ಗಾಂಧೀವಾದಿ ಮೀರಾತಾಯಿ ಕೊಪ್ಪೀಕರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಸುದ್ದಿ360, ಬೆಂಗಳೂರು, ಆ.19: ಸ್ವಾತಂತ್ರ್ಯ ಹೋರಾಟಗಾರ್ತಿ, ಗಾಂಧೀವಾದಿ ಮೀರಾತಾಯಿ ಕೊಪ್ಪಿಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಇಂದಿಗೂ ಪಾಲಿಸುತ್ತ ಬದುಕಿದ ಮೀರಾತಾಯಿ ಕೊಪ್ಪಿಕರ್ ಅವರು ವಿನೋಬಾ ಭಾವೆಯವರ ಅನುಯಾಯಿಯಾಗಿದ್ದರು. ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ವಾತ್ಸಲ್ಯ ಧಾಮವನ್ನು ಕಟ್ಟಿಕೊಂಡಿದ್ದ ಮೀರಾತಾಯಿ ಅವರು ಸರಳ ಜೀವನ, ಶ್ರಮದಾನ, ಹೈನುಗಾರಿಕೆ ಹಾಗೂ ಸಾವಯವ ಕೃಷಿಯನ್ನೇ ನೆಚ್ಚಿಕೊಂಡು ಜೀವನ ನಡೆಸುತ್ತಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿಕೊಂಡಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿಯೊಂದಿಗೆ ನೀಡಿದ್ದ ನಗದು ಬಹುಮಾನವನ್ನು ಬಡವರಿಗಾಗಿ … Read more

ಬಿಗ್ ಶಾಕಿಂಗ್ – ಪ್ರಸಿದ್ಧ ಗಾಯಕ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ

ಸುದ್ದಿ360 ಬೆಂಗಳೂರು, ಆ.11: ತಮ್ಮ ಮೋಹಕ ಕಂಠದಿಂದ ನಾಡಿನಾದ್ಯಂತ ಜನಪ್ರಿಯರೂ, ಕರ್ನಾಟಕ ಸುಗಮ ಸಂಗೀತದ ಪ್ರಸಿದ್ಧ ಗಾಯಕರೂ ಆಗಿದ್ದ ಶಿವಮೊಗ್ಗ ಸುಬ್ಬಣ (83) ಅವರು ಹೃದಯಾಘಾತದಿಂದ ಗುರುವಾರ ರಾತ್ರಿ ಇಹಲೋಕ ತ್ಯಜಿಸಿದರು. ಕಾಡು ಕುದುರೆ ಓಡಿಬಂದಿತ್ತಾ… ಕೋಡಗನ ಕೋಳಿ ನುಂಗಿತ್ತಾ… ಬಿದ್ದಿಯಬ್ಬೇ ಮುದುಕಿ ಬಿದ್ದೀಯಬ್ಬೇ.. ಹಾಡುಗಳ ಮೂಲಕ ಮನೆಮಾತಾಗಿದ್ದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ ಇನ್ನಿಲ್ಲ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಕನ್ನಡಿಗರು ಎಂಬ ಖ್ಯಾತಿ ಹೊಂದಿದ್ದರು. … Read more

ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಅನುಮೋದನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಆ.4 : ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಸಚಿವಸಂಪುಟದ ಅನುಮೋದನೆ ದೊರೆತಿದ್ದು, ಗ್ಯಾರೇಜ್ ಸಂಶೋಧನೆಗಳಿಂದ ಹಿಡಿದು ಸಾಂಸ್ಥಿಕ ಸಂಶೋಧನೆಗಳವರೆಗೆ ಪ್ರೋತ್ಸಾಹ, ಸಹಕಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ ಷಾ ಅವರೊಂದಿಗೆ ಭಾಗವಹಿಸಿ ಮಾತನಾಡಿ, ಬೆಂಗಳೂರಿನಲ್ಲಿ ಜೆನೋಮ್ಯಾಟಿಕ್ಸ್ ನಿಂದ ಏರೋಸ್ಪೇಸ್ ವರೆಗೆ 400 ಅಂತರರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರಗಳಿವೆ. ಬೆಂಗಳೂರು ನಗರದಲ್ಲಿ ಹೊರತುಪಡಿಸಿದರೆ, ಪ್ರಪಂಚದ ಯಾವುದೇ ನಗರಗಳಲ್ಲಿ ಈ … Read more

ಮುಂದಿನ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಅಮೃತ ಮಹೋತ್ಸವ

ಸುದ್ದಿ360 ದಾವಣಗೆರೆ, ಆ. 3: ಜನ ಸಾಗರದ ಮೂಲಕ ದಾವಣಗೆರೆಯ ಎಸ್.ಎಸ್. ಮೈದಾನ ಇತಿಹಾಸ ಪುಟ ಸೇರಿದೆ. ಇಲ್ಲಿ ನಡೆದ ಸಿದ್ಧರಾಮಯ್ಯ ಅಮೃತ ಮಹೋತ್ಸವ ರಾಜ್ಯಕ್ಕೆ, ವಿಶೇಷವಾಗಿ ಬಿಜೆಪಿ ಮತ್ತು ಜೆಡಿಎಸ್ ಗೆ ರಾಜಕೀಯವಾಗಿ ಮಹತ್ತರ  ಸಂದೇಶವನ್ನು ರವಾನಿಸಿದೆ. ವಾಣಿಜ್ಯ ನಗರಿ ದಾವಣಗೆರೆಯಲ್ಲಿ ಸಿದ್ದರಾಮೋತ್ಸವದ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವಕ್ಕೆ ಬಲ ತುಂಬುವ ಪ್ರಯತ್ನ ಸಫಲವಾಗಿರುವ ಕೈ, ಮುಂದಿನ ವಿಧಾನಸಭಾ ಚುನಾವಣೆ ಗೆದ್ದು ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ರಣಕಹಳೆ ಮೊಳಗಿಸಿದೆ. ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ನಡೆದ … Read more

ಆ.4: ರಾಜ್ಯಕ್ಕೆ ಅಮಿತ್ ಷಾ ಭೇಟಿ – ಕಾರ್ಯಕರ್ತರ ಮನವೊಲಿಕೆಗೆ ಮುಂದಾದ ಹೈಕಮಾಂಡ್

ಸುದ್ದಿ360 ಬೆಂಗಳೂರು ಆ.2: ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಡೀರ್ ಎಂಬಂತೆ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ಗುರುವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಗಳೂರಿಗೆ ತೆರಳಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಇತ್ತೀಚೆಗೆ ನಡೆದ ಹತ್ಯೆಗಳಿಂದ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಆಕ್ರೋಶಗೊಂಡಿರುವ ಬೆನ್ನಲ್ಲೇ ಅಮಿತ್ ಷಾ ಅವರ ರಾಜ್ಯ ಪ್ರವಾಸ ಮಹತ್ವ ಪಡೆದುಕೊಂಡಿದೆ. ಸ್ವಪಕ್ಷೀಯರ ವಿರುದ್ಧವೇ ಕಾರ್ಯಕರ್ತರು ತಿರುಗಿಬಿದ್ದಿರುವುದರಿಂದ … Read more

22 ವರ್ಷಗಳಿಂದ ಸ್ನಾನ ತೊರೆಯಲು ಈತ ಮಾಡಿದ ಪ್ರತಿಜ್ಞೆಯಾದರೂ ಏನು. . .?

ಸುದ್ದಿ360 ಗೋಪಾಲಗಂಜ್ (ಬಿಹಾರ) ಜು.31:  ಒಂದು ದಿನ ಸ್ನಾನ ಮಾಡದೇ ಇದ್ದರೂ ಚಡಪಡಿಕೆಗೆ ಒಳಗಾಗುವವರನ್ನು ನೋಡಿದ್ದೇವೆ ಮತ್ತು ಅನುಭವಿಸಿಯೂ ಇದ್ದೇವೆ. ಇಲ್ಲೊಬ್ಬ ವ್ಯಕ್ತಿ ಒಂದು ದಿನ. . . . ತಿಂಗಳು. . . ವರ್ಷ. . .  !? ಅಲ್ಲವೇ ಅಲ್ಲ ಬರೋಬ್ಬರಿ 22 ವರ್ಷಗಳಿಂದ ಸ್ನಾನ ಮಾಡುವುದನ್ನು ನಿಲ್ಲಿಸಿ, ಆರೋಗ್ಯವಾಗಿಯೇ ಇದ್ದಾರೆ. ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯ ಮಂಜಾ ಬ್ಲಾಕ್ ನಲ್ಲಿರುವ ಬೈಕುಂತ್ ಪುರ ಗ್ರಾಮದ 62 ವರ್ಷದ ಧರಂದೇವ್ ರಾಮ್ ಈ ರೀತಿಯಾಗಿ … Read more

ಕಸ್ತೂರಿ ರಂಗನ್ ವರದಿಯ ಬಗ್ಗೆ ರಾಜ್ಯದ ನಿಲುವಿನ ಬಗ್ಗೆ ಸ್ಪಷ್ಟನೆ ನೀಡಲಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ

ಕೇಂದ್ರ ಪರಿಸರ ಸಚಿವರನ್ನು ಭೇಟಿ ಮಾಡಿದ ರಾಜ್ಯದ ನಿಯೋಗ ಸುದ್ದಿ360 ನವದೆಹಲಿ, ಜುಲೈ 25 : ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ  ರಾಜ್ಯದ ನಿಯೋಗ ಇಂದು ಭೇಟಿ ಮಾಡಿದೆ. ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕಸ್ತೂರಿ ರಂಗನ್ ವರದಿಯ ಬಗ್ಗೆ ರಾಜ್ಯದ ನಿಲುವನ್ನು ಸ್ಪಷ್ಟಪಡಿಸಲಾಗಿದೆ. ಮೊದಲಿದ್ದ ಗಾಡ್ಗಿಲ್ ಸಮಿತಿ ವರದಿಯನ್ನು ಎಲ್ಲ ರಾಜ್ಯಗಳೂ ವಿರೋಧಿಸಿದ್ದವು. ನಂತರ ಕಸ್ತೂರಿ ರಂಗ್ ವರದಿ ಬಂದಿತು. … Read more

ನೈಋತ್ಯ ರೈಲ್ವೆ – ಯಾವ ರೈಲುಗಳ ಸೇವೆ ರದ್ದಾಗಿದೆ ಇಲ್ಲಿದೆ ಮಾಹಿತಿ

ಸುದ್ದಿ360, ಜು.25: ದೌಂಡ್ – ಕುರ್ದುವಾಡಿ  ಭಾಗದ ಭಿಗ್ವಾನ್‌ ಮತ್ತು ವಾಷಿಂಬೆ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾರ್ಯಕ್ಕೆ ಸಂಬಂಧಿಸಿದಂತೆ ನಾನ್-ಇಂಟರ್‌ಲಾಕಿಂಗ್ ಕಾಮಗಾರಿಯ ನಿಮಿತ್ತ ಕೇಂದ್ರೀಯ ರೈಲ್ವೆ ಸೂಚನೆಯಂತೆ ಈ ಕೆಳಗಿನ ರೈಲುಗಳನ್ನು ರದ್ದುಗೊಳಿಸಲಾಗುತ್ತದೆ. ರೈಲು ಸಂಖ್ಯೆ 22601 ಎಂ.ಜಿ.ಆರ್ ಚೆನ್ನೈ ಸೆಂಟ್ರಲ್  – ಸಾಯಿನಗರ ಶಿರಡಿ ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ದಿನಾಂಕ 27.07.2022 ಮತ್ತು 03.08.2022 ರಂದು ರದ್ದುಗೊಳಿಸಲಾಗುತ್ತದೆ. ರೈಲು ಸಂಖ್ಯೆ 22602 ಸಾಯಿನಗರ ಶಿರಡಿ – ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ಸಾಪ್ತಾಹಿಕ … Read more

ರಾಷ್ಟ್ರಪತಿ ದ್ರೌಪದಿ ಮುರ್ಮು ಆಡಳಿತದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೆ ಏರಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜುಲೈ 21: ಮುಂಬರುವ ದಿನಗಳಲ್ಲಿ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ  ಕರ್ನಾಟಕದ ಜೊತೆಗೆ ಅನ್ಯೋನ್ಯ ಸಂಬಂಧವನ್ನು ಹೊಂದಿ, ಅವರ ಆಡಳಿತ ಕಾಲದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೇರಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  ಅವರು ಇಂದು ಬಿಜೆಪಿ ಕಚೇರಿಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ರಾಷ್ಟ್ರಪತಿ ಚುನಾವಣೆಯಂದು ಪ್ರಜಾಪ್ರಭುತ್ವ ಗೆದ್ದಿದೆ. ಭಾರತದ ಅತ್ಯಂತ ಉನ್ನತವಾದ ಸ್ಥಾನ ರಾಷ್ಟ್ರಪತಿ ಸ್ಥಾನ. ಆ ಸ್ಥಾನಕ್ಕೆ ಹಿಂದುಳಿದ ಪ್ರದೇಶದಿಂದ ಬಂದ ಒಬ್ಬ ಮಹಿಳೆ ಅತ್ಯುನ್ನತ ಹುದ್ದೆಗೇರುವುದು ಪ್ರಜಾಪ್ರಭುತ್ವದ ಶಕ್ತಿ. … Read more

ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಹುಮಾತದೊಂದಿಗೆ ಗೆಲುವು ನಿಶ್ಚಿತ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು.18: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಆಯ್ಕೆಯನ್ನು ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ 2/3  ಬಹುಮತದೊಂದಿಗೆ ಗೆಲ್ಲುವುದು ನಿಶ್ಚಿತ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಷ್ಟ್ರಪತಿ ಚುನಾವಣೆಯಲ್ಲಿ ಇದ್ದ ಹಿಂದಿನ  ದಾಖಲೆಯನ್ನ ಮುರಿಯುವ ಎಲ್ಲಾ ಸಾಧ್ಯತೆಗಳಿವೆ.  ದ್ರೌಪದಿ ಮುರ್ಮು ಅವರು ಮಾನವೀಯ ಗುಣಗಳನ್ನು ಹೊಂದಿದ್ದು, ಅತ್ಯುನ್ನತ ಸ್ಥಾನ ಕ್ಕೇರುವುದು ಭಾರತದ ಪ್ರಜಾಪ್ರಭುತ್ವ ಹಾಗೂ ಭವಿಷ್ಯಕ್ಕೆ ಒಳ್ಳೆಯದಾಗಲಿದೆ ಎಂಬ ನಿರೀಕ್ಷೆ ನಮ್ಮದು ಎಂದರು. ದೇಶಾದ್ಯಂತ ರಾಷ್ಟ್ರಪತಿ … Read more

error: Content is protected !!