ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗದಿಂದ ಬಿ.ಎಸ್. ಜಗದೀಶ್ ಜನ್ಮದಿನಾಚರಣೆ

ಸುದ್ದಿ360 ದಾವಣಗೆರೆ ಜ.3: ಶ್ರೀ ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗದ ವತಿಯಿಂದ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್ ಅವರ ಹುಟ್ಟುಹಬ್ಬವನ್ನು ಜ.5ರಂದು ಸಂಜೆ 6 ಗಂಟೆಗೆ ನಗರದ ದಾವಣಗೆರೆ-ಹರಿಹರ ಅರ್ಬನ್ ಕೋ-ಆಫ್ ಬ್ಯಾಂಕ್ ಸಮುದಾಯ ಭವನದಲ್ಲಿ ಹಮ್ಮಿಕೊಂಡಿರುವುದಾಗಿ ಮಾಜಿ ಮಹಾಪೌರರಾದ ಪಿ.ಎಸ್. ಜಯಣ್ಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಸೇವಕ ಕೆ.ಬಿ. ಶಂಕರನಾರಾಯಣ ಅವರು ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ, ಸಂಸದರಾದ ಡಾ. ಜಿ.ಎಂ. ಸಿದ್ದೇಶ್ವರ, ಬಿಜೆಪಿ ಜಿಲ್ಲಾಧ್ಯಕ್ಷ  ಎಸ್.ಎಂ. … Read more

ಜ.5ಕ್ಕೆ ದಾವಣಗೆರೆಗೆ ಶಿವರಾಜ್ ಕುಮಾರ್ ಹಾಗೂ ವೇದ ಚಿತ್ರತಂಡ

ವೇದ ಚಿತ್ರದ ‘ಶಿವ ಸಂಭ್ರಮಾಚರಣೆ’ ಸುದ್ದಿ360 ದಾವಣಗೆರೆ ಜ.3: ಶಿವರಾಜ್ ಕುಮಾರ್ ಅವರ 125ನೇ ಚಿತ್ರ ವೇದ ಜನಮೆಚ್ಚುಗೆ ಪಡೆಯುತ್ತಿದ್ದು, ಚಿತ್ರತಂಡ  ಸಂಭ್ರಮ ಪಡುತ್ತಿರುವ  ಈ ಸಂದರ್ಭದಲ್ಲಿ ರಾಜ್ಯಾದ್ಯಂತ ಅಭಿಮಾನಿಗಳಿಂದ ‘ಶಿವ ಸಂಭ್ರಮಾಚರಣೆ’ ನಡೆಯುತ್ತಿದ್ದು, ಅಂತೆಯೇ ದಾವಣಗೆರೆಯಲ್ಲಿ ಕೂಡ ಜ.5ರಂದು ಡಾ. ರಾಜ್‍ಕುಮಾರ್, ಡಾ. ಶಿವರಾಜ್ ಕುಮಾರ್, ರಾಜರತ್ನ ಪುನೀತ್ ರಾಜ್ ಕುಮಾರ್ ಅಭಿಮಾನಿ ಸಂಘಗಳ ವತಿಯಿಂದ ಸಂಭ್ರಮಾಚರಣೆ ನಡೆಸುತ್ತಿರುವುದಾಗಿ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಯೋಗೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ನಡೆಯುವ ಸಂಭ್ರಮಾಚರಣೆಯಲ್ಲಿ ಡಾ. … Read more

ನುಡಿದಂತೆ ನಡೆದವರು, ನಡೆದಂತೆ ನುಡಿದವರು ಶ್ರೀ ಸಿದ್ದೇಶ್ವರ ಸ್ವಾಮೀಜಿ: ಗಡಿಗುಡಾಳ್ ಮಂಜುನಾಥ್

ದಾವಣಗೆರೆ ಜ.3: ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ ನಡೆದಾಡುವ ದೇವರು. ಜೀವನ ಶೈಲಿ, ಉಪನ್ಯಾಸ, ಸ್ಫೂರ್ತಿದಾಯಕ ಮಾತುಗಳಿಂದ ವಿಶ್ವಾದ್ಯಂತ ಕೋಟ್ಯಾಂತರ ಅನುಯಾಯಿಗಳನ್ನು ಹೊಂದಿದ್ದ ಎರಡನೇ ವಿವೇಕಾನಂದ ಅಂತಾನೇ ಪ್ರಸಿದ್ಧಿ ಪಡೆದವರು. ಅವರ ಅಗಲಿಕೆ ಕರುನಾಡಿಗೆ ನೋವು ತಂದಿದೆ ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ಹೇಳಿದರು. ನಗರದ ಎಂಸಿಸಿ ಬಿ ಬ್ಲಾಕ್ ನ ಈಜುಕೊಳದ ಬಳಿ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ತಿಕೋಟಾ … Read more

‘ಎಲುಬಿಲ್ಲದ ನಾಲಗೆ ಹರಿಯಬಿಡಬೇಡಿ’

ರಾಜನಹಳ್ಳಿ ಶಿವಕುಮಾರ್ ಅವರಿಗೆ ವೀರಶೈವ ಮಹಾಸಭಾ ಗೌರವಯುತ ಸಲಹೆ – ಎಚ್ಚರಿಕೆ ಸುದ್ದಿ360 ದಾವಣಗೆರೆ ಜ.3: ರಾಜಕೀಯ ವ್ಯಕ್ತತ್ವ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಮೂಳೆ ಇಲ್ಲದ ನಾಲಗೆಯನ್ನು ಹಗುರವಾಗಿ ಹರಿಯಬಿಡಬಾರದು, ಧರ್ಮದ ವಿಚಾರವಾಗಿ ಹಾಗೂ ಹಿರಿಯರ, ರಾಷ್ಟ್ರೀಯ ಅಧ್ಯಕ್ಷರ ವಿಚಾರವಾಗಿ ಮಾತನಾಡುವಾಗ ಪೈಲ್ವಾನ್ ಶಿವಕುಮಾರ್‍ರವರು ಎಚ್ಚರದಿಂದ ಮಾತನಾಡುವಂತೆ ವೀರಶೈವ ಮಹಾಸಭಾ ವತಿಯಿಂದ ಗೌರವಯುತವಾದ ಸಲಹೆ ಮತ್ತು ಎಚ್ಚರಿಕೆಯನ್ನು ನೀಡಬಯಸುವುದಾಗಿ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ.ಜಿ. ಶಿವಕುಮಾರ್ ಹೇಳಿದರು. ಜಿಲ್ಲಾ ವರದಿಗಾರರ ಕೂಟದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … Read more

ಕಲಿಕೆಯೊಂದಿಗೆ ಕುಣಿತದ ಝಲಕ್ ನೀಡಿದ ದವನ್ ಕಾರ್ನಿವಲ್-2022

ಸುದ್ದಿ360 ದಾವಣಗೆರೆ, ಡಿ.31: ಗಂಧದ ಗುಡಿ, ಹಳ್ಳಿಮನೆ, ದೇಶಿ ಖಿಲ್ಲ, ಫುಡ್ ಪಾಯಿಂಟ್, ಈಶ್ವರ್, ಗೋಲ್ಡನ್ ಸ್ಪೂನ್ ರೆಸ್ಟಾರೆಂಟ್, ಫಾಲ್ ಆಫ್ ಫ್ಲೇವರ್ಸ್, ಫುಡೀಶಿಯಸ್ ಹ್ಯಾಲೊ ಸ್ಪೂಕಿ, ಹಕುನ ಮಟಾಟ ಇಂತಹ ಹೆಸರಿನ ಒಟ್ಟು 16 ಸ್ಟಾಲ್ಗಳು ಇಂದು ದಾವಣಗೆರೆಯ ಬಾಪೂಜಿ ಬ್ಯಾಂಕ್ ಸಮುದಾಯಭವನದಲ್ಲಿ ನಡೆದ ದವನ್ ಕಾರ್ನಿವಲ್-2022 ಜಾತ್ರೆಯ ವಾತಾವರಣವನ್ನೇ ನಿರ್ಮಿಸಿತ್ತು. ದವನ್ ಇನ್ಟ್ಸಿಟ್ಯೂಟ್ ಆಫ್ ಅಡ್ವಾನ್ಸ್‍ಡ್ ಮ್ಯಾನೇಜ್‍ಮೆಂಟ್ ಸ್ಟಡೀಸ್ ವತಿಯಿಂದ 2022ರ ಕೊನೆಯ ದಿನದಂದು ಆಯೋಜಿಸಲಾಗಿದ್ದ ದವನ್ ಕಾರ್ನಿವಲ್-2022ನ್ನು ದವನ್ ಕಾಲೇಜು ಕಾರ್ಯದರ್ಶಿ ವೀರೇಶ್ … Read more

ಭಾರತೀಯ ಮೌಲ್ಯ ಎತ್ತಿ ಹಿಡಿಯುವ ಶಿಕ್ಷಣ ಅವಶ್ಯ: ಮಂಜುನಾಥ್ ಏಕಬೋಟೆ

ಸುದ್ದಿ360 ದಾವಣಗೆರೆ, ಡಿ.30: ಭಾರತೀಯ ಮೌಲ್ಯಗಳ ಪರಿಕಲ್ಪನೆಯಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈಶ್ವರಮ್ಮ ಶಾಲೆಯೂ ಒಂದು ಆದರ್ಶ. ಶಾಲೆಗೆ ಕೇವಲ ಅಂಕ ಗಳಿಕೆಗಾಗಿ ಶಿಕ್ಷಣ ನೀಡದೆ ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿಯುವಂತಹ ಶಿಕ್ಷಣ ಗುರುತಿಸಿ ಮಕ್ಕಳಿಗೆ ನೀಡುತ್ತಿರುವುದು ಅತ್ಯುತ್ತಮ ಕಾರ್ಯವಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್ ಏಕಬೋಟೆ ಹೇಳಿದರು. ನಗರದ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ಶಾಲೆಗಳು ಸಮಾಜದ … Read more

‘ಧರ್ಮಕ್ಕಾಗಿ ನಾವಲ್ಲ – ನಮಗಾಗಿ ಧರ್ಮ’ ಧರ್ಮಗಳ ನಡುವಿನ ಗೋಡೆ ಕೆಡವುವುದು ಎಲ್ಲರ ಕರ್ತವ್ಯ

ದಾವಣಗೆರಯಲ್ಲಿ ನಡೆದ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ ಸಿದ್ಧರಾಮಯ್ಯ ಸುದ್ದಿ360 ದಾವಣಗೆರೆ, ಡಿ.30: ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಸೇರಿದಂತೆ ನಮ್ಮ ರಾಷ್ಟ್ರಕವಿ ಕುವೆಂಪುರವರು ಈ ನೆಲವನ್ನು ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬುದನ್ನು ಸಾರಿ ಸಾರಿ ಹೇಳಿದ್ದಾರೆ. ಇಂತಹ ಮಹಾನುಭಾವರ ಪುತ್ಥಳಿಗಳನ್ನು ನಿರ್ಮಿಸಿ ಪೂಜೆ ಮಾಡಿದರೆ ಸಾಲದು, ಅವರ ತತ್ವಗಳನ್ನು ಮೈಗೂಡಿಸಿಕೊಳ್ಳುವ ಮೂಲಕ  ಎಲ್ಲರೂ ಮನುಷ್ಯರಂತೆ ಬದುಕುವ ವಾತಾವರಣ ಸೃಷ್ಟಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಅವರು ಇಂದು ನಗರದ ವೀರಮದಕರಿ ನಾಯಕ ವೃತ್ತದಲ್ಲಿ … Read more

ಡಿ ಬಸವರಾಜ್‍ರಿಂದ  ಟಿಕೆಟ್‍ಗಾಗಿ ಮನವಿ

ಸುದ್ದಿ360 ದಾವಣಗೆರೆ, ಡಿ.30: ಇಂದು ದಾವಣಗೆರೆ ನಗರಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ವಕ್ತಾರರಾದ ಡಿ ಬಸವರಾಜ್ ರವರು ಮಾಯಕೊಂಡ ವಿಧಾನಸಭಾ ಕ್ಷೇತ್ರಕ್ಕೆ ತಮಗೆ ಕಾಂಗ್ರೆಸ್ ಪಕ್ಷದ  ಟಿಕೆಟ್ ನೀಡಬೇಕೆಂದು ಮನವಿ ಮಾಡಿದರು. ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿ ನಿಷ್ಠೆಯಿಂದ ಪ್ರಮಾಣಿಕತೆಯಿಂದ ಸೇವೆ ಸಲ್ಲಿಸಿದ್ದು ಭೋವಿ ಸಮಾಜಕ್ಕೆ ಸೇರಿರುವ ತಮಗೆ ಕಾಂಗ್ರೆಸ್ ಟಿಕೆಟ್ ನೀಡುವ ಮೂಲಕ ಸಾಮಾಜಿಕ ನ್ಯಾಯ … Read more

‘ಅಮಿತ್ ಶಾ ಹತ್ರ ಏನು ಮಂತ್ರದಂಡ ಇಲ್ಲ – ನರೇಂದ್ರ ಮೋದಿ ಬಂದ್ರು ಇಲ್ಲಿ ಗೆಲ್ಲಲ್ಲ’

ಸುದ್ದಿ360 ದಾವಣಗೆರೆ, ಡಿ.30: ಅಮಿತ್ ಶಾ ರಾಜ್ಯಭೇಟಿ ಕುರಿತಂತೆ, ಅಮಿತ್ ಶಾ ಹತ್ರ ಏನು ಮಂತ್ರದಂಡ ಇದೆಯಾ, ಅವರು ಎಷ್ಟು ಬಾರಿ ಬಂದ್ರು ಅಷ್ಟೇ, ಅವರ ಜಾದೂ ಇಲ್ಲೆನು ನಡೆಯಲ್ಲ. ನರೇಂದ್ರ ಮೋದಿಯವರೇ ಬಂದ್ರೂ ಬಿಜೆಪಿ ಗೆಲ್ಲಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಮಧ್ಯಮದವರಿಗೆ ಪ್ರತಿಕ್ರಿಯಿಸಿದರು. ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ನಗರದ ಬಾಪೂಜಿ ಕಾಲೇಜು ಗ್ರೌಂಡ್‍ನಲ್ಲಿ ಸಿದ್ಧರಾಮಯ್ಯನವರು ಹೆಲೆಕಾಪ್ಟರ್‍ನಿಂದ ಇಳಿಯುತ್ತಿದ್ದ ಹಾಗೆ ಚಾಮುಂಡೇಶ್ವರಿ ತಾಯಿ … Read more

ಚುನಾವಣಾ ಗಿಮಿಕ್ ಗೆ ಮುಂದಾಗಿರುವ ಸರ್ಕಾರದಿಂದ ಮೀಸಲಾತಿ ಗೊಂದಲ : ಸಿದ್ಧರಾಮಯ್ಯ

ಸುದ್ದಿ360 ದಾವಣಗೆರೆ, ಡಿ.30: ಮೀಸಲಾತಿಯಲ್ಲಿ ರಾಜಕೀಯ ಗಿಮಿಕ್ ಮಾಡುತ್ತಿರುವ ಬಜೆಪಿಯ ಡಬ್ಬಲ್ ಇಂಜಿನ್ ಸರ್ಕಾರ ಗೊಂದಲದಲ್ಲಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಮತವೊಲಿಕೆಯ ರಾಜಕಾರಣ ಮಾಡುತ್ತಿದೆ ಎಂದು ಮೀಸಲಾತಿ ಕುರಿತು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆ ವಿರೋಧಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಿಸರ್ವೇಷನ್ 50 ಪರ್ಸೆಂಟ್‍ಗಿಂತ ಹೆಚ್ಚಾಗಬಾರದು ಎಂದು 1992ರಲ್ಲಿ ಸುಪ್ರೀಂಕೋರ್ಟ್ ಬೆಂಚ್ ಬಹಳ ಸ್ಪಷ್ಟವಾಗಿ ಹೇಳಿದೆ.  ಆದರೆ ಈ ಮೊದಲು … Read more

error: Content is protected !!