೇತುವೆಯಿಂದ ನೀರಿಗೆ ದುಮುಕಿದ ವ್ಯಕ್ತಿ ಅಚ್ಚರಿಯ ರೀತಿಯಲ್ಲಿ ಬದುಕುಳಿದಿರುವ ಘಟನೆ ಭಾನುವಾರ ಮಧ್ಯಾಹ್ನ ಅನಗವಾಡಿ ಸೇತುವೆ ಬಳಿ ನಡೆದಿದೆ. ಗದ್ದನಕೇರಿ ಕ್ರಾಸ್ ಬಳಿಯ ವೀರಾಪುರದ ನಿವಾಸಿ 43ರ ವಯೋಮಾನದ ಚನ್ನಬಸಪ್ಪ ಯಲಗನ್ನವರ  ಎಂಬ ವ್ಯಕ್ತಿ ಹೀಗೆ ಬದುಕಿ ಬಂದವರು. ಸಾವನ್ನಪ್ಪಲು ಅನಗವಾಡಿ ಸೇತುವೆಯ ಮೇಲಿಂದ ತುಂಬಿಹರಿಯುತ್ತಿರುವ ಘಟಪ್ರಭೆಗೆ ಜಿಗಿದ ಈತ ನೀರಿಗೆ ಬೀಳುತ್ತಿದ್ದಂತೆ ಬದುಕುವ ಆಸೆ ಮೊಳೆತಿದೆ. ಇದರಿಂದ ನೀರಿನ ಮಧ್ಯದ ಸೇತುವೆ ಕಂಬವನ್ನು ಆಸರೆಯಾಗಿ ಹಿಡಿದುಕೊಂಡು ಜೀವ ಉಳಿಸಿಕೊಳ್ಳಲು … Read more

ಭಾನಾಪೂರ ಬಳಿ ನಡೆದ ಅಪಘಾತದಲ್ಲಿ ತಬ್ಬಲಿಗಳಾದ ಮೂವರು ಮಕ್ಕಳು

ಸುದ್ದಿ360 ಕೊಪ್ಪಳ ಜು.25: ಕಳೆದ ವರ್ಷ ತಂದೆಯನ್ನು ಕಳೆದುಕೊಂಡಿದ್ದ ಮಕ್ಕಳು, ಶನಿವಾರ ತಡರಾತ್ರಿ ನಡೆದ ಅಪಘಾತದಲ್ಲಿ ತಾಯಿ ಪಾರವ್ವನನ್ನು ಕಳೆದುಕೊಂಡು ತಬ್ಬಲಿಗಳಾಗಿದ್ದಾರೆ. ಅಪಘಾತದಲ್ಲಿ ತಾಯಿ ಪಾರವ್ವ ಮೃತ ಪಟ್ಟರೇ, ಪುಟ್ಟರಾಜ್, ಭೂಮಿಕಾ ಹಾಗೂ ಬಸವರಾಜಗೆ ಗಾಯವಾಗಿದೆ. ಪಾರವ್ವ ಪತಿ ಬೀರಪ್ಪ ಕಳೆದ ವರ್ಷ ಅನಾರೋಗ್ಯದಿಂದ ಮೃತಪಟ್ಟಿದ್ದರು. ಪರಿಣಾಮ ಬೀರಪ್ಪ, ಪಾರವ್ವ ದಂಪತಿಗಳ ಮಕ್ಕಳಾದ ಬಸವರಾಜ್, ಪುಟ್ಟರಾಜ, ಭೂಮಿಕಾ ತಂದೆ ತಾಯಿಗಳಿಲ್ಲದೆ ಅನಾಥರಾಗಿವುದು ಎಂಥಹವರಿಗೂ ಮನ ಮಿಡಿಯುವಂತೆ ಮಾಡಿದೆ. ಅಪಘಾತದಲ್ಲಿ ಗಾಯಗೊಂಡಿರುವ  ಈ ಮಕ್ಕಳು ಸದ್ಯ ಕೊಪ್ಪಳ ಜಿಲ್ಲಾ … Read more

ಜನರ ಒತ್ತಾಸೆಗೆ ಮಣಿದು ವಿಜಯೇಂದ್ರ ಸ್ಪರ್ಧೆ ಘೋಷಿಸಿದ್ದೇನೆ – ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ: ಬಿಎಸ್ ವೈ

ಸುದ್ದಿ360, ಬೆಂಗಳೂರು, ಜು.24: ಜನರ ಒತ್ತಾಸೆಗೆ ಮಣಿದು ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ಬಿ.ವೈ ವಿಜಯೇಂದ್ರಗೆ ಬಿಟ್ಟುಕೊಡುವುದಾಗಿ ಶಿಕಾರಿಪುರದಲ್ಲಿ ನಡೆದ ಸಮಾರಂಭವೊಂದರಲ್ಲಿ ಹೇಳಿದ್ದೇನೆ. ಆದರೆ ಈ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಬಿ.ಎಸ್.ವೈ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಶನಿವಾರ ಮಾತನಾಡಿ, ಶುಕ್ರವಾರ ನಾನು ನೀಡಿದ ಹೇಳಿಕೆ ಗೊಂದಲಕ್ಕೆ ಎಡೆ ಮಾಡಿದೆ, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ವಿಜಯೇಂದ್ರ ಸ್ಪರ್ಧೇ ಮಾಡುತ್ತಾರೆ ಎಂದು ಹೇಳಿರುವುದಾಗಿ ತಿಳಿಸಿದರು. ಇದು ನನ್ನ ಸಲಹೆ ಮಾತ್ರವಾಗಿದ್ದು ಬಜೆಪಿ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದರು. ಹಳೇ … Read more

ಡೀಸೆಲ್ ಟ್ಯಾಂಕರ್ ಪಲ್ಟಿ: ಸ್ಥಳದಲ್ಲಿಯೇ ಇಬ್ಬರು ಸುಟ್ಟು ಕರಕಲು

ಸುದ್ದಿ360, ದಾವಣಗೆರೆ ಜು.24: ಹರಪನಹಳ್ಳಿ ಬಳಿ ಡೀಜಲ್ ಟ್ಯಾಂಕರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಪರಿಣಾಮ ಬೆಂಕಿ ಅವಘಡ ಸಂಭವಿಸಿ ಲಾರಿ ಹೊತ್ತಿ ಉರಿದಿರುವ ಪರಿಣಾಮ ಸ್ಥಳದಲ್ಲಿ ಇಬ್ಬರು ಸುಟ್ಡು ಕರಕಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಮೀಪದಲ್ಲಿದ್ದ ಬೈಕ್ ಸವಾರನೋರ್ವ ಬಹುತೇಕ ಸುಟ್ಟ ಸ್ತೀತಿಯಲ್ಲಿ ಬದುಕುಳಿದಿದ್ದಾರೆ.

ಭಾನಾಪುರ ಬಳಿಯ ಅಪಘಾತದಲ್ಲಿ ಬಾಲಕ ಪುಟ್ಟರಾಜು ಆರೋಗ್ಯ ಸ್ಥಿತಿ ಗಂಭೀರ

ಸುದ್ದಿ360 ಕೊಪ್ಪಳ ಜು.24: ಕುಕನೂರು ತಾಲೂಕಿನ ಭಾನಾಪುರ ಬಳಿ ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತಪಟ್ಟ ಐದೂ ಜನ ಒಂದೇ ಕುಟುಂಬದವರಾಗಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 7 ವರ್ಷದ  ಪುಟ್ಟರಾಜು ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸ್ಕಾರ್ಪಿಯೊ ವಾಹನದಲ್ಲಿದ್ದ ಒಟ್ಟು ಒಂಬತ್ತು ಜನರ ಪೈಕಿ ಐದು ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಲ್ಲವಿ (28), ಪುಟ್ಟರಾಜು (7), ಚಾಲಕ ಹರ್ಷವರ್ಧನ (35) ಹಾಗೂ ಭೂಮಿಕಾ (5) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಪುಟ್ಟರಾಜು … Read more

ಭೀಕರ ರಸ್ತೆ ಅಪಘಾತ: ಐದು ಮಂದಿ ಸಾವು -ಹಿಟ್ ಆ್ಯಂಡ್ ರನ್ – ಚೆಕ್ ಪೋಸ್ಟ್, ಟೋಲ್ ಗಳ ಮೇಲೆ ನಿಗಾ

ಸುದ್ದಿ360 ಕೊಪ್ಪಳ ಜು.24: ಕುಕನೂರು ತಾಲೂಕಿನ ಭಾನಾಪುರ ಬಳಿ ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಕನೂರು ತಾಲೂಕಿನ ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ(62), ಮೃತರ ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ(32), ಸಂಬಂಧಿ ಕಸ್ತೂರಮ್ಮ(20) ಮೃತ ದುರ್ದೈವಿಗಳಾಗಿದ್ದಾರೆ. ಕೊಪ್ಪಳದಲ್ಲಿ ನಡೆದ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಕುಕನೂರು ತಾಲೂಕಿನ ಬಿನ್ನಾಳ ಗ್ರಾಮಕ್ಕೆ ವಾಪಸ್ ಹೋಗುವಾಗ ಅವಘಡ ಸಂಭವಿಸಿದೆ. ವಾಹನದಲ್ಲಿ ಒಟ್ಟು ಒಂಬತ್ತು ಪ್ರಯಾಣಿಕರು ಇದ್ದರು. ಚಾಲಕ ಹರ್ಷವರ್ಧನ, ಮಕ್ಕಳಾದ … Read more

ಹಾರಂಗಿ: ಸಂಗೀತ ಕಾರಂಜಿ ವೇಳೆ ಕಾಡಾನೆ ಪ್ರತ್ಯಕ್ಷ – ಪ್ರವಾಸಿಗರು ದಿಕ್ಕಾಪಾಲು

ಸುದ್ದಿ360 ಮಡಿಕೇರಿ, ಜು.23: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹಾರಂಗಿ ಉದ್ಯಾನವನದಲ್ಲಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಪ್ರವಾಸಿಗರು ದಿಕ್ಕಾಪಾಲಾಗಿ ಓಡಿ ಹೋದ ಘಟನೆ ಶನಿವಾರ ಸಂಜೆ ನಡೆದಿದೆ. ಉದ್ಯಾನವನದಲ್ಲಿ ಸಂಗೀತ ಕಾರಂಜಿ ನಡೆಯುವ ವೇಳೆ ಈ ಕಾಡಾನೆ ಪ್ರವೇಶಿಸಿದೆ.  ಹಾರಂಗಿ ಅಣೆಕಟ್ಟೆಗೆ ಹೊಂದಿಕೊಂಡಂತೆ ಇರುವ ಅತ್ತೂರು ಮೀಸಲು ಅರಣ್ಯ ಪ್ರದೇಶದಿಂದ ಉದ್ಯಾನವನ ಪ್ರವೇಶಿಸಿದ ಕಾಡಾನೆ ಪ್ರವಾಸಿಗರನ್ನು ಭಯಭೀತಗೊಳಿಸಿದೆ. ಜಲಾಶಯದ ಭದ್ರತಾಪಡೆಯ ಸಿಬ್ಬಂದಿಗಳು ಪ್ರವಾಸಿಗರನ್ನು ಸುರಕ್ಷಿತವಾಗಿ ಉದ್ಯಾನವನದಿಂದ ಹೊರ ಕಳುಹಿಸಿದ್ದಾರೆ. ನಂತರ ಹಾರಂಗಿ ಗ್ರಾಮದ ಕಿರು ಸೇತುವೆಯ ಬಳಿಯ … Read more

ದಾವಣಗೆರೆ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಜು.25ರಿಂದ ಮೂರು ದಿನ ಚಿತ್ರೋತ್ಸವ

ಸುದ್ದಿ360 ದಾವಣಗೆರೆ, ಜು.23: ಇಲ್ಲಿನ ವಿದ್ಯಾನಗರ ಮುಖ್ಯರಸ್ತೆಯಲ್ಲಿರುವ ದಾವಣಗೆರೆ ವಿಶ್ವವಿದ್ಯಾಲಯದ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಜು.25ರಿಂದ 27ರವರೆಗೆ ಮೂರು ದಿನಗಳ ಚಿತ್ರೋತ್ಸವ -2022 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 25ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಕಲಾ ಪ್ರದರ್ಶನದ ಉದ್ಘಾಟನಾ ಸಮಾರಂಭಕ್ಕೆ ದಾವಣಗೆರೆ ವಿವಿ ಉಪಕುಲಪತಿ ಪ್ರೊ.ಬಿ.ಡಿ. ಕುಂಬಾರ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಕಲಾವಿದ ನಾಡೋಜ ಡಾ.ವಿ.ಟಿ. ಕಾಳೆ, ಅತಿಥಿಯಾಗಿ ಕಲಾ ನಿಕಾಯದ ಡೀನ್ ಡಾ. ವೆಂಕಟರಾವ್ ಎಂ. ಪಲಾಟೆ ಪಾಲ್ಗೊಳ್ಳುವರು.  ಮಹಾವಿದ್ಯಾಲಯದ ಸಂಯೋಜನಾಕಾರಿ … Read more

error: Content is protected !!