ದಾವಣಗೆರೆಯಲ್ಲಿಯೇ ವಿಶ್ವ ಕನ್ನಡ ಸಮ್ಮೇಳನಕ್ಕೆ ಭಗೀರಥ ಪ್ರಯತ್ನ- ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಹೇಶ್ ಜೋಷಿ ಹೇಳಿಕೆ

ಸುದ್ದಿ360 ದಾವಣಗೆರೆ, ಜು.29: ದಾವಣಗೆರೆಯಲ್ಲಿಯೇ ವಿಶ್ವ ಕನ್ನಡ ಸಮ್ಮೇಳನ ಮಾಡಲು ಭಗೀರಥ ಪ್ರಯತ್ನ ಮಾಡುವುದಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಹೇಳಿದರು. ನಗರದ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಾಗನೂರು ಬಸಪ್ಪ ಪ್ರತಿಷ್ಠಾನದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ, ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾಗಿ, ನನ್ನ 5 ವರ್ಷದ ಅವಧಿಯೊಳಗೆ ಸ್ಥಳ ಬದಲಾವಣೆ ಇಲ್ಲದೆ, ಇಲ್ಲಿಯೇ ವಿಶ್ವ … Read more

ದಾವಣಗೆರೆ: ಹಿಂದೂ ಮಹಾಗಣಪತಿ – 5ನೇ ವರ್ಷದ ಗಣೇಶೋತ್ಸವಕ್ಕೆ ಹಂದರ ಕಂಬ ಪೂಜೆ

ಸುದ್ದಿ360 ದಾವಣಗೆರೆ, ಜು.29: ನಗರದ ಹಿಂದೂ ಮಹಾಗಣಪತಿ ಟ್ರಸ್ಟ್ ನಿಂದ 5ನೇ ವರ್ಷದ ಗಣಪತಿ ಹಬ್ಬದ ಆಚರಣೆಗೆ ಇಂದು ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆ ಮೈದಾನದಲ್ಲಿ ಮಹಾಮಂಟಪದ ಹಂದರ ಕಂಬ ಪೂಜೆ ಸಲ್ಲಿಸಲಾಯಿತು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಮಾಜಿ ಸಚೇತಕ ಡಾ.ಎ.ಹೆಚ್.ಶಿವಯೋಗಿಸ್ವಾಮಿ, ಹಿಂದೂ ಮಹಾಗಣಪತಿ ಟ್ರಸ್ಟ್ ನ ಅಧ್ಯಕ್ಷ ಜೊಳ್ಳಿಗುರು ಸೇರಿದಂತೆ ಇತರೆ ಗಣ್ಯರು ಹಂದರ ಕಂಬಕ್ಕೆ ಹಾಲು ಬಿಟ್ಟು ಪೂಜಾ ಕಾರ್ಯಕ್ರಮ ನೆರವೇರಿಸುವ ಮೂಲಕ ಗಣೇಶೋತ್ಸವ ಮಹಾಮಂಟಪಕ್ಕೆ  ಚಾಲನೆ ನೀಡಿದರು. ಕೊಲ್ಕತ್ತಾ ಕಲಾವಿದರಿಂದ ಮಹಾಮಂಟಪ ನಂತರ … Read more

ಸುರತ್ಕಲ್: ಯುವಕನ ಬರ್ಬರ ಹತ್ಯೆ – ಬಿಗಿ ಬಂದೋಬಸ್ತ್

ಸುದ್ದಿ360 ಮಂಗಳೂರು ಜು.28 : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ ಮುಡಾ ಮಾರ್ಕೆಟ್ ಬಳಿ ಕಾರಿನಲ್ಲಿ ಬಂದ ಅಪರಿಚಿತರ ತಂಡವೊಂದು ಮಾರಕಾಸ್ತ್ರಗಳಿಂದ ಯುವಕೊಬ್ಬನ ಮೇಲೆರಗಿ ಕೊಲೆ ಮಾಡಿ ಪರಾರಿಯಾಗಿದೆ. ದಾಳಿಯಿಂದ  ಗಂಭೀರ ಗಾಯಗೊಂಡ ಯುವಕನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಕಾಟಿಪಳ್ಳ ಮಂಗಳಪೇಟೆ ನಿವಾಸಿ ಮಹಮ್ಮದ್ ಫಾಝಿಲ್ (23) ಹತ್ಯೆಗೀಡದ ಯುವಕ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ 7.30ರ ಸುಮಾರಿಗೆ ಫಾಝಿಲ್ ಚಪ್ಪಲಿ ಖರೀದಿಸಲೆಂದು ಮುಡಾ ಮಾರ್ಕೆಟ್ ಬಳಿಯ ಚಪ್ಪಲಿ ಅಂಗಡಿಗೆ … Read more

ಕರ್ನಾಟಕಕ್ಕೆ ಎನ್ ಐ ಎ ಅಗತ್ಯತೆ ಕುರಿತು ಕೇಂದ್ರಕ್ಕೆ ಮನವರಿಕೆ

ಪಿಎಫ್ಐ ಬ್ಯಾನ್ ಕೇಂದ್ರದಿಂದ ಶೀಘ್ರ ಕ್ರಮ: ಮುಖ್ಯಮಂತ್ರಿ ವಿಶ್ವಾಸ ಸುದ್ದಿ360 ಮಂಗಳೂರು, ಜುಲೈ 28 : ಕರ್ನಾಟಕ ರಾಜ್ಯಕ್ಕೆ ರಾಷ್ಟ್ರೀಯ ತನಿಖಾ ದಳವನ್ನು ಒದಗಿಸಲು ಕೋರಲಾಗಿದೆ. ವಿಶೇಷವಾಗಿ ಮಂಗಳೂರು ಭಾಗಕ್ಕೆ ಎನ್ ಐ ಎ ಯ ಅವಶ್ಯಕತೆ ಇದೆ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ಮಾಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಾಥಮಿಕ ತನಿಖಾ … Read more

ದಾವಣಗೆರೆಯಲ್ಲಿ ‘ದ ಜ್ಯುವೆಲರಿ ಷೋ’ ವಿನೂತನ ಆಭರಣ ಪ್ರದರ್ಶನ ಮತ್ತು ಮಾರಟ

ಸುದ್ದಿ360 ದಾವಣಗೆರೆ, ಜು.28: ದೇಶದ 15 ಅಗ್ರಶ್ರೇಣಿಯ ಆಭರಣ ತಯಾರಕರು ಭಾಗವಹಿಸುತ್ತಿರುವ “ದ ಜ್ಯುವೆಲರಿ ಷೋ” ಪ್ರದರ್ಶನ ಮತ್ತು ಮಾರಟ ಇದೇ ಜುಲೈ 29, 30 ಮತ್ತು 31ರಂದು ದಾವಣಗೆರೆಯ ‘ಎಸ್ ಎಸ್ ಕನ್ವೆಂಷನ್ ಸೆಂಟರ್’ ನಲ್ಲಿ ಆಯೋಜಿಸಲಾಗಿದೆ. ಅಮೋಘ ಭಾರತೀಯ ಒಡವೆಗಳ ಉತ್ಸವವನ್ನು ಜನಪ್ರಿಯ ನಟಿ ಧನ್ಯ ರಾಮ್‌ ಕುಮಾರ್ ಅವರು ಆಭರಣ ಮೇಳವನ್ನು ಜುಲೈ 29 ಮಧ್ಯಾಹ್ನ 12:30ಕ್ಕೆ ಉದ್ಘಾಟಿಸಲಿದ್ದಾರೆ. ಈ ಮೇಳದಲ್ಲಿ ಪ್ರಶಸ್ತಿ ವಿಜೇತ ಹಾಗೂ ಹೆಸರಾಂತ ಆಭರಣ ಮಳಿಗೆಗಳವರು ಭಾಗವಹಿಸುತ್ತಿದ್ದಾರೆ. ಅಲ್ಲದೆ … Read more

ಪ್ರವೀಣ್ ಹತ್ಯೆ ಯೋಜನಾಬದ್ಧವಾದ ಭಯೋತ್ಪಾದಕ ಕೃತ್ಯ: ಮುಖ್ಯಮಂತ್ರಿ ಬೊಮ್ಮಾಯಿ

ಸರ್ಕಾರ ಮತ್ತು ಬಿಜೆಪಿ ಪಕ್ಷದಿಂದ ತಲಾ 25 ಲಕ್ಷ ರೂ ಚೆಕ್ ಪ್ರವೀಣ್ ಕುಟುಂಬಕ್ಕೆ ಸುದ್ದಿ360 ಮಂಗಳೂರು, ಜು. 28 : ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಅವರು ಇಂದು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ಮಾಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರವೀಣ್ ತಮ್ಮ … Read more

ಸೂತಕದ ಛಾಯೆ ನಡುವೆಯೇ ರಾಜ್ಯ ಬಿಜೆಪಿ ಸರ್ಕಾರದಿಂದ ನೂತನ ಯೋಜನೆಗಳ ಲೋಕಾರ್ಪಣೆ

ಎಸ್ ಸಿ /ಎಸ್ ಟಿ ಸಮುದಾಯಗಳಿಗೆ 75 ಯೂನಿಟ್ ಉಚಿತ ವಿದ್ಯುತ್ , ಸ್ವಯಂ ಉದ್ಯೋಗ ಯೋಜನೆ , 8000 ಶಾಲಾ ಕೊಠಡಿಗಳ ನಿರ್ಮಾಣ, ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣ, ‘ಸ್ತ್ರೀ ಸಾಮರ್ಥ್ಯ’ ಯೋಜನೆ, ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ, ಪುಣ್ಯಕೋಟಿ ದತ್ತು ಯೋಜನೆ, ವಿದ್ಯಾನಿಧಿ ಯೋಜನೆ.

ಡಾ.ತೋಂಟದ ಸಿದ್ಧರಾಮ ಶ್ರೀಗಳಿಗೆ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ (ಜು.29)

ಸುದ್ದಿ360 ದಾವಣಗೆರೆ. ಜು.28: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಾಗನೂರು ಬಸಪ್ಪ ಪ್ರತಿಷ್ಠಾನದ ವತಿಯಿಂದ 29ರ ಬೆಳಗ್ಗೆ 11ಕ್ಕೆ ನಗರದ ಕುವೆಂಪು ಕನ್ನಡ ಭವನದಲ್ಲಿ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ಮಾಹಿತಿ ನೀಡಿದರು. ಇಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದ ಸಾನಿಧ್ಯ ವಹಿಸಲಿರುವ ಗದಗ ತೋಂಟದಾರ್ಯ ಮಠದ ಡಾ.ತೋಂಟದ ಸಿದ್ಧರಾಮ ಶ್ರೀಗಳಿಗೆ ಈ ಬಾರಿ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ … Read more

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆ ಕೊಲೆ ಪ್ರಕರಣ: ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾಹಿತಿ

ಸುದ್ದಿ360 ಮಂಗಳೂರು, ಜು.28: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರವೀಣ್ ಪರಿವಾರಕ್ಕೆ ಸಾಂತ್ವನ ಹೇಳುವ ಮತ್ತು ಅವರೊಂದಿಗೆ ಮಾತುಕತೆ ನಡೆಸಿ, ಪರಿಸ್ಥಿತಿಯ ಅವಲೋಕಿಸುವ ಉದ್ದೇಶದಿಂದ ಮಂಗಳೂರಿಗೆ ತೆರಳಿ ಅಲ್ಲಿಂದ ಬೆಳ್ಳಾರೆ ಗ್ರಾಮಕ್ಕೆ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮುಖ್ಯಮಂತ್ರಿ ಬೊಮ್ಮಾಯಿಯವರು ಮಾತನಾಡಿದರು. ಇದರ ಒಂದು ವೀಡಿಯೋ ಬೈಟ್ ನಿಮಗಾಗಿ.

ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ರದ್ದು

ಪ್ರವೀಣ್ ಹತ್ಯೆ ಘಟನೆ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನ ಆತ್ಮಸಾಕ್ಷಿಯಾಗಿ ರದ್ದು ಮಾಡಲಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360 ಬೆಂಗಳೂರು, ಜು. 28: ಭಾರತೀಯ ಜನತಾ ಪಕ್ಷದ ಯುವ ಮುಖಂಡ  ಪ್ರವೀಣ್ ಹತ್ಯೆ ಆದ ನಂತರ ಜನ ಹಾಗೂ ಕಾರ್ಯಕರ್ತರು ವ್ಯಕ್ತಪಡಿಸಿರುವ ಆಕ್ರೋಶದ ಹಿನ್ನೆಲೆಯಲ್ಲಿ ಬ್ಯಾಂಕ್ವೆಟ್ ಹಾಲಿನಲ್ಲಿ ಮತ್ತು ಪಕ್ಷದ ವತಿಯಿಂದ  ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮಗಳನ್ನು ಆತ್ಮಸಾಕ್ಷಿಯಾಗಿ ನಿರ್ಣಯ ಕೈಗೊಂಡು ರದ್ದು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರಕ್ಕೆ … Read more

error: Content is protected !!