ಶಿವಮೊಗ್ಗದ ಹಂದಿ ಅಣ್ಣಿ ಕೊಲೆ ಆರೋಪಿಯ ಬರ್ಬರ ಹತ್ಯೆ
ಸುದ್ದಿ360 ದಾವಣಗೆರೆ ಮಾ.15: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಚೀಲೂರು ಗ್ರಾಮದಲ್ಲಿ ರೌಡಿಶೀಟರ್ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂದು ನಡೆದಿದೆ. ಹತ್ಯೆಗೊಳಗಾದ ವ್ಯಕ್ತಿ ರೌಡಿ ಶೀಟರ್ ಆಂಜನೇಯ ಅಲಿಯಾಸ್ ಅಂಜನಿ ಎಂದು ಗುರುತಿಸಲಾಗಿದ್ದು, ಇನ್ನೋರ್ವ ಮಧು(28) ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗದ ಹಂದಿ ಅಣ್ಣಿ ಕೊಲೆಯ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಂಟು ಮಂದಿಯ ಪೈಕಿ, ಇಬ್ಬರಿಗೆ ಜಾಮೀನು ಸಿಕ್ಕಿತ್ತು. ಮಧು ಮತ್ತು ಆಂಜನೇಯಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನಿನ ಮೇಲೆ ಇತ್ತೀಚೆಗಷ್ಟೇ ವಿಜಯಪುರ ಜೈಲಿನಿಂದ ಬಿಡುಗಡೆಯಾಗಿದ್ದರು. ಹರಿಹರ ತಾಲೂಕು ಬಾನೊಳ್ಳಿ ಗ್ರಾಮದ … Read more