ಸಿದ್ದರಾಮಯ್ಯ ಅಮೃತ ಮಹೋತ್ಸವ – ದಾವಣಗೆರೆಯಲ್ಲಿ ಸ್ಥಳ ವೀಕ್ಷಿಸಿದ ಕಾಂಗ್ರೆಸ್ ಮುಖಂಡರು
ಶಾಮನೂರು ಶಿವಶಂಕರಪ್ಪ ಅವರ ಒಡೆತನದ 50 ಎಕರೆ ಸ್ಥಳದಲ್ಲಿ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.9: ಈಗಾಗಲೇ ಭಾರೀ ಪ್ರಚಾರ ಗಿಟ್ಟಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮ ದಿನದ ಅಮೃತ ಮಹೋತ್ಸವ ಆಗಸ್ಟ್ 3ರಂದು ಬೆಳಿಗ್ಗೆ 11ಕ್ಕೆ ದಾವಣಗೆರೆ ನಗರದಲ್ಲಿ ಏರ್ಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ಧರಾಮಯ್ಯ ಆಪ್ತರ ತಂಡ ಶನಿವಾರ ದಾವಣಗೆರೆಗೆ ದೌಡಾಯಿಸಿ ಪರಿಶೀಲನೆಯಲ್ಲಿ ತೊಡಗಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ 48ರ ದಾವಣಗೆರೆ- ಹರಿಹರ ರಸ್ತೆಯ ಬಳಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಒಡೆತನದ … Read more