25, 26 ಕ್ಕೆ ಸಿಎಂ ದೆಹಲಿ ಪ್ರವಾಸ – ಬಿಟ್ಟೂ ಬಿಡದೆ ಕಾಡುತ್ತಿರುವ ಸಂಪುಟ ವಿಸ್ತರಣೆ

ವರಿಷ್ಠರು ಪ್ರಸ್ತಾಪಿಸಿದರೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಸುದ್ದಿ360, ಬೆಂಗಳೂರು:ಜು.21: ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜು. 24 ರಂದು ನವದೆಹಲಿಗೆ ತೆರಳಿತ್ತಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಮಲೋಚನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಪ್ರಧಾನಕಾರ್ಯದರ್ಶಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ,  ವಿವಿಧ ಇಲಾಖೆಗಳ ನಿಯೋಗದೊಂದಿಗೆ ಜುಲೈ 24 ರಂದು ದೆಹಲಿ … Read more

ಆರತಕ್ಷತೆ ವೇಳೆ ವರನ ಸಾವು

ಸುದ್ದಿ360, ವಿಜಯನಗರ (ಹೊಸಪೇಟೆ) ಜು.21: ಹಸೆಮಣೆ ಏರಬೇಕಾದ ಮದುಮಗ ಮದುವೆ ಆರತಕ್ಷತೆ ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಪಾಪಿನಾಯಕನಹಳ್ಳಿಯಲ್ಲಿ ಬುಧವಾರ ಸಂಜೆ  ನಡೆದಿದೆ. ಗ್ರಾಮದ ಹೊನ್ನೂರ ಸ್ವಾಮಿ (26) ಮೃತಪಟ್ಟ ವರನಾಗಿದ್ದಾನೆ. ಮದುವೆ ಆರತಕ್ಷತೆ ವೇಳೆ ಹೊನ್ನೂರಸ್ವಾಮಿ ಅವರಿಗೆ ಎದೆ ನೋವು ಕಾಣಿಸಿ ಕೊಂಡಿದೆ. ಇದರಿಂದ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ವೈದ್ಯರ ಸಲಹೆ ಮೇರೆಗೆ ಹೊಸಪೇಟೆ ಸರಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವಾಗ ದಾರಿ … Read more

‘ಸಿಎಂ ಆಗುವುದು ಡಿಕೆಶಿಯವರ ಬಹಳ ದಿನದ ಕನಸು – ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಕಾಂಗ್ರೆಸ್ ಬಿಡುತ್ತಿಲ್ಲ’

ಸುದ್ದಿ360,ಮೈಸೂರು, ಜುಲೈ 20: ಡಿ.ಕೆ.ಶಿವಕುಮಾರ್ ಅವರಿಗೆ ತಾವು ಮುಖ್ಯಮಂತ್ರಿಯಾಗಬೇಕೆಂಬದು  ಬಹಳ ವರ್ಷಗಳ ಕನಸು. ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಕಾಂಗ್ರೆಸ್ ಬಿಡುತ್ತಿಲ್ಲ. ಏನು ನಡೆಯುತ್ತಿದೆ ಎಂದು ನಾವು ಪ್ರತಿದಿನ ನೋಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ‘ಮೊದಲು ಅವರ ತಟ್ಟೆಯಲ್ಲಿ ಏನಿದೆ ಎಂದು ನೋಡಿಕೊಳ್ಳಲಿ. ಆಮೇಲೆ ಮತ್ತೊಬ್ಬರ ತಟ್ಟೆಯಲ್ಲಿ ಇರುವುದನ್ನು ಗಮನಿಸಲಿ’ ಎಂದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ … Read more

ಇದೆ ವರ್ಷ ಕಬಿನಿ ಜಲಾಶಯ ಉದ್ಯಾನವನ ಕಾಮಗಾರಿ ಪ್ರಾರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360,ಮೈಸೂರು, ಜುಲೈ 20: ಇದೇ ವರ್ಷ ಕಬಿನಿ ಜಲಾಶಯದ ಉದ್ಯಾನವನ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆಮಾಡಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಕಬಿನಿ ಜಲಾಶಯದ  ಉದ್ಯಾನವನವನ್ನು ಸರ್ಕಾರ ಮಾಡಬೇಕೋ ಅಥವಾ ಪಿಪಿಪಿ ಮಾದರಿಯಲ್ಲಿ ಮಾಡಬೇಕೋ ಎಂಬ ಗೊಂದಲದಲ್ಲಿದೆ.  ಗೊಂದಲ ವನ್ನು ಆದಷ್ಟು ಬೇಗನೇ ನಿವಾರಿಸಿ ಕಾಮವಾರಿಯನ್ನು ಕೈಗೊಳ್ಳಲಾಗುವುದು ಎಂದರು. ಹೆಚ್.ಡಿ.ಕೋಟೆಗೆ ವಿಶೇಷ ಕಾರ್ಯಕ್ರಮ ಹೆಚ್.ಡಿ.ಕೋಟೆ ತಾಲ್ಲೂಕು ಹಿಂದುಳಿದ ತಾಲ್ಲೂಕು ಎಂದು ನಂಜುಂಡಪ್ಪ ವರದಿಯಲ್ಲಿ ಉಲ್ಲೇಖಿಸಲಾಗಿದೆ. … Read more

ಜಿಎಂಐಟಿ ಯಲ್ಲಿ ಯಶಸ್ವೀ ‘ಆನ್ ಕ್ಯಾಂಪಸ್ ಎಂಪ್ಲಾಯ್ಮೆಂಟ್ ಆಫರ್ಸ್ ಸೆಲೆಬ್ರೇಶನ್ ಡೇ’

ಕಂಪನಿಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಡೆದ ಸನ್ಮಾನ ಕಾರ್ಯಕ್ರಮ ಸುದ್ದಿ360,ದಾವಣಗೆರೆ, ಜುಲೈ 20: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜು.16ರಂದು ನಡೆದ ಆನ್ ಕ್ಯಾಂಪಸ್ ಎಂಪ್ಲಾಯ್ಮೆಂಟ್ ಆಫರ್ಸ್ ಸೆಲೆಬ್ರೇಶನ್ ಡೇ ಬಹಳ ಅದ್ದೂರಿಯಿಂದ ಆಚರಿಸಲ್ಪಟ್ಟಿತು. ಈ ಕಾರ್ಯಕ್ರಮವನ್ನು  ಪುಣೆ ಮೂಲದ ಗ್ಲೋಬಲ್ ಟ್ಯಾಲೆಂಟ್ ಟ್ರ್ಯಾಕ್ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಎಂಐಟಿ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 783 ಆಫರ್ಸ್ ಸ್ವೀಕರಿಸಿದ್ದು, ವಿದ್ಯಾರ್ಥಿಗಳು ಪ್ರತಿಷ್ಠಿತ ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಜಿಎಂಐಟಿ ಸಂಸ್ಥೆಯು ಜಿಟಿಟಿ ಎಫ್ ಸಂಸ್ಥೆಯೊಡನೆ … Read more

ಕಬಿನಿ ಜಲಾಶಯ ಕ್ಕೆ ಮುಖ್ಯಮಂತ್ರಿ ಬಾಗಿನ

ಸುದ್ದಿ360 ಮೈಸೂರು,ಜುಲೈ 20: ಇಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಕಬಿನಿ ಜಲಾಶಯದ ಬಳಿ ಆಯೋಜಿಸಿರುವ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಯವರ ಪತ್ನಿ ಚೆನ್ನಮ್ಮ, ಜಲ ಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ್ ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್ ಟಿ ಸೋಮಶೇಖರ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.

ಹಂದಿ ಅಣ್ಣಿ ಹತ್ಯೆ ಆರೋಪಿಗಳು ಶಿವಮೊಗ್ಗ ಪೊಲೀಸರ ವಶಕ್ಕೆ

ಸುದ್ದಿ360, ಶಿವಮೊಗ್ಗ, ಜು.20: ಶಿವಮೊಗ್ಗದ ರೌಡಿ ಹಂದಿ ಅಣ್ಣಿ ಅಲಿಯಾಸ್ ಅಣ್ಣಪ್ಪನ ಕೊಲೆ ಮಾಡಿ ನಿನ್ನೆ ತಡರಾತ್ರಿ ಚಿಕ್ಕಮಗಳೂರು ಜಿಲ್ಲಾ ರಕ್ಷಣಾಧಿಕಾರಿಗಳ ಎದುರು ಶರಣಾಗಿದ್ದ 8 ಆರೋಪಿಗಳನ್ನು ಕಳೆದ ರಾತ್ರಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಕರೆ ತರಲಾಗಿದೆ. ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ತೆರಳಿದ್ದ ಪೊಲೀಸರ ತಂಡ ಆರೋಪಿಗಳಾದ ಕಾರ್ತಿಕ್(32), ನಿತಿನ್(29), ಮಧುಸೂಧನ್(32), ಫಾರುಖ್(40), ಆಂಜನೇಯ(26), ಮದನ್(25), ಮಧು (27), ಚಂದನ್(22) ಅವರುಗಳನ್ನು ಹೆಚ್ಚುವರಿ ತನಿಖೆಗಾಗಿ ಕರೆ ತರಲಾಗಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ನಡೆಯಲಿದೆ. ಈಗಾಗಲೇ ಮ್ಯಾಜಿಸ್ಟ್ರೇಟ್ … Read more

ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ

ಸುದ್ದಿ360, ದಾವಣಗೆರೆ, ಜು.19: ವಿಧಾನ ಪರಿಷತ್ ಶಾಸಕರಾದ ಆರ್ ಪ್ರಸನ್ನ ಕುಮಾರ್ ರವರ 2020-21ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ಆಯ್ಕೆಯಾದ 03 ಜನ ದೈಹಿಕ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರವಾಹನ (ರೆಟ್ರೋಫಿಟ್‍ಮೆಂಟ್ ಸಹಿತ)ಗಳನ್ನು ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಿ.ಜೆ. ಶಾಂತನಗೌಡ ಇವರ ಸಮಕ್ಷಮದಲ್ಲಿ ಜು.19 ರಂದು ವಿತರಿಸಿದರು. ಈ ವೇಳೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾ ಡಾ. ಕೆ.ಕೆ. ಪ್ರಕಾಶ್ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ದೇಶದ ಪ್ರತಿ ಪ್ರಜೆ “ನನ್ನ ಮತ ಮಾರಾಟಕ್ಕಿಲ್ಲ” ಎಂದು ಜನಾಂದೋಲನ ನಡೆಸಬೇಕು

ಚುನಾವಣಾ ಸುಧಾರಣಾ ಕ್ರಮಗಳ ಕುರಿತ ಸಂವಾದ ಕಾರ್ಯಕ್ರಮದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಮತ ಸುದ್ದಿ360, ದಾವಣಗೆರೆ, ಜು.19: ಚುನಾವಣೆಗಳಲ್ಲಿ ದೇಶದ ಪ್ರತಿ ಪ್ರಜೆಯೂ ನನ್ನ ಮತ ಮಾರಾಟಕ್ಕಿಲ್ಲ ಎಂದು ಮುಕ್ತ, ನಿರ್ಭೀತ, ನ್ಯಾಯಸಮ್ಮತ ಚುನಾವಣೆಗೆ ಆಗ್ರಹಿಸುವ ಜನಾಂದೋಲನ ರೂಪಿಸುವ ದಿಕ್ಕಿನಲ್ಲಿ ಆಲೋಚಿಸಬೇಕಾಗಿದೆ ಎಂದು ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದರು. ಮಂಗಳವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಚುನಾವಣಾ ಸುಧಾರಣಾ ಕ್ರಮಗಳ ಕುರಿತು ಸಂವಾದ ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು. … Read more

ರಸ್ತೆಯಲ್ಲಿ ಅಪಾಯಕಾರಿ ಗುಂಡಿ – ಬರೀ ಆರೋಪ ಮಾಡದೆ ಪರಿಸ್ಥಿತಿಯ ಹತೋಟಿಗೆ ಮುಂದಾದ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್

ಸದಾ ಟೆಂಡರ್ ಪ್ರಕ್ರಿಯೆ, ಯೋಜನೆ ಸಿದ್ಧತೆಯ ಹಾರಿಕೆ ಉತ್ತರ ನೀಡುವ ಪಾಲಿಕೆ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ ಸುದ್ದಿ360, ದಾವಣಗೆರೆ, ಜು.19: ದಾವಣಗೆರೆ ಮಹಾನಗರ ಪಾಲಿಕೆ ಕುರಿತು ವಿಪಕ್ಷಗಳ ಆರೋಪಕ್ಕೆ ಪುಷ್ಠಿ ನೀಡುವ ಸಂಗತಿಯೊಂದನ್ನು ಸ್ಥಳೀಯ ನಾಗರೀಕರು ಬಯಲಿಗೆಳೆದಿದ್ದಾರೆ. ನರಕಸದೃಶ ಗುಂಡಿಗಳಿಂದ ಬೇಸತ್ತ ಜನತೆ ಪಾಲಿಕೆ ನೀಡುವ ಪಾಲಿಕೆ ವಿರುದ್ಧ ಹರಿಹಾಯ್ದಿದ್ದಾರೆ. ಮಹಾನಗರ ಪಾಲಿಕೆ ದಿವಾಳಿಯಾಗಿದೆ. ಕಾಮಗಾರಿಗಳ ಅನುಷ್ಠಾನದಲ್ಲಿ ವಿಳಂಬ. ಸಣ್ಣ ಪುಟ್ಟ ರಿಪೇರಿ ಕೆಲಸಗಳೂ ಪಾಲಿಕೆಯಿಂದ ಆಗುತ್ತಿಲ್ಲ. ಎಲ್ಲದಕ್ಕೂ ಆಡಳಿತ ಪಕ್ಷ ಬಿಜೆಪಿಯಿಂದ ಬರೀ ಹಾರಿಕೆಯ … Read more

error: Content is protected !!