ಪ್ರತಿಭಾ ಪುರಸ್ಕಾರ: ಗಂಗಾಮತಸ್ಥರ ಸಂಘದಿಂದ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ: ಜಿಲ್ಲಾ ಗಂಗಾಮತಸ್ಥರ (ಬೆಸ್ತರ ) ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಸಮಾಜದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕಳೆದ ಸಾಲಿನಲ್ಲಿ  ವೈದ್ಯಕೀಯ ಇಂಜಿನಿಯರಿಂಗ್ ಪ್ರವೇಶ ಪಡೆದಿರುವ,  ಪ್ರಸಕ್ತ ಸಾಲಿನ ಪಿಯುಸಿ ಮತ್ತು ಎಸ್ಎಸ್ಎಲ್ ಸಿ, ತರಗತಿಗಳಲ್ಲಿ, ಶೇಕಡ 75ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು. ಅರ್ಹ ವಿದ್ಯಾರ್ಥಿಗಳು ದಿನಾಂಕ 15.06.2023ರ ಬೆಳಗ್ಗೆ 10:30 ರಿಂದ ಸಂಜೆ 5:50 ಗಂಟೆಯವರೆಗೆ ಸ್ವ ವಿವರಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿಯೊಂದಿಗೆ ಅಂಕಪಟ್ಟಿ, … Read more

ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಸೇರಿದಂತೆ 36 ಕೈ ಮುಖಂಡರಿಗೆ ಕೋರ್ಟ್‍ ಸಮನ್ಸ್ : ಸಿಎಂ – ಡಿಸಿಎಂ ಗೆ ಖುದ್ಧು ಹಾಜರಾಗುವಂತೆ ಕೋರ್ಟ್‍ ಸೂಚನೆ

ಸುದ್ದಿ360 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ  ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ 36 ಕಾಂಗ್ರೆಸ್ ಮುಖಂಡರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರ ವಿರುದ್ಧ ಪೊಲೀಸರು ಪ್ರಕರಣ … Read more

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಗಾಳಿಸುದ್ದಿ –  ಹೆಚ್.ಡಿ.ಕುಮಾರಸ್ವಾಮಿ – ನಂದುಬಿಡಿ ಹಾಲಿ ಸಂಸದರ ಕಥೆಯೇ ಕೇಳಿ ಎಂದದ್ದು ಯಾಕೆ. . .?

ಸುದ್ದಿ360 ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಎಂಬುದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಖಡಕ್‍ ಆಗಿ ಪ್ರತಿಕ್ರಿಯಿಸಿದ್ದಾರೆ. ಚನ್ನಪಟ್ಟಣದಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿ, ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ, ಈ ವಿಚಾರವನ್ನು ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ನಡೆಸಿ. ಗೆದ್ದ ಸೋತ  ಅಭ್ಯರ್ಥಿಗಳ ಜತೆ ಮಾತನಾಡಿದ್ದೇನೆ. … Read more

ಬಿಸಿಯೂಟ ತಯಾರಕರ ವೇತನ ಹೆಚ್ಚಳಕ್ಕೆ ಎಐಟಿಯುಸಿ ಮನವಿ

ಸುದ್ದಿ360 ದಾವಣಗೆರೆ: ಮಧ್ಯಾಹ್ನ ಉಪಹಾರ ಯೋಜನೆ ಅಡಿಯಲ್ಲಿ ರಾಜ್ಯಾದ್ಯಂತ ಇರುವ ಶಾಲೆಗಳಲ್ಲಿಅಡುಗೆ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ತಯಾರಕರ ವೇತನವನ್ನು ಆರು ಸಾವಿರ ರೂ. ಗಳಿಗೆ ಹೆಚ್ಚಿಸುವಂತೆ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ ಸಂಯೋಜಿತ) ರಾಜ್ಯ ಸಮಿತಿ ಕರೆಯ ಮೇರೆಗೆ ದಾವಣಗೆರೆ ಜಿಲ್ಲಾ ಸಮಿತಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿತು. 2023 ಜುಲೈ ತಿಂಗಳನಲ್ಲಿ ಮಂಡಿಸುವ ಬಜೆಟ್‌ನಲ್ಲಿ ರಾಜ್ಯ ಸರ್ಕಾರವು ಬಿಸಿಯೂಟ ತಯಾರಕರಿಗೆ ಅವರ ವೇತನವನ್ನು ಆರು ಸಾವಿರ … Read more

ದಶಪಥ ಹೆದ್ದಾರಿಯಲ್ಲಿ ದುಬಾರಿ ಸಂಚಾರ – ಪ್ರಯಾಣಿಕರ ಜೇಬಿಗೆ ಕತ್ತರಿ – ಯಾವ ವಾಹನಕ್ಕೆ ಎಷ್ಟು?

ಸುದ್ದಿ360 ರಾಮನಗರ: ದಶಪಥ ಹೆದ್ದಾರಿಯಲ್ಲಿ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು, ಎಕ್ಸ್‌ಪ್ರೆಸ್‌ ಟೋಲ್ ದರ ಸದ್ದಿಲ್ಲದೇ  ಹೆಚ್ಚಾಗಿದೆ. ಈ ಹಿಂದೆ ಏ.1ರಂದೇ ದರ ಏರಿಕೆ ಮಾಡಿದ್ದ ಹೆದ್ದಾರಿ ಪ್ರಾಧಿಕಾರ ಸಾರ್ವಜನಿಕ ಆಕ್ರೋಶದ ಹಿನ್ನಲೆಯಲ್ಲಿ ದರ ಹೆಚ್ಚಳ ವಾಪಸ್ಸ್ ಪಡೆದಿತ್ತು. ಇದೀಗ ಮತ್ತೆ ಟೋಲ್ ದರ ಏರಿಕೆ ಮಾಡಿದೆ. ಶೇ.22ರಷ್ಟು ಟೋಲ್ ದರ ಏರಿಕೆ ಮಾಡಿರೋ ಹೆದ್ದಾರಿ ಪ್ರಾಧಿಕಾರ ಜೂನ್ 1ರಿಂದಲೇ ದುಬಾರಿ ಶುಲ್ಕ ವಸೂಲಿ ಮಾಡುತ್ತಿದೆ. ಪ್ರಯಾಣಿಕರ ಜೇಬಿಗೆ ಕತ್ತರಿ ಫಾಸ್ಟ್ ಟ್ಯಾಗ್ ಇರೋ ಕಾರಣ ವಾಹನ ಸವಾರರ … Read more

ಕಳಪೆ ಬೀಜ ವಿತರಣೆ-ಅಧಿಕಾರಿಗಳೇ ಹೊಣೆ: ಸಚಿವ ಚಲುವರಾಯಸ್ವಾಮಿ

ಮುಂಗಾರು ವಿಳಂಬ: ಸಮರ್ಪಕ ಬೀಜ ದಾಸ್ತಾನು, ವಿತರಣೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿರುವುದರಿಂದ ಬಿತ್ತನೆ ಕೂಡ ತಡವಾಗುತ್ತಿದೆ. ಆದ್ದರಿಂದ ಮಳೆಯಾದ ಕೂಡಲೇ ಎಲ್ಲೆಡೆ ಏಕಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಬೀಜ-ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಳಪೆ ಬೀಜ ವಿತರಣೆ ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಇಲಾಖೆಯ ಸಚಿವರಾದ ಎನ್.ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು. ಮುಂಗಾರು ಸಿದ್ಧತೆ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ  ನಡೆದ … Read more

ಮಹಿಳೆಯರಿಗೆ ಉಚಿತ ಪ್ರಯಾಣ ಅಂತಾರೆ. . . ನಮ್ಮ ಗೋಳು ಕೇಳೋರ್ಯಾರು?

ಸುದ್ದಿ360 ಬಾಗಲಕೋಟೆ : ಮಹಿಳೆಯರಿಗೆ ಉಚಿತ ಪ್ರಯಾಣ ಅಂತಾರೆ ಹಾಗಾದ್ರೆ ನಮ್ಮಂತವರ ಗೋಳು ಕೇಳೋರ್ಯಾರು ? ಈ ಕೂಗು ಕೇಳಿ ಬಂದದ್ದು  ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಸಂಚರಿಸುತ್ತಿದ್ದ ಕೆ.ಎಸ್.ಆರ್‍.ಟಿ.ಸಿ ಬಸ್ನಲ್ಲಿ. ನಮ್ಮ ಲಗೇಜ್ ಹಾಕಿದ್ರೆ ನಡುದಾರಿಯಲ್ಲಿ ತೆಗೆದು ಹಾಕ್ತಿವಿ ಅಂತ ಕಂಡಕ್ಟರ್ ಹೇಳ್ತಾರೆ ಎಂಬುದು ಮಹಿಳೆಯ ಆರೋಪ. ಇಳಕಲ್ ದಿಂದ ಮುದಗಲ್ ಕಡೆಗೆ ತೆರಳುತ್ತಿದ್ದ ಬಸ್ನಲ್ಲಿ ಲಗೇಜ್ ವಿಚಾರದಲ್ಲಿ ಸಾರಿಗೆ ಸಿಬ್ಬಂದಿ, ಪ್ರಯಾಣಿಕರ ಮಧ್ಯೆ ವಾಗ್ವಾದ ನಡೆದು ತೀವ್ರ ಮಾತಿನ ಚಕಮಕಿಗೆ ಕಾರಣವಾಗಿದೆ. ವ್ಯಾಪಾರಕ್ಕೆಂದು ಪ್ಲಾಸ್ಟಿಕ್ … Read more

ಎಸ್‌ಎಸ್ 93ನೇ ಜನ್ಮದಿನ: ಅಭಿಮಾನಿಗಳಿಂದ ವಿವಿಧ ಸೇವಾ ಕಾರ್ಯಕ್ರಮ

ಸುದ್ದಿ360 ದಾವಣಗೆರೆ: ದಕ್ಷಿಣ ವಿಧಾನಸಭೆ ಕ್ಷೇತ್ರದ ಹಿರಿಯ ಶಾಸಕರು, ಅಖಿಲ ಭಾರತ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷರೂ ಆದ  ಶಾಮನೂರು ಶಿವಶಂಕರಪ್ಪನವರು ಇದೇ ಜೂ.16ರಂದು 93 ವಸಂತಗಳನ್ನು ಪೂರೈಸಲಿದ್ದಾರೆ. ಈ ಪ್ರಯುಕ್ತ ಅವರ ಅಭಿಮಾನಿ ಬಳಗ ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಎಸ್‌ಎಸ್ ಜನ್ಮದಿನದ ಪ್ರಯುಕ್ತ ವಿನ್ಯಾಸಗೊಳಿಸಿರುವ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಎಸ್‌ಎಸ್ ಜನ್ಮದಿನದ ಅಂಗವಾಗಿ ಅಂದು ನಗರದ ಎಲ್ಲ ಅನಾಥಾಶ್ರಮ, ವೃದ್ಧಾಶ್ರಮಗಳ … Read more

ದಾವಣಗೆರೆ: ಜೂ.4ರಂದು ಮಾಧ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ-ಬಿರುದು-ಸಮ್ಮಾನ

ದಾವಣಗೆರೆ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜೂನ್. 4 ರಂದು ಬೆಳಿಗ್ಗೆ 10. 45ಕ್ಕೆ ನಗರದ ದೇವರಾಜು ಅರಸು ಬಡಾವಣೆಯಲ್ಲಿನ ಶಿವಧ್ಯಾನ ಮಂದಿರದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ 2022 ನೇ ಸಾಲಿನ ಮಾಧ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ, ವಿವಿಧ ಪ್ರಶಸ್ತಿಗಳ ಪುರಸ್ಕೃತ ಪತ್ರಕರ್ತರಿಗೆ ಗೌರವಾರ್ಪಣೆ, ಮಹಿಳಾ ಪತ್ರಕರ್ತರಿಗೆ ಸನ್ಮಾನ ಹಾಗೂ ಪತ್ರಕರ್ತರಿಗೆ ಧನಸಹಾಯ ವಿತರಣಾ ಕಾರ್ಯಕ್ರಮ ಜರುಗಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಇ.ಎಂ ಮಂಜುನಾಥ್ ತಿಳಿಸಿದರು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ … Read more

ಮಾಜಿಯಿಂದ ಹಾಲಿ ಮುಖ್ಯಮಂತ್ರಿಗಳಿಗೆ ಹೀಗೊಂದು ಪತ್ರ

ಸನ್ಮಾನ್ಯ ಮುಖ್ಯಮಂತ್ರಿಗಳೆ,  ತಾವು ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು ತಮಗೆ ನನ್ನ ಅಭಿನಂದನೆಗಳು. ಕಳೆದ ಎರಡು ವಾರದಿಂದ ತಾವು ತಮ್ಮ ಪಕ್ಷ ನೀಡಿರುವ ಐದು ಗ್ಯಾರೆಂಟಿಗಳ ಅನುಷ್ಠಾನಕ್ಕಾಗಿ ಹಲವಾರು ಸಭೆಗಳನ್ನು ನಡೆಸಿದ್ದೀರಿ. ಅದರಲ್ಲಿಯೂ ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿರುವುದು ಎಲ್ಲರಿಗೂ ತಿಳಿದಿದೆ‌. ತಾವೇ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುವಂತೆ ಎಲ್ಲ ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲು ಸುಮಾರು ಐವತ್ತು ಸಾವಿರ ಕೋಟಿ ರೂಪಾಯಿ ಬೇಕೆಂದು ರಾಜ್ಯದ ಜನತೆಗೆ ತಿಳಿಸಿದ್ದೀರಿ. ಈ ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ … Read more

error: Content is protected !!