‘ಹಳೇ ಪಿಂಚಣಿ ಸಾಧ್ಯವಿಲ್ಲ – ಕೆಲಸಕ್ಕೆ ಸೇರುವಾಗಲೇ ಇದಕ್ಕೆ ಒಪ್ಪಿದ್ದೀರಿ’
ಬೆಳಗಾವಿ ಅಧಿವೇಶನದ ಕೊನೆಯ ದಿನದಲ್ಲಿ ನಡೆದ ಚರ್ಚೆಯಲ್ಲಿ ಆಡಳಿತ ಪಕ್ಷಗಳ ಸದಸ್ಯರು ಸೇರಿದಂತೆ ಹಲವರು ಸಭಾತ್ಯಾಗ
ಬೆಳಗಾವಿ ಅಧಿವೇಶನದ ಕೊನೆಯ ದಿನದಲ್ಲಿ ನಡೆದ ಚರ್ಚೆಯಲ್ಲಿ ಆಡಳಿತ ಪಕ್ಷಗಳ ಸದಸ್ಯರು ಸೇರಿದಂತೆ ಹಲವರು ಸಭಾತ್ಯಾಗ
ದಾವಣಗೆರೆ: ನಗರದಲ್ಲಿ ಶ್ರೀ ಎಲ್.ಬಿ.ಕೆ. ಕಲ್ಯಾಣ ಟ್ರಸ್ಟ್ ವತಿಯಿಂದ 7 ನೇ ಬಾರಿಗೆ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಡಿ.30ರಂದು ಬೆಳಿಗ್ಗೆ11 ಗಂಟೆಗೆ ನಗರದ ಶ್ರೀ ರಾಜವೀರ ಮದಕರಿ ನಾಯಕ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ. ಹರಿಹರ ರಾಜನಹಳ್ಳಿ ವಾಲ್ಮೀಕಿ ಸಂಸ್ಥಾನದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಕೂಡಲಸಂಗಮದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಚಿತ್ರದುರ್ಗದ ಶ್ರೀ ಮಾದರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಜರುಗುವ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಮಾಜಿ … Read more
ಸುದ್ದಿ360 ಬೆಳಗಾವಿ, ಡಿ.28 : ರಾಜ್ಯದಲ್ಲಿ 11133 ಪೌರ ಕಾರ್ಮಿಕರ ನೌಕರಿಯನ್ನು ಖಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು. ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆ : ಆಯವ್ಯಯದಲ್ಲಿ ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆಯನ್ನು ಅವರ … Read more
ಆಡಳಿತ ಪಕ್ಷಕ್ಕೆ ನುಂಗಲಾರದ ತುತ್ತಾಯಿತೆ. . . !? ಸುದ್ದಿ360 ದಾವಣಗೆರೆ: ಇಲ್ಲಿ ಯಾರನ್ನಾದರೂ ರಾಜಕೀಯ ಕುರಿತು ಮಾತಿಗೆಳೆದರೆ, ಜಿಂಕೆ ನಿಮ್ಮ ಕಣ್ಣಮುಂದೆ ಹಾದು ಹೋಗುತ್ತದೆ. ಅಷ್ಟೇ ಅಲ್ಲ ಕೃಷ್ಣಮೃಗ, ಕಾಡು ಹಂದಿ, ನರಿ, ಮುಂಗಸಿ ಇವುಗಳೂ ಕೂಡ ನಿಮ್ಮ ಕಣ್ಣಮುಂದೆ ಬರದೇ ಇರವು. ಅರೆರೆ ರಾಜಕೀಯಕ್ಕು ಈ ವನ್ಯಜೀವಿಗಳಿಗೂ ಏನು ಸಂಬಂಧ ಅಂತೀರಾ . . .? ನಗರದ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ವನ್ಯಜೀವಿಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ವಾರದಿಂದ ದಾವಣಗೆರೆಯಲ್ಲಿ … Read more
ಸುದ್ದಿ360 ದಾವಣಗೆರೆ ಡಿ.27: ಚೆಕ್ ಬೌನ್ಸ್ ಪ್ರಕರಣದಲ್ಲಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಜಿಲ್ಲೆ ಹೊನ್ನಾಳಿ ಪೊಲೀಸ್ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಭರತ್ ಹಾಗೂ ಲಂಚದ ಹಣವನ್ನು ಪಡೆಯಲು ಸಹಕರಿಸಿದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ರವರ ಸಂಬಂಧಿ ಸುರೇಶ ಇವರ ವಿರುದ್ಧ ಲೋಕಾಯುಕ್ತ ಪ್ರಕರಣ ದಾಖಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಭರತ್ ರವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ ಬಿ ರಿಷ್ಯಂತ್ … Read more
ಸುದ್ದಿ360 ದಾವಣಗೆರೆ ಡಿ.27: ಕೋವಿಡ್ ತವರು ರಾಷ್ಟ್ರ ಚೀನಾ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಕೋವಿಡ್ 19ರ ರೂಪಾಂತರಿ ತಳಿ ಬಿಎಫ್-7 ವ್ಯಾಪಕವಾಗಿ ಹರಡುತ್ತಿರುವ ಮುನ್ಸೂಚನೆಯಿಂದ ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳು ಕೋವಿಡ್ ನ್ನು ಸಮರ್ಥವಾಗಿ ಎದುರಿಸಲು ಶಸ್ತ್ರಸಜ್ಜಿತವಾಗತೊಡಗಿವೆ. ಈ ಹಿನ್ನೆಲೆಯಲ್ಲಿ ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಕೂಡ ಮಂಗಳವಾರ ಸಿದ್ಧತೆಗಳ ಅಣಕು ತಾಲೀಮು ನಡೆಸಲಾಯಿತು. ಸರಕಾರಿ ಆಸ್ಪತ್ರೆಗಳಲ್ಲಿನ ಕೋವಿಡ್ ಸಂಬಂಧಿಸಿದ ಸೌಲಭ್ಯಗಳ ಕುರಿತು ಆನ್‌ಲೈನ್‌ನಲ್ಲಿ ಮಾಹಿತಿ ಕೇಳಿ ಪಡೆಯಲಾಯಿತು. ಅದರಂತೆ ದಾವಣಗೆರೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗರಾಜ್, … Read more
ಸುದ್ದಿ360 ದಾವಣಗೆರೆ ಡಿ.27: ಇಲ್ಲಿನ ದವನ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ ಡ್ ಮ್ಯಾನೇಜ್‍ಮೆಂಟ್ ಸ್ಟಡೀಸ್ ವತಿಯಿಂದ ‘ದವನ್ ಕಾರ್ನಿವಲ್ – 2022’ ನ್ನು ನಗರದ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಡಿ. 31ರ ಶನಿವಾರ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಉಪಪ್ರಾಂಶುಪಾಲರಾದ ಅನಿತಾ ಎನ್. ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ವಿದ್ಯಾರ್ಥಿಗಳಲ್ಲಿ, ವಾಣಿಜ್ಯ ಮತ್ತು ನಿರ್ವಹಣಾ ಜ್ಞಾನದ ಅರಿವು ಮೂಡಿಸುವ ಉದ್ದೇಶದಿಂದ ಈ ಯುವ ಉತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಉತ್ಸವದಲ್ಲಿ ವಿದ್ಯಾರ್ಥಿಗಳಿಗೆ ಆಹಾರ ಮತ್ತು ಆಟದ … Read more
ಸುದ್ದಿ360 ದಾವಣಗೆರೆ ಡಿ.26: ನಗರದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಮೂರು ಬಾರಿ ಸಂಸದರಾಗಿದ್ದ ಚನ್ನಯ್ಯ ವಡೇಯರವರ ಹೆಸರನ್ನು ನಾಮಕಾರಣ ಮಾಡಬೇಕೆಂದು ಹರಿಹರ ತಾಲ್ಲೂಕು ಕುರುಬರ ಸಂಘ ಒತ್ತಾಯಿಸುವುದಾಗಿ ಸಂಘದ ಸಂಚಾಲಕ ಡಾ. ಕರಿಬಸಯ್ಯ ಮಠದ ತಿಳಿಸಿದ್ದಾರೆ. ಈ ಕುರಿತು ಜಿಲ್ಲಾ ವರದಿಗಾರರ ಕೂಟದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಚನ್ನಯ್ಯ ವಡೇಯರವರು ದಾವಣಗೆರೆ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದು, ದಾವಣಗೆರೆಯ ಅಭಿವೃದ್ಧಿಗಾಗಿ ಶ್ರಮಿಸಿದವರಾಗಿದ್ದಾರೆ. ಅವರ ಹೆಸರನ್ನು ಸರ್ಕಾರ … Read more
ಸುದ್ದಿ360 ಬೆಳಗಾವಿ, ಡಿ. 26 : ಕೋವಿಡ್ ನಿಂದಾಗಿ ಜನರ ಆರ್ಥಿಕತೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವಸಂಪುಟದಲ್ಲಿ ಈ ಬರ್ಗೆ ಚರ್ಚಿಸಲಾಗಿದ್ದು, ಜನರಲ್ಲಿ ಜಾಗೃತಿ ಮೂಡಿಸುವುದು, ಬೂಸ್ಟರ್ ಡೋಸ್ ಹೆಚ್ಚಿಸುವುದು, ಐಎಲ್ಐ ಮತ್ತು ಸಾರಿ ಪರೀಕ್ಷೆಗಳನ್ನು ಹೆಚ್ಚಿಸುವುದು, ಮಾಸ್ಕ್ ಗಳ ಧಾರಣೆ, ಒಳಾಂಗಣಗಳಲ್ಲಿ ಮಾಸ್ಕ್ … Read more
ಉಪ್ಪು ತಿಂದವರು ನೀರು ಕುಡಿಯಲೇಬೇಕು- ಜಿ.ಎಂ. ಸಿದ್ದೇಶ್ವರ್ ಸುದ್ದಿ360 ದಾವಣಗೆರೆ ಡಿ.25: ನಗರದ ಕಲ್ಲೇಶ್ವರ ರೈಸ್ ಮಿಲ್ ನಲ್ಲಿ ವನ್ಯಜೀವಿಗಳ ಪತ್ತೆಯಾಗಿದ್ದು, ಇದು ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ರ ಒಡೆತನದ ಮಿಲ್ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ. ಹೀಗಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ಅಧಿಕಾರಿಗಳು ಹಿಂದೆಬಿದ್ದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಎಫ್ಓ ಯಾರದೋ ಒತ್ತಡಕ್ಕೆ ಮಣಿದಂತೆ ಕಾಣುತ್ತಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಅನುಮಾನ ವ್ಯಕ್ತಪಡಿಸಿದರು. ಅವರು ಇಂದು ಜಿಎಂಐಟಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಕರಣದಲ್ಲಿ … Read more