ಯೋಗಿದಿಂದ ಬದುಕಿನಲ್ಲಿ ಸುಯೋಗ: ಬಸವಪ್ರಭು ಸ್ವಾಮೀಜಿ

ಸುದ್ದಿ360 ದಾವಣಗೆರೆ.ಜು.03: ಯಾವುದೇ ಕೆಲಸದಲ್ಲಿ ಯಶಸ್ವಿಗಳಾಗಬೇಕಾದರೆ ಏಕಾಗ್ರತೆ ಬಹಳ ಮುಖ್ಯ. ಯೋಗ ಏಕಾಗ್ರೆಯನ್ನು ತಂದು ಕೊಡುತ್ತೆ, ಏಕಾಗ್ರತೆ ಜೀವನದಲ್ಲಿ ಯಶಸ್ಸನ್ನು ತಂದುಕೊಡುತ್ತದೆ. ಅಲ್ಲದೆ ಯೋಗದಿಂದ ಒಳ್ಳೆಯ ಭಾವನೆ ಮೂಡುತ್ತದೆ ಆ ಮೂಲಕ ಸಮಾಜ ಸ್ವಾಸ್ತ್ಯದಿಂದ ಕೂಡಿರುತ್ತದೆ ಎಂದು ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಅಭಿಪ್ರಾಯಪಟ್ಟರು. ಅವರು ಭಾನುವಾರ ಸಪ್ತರಿಷಿ ಯೋಗಾಸನ ಸ್ಪೋರ್ಟ್ಸ್ ಅಕಾಡೆಮಿ, ದಾವಣಗೆರೆ-ಹರಿಹರ ಇವರ ವತಿಯಿಂದ ನಗರದಲ್ಲಿ ಮೊದಲ ಬಾರಿಗೆ ನಡೆದ ನೋಬೆಲ್ ವರ್ಲ್ಡ್  ರೆಕಾರ್ಡ್ ಯೋಗಾಸನ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು. … Read more

ಜಿಲ್ಲಾ ಉಸ್ತವಾರಿ ಸಚಿವರ ಜಿಲ್ಲಾ ಪ್ರವಾಸ

byrathi basavaraj

ಸುದ್ದಿ360 ದಾವಣಗೆರೆ, ಜು.02: ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಇವರು ಜು.03 ರ ಭಾನುವಾರ ದಂದು ಬೆಳಿಗ್ಗೆ 10 ರಿಂದ ಮ.12 ಗಂಟೆಯವೆರೆಗೆ ಹರಿಹರ ತಾಲ್ಲೂಕಿನ ಬೆಳ್ಳೂಡಿಯ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದಲ್ಲಿ ಚಂದ್ರಗುಪ್ತ ಮೌರ್ಯ ಯುಪಿಎಸ್‍ಸಿ ಕೆಪಿಎಸ್‍ಸಿ ತರಬೇತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 12.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರೆಂದು ಅವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಹಿತ್ಯದಿಂದ ಸಮಾಜದಲ್ಲಿನ ದೌರ್ಜನ್ಯ ತಡೆಯಲು ಸಾಧ್ಯ

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಭಿಮತ ಸುದ್ದಿ360 ದಾವಣಗೆರೆ, ಜು.02: ಸಮಾಜದಲ್ಲಿ ನಡೆಯುವ ಅಸಮಾನತೆ, ದೌರ್ಜನ್ಯಗಳನ್ನು ತಡೆಯಲು ವಚನ ಸಾಹಿತ್ಯದಿಂದ ಮಾತ್ರ ಸಾಧ್ಯ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು. ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ಡಾ. ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. ಇಂದು ನಮಗೆ ವಚನಗಳು ಇಷ್ಟೊಂದು ಸುಲಭವಾಗಿ ಸಿಗುತ್ತಿವೆ … Read more

ಮಡಿಕೇರಿಯಲ್ಲಿ ಭಾರೀ ಸದ್ದಿನೊಂದಿಗೆ ಭೂಕಂಪನದ ಅನುಭವ

ಸುದ್ದಿ360 ಮಡಿಕೇರಿ ಜು.2: ತಾಲೂಕಿನ ಪರಾಜೆ ಗ್ರಾಮದಲ್ಲಿ ಶನಿವಾರ ರಾತ್ರಿ 8.25ರ ಸುಮಾರಿಗೆ ಭೂಮಿಯಿಂದ ಭಾರೀ ಪ್ರಮಾಣದ ಶಬ್ಧ ಕೇಳಿ ಬಂದಿದ್ದು, ಗ್ರಾಮಸ್ಥರನ್ನು ಭಯಬೀತಗೊಳಿಸಿದೆ. ಭೂಕಂಪನದ ಭಯದಿಂದ ಮನೆಯೊಳಗಡೆ ಇದ್ದವರು ಹೊರಗೆ ಓಡಿ ಬಂದಿದ್ದಾರೆ. ಇಲ್ಲಿನ ಚೆಂಬು, ಸಂಜಾಜೆ, ಗೂನಡ್ಕ ಭಾಗಗಳಲ್ಲಿ ಈ ಶಬ್ಧ ಕೇಳಿ ಬಂದಿದ್ದು, ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಇದು ಭೂಕಂಪನ ಹೌದೋ ಇಲ್ಲೋ ಎಂದು ಇನ್ನು ಸ್ಪಷ್ಟಪಡಿಸಿಲ್ಲ.

ಅನುದಾನ ನೀಡಿಕೆಯಲ್ಲಿ ತಾರತಮ್ಯ – ಬಿಜೆಪಿಯಿಂದ ಸೇಡಿನ ರಾಜಕೀಯ

ಪಾಲಿಕೆ ವಿಪಕ್ಷ ನಾಯಕ : ಜಿ. ಎಸ್. ಮಂಜುನಾಥ್ ಗಡಿಗುಡಾಳ್‌ ಗಂಭೀರ ಆರೋಪ ಸುದ್ದಿ360 ದಾವಣಗೆರೆ, ಜು.02:  ಮಹಾನಗರ ಪಾಲಿಕೆ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಯುಜಿಡಿ ತುರ್ತು ಕಾಮಗಾರಿ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಲು ಕೂಡ ಕಾಂಗ್ರೆಸ್ ವಾರ್ಡ್ಗಳಿಗೆ ಹಣ ನೀಡದೆ ಆಡಳಿತ ಪಕ್ಷ ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಜಿ. ಎಸ್. ಮಂಜುನಾಥ್ ಗಡಿಗುಡಾಳ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಾನಗರ ಪಾಲಿಕೆ … Read more

ಗುಂಡಿಕ್ಕಿ ಎಂದವನ ಬಂಧಿಸಿ: ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆಗ್ರಹ

ಸುದ್ದಿ360 ದಾವಣಗೆರೆ, ಜು.02:  ಇತ್ತೀಚೆಗೆ ಸುದ್ದಿ ವಾಹಿನಿಯೊಂದರ ಫೋನ್ ಇನ್ ಕಾರ್ಯಕ್ರಮವೊಂದರಲ್ಲಿ ಕರೆ ಮಾಡಿದ ವ್ಯಕ್ತಿ, ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಬೇಕು’ ಎಂದು ಹೇಳಿಕೆ ನೀಡಿದ್ದಾನೆ. ಈತನನ್ನು ಕೂಡಲೆ ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆಗ್ರಹಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆಯ ವೀರಪ್ಪ ಎಂಬ ವ್ಯಕ್ತಿ ಈ ರೀತಿಯಾಗಿ ಮಾತನಾಡಿದ್ದು, ಒಂದು ಕೋಮಿನ ವಿರುದ್ಧ ಕೀಳಾಗಿ ಹೇಳಿಕೆ ನೀಡಿದ್ದಾನೆ. ಈ … Read more

ಜು.11ಕ್ಕೆ ರೈತರಿಂದ ಮುಖ್ಯಮಂತ್ರಿ ಮನೆಗೆ ಮುತ್ತಿಗೆ

ಸುದ್ದಿ360 ದಾವಣಗೆರೆ, ಜು.02: ಕಬ್ಬು ಬೆಳೆಗೆ ಕನಿಷ್ಠ ಬೆಲೆ ನಿಗದಿ, ಹಳೇ ಬಾಕಿ ಪಾವತಿ ಹಾಗೂ ಕರ ನಿರಾಕರಣೆ ಚಳವಳಿಯಲ್ಲಿ ಕಟ್ಟದ ಗೃಹ ವಿದ್ಯುತ್ ಬಿಲ್ ಬಲತ್ಕಾರ ವಸೂಲಿ ಕ್ರಮದ ವಿರುದ್ಧ ಜು.11ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಅಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಮುಖ್ಯಮಂತ್ರಿಗಳ … Read more

ಜು.15ಕ್ಕೆ ‘ಓ ಮೈ ಲವ್’ ತೆರೆಗೆ

ಸುದ್ದಿ360 ದಾವಣಗೆರೆ, ಜು.02:  ಜಿ.ಸಿ.ಬಿ. ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ , ಸ್ಮೈಲ್ ಶ್ರೀನು ನಿರ್ದೇಶನದ ‘ಓ ಮೈ ಲವ್’ ಸಿನಿಮಾ ಇದೇ ಬರುವ ಜು. 15 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕ ಸ್ಮೈಲ್ ಶ್ರೀನು ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳ ಪೈಕಿ ಒಂದಾಗಿರುವ  ಓ ಮೈ ಲವ್ ಚಿತ್ರ ಹಾಡುಗಳು, ಟೀಸರ್, ಗ್ಲಿಂಪ್ಸ್, ಹಾಗೂ ಟ್ರೇಲರ್ ಮೂಲಕ ಚಿತ್ರರಂಗದಲ್ಲಿ ಸದ್ದು ಮಾಡಿದ್ದು, ದಿನದಿಂದ … Read more

ಬಿಜೆಪಿಯಲ್ಲಿ ಮಾತ್ರ ಮಹಿಳೆಗೆ ಸೂಕ್ತ ಸ್ಥಾನಮಾನ : ವೀರೇಶ ಹನಗವಾಡಿ ಅಭಿಮತ

ಸುದ್ದಿ360 ದಾವಣಗೆರೆ, ಜು.02:  ಇತರೆ ರಾಜಕೀಯ ಪಕ್ಷಗಳು ಮಹಿಳೆಯರನ್ನು ಮತ ಬ್ಯಾಂಕ್‌ಗಾಗಿ ಮಾತ್ರವೇ ಉಪಯೋಗಿಸಿಕೊಳ್ಳುತ್ತವೆ. ಬಿಜೆಪಿಯಲ್ಲಿ ಮಾತ್ರವೇ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಸಿಗುತ್ತದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ ಹನಗವಾಡಿ ತಿಳಿಸಿದರು. ನಗರದ ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಹಮ್ಮಿಕೊಂಡಿರುವ 2 ದಿನಗಳ ಪ್ರಶಿಕ್ಷಣ ಶಿಬಿರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷವು ಒಂದು ಕುಟುಂಬದ ಮೇಲೆ ನಿಂತಿದೆ. ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ನೆಹರೂ ಕುಟುಂಬದವರನ್ನು ಬಿಟ್ಟರೆ ಬೇರೆ ಯಾರಿಗೂ ಅವಕಾಶವಿಲ್ಲ. … Read more

ಪೌರಕಾರ್ಮಿಕರ ಖಾಯಮಾತಿಗೆ ಸರ್ಕಾರದ ತಾತ್ವಿಕ ಒಪ್ಪಿಗೆ: ಸಿಎಂ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು.ಜು.02: ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸಲು ತಾತ್ವಿಕವಾಗಿ  ಸರ್ಕಾರ ಒಪ್ಪಿಕೊಂಡಿದೆ. ಕಾನೂನಾತ್ಮಕ ವಾಗಿ ಹಾಗೂ ತಾಂತ್ರಿಕವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಪೌರಕಾರ್ಮಿಕರ ಹಾಗೂ ಅಧಿಕಾರಿಗಳ ಜಂಟಿ ಸಮಿತಿಯನ್ನು … Read more

error: Content is protected !!