ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಸಿಂಗ್ ನೇಮಕ

ಸುದ್ದಿ360 ಶಿವಮೊಗ್ಗ,ನ.11: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಸಿಂಗ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಮಾಡಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ದೀಪಕ್ ಸಿಂಗ್ ಅವರು ತಕ್ಷಣ ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ.

ನಮ್ಮ ದಾವಣಗೆರೆಯ ಫಲಪುಷ್ಪ ಪ್ರದರ್ಶನದಲ್ಲಿ ಕರ್ನಾಟಕ ರತ್ನ ಪುನೀತನ ಮೆರುಗು

ಕಣ್ಮನ ಸೆಳೆದ ಫಲಪುಷ್ಪ ಪ್ರದರ್ಶನ ಸುದ್ದಿ360 ದಾವಣಗೆರೆ ನ.12: ಏಷ್ಯಾದಲ್ಲಿಯೇ ದೊಡ್ಡ ಗಾಜಿನಮನೆ ಎಂಬ ಖ್ಯಾತಿ ಹೊಂದಿರುವ ಬೆಣ್ಣೆನಗರಿಯ ಗಾಜಿನ ಮನೆಯಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಕರ ಕಣ್ಮನ ಸೆಳೆಯುತ್ತಿದೆ. ನಗರದ ಹೊರ ವಲಯ ಗಾಜಿನಮನೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘದ ಸಂಯುಕ್ತಾಶ್ರಯದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆಗೊಂಡಿದ್ದು,  ಇದೇ ನವೆಂಬರ್ 10 ರಿಂದ 4 ದಿನಗಳ ಕಾಲ ನಡೆಯುತ್ತಿದೆ. ವಿಶೇಷವಾಗಿ ಇಲ್ಲಿ ಅಪ್ಪುವಿನ ತೀಮ್ ನೋಡುಗರನ್ನು ಪುನೀತನನ್ನಾಗಿ ಮಾಡಿದೆ. … Read more

ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಬೆಂಗಳೂರು ನವೆಂಬರ್ 11 : ರಾಜ್ಯದ ಬಹುನಿರೀಕ್ಷಿತ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ವಿಶೇಷ ರೈಲಿಗೆ ಹಸಿರು ನಿಶಾನೆ ತೋರುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಇಂದು ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡಿದರು. ಎಂಟು ದಿನಗಳ ಕಾಶಿ ದರ್ಶನದ ಈ ರೈಲು ವಾರಣಾಸಿ, ಪ್ರಯಾಗ್ ರಾಜ್, ಅಯೋಧ್ಯಾ ಮುಂತಾದ ಪವಿತ್ರ ಸ್ಥಳಗಳಿಗೆ ಯಾತ್ರಿಕರನ್ನು ಕರೆದೊಯ್ಯುತ್ತದೆ. ಮುಜರಾಯಿ ಇಲಾಖೆ ಭಾರತ ಸರ್ಕಾರದ ಸಹಯೋಗದಲ್ಲಿ ಈ ಕಾಶಿ ದರ್ಶನ ಯಾತ್ರೆ ಆಯೋಜಿಸಲಾಗಿದೆ. ಈ ಯಾತ್ರೆಗೆ … Read more

ಅ.28ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಸುದ್ದಿ360 ದಾವಣಗೆರೆ ಅ.27: ಸ್ಪೈರ್‌ ಕ್ಲಿನಿಕ್, ಆಲ್‌ವೇಸ್ ಬೆಸ್ಟ್ ಕೇರ್ ಹಾಸ್ಪಿಟಲ್, ಸಿಟಿ ಸೆಂಟ್ರಲ್ ಆಸ್ಪತ್ರೆ ಇವರ ಸಂಯುಕ್ತಶ್ರಾಯದಲ್ಲಿ ಅ.28ರಂದು ಹದಡಿ ರಸ್ತೆಯಲ್ಲಿರುವ ಆಲ್‌ವೇಸ್ ಬೆಸ್ಟ್ ಕೇರ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಿದ್ದು, ಉಸಿರಾಟದ ತೊಂದರೆ, ಹೃದಯ, ಮೂಳೆ, ಕೀಲು ರೋಗದ ತಪಾಸಣೆ ಮಾಡಲಾಗುವುದು ಹಾಗೂ ಉಚಿತವಾಗಿ ಔಷಧಿ, ಇಸಿಜಿ, ಇಕೋ ಮತ್ತು ಮೂಳೆ ಸಾಂಧ್ರತೆಯ ಪರೀಕ್ಷೆ ಮಾಡಲಾಗುವುದು. ಸಾರ್ವಜನಿಕರು ಹೆಸರು ನೋಂದಾಯಿಸಲು ಸಂಜೀವ ರೆಡ್ಡಿ: 9900906390, … Read more

ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಿತ್ತೂರಿನ ರಾಣಿ ಚೆನ್ನಮ್ಮ ಸ್ಮರಣೆ

ಶೌರ್ಯ ಮತ್ತು ಸಾಹಸಕ್ಕೆ ಮತ್ತೊಂದು ಹೆಸರೇ ವೀರಾಗ್ರಣಿ ಕಿತ್ತೂರಿನ ರಾಣಿ ಚೆನ್ನಮ್ಮಜಿ.-ಬಿ ವಾಮದೇವಪ್ಪ, ಅಧ್ಯಕ್ಷರು, ಜಿಲ್ಲಾ ಕಸಾಪ, ದಾವಣಗೆರೆ ಕರ್ನಾಟಕದ ಕನ್ನಡತಿ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿ ಅವರ ವಿರುದ್ಧ ಹೋರಾಟ ಮಾಡಿ ಜಯಗಳಿಸಿದ ಕಿತ್ತೂರಿನ ರಾಣಿ ವೀರಾಗ್ರಣಿ ಎಂದೇ ಪ್ರಸಿದ್ಧರಾದ ಕಿತ್ತೂರಿನ ರಾಣಿ ಚನ್ನಮ್ಮಜಿಯವರ ವಿಜಯೋತ್ಸವದ ಸಂದರ್ಭವನ್ನು ಪ್ರತಿಯೊಬ್ಬರೂ ಸ್ಮರಿಸಲೇಬೇಕು ಎಂದು ಅವರ ಜಯಂತೋತ್ಸವದ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಬಿ. ವಾಮದೇವಪ್ಪ ಅವರು ಅತ್ಯಂತ ಗೌರವ ಭಾವನೆಯಿಂದ ಚನ್ನಮ್ಮಾಜಿ ಅವರ ಗುಣಗಾನ … Read more

ಪಿ. ರಾಜಕುಮಾರ್ ನಿಧನಕ್ಕೆ‌ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಂತಾಪ

ಸುದ್ದಿ360 ದಾವಣಗೆರೆ ಅ.23 : ಮಾಜಿ ಸಿಎಂ ಸಿದ್ದರಾಮಯ್ಯರ ಆಪ್ತರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಪಿ. ರಾಜಕುಮಾರ್ ಅವರ ನಿಧನಕ್ಕೆ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್‌. ಎಸ್. ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ. ಮಂಜಪ್ಪ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ಸೇರಿದಂತೆ ಪಾಲಿಕೆ ಸದಸ್ಯರು ಸಂತಾಪ ಸೂಚಿಸಿದ್ದಾರೆ‌. ಕುರುಬರ ಸಂಘದ ನಿರ್ದೇಶಕರಾಗಿದ್ದ ಪಿ. ರಾಜಕುಮಾರ್ ಅವರು ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ … Read more

ಕಾಂಗ್ರೆಸ್‌ ಮುಖಂಡ ರಾಜ್ ಕುಮಾರ್ ಹೃದಯಾಘಾತದಿಂದ ನಿಧನ

ಸುದ್ದಿ360 ದಾವಣಗೆರೆ, ಅ.23: ಕಾಂಗ್ರೆಸ್ ಮುಖಂಡರು, ಮಾವು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು ಕುರುಬ ಸಮಾಜದ ಮುಖಂಡರು ಪ್ರದೇಶ ಕುರುಬ ಸಂಘದ ನಿರ್ದೇಶಕರು ಹಾಗೂ ಕನಕ ಬ್ಯಾಂಕಿನ ಮಾಜಿ ಅಧ್ಯಕ್ಷರು. ನಿರ್ದೇಶಕರಾದ ಪಿ ರಾಜ್ ಕುಮಾರ್ (63) ಅವರು ಶನಿವಾರ ತಡರಾತ್ರಿ ವಿಧಿವಶರಾಗಿದ್ದಾರೆ. ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಸ್ಪತ್ರೆಗೆ ಹೋಗುವಷ್ಟರಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರ ಪಾರ್ಥಿವ ಶರೀರವನ್ನು ಶಾಮನೂರಿನ ಜರಿಕಟ್ಟೆ ರಸ್ತೆ .ಜೆ.ಹೆಚ್. ಪಟೇಲ್ ಬಡಾವಣೆಯ ಅವರ ಸ್ವಂತ ಮನೆಯಲ್ಲಿ ಮಧ್ಯಾಹ್ನ ಎರಡು ಗಂಟೆಯ … Read more

ಆನಂದ ಮಾಮನಿಯವರ ನಿಧನದಿಂದ ಉತ್ತಮ ಜನಪ್ರತಿನಿಧಿಯನ್ನು ಕಳೆದುಕೊಂಡಂತಾಗಿದೆ: ಸಿಎಂ

ಸುದ್ದಿ360 ಬೆಂಗಳೂರು, ಅ. 23 : ವಿಧಾನಸಭೆ ಉಪಾಧ್ಯಕ್ಷರಾಗಿದ್ದ ಆನಂದ ಮಾಮನಿ ಅವರ ನಿಧನದಿಂದ ಉತ್ತಮ ಜನಪ್ರತಿನಿಧಿಯನ್ನು ಹಾಗೂ ಕರ್ನಾಟಕ ರಾಜ್ಯ ಬೆಳೆಯುತ್ತಿರುವ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್. ಟಿ. ನಗರ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ :ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ಅವರ ನಿಧನ ದುರ್ದೈವದ ಸಂಗತಿ. ಅವರ ಪಾರ್ಥಿವ ಶರೀರ ಅವರ ಸ್ವಕ್ಷೇತ್ರವಾದ ಸವದತ್ತಿಗೆ ಒಯ್ಯಲಾಗಿದೆ. ಸಕಲ ಸರ್ಕಾರಿ … Read more

ಕಾಂಗ್ರೆಸ್ಸಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.23: ಕಾಂಗ್ರೆಸ್ ಪಕ್ಷದವರದ್ದು ಹೆಜ್ಜೆ ಹೆಜ್ಜೆಗೂ ಸ್ಕ್ಯಾಮ್ಗಳಿವೆ. ಕಾಂಗ್ರೆಸ್ಸಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸಭೆಯ ಅಧಿವೇಶನ ಮುಕ್ತಾಯವಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಪಕ್ಷದ ವತಿಯಿಂದ ಪುಸಕ್ತವನ್ನೇ ಬಿಡುಗಡೆ ಮಾಡಿದ್ದೆವು. ಅವರು ಭ್ರಷ್ಟರಾಗಿದ್ದುಕೊಂಡು ಅಭಿಯಾನ ಮಾಡುತ್ತಾರಂತೆ. ಯಾವ ಅಭಿಯಾನವನ್ನಾದರೂ ಮಾಡಲಿ, ಕೊನೆಗೆ ಸತ್ಯಕ್ಕೆ ಜಯ ಸಿಗಲಿದೆ. ಒಂದು ಸಣ್ಣ ಪುರಾವೆ ಇಲ್ಲದೆ ಮಾತನಾಡುವ ಈ ಪ್ರವೃತ್ತಿ ಬಹಳ … Read more

ಜಾತಿ ಪ್ರಮಾಣಪತ್ರಕ್ಕೆ ಶಾಲಾ ದಾಖಲೆ ಪ್ರಮುಖವಲ್ಲ – ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ಬೇಡುವ ಜಂಗಮರೆಂದು ಎಸ್ಸಿ ಪ್ರಮಾಣಪತ್ರಕ್ಕೆ ಅರ್ಜಿಗಳ ರಾಶಿ ಸುದ್ದಿ360 ದಾವಣಗೆರೆ, ಸೆ. 21: ಮಕ್ಕಳನ್ನು ಶಾಲೆಗೆ ಸೇರಿಸುವಾಗ ಪೋಷಕರು ಹೇಳುವ ಜಾತಿಯನ್ನೇ ನಮೂದಿಸಿಕೊಳ್ಳುತ್ತಾರೆ. ಪೋಷಕರ ಜಾತಿಯನ್ನು ಪ್ರಶ್ನಿಸುವ ಅಧಿಕಾರ ಶಾಲೆಗಳಿಗೆ ಇರುವುದಿಲ್ಲ. ಅಲ್ಲದೆ, ಜಾತಿ ಪ್ರಮಾಣಪತ್ರ ನೀಡುವಾಗ ಶಾಲಾ ದಾಖಲೆಗಳನ್ನು ಪ್ರಮುಖ ಎಂದು ಪರಿಗಣಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಮಿತಿ ಸದಸ್ಯ ಕುಂದವಾಡ ಮಂಜುನಾಥ್, … Read more

error: Content is protected !!