ಓಬಿಸಿ ಪಟ್ಟಿಯಲ್ಲಿ ಸೇರಿಸುವಂತೆ ವೀರಶೈವ ಲಿಂಗಾಯತ ಸಮುದಾಯದಿಂದ ಪ್ರತಿಭಟನೆ – ಮನವಿ

ಸುದ್ದಿ360, ದಾವಣಗೆರೆ ಆ. 01: ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಪಂಗಡಗಳನ್ನು ಕೇಂದ್ರ ಸರ್ಕಾರದ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿ ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಜಮಾಯಿಸಿದ ವೀರಶೈವ ಲಿಂಗಾಯುತ ಸಮುದಾಯದವರು, ಅವರಗೊಳ್ಳ ಪುರ ವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ತಾವರಗೆರೆ ಸಿದ್ಧಲಿಂಗ ಶಿವಾಚಾರ್ಯ ಶ್ರೀ, ಚನ್ನಗರಿ ಕೇದಾರ ಶಿವ ಶಾಂತವೀರ ಶ್ರೀ ಇವರುಗಳನ್ನೊಳಗೊಂಡ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಗಳ ಮೆರವಣಿಗೆ ಮೂಲಕ ಕಚೇರಿ ತಲುಪಿದರು. ಉಪವಿಭಾಗಾಧಿಕಾರಿಗಳ ಮೂಲಕ … Read more

ಭೋವಿ ಕುಲಕಸುಬಿಗೆ ವಿಶೇಷ ಅವಕಾಶ ಹಾಗೂ ರಿಯಾಯ್ತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ದಾವಣಗೆರೆ ಆ. 01: ತಳವರ್ಗದ ಸಮುದಾಯಗಳಿಗೆ ಶ್ರೀಮಂತಿಕೆ ಬರುವಂತೆ ನೋಡಿಕೊಳ್ಳುವ ಮೂಲಕ ಸಮತೋಲನದ ಸಮೃದ್ಧಿಯ ರಾಜ್ಯದ ನಿರ್ಮಾಣ ಸಾಧ್ಯ. ತಳಸಮುದಾಯದ ಅಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಸರ್ಕಾರ ಹಮ್ಮಿಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಗುರುಪೀಠವು ಸಮಾಜವನ್ನು ಒಗ್ಗೂಡಿಸಿ ಏಳಿಗೆಯ ಪಥದಲ್ಲಿ ಮುನ್ನಡೆಸುತ್ತಿದೆ. ಎಲ್ಲ ಜನಾಂಗಗಳ ಅಭಿವೃದ್ಧಿಯಾದಾಗ ಮಾತ್ರ ನಾಡು ಅಭಿವೃದ್ಧಿಯಾಗುತ್ತದೆ. ಕೆಳಸ್ತರದ ಹಾಗೂ ಶಿಕ್ಷಣ, ಆರೋಗ್ಯ ಹಾಗೂ ಆರ್ಥಿಕವಾಗಿ … Read more

ಮಂಕಿಪಾಕ್ಸ್ : ನಾಳೆ ಮಹತ್ವದ ಸಭೆ

ಸುದ್ದಿ360 ದಾವಣಗೆರೆ, ಆ. 01: ಮಂಕಿಪಾಕ್ಸ್ ಸಾಂಕ್ರಾಮಿಕವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಕುರಿತು ನಾಳೆ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ದಾವಣಗೆರೆಗೆ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಂತಹ ಸಂದರ್ಭ ಜಿಎಂಐಟಿ ಹಲಿಪ್ಯಾಡ್ ನಲ್ಲಿ  ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ವಿಶೇಷವಾಗಿ ಪ್ರಯಾಣಿಕರ ತಪಸಾಣೆ ಮತ್ತು ಬೇರೆ ಬೇರೆ ಕ್ರಮಗಳ ಬಗ್ಗೆ ನಾಳೆ ಮಹತ್ವದ ಸಭೆಯನ್ನು ಆರೋಗ್ಯ ಸಚಿವರನ್ನೊಳಗೊಂಡ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಲಾಗುವುದು. ಈ ವೇಳೆ … Read more

ನಮ್ಮದು ರಾಷ್ಟ್ರೀಯ ಪಕ್ಷ – ರಾಷ್ಟ್ರೀಯತೆಯೇ ನಮ್ಮ ನಿಲುವು: ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ, ಆ. 01: ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆಯೇ ನಮ್ಮ ನಿಲುವು. ಯಾರಿಗೂ ಬೇಧ-ಭಾವ ಮಾಡುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ತಿಳಿಸಿದರು. ಇಂದು ದಾವಣಗೆರೆಗೆ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಂತಹ ಸಂದರ್ಭ ಜಿಎಂಐಟಿ ಹಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾರಿಗೂ ಬೇಧಭಾವ ಮಾಡುವ ಮಾತೇ ಇಲ್ಲ. ಅಂತಹ ವಿಚಾರಗಳು ಹಿಂದಿನ ಸರ್ಕಾರಗಳು ಅವರ ಕಾಲದಲ್ಲಿ ಏನೇನು ಮಾಡಿದ್ದಾರೆ ಅದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಅವರು ಸುದ್ದಿಗಾರರ … Read more

ಸಿದ್ದರಾಮಯ್ಯ ಅಮೃತ ಮಹೋತ್ಸವ: ಎಸ್ ಎಸ್ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಬೃಹತ್ ಬೈಕ್ ರ್ಯಾಲಿ

ಸುದ್ದಿ360 ದಾವಣಗೆರೆ ಜು.31: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ ಹಿನ್ನೆಲೆ ಆ.1ರ ಸೋಮವಾರ ಮಧ್ಯಾಹ್ನ 2.30 ಗಂಟೆಗೆ ಆನೆಕೊಂಡದ ಬಸವೇಶ್ವರ ದೇವಸ್ಥಾನದ ಆವರಣದಿಂದ ಬೃಹತ್ ಬೈಕ್ ರ್ಯಾಲಿಯನ್ನು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಆನೆಕೊಂಡದ ಬಸವೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಕೊರಚರಹಟ್ಟಿ, ಅರಳಿಮರ ಸರ್ಕಲ್, ಹಳೆ ಬೇತೂರ್ ರಸ್ತೆ, ಭಾಷಾ ನಗರ ಮುಖ್ಯ ರಸ್ತೆ ಮುಖಾಂತರ ಅಕ್ಬರ್ ರಾಜ್ ಸರ್ಕಲ್, ಎಸ್. ಪಿ.ಎಸ್ ನಗರ, ಹೊಂಡದ ಸರ್ಕಲ್ ಮಾರ್ಗವಾಗಿ ಚೌಕಿಪೇಟೆ, ಬಂಬೂ … Read more

22 ವರ್ಷಗಳಿಂದ ಸ್ನಾನ ತೊರೆಯಲು ಈತ ಮಾಡಿದ ಪ್ರತಿಜ್ಞೆಯಾದರೂ ಏನು. . .?

ಸುದ್ದಿ360 ಗೋಪಾಲಗಂಜ್ (ಬಿಹಾರ) ಜು.31:  ಒಂದು ದಿನ ಸ್ನಾನ ಮಾಡದೇ ಇದ್ದರೂ ಚಡಪಡಿಕೆಗೆ ಒಳಗಾಗುವವರನ್ನು ನೋಡಿದ್ದೇವೆ ಮತ್ತು ಅನುಭವಿಸಿಯೂ ಇದ್ದೇವೆ. ಇಲ್ಲೊಬ್ಬ ವ್ಯಕ್ತಿ ಒಂದು ದಿನ. . . . ತಿಂಗಳು. . . ವರ್ಷ. . .  !? ಅಲ್ಲವೇ ಅಲ್ಲ ಬರೋಬ್ಬರಿ 22 ವರ್ಷಗಳಿಂದ ಸ್ನಾನ ಮಾಡುವುದನ್ನು ನಿಲ್ಲಿಸಿ, ಆರೋಗ್ಯವಾಗಿಯೇ ಇದ್ದಾರೆ. ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯ ಮಂಜಾ ಬ್ಲಾಕ್ ನಲ್ಲಿರುವ ಬೈಕುಂತ್ ಪುರ ಗ್ರಾಮದ 62 ವರ್ಷದ ಧರಂದೇವ್ ರಾಮ್ ಈ ರೀತಿಯಾಗಿ … Read more

ಶಿವಯೋಗಿ ಸಿದ್ಧರಾಮೇಶ್ವರರ ಸಾಮಾಜಿಕ ಕ್ರಾಂತಿ ಇಂದಿಗೂ ಶಾಶ್ವತ: ಬಸವಪ್ರಭುಶ್ರೀ

ಸುದ್ದಿ360, ದಾವಣಗೆರೆ ಜು.30: 12 ನೇ ಶತಮಾನದಲ್ಲಿ ಶಿವಯೋಗಿ ಸಿದ್ದರಾಮೇಶ್ವರು ಅನುಷ್ಠಾನಗೊಳಿಸಿದ ಸಾಮಾಜಿಕ ಕ್ರಾಂತಿ ಇಂದಿಗೂ ಶಾಶ್ವತವಾಗಿದೆ ಎಂದು ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಹೇಳಿದರು. ದಾವಣಗೆರೆಯ ವೆಂಕಾ ಭೋವಿ ಕಾಲೋನಿಯಲ್ಲಿರುವ ಶಿವಯೋಗಿ ಸಿದ್ದರಾಮೇಶ್ವರ ಸಂಸ್ಥಾನ ಮಠದಲ್ಲಿ ನಡೆದ 60 ನೇ ವರ್ಷದ ರಥೋತ್ಸವ ಅಂಗವಾಗಿ ಲಿಂ. ಶ್ರೀ ಸಿದ್ದರಾಮೇಶ್ವರ ಮಹಾಸ್ವಾಮಿಗಳವರ ಅಮೃತ ಶಿಲೆಯ ಮೂರ್ತಿ ಪ್ರತಿಷ್ಠಾಪನೆ ಸಮಾರಂಭದ  ಸಮ್ಮುಖ ವಹಿಸಿಕೊಂಡು ಮಾತನಾಡಿದರು. ಮಹಾಯೋಗಿಯಾದ ಶಿವಯೋಗಿ ಸಿದ್ದರಾಮರು ಬಳಿ ಬಂದವರಿಗೆ ಆಶೀರ್ವದಿಸಿ ಜನರನ್ನು ಉದ್ದರಿಸಿದ್ದಾರೆ. ಅಷ್ಟೇ ಅಲ್ಲದೇ ಕೆರೆಗಳನ್ನು … Read more

ಜಿಎಂ ಫಾರ್ಮಸಿ ಕಾಲೇಜಿನಲ್ಲಿ ಅಂತರ ವಲಯ ಕಬಡ್ಡಿ ಪಂದ್ಯಾವಳಿ

ಸುದ್ದಿ360, ದಾವಣಗೆರೆ ಜು.30: ನಗರದ ಜಿಎಂ ಫಾರ್ಮಸಿ ಕಾಲೇಜಿನಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಅಡಿಯಲ್ಲಿ ಬೆಳಗಾಂ ಜೋನ್ ಅಂತರ ವಲಯ ಕಬ್ಬಡ್ಡಿ ಪಂದ್ಯಾವಳಿಗಳು ಇದೇ ಮೊದಲ ಬಾರಿ ಜಿಎಂ ಫಾರ್ಮಸಿ ಕಾಲೇಜಿನ ಮೈದಾನದಲ್ಲಿ ಏರ್ಪಡಿಸಲಾಗಿತ್ತು. ಎಲ್ಲಾ ಆಟಗಾರರಿಗೂ ಪಂದ್ಯಾವಳಿಗೆ ಅಗತ್ಯ ಸೌಲಭ್ಯವನ್ನು ಒದಗಿಸಿದ್ದು, ಯಾವುದೇ ಅಡಚಣೆಗೂ ಅವಕಾಶವನ್ನು ಕೊಡದೆ ವ್ಯವಸ್ಥಿತವಾಗಿ ಪಂದ್ಯಾವಳಿಗಳನ್ನು ಆಯೋಜಿಸಲಾಗುತ್ತಿದ್ದು, ಪಂದ್ಯಾವಳಿಗಳು ಯಶಸ್ವಿಯಾಗಿ ಮುಕ್ತಾಯವಾಗಲಿದೆ. ಸುಮಾರು ಇಪ್ಪತ್ತಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದು, ಬೆಂಗಳೂರು, ಚಿತ್ರದುರ್ಗ, ಗದಗ ದಾವಣಗೆರೆ, ಬಳ್ಳಾರಿ ಹೀಗೆ ವಿವಿಧ ಜಿಲ್ಲೆಗಳಿಂದ ವಿದ್ಯಾರ್ಥಿಗಳು … Read more

ಜಿಎಂಎಸ್ ಅಕ್ಯಾಡೆಮಿ: ಐಐಟಿ ರೂರ್ಕೇ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗ ತರಬೇತಿ

ಸುದ್ದಿ360, ದಾವಣಗೆರೆ ಜು.30: ನಗರದ ಜಿಎಂಎಸ್ ಅಕ್ಯಾಡೆಮಿ ಫಸ್ಟ್ ಗ್ರೇಡ್ ಡಿಗ್ರಿ ಕಾಲೇಜ್ ವತಿಯಿಂದ ವಿದ್ಯಾರ್ಥಿಗಳಿಗೆ ಒಂದು ದಿನದ ಕೈಗಾರಿಕಾ ಕೌಶಲ್ಯತೆ ಗಳು ಮತ್ತು ಸಂದರ್ಶನ ಪ್ರಕ್ರಿಯೆಗಳ ಬಗ್ಗೆ ಐಐಟಿ ರೂರ್ಕೇ ಸಹಯೋಗದಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿತ್ತು. ಪ್ರಾಂಶುಪಾಲರಾದ ಶ್ವೇತ ಮರಿಗೌಡರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸ್ವಭಾವ ಮತ್ತು ನಡತೆ ಉತ್ತಮವಾಗಿ ಇಟ್ಟುಕೊಂಡಲ್ಲಿ ಏನನ್ನಾದರೂ ಸಾಧಿಸಬಹುದೆಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ತರಬೇತುದಾರರಾದ ಶ್ರೀಮತಿ ಮನಿಷಾ ಬೆಲಾನಿ ಆಗಮಿಸಿದ್ದರು. ಜಿಎಂಐಟಿ ಕಾಲೇಜಿನ ತರಬೇತಿ ಮತ್ತು ಉದ್ಯೋಗ … Read more

ರಾಜಕೀಯ ಕಾರಣಕ್ಕೆ ಕೊಲೆಗಳಾಗುತ್ತಿರುವುದು ನಮ್ಮ ದೌರ್ಬಾಗ್ಯ: ಸಚಿವ ಜೆ.ಸಿ. ಮಾಧುಸ್ವಾಮಿ

ಚುನಾವಣಾ ವರ್ಷವಾದ್ದರಿಂದ ಪ್ರಚೋದನೆಗಳು ಹೆಚ್ಚಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಲಿದೆ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ಸುದ್ದಿ360, ದಾವಣಗೆರೆ ಜು.30: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿಲ್ಲ. ಕೆಲವೇ ಘಟನೆ ಹೊರತುಪಡಿಸಿದರೆ, ಕಾಂಗ್ರೆಸ್ ಕಾಲದಲ್ಲಿ ನಡೆದಷ್ಟು ಪ್ರತಿಭಟನೆ, ಹೋರಾಟ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿಲ್ಲ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೊಲೆಗಳಾಗಿದ್ದಕ್ಕೆ … Read more

error: Content is protected !!