ಎಸ್ಎಸ್ಎಂ@55 ಹುಟ್ಟುಹಬ್ಬದ  ಅಂಗವಾಗಿ ಅಂತರ್ ಜಿಲ್ಲಾ ಚದುರಂಗ ಸ್ಪರ್ಧೆ

ಸುದ್ದಿ360 ದಾವಣಗೆರೆ, ಸೆ.14: ಎಸ್ ಎಸ್ ಮಲ್ಲಿಕಾರ್ಜುನ್ ಅವರ 55ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ದಾವಣಗೆರೆ ನಗರದ ಎವಿಕೆ ಕಾಲೇಜ್ ಹತ್ತಿರವಿರುವ ಗುರುಭವನದಲ್ಲಿ ಸೆ.18ರ ಭಾನುವಾರದಂದು 19 ವರ್ಷದ ಒಳಗಿನ ವಯೋಮಿತಿ ಮಕ್ಕಳಿಗೆ ಅಂತರ್ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ – ಎಸ್ ಎಸ್ ಎಂ @55 ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ. ಪಂದ್ಯಾವಳಿಯ ಉದ್ಘಾಟನೆಯನ್ನು ಬೆಳಿಗ್ಗೆ 10.00 ಗಂಟೆಗೆ ಲೆಕ್ಕಾಧಿಕಾರಿಗಳು ಹಿರಿಯ ಉದ್ಯಮಿಗಳಾದ ಅಥಣಿ ವೀರಣ್ಣನವರು ಉದ್ಘಾಟಿಸಲಿದ್ದು ಸಂಜೆ 5.00 ಗಂಟೆಗೆ  ನಡೆಯುವ ಕಾರ್ಯಕ್ರಮದಲ್ಲಿ ಡಾಕ್ಟರ್ ಶಾಮನೂರು ಶಿವಶಂಕರಪ್ಪನವರು … Read more

ನೆಹರೂ ಒಳಾಂಗಣ ಕ್ರೀಡಾಂಗಣದ ವಿಷಯದಲ್ಲಿ ಕ್ರೀಡಾಧಿಕಾರಿಗಳ ಧೋರಣೆ ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

ಸುದ್ದಿ360 ಶಿವಮೊಗ್ಗ, ಸೆ. 14: ಶಿವಮೊಗ್ಗ ನಗರದಲ್ಲಿರುವ ನೆಹರೂ ಒಳಾಂಗಣ ಕ್ರೀಡಾಂಗಣವನ್ನು ಇಲಾಖಾ ಕ್ರೀಡಾ ಚಟುವಟಿಕೆಗಳಿಗೆ ನೀಡಲು ನಿರಾಕರಿಸುತ್ತಿರುವ ಕ್ರೀಡಾಧಿಕಾರಿಯ ಧೋರಣೆಯನ್ನು ಖಂಡಿಸಿ ನೆಹರೂ ಒಳಾಂಗಣ ಕ್ರೀಡಾಂಗಣವನ್ನು ಎಲ್ಲ ಕ್ರೀಡಾ ಚಟುವಟಿಕೆಗಳಿಗೆ ನೀಡಲು ಅನುವು ಮಾಡಿಕೊಡಬೇಕು ಎಂದು ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಸ್ಮಾರ್ಟ್ ಸಿಟಿ ಅಡಿಯಲ್ಲಿ 4ಶಟಲ್ ಕೋರ್ಟ್ ಗಳಿಗೆ ಸಿಂಥೆಟಿಕ್ ಹಾಕಲಾಗುತ್ತಿದೆ ಎಂಬ ವಿಷಯವನ್ನೇ ನೆಪವಾಗಿಟ್ಟುಕೊಂಡು ಕ್ರೀಡಾಧಿಕಾರಿಯವರು ಬಹು ಬಳಕೆಗಾಗಿ ಸ್ಥಾಪಿಸಲ್ಪಟ್ಟ ನೆಹರು ಒಳಾಂಗಣ … Read more

ಪತ್ನಿಯ ಕತ್ತು ಕುಯ್ದು ಆತ್ಮಹತ್ಯೆಗೆ ಯತ್ನಿಸಿದ ಪತಿ

ಸುದ್ದಿ360 ಶಿವಮೊಗ್ಗ, ಸೆ.07: ಗಂಡ ಹೆಂಡತಿಯ ನಡುವಿನ ಜಗಳದಿಂದಾಗಿ ಹೆಂಡತಿ ರಕ್ತದಮಡುವಿನಲ್ಲಿ ಕೊನೆಯುಸಿರೆಳೆದರೆ, ಪತಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿರುವ ಘಟನೆ ಶಿವಮೊಗ್ಗ ನಗರದಲ್ಲಿ ವರದಿಯಾಗಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಗರದ ಪ್ರಿಯಾಂಕ ಲೇ ಔಟ್ ನಲ್ಲಿನ ಮನೆಯೊಂದರಲ್ಲಿನ ಅಡುಗೆ ಮನೆಯ ರಕ್ತದ ಮಡುವಿನಲ್ಲಿ ಪತ್ನಿ ಪತ್ತೆಯಾಗಿದ್ದಾಳೆ. ಮೃತ ಮಹಿಳೆಯನ್ನ ಮಂಜುಳ (30) ಎಂದು ಗುರುತಿಸಲಾಗಿದೆ.ಪತಿ ದಿನೇಶ್ ಮೆಸ್ಕಾಂ ಉದ್ಯೋಗಿ ಎನ್ನಲಾಗಿದ್ದು, ಆತ ಸಹ ಕೈಕೊಯ್ದುಕೊಂಡಿದ್ದಾನೆ. ಆತನಿಗೆ ನಾರಾಯಣ ಹೃದಯಾಲಯಕ್ಕೆ ದಾಖ ಲಿಸಲಾಗಿದೆ. … Read more

ಸೋತಾಗ ಮೇಲೆತ್ತುವ ಕೈಗಳು ನೀವಾಗಿ : ಜಿ.ಎಸ್.ನಾರಾಯಣರಾವ್

ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಭೀಮಸೇನರಾವ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯ, ಸ್ನಾತಕೋತ್ತರ ಕಾನೂನು ಅಧ್ಯಯನ ಕೇಂದ್ರ ಹಾಗೂ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ವತಿಯಿಂದ ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಎರಡು ದಿನಗಳ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಅಂತರ ಕಾಲೇಜುಗಳ ಮಹಿಳಾ ಥ್ರೋ ಬಾಲ್ ಮತ್ತು ಟೆನಿಕಾಯ್ಟ್ ಪಂದ್ಯಾವಳಿ

ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಬಿ ಎಸ್ ವೈ ನೇಮಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಸ

ಸುದ್ದಿ360 ಬೆಂಗಳೂರು ಆ.17: ನಿಕಟ ಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿ ಸಭೆಯ ಸದಸ್ಯರಾಗಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ. ಬಿಜೆಪಿಯ ಅತ್ಯಂತ ಉನ್ನತ ಎನಿಸಿರುವ ಸಂಸದೀಯ ಮಂಡಳಿಗೆ ತಮ್ಮನ್ನು  ನೇಮಕ ಮಾಡುವುದರ ಮೂಲಕ ಪಕ್ಷ ತಮಗೆ ಅತಿ ದೊಡ್ಡ ಗೌರವದ ಸ್ಥಾನ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರ ನೇಮಕಾತಿ ಆದೇಶ ಹೊರ ಬರುತ್ತಿದ್ದಂತೆಯೆ ಸಿಎಂ ಅವರು ಕರೆ … Read more

ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ – ಪೊಲೀಸ್ ಗೌರಗಳೊಂದಿಗೆ ಅಂತ್ಯಕ್ರಿಯೆ

ಸುದ್ದಿ360 ಬೆಂಗಳೂರು, ಆ.12: ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂಗೀತ ಪರಂಪರೆಯ ಮನೆತನದಿಂದ ಬಂದ ಸುಬ್ಬಣ್ಣ ಅವರು ಸುಗಮ ಸಂಗೀತ  ಹಾಗೂ ಚಲನ ಚಿತ್ರ ಹಿನ್ನಲೆ ಗಾಯಕರಾಗಿ ತಮ್ಮದೇ ಛಾಪು ಮೂಡಿಸಿದ್ದರು. ಅವರ ‘ಕಾಡು ಕುದುರೆ ಓಡಿ ಬಂದಿತ್ತಾ’ ಗೀತೆಯು ಇಂದಿಗೂ ಅಭಿಮಾನಿಗಳು ಗುನುಗುನಿಸುವ ಹಾಡು. ಇದಕ್ಕಾಗಿ ಭಾರತ ಸರ್ಕಾರದ ರಜತ ಕಮಲ ಪ್ರಶಸ್ತಿಗೂ ಭಾಜನರಾದರು. ಸಂತ ಶಿಶುನಾಳ ಶರೀಫರ ಗೀತೆಗಳಿಗೆ ದನಿಯಾಗಿ ಅವುಗಳನ್ನು … Read more

ಶಿವಮೊಗ್ಗ ನಗರದಲ್ಲಿ ಮತ್ತೊಂದು ಭೀಕರ ಕೊಲೆ

ಸುದ್ದಿ360 ಶಿವಮೊಗ್ಗ, ಆ.03: ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಆಗಿ19 ದಿನಗಳು ಕಳೆದಿದ್ದು, ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಕೊಲೆ ಶಿವಮೊಗ್ಗ ಜನರನ್ನ‌ಬೆಚ್ಚಿ ಬೀಳಿಸಿದೆ. ನಗರದ ಸಾಗರ ರಸ್ತೆಯ ಬಾರೊಂದರ ಬಳಿ ಓರ್ವ ಯುವಕನನ್ನು ಬಿಯರ್ ಬಾಟಲಿಯಿಂದ ಇರಿದು, ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಸುದ್ದಿ ವರದಿಯಾಗಿದೆ. ಕೊಲೆಯಾದ ಯುವಕನನ್ನ ಪುಚ್ಚಿ ಕಿರಣ್ ಎಂದು ಗುರುತಿಸಲಾಗಿದ್ದು, ಹೊಸಮನೆ ಏರಿಯಾದ ಹುಡುಗನಾಗಿರುವ ಈತ ನಿನ್ನೆ ರಾತ್ರಿ ಕುಡಿಯಲು ತೆರಳಿದ್ದನು. ಕಿರಣ್ ಜೊತೆ ಇಬ್ವರು ಸ್ನೇಹಿತರು ತೆರಳಿದ್ದು … Read more

ಅಮೋಘ ಕೆ.ಆರ್.ಗೆ ಡಾಕ್ಟರೇಟ್

ಸುದ್ದಿ360 ಶಿವಮೊಗ್ಗ ಜು.28: ನಗರದ ಕುವೆಂಪು ರಸ್ತೆಯ ನಿವಾಸಿಯಾದ ಅಮೋಘ ಕೆ.ಆರ್. ಇವರು ರಾಜ್ಯದ ಪಶುವೈದ್ಯಕೀಯ ವಿಶ್ವವಿದ್ಯಾನಿಲಯದ ಮಂಗಳೂರಿನ ಸರ್ಕಾರಿ ಮೀನುಗಾರಿಕೆ ಕಾಲೇಜಿನಲ್ಲಿ 2018-19 ರಿಂದ 2020-21ರ ವರೆಗೆ ವಿದ್ಯಾಭ್ಯಾಸ ಮಾಡಿ ಪಿಹೆಚ್.ಡಿ ಪದವಿ ಪಡೆದಿರುತ್ತಾರೆ, ಮೀನುಗಾರಿಕಾ ಅಕ್ವಾಕಲ್ಚರ್ ವಿಭಾಗದಲ್ಲಿ ಡಾ. ಗಣಪತಿ ನಾಯಕ್ ಇವರ ಮಾರ್ಗದರ್ಶನದಲ್ಲಿ ರೆಗ್ಯುಲರ್ ವಿಭಾಗ ವಿದ್ಯಾರ್ಥಿಯಾಗಿ ಅಧ್ಯಯನ ಮಾಡಿ ಡಾಕ್ಟರೇಟ್ ಪದವಿ ಪಡೆದಿರುತ್ತಾರೆ. ಡಾ. ಅಮೋಘ ಕೆ.ಆರ್. ಇವರು ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಹಾಯಕರಾದ ಶ್ರೀ ಕೆ.ಆರ್. … Read more

ಶಿವಮೊಗ್ಗ ನಗರದಲ್ಲಿ ವಿಶೇಷ ಕಾರ್ಯಾಚರಣೆ – ಮಾರಕಾಸ್ತ್ರಗಳು ಪೊಲೀಸರ ವಶ

ಪೊಲೀಸರು ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದಿರುವ ಮಾರಕಾಸ್ತ್ರಗಳು.

ಬೇಡಿಕೆಗಳ ಈಡೇರಿಕೆಗಾಗಿ ತೀವ್ರ ಹೋರಾಟದ ಅಗತ್ಯವಿದೆ : ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಎಂ ಸಿ ಡೋಂಗ್ರೆ

ಸುದ್ದಿ360 ಶಿವಮೊಗ್ಗ, ಜು.25: ಬೆಲೆ ಏರಿಕೆ ನಿಯಂತ್ರಿಸಲಾಗದೆ ಜನಸಾಮಾನ್ಯರ ಬದುಕು ದುಸ್ತರವಾಗಿಸಿರುವ ಸರ್ಕಾರಗಳ ಮುಂದೆ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ತೀವ್ರ ಹೋರಾಟದ ಅಗತ್ಯವಿದೆ. ಮತ್ತು ಅದಕ್ಕಾಗಿ ರೂಪರೇಷೆ ಸಿದ್ದಪಡಿಸಿಕೊಳ್ಳಬೇಕೆಂದು ಎಐಟಿಯುಸಿ ರಾಜ್ಯ ಸಮಿತಿ ಉಪಾಧ್ಯಕ್ಷರಾದ ಎಂ ಸಿ ಡೋಂಗ್ರೆ ಹೇಳಿದರು. ಶಿವಮೊಗ್ಗ ನಗರದ ಭೋವಿಭವನದಲ್ಲಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಶನ್(ಎಐಟಿಯುಸಿ ಸಂಯೋಜಿತ) ರಾಜ್ಯ ಸಮಿತಿ ಆಯೋಜಿಸಿದ್ದ ಬಿಸಿಯೂಟ ತಯಾರಕ ಮಹಿಳೆಯರಿಗಿರುವ ಸಮಸ್ಯೆಗಳು ಸವಾಲುಗಳು ಮತ್ತು ಪರಿಹಾರ ಕುರಿತು ಏರ್ಪಡಿಸಿದ್ದ ರಾಜ್ಯಮಟ್ಟದ ಸಂಘಟನಾ ಸಮಾವೇಶ ಉದ್ಘಾಟಿಸಿ ಅವರು … Read more

error: Content is protected !!