ಮೆಟ್ರೋ ಕಾಮಗಾರಿ ದುರಂತ: ಅಧಿಕಾರಿ, ಗುತ್ತಿಗೆದಾರರ ಮೇಲೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು ಜ.10: ಮೆಟ್ರೊ ಕಾಮಗಾರಿ ದುರಂತಕ್ಕೆ ಕಾರಣರಾದ  ಹಿರಿಯ ಅಧಿಕಾರಿಗಳು, ಮುಖ್ಯಸ್ಥರ ಮೇಲೆ ಕ್ರಮಕೈಗೊಳ್ಳಲು ಸೂಚಿಸಿದ್ದು,  ಗುತ್ತಿಗೆದಾರ ಮೇಲೆ ಪ್ರಕರಣ ದಾಖಲಿಸುವುದರ ಜೊತೆಗೆ ಉನ್ನತ ಮಟ್ಟದ ತನಿಖೆ ಮಾಡುವಂತೆಯೂ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಪ್ರಶ್ನೆ ಇರುವುದು ಇಷ್ಟು ಅಸುರಕ್ಷಿತವಾಗಿ ಹೇಗೆ  ಕೆಲಸ ಮಾಡಿದರು ಎನ್ನುವುದನ್ನು ಪತ್ತೆ ಹಚ್ಚಿ, ಮುಂದೆ ಹೀಗಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತನಿಖೆ ಹಾಗೂ ತಾಂತ್ರಿಕ ಲೋಪದ ಏನು ಎಂಬುದರ ಬಗ್ಗೆ ಕ್ರಮ … Read more

ಜ.12 ರಂದು ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ

ಸುದ್ದಿ360 ಬೆಂಗಳೂರು, ಜ.3: ಪ್ರಧಾನಿ ನರೇಂದ್ರ ಮೋದಿಯವರು ಜನವರಿ 12 ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ  ಹಿಂದಿರುಗಲಿದ್ದಾರೆ ಎಂದು ತಿಳಿಸಿದರು. ಜ.19 ರಂದು ಪ್ರಧಾನಿ ಮೋದಿಯವರು ನಾರಾಯಣಪುರ … Read more

ಇಬ್ಬರು ಮಕ್ಕಳ ಜೊತೆಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ

ಸುದ್ದಿ360 ಕಲಬುರಗಿ ಜ.6: ಜೀವನದಲ್ಲಿ ಜಿಗುಪ್ಸೆಗೊಂಡು ಇಬ್ಬರು ಮಕ್ಕಳ ಜೊತೆಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಆಳಂದ ಪಟ್ಟಣದ ಬಸ್ ಡಿಪೋ ಬಳಿ ನಡೆದ ಘಟನೆಯಲ್ಲಿ ಸಿದ್ದು ಮಹಾಮಲ್ಲಪ್ಪಾ (35), ಹಾಗೂ ಮಕ್ಕಳಾದ ಶ್ರೇಯಾ (11), ಮನೀಶ್ (12) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇಬ್ಬರು ಮಕ್ಕಳ ಮೃತದೇಹವನ್ನು ಶುಕ್ರವಾರ ಬೆಳಿಗ್ಗೆ ಅಗ್ನಿಶಾಮಕ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದು,ಮೃತ ಮಕ್ಕಳ ತಂದೆಯ ಶವಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಮೃತಪಟ್ಟ ತಂದೆ … Read more

ಬಾದಾಮಿಯಿಂದ ಸ್ಪರ್ಧಿಸಿದರೆ ಒಳ್ಳೆಯದಾಗುತ್ತೆ – ಸಿದ್ಧರಾಮಯ್ಯನವರಿಗೆ ಬನಶಂಕರಿ ದೇಗುಲದ ಅರ್ಚಕರ ಮನವಿ

ಸುದ್ದಿ360 ಬಾಗಲಕೋಟೆ ಜ.6: ಮುಂಬರುವ ಚುನಾವಣೆಯಲ್ಲಿ ಬಾದಾಮಿಯಿಂದ ಸ್ಫರ್ಧೆ ಮಾಡಿದರೆ ಸಿದ್ದರಾಮಯ್ಯ ಗೆ ಒಳ್ಳೆಯದಾಗುತ್ತದೆ ಎಂದು ಬಾದಾಮಿ ಬನಶಂಕರಿ ದೇಗುಲದ ಅರ್ಚಕರು ಹೇಳಿದ್ದಾರೆ. ಬನಶಂಕರಿ ಜಾತ್ರೆಯ ಮಹಾರಥೋತ್ಸವ ನಿಮಿತ್ತ ಬಾದಾಮಿಗೆ ಆಗಮಿಸಿದ್ದ ಸಿದ್ದರಾಮಯ್ಯರಿಗೆ ಇಲ್ಲಿನ ಅರ್ಚಕರು ಮನವಿ ಮಾಡಿದ್ದಾರೆ. ಸಿದ್ದರಾಮಯ್ಯನವರಿಂದ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜಾ ಕೈಂಕರ್ಯ ಮುಗಿದ ಬಳಿಕ ಆಶೀರ್ವಾದ ಮಾಡಿದ ಅರ್ಚಕರು ಬಾದಾಮಿಯಿಂದ ಸ್ಫರ್ಧೆ ಮಾಡಿದರೆ ಒಳ್ಳೆಯದಾಗುತ್ತೆ ಎಂದು ಹೇಳಿದ್ದಾರೆ.

ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆಗೆ ಕುಮಾರಣ್ಣ ತಿರುಗೇಟು

ಸುದ್ದಿ360 ಬೀದರ್ ಜ.6: ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆಗೆ ಕುಮಾರಣ್ಣ ಇಂದು ಬೀದರ್ನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅದರ ಒಂದು ವೀಡಿಯೋ ಕ್ಲಿಪ್ ಇಲ್ಲಿದೆ.

ಬನಶಂಕರಿ ನಿನ್ನ ಪಾದಕ ಶಂಭೂಕೋ – ಬನಶಂಕರಿ ರಥೋತ್ಸವಕ್ಕೆ ಸಂಭ್ರಮದ ಚಾಲನೆ

ಸುದ್ದಿ360 ಬಾಗಲಕೋಟೆ ಜ.6: ಜಿಲ್ಲೆಯ ಬಾದಾಮಿಯ ಬನಶಂಕರಿ ರಥೋತ್ಸವಕ್ಕೆ ಶುಕ್ರವಾರ ಸಂಭ್ರಮದ ಚಾಲನೆ ದೊರೆತಿದ್ದು, ಮಾಜಿ ಮುಖ್ಯಮಂತ್ರಿ, ಬಾದಾಮಿ ಶಾಸಕ ಸಿದ್ದರಾಮಯ್ಯ ಪುಷ್ಪಾರ್ಪಣೆ ಮಾಡು ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ರಥೋತ್ಸವದಲ್ಲಿ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ನೆರೆದಿದ್ದ ಜನ ಸಾಗರದಿಂದ “ಬನಶಂಕರಿ ನಿನ್ನ ಪಾದಕ ಶಂಭೂಕೋ” ಎಂಬ ಉದ್ಘೋಷ ಕೇಳಿಬರುತ್ತಿತ್ತು. ಉದ್ಘೋಷದೊಂದಿಗೆ ನಮಿಸಿದ ಭಕ್ತಸಾಗರ ದೇವಿಯ ಕೃಪೆಗೆ ಪಾತ್ರರಾದರು. ಒಂದು ತಿಂಗಳ ಜಾತ್ರೆ ಇದಾಗಿದ್ದು ಇಂದಿನಿಂದ ಅಧಿಕೃತವಾಗಿ ಪ್ರಾರಂಭಗೊಂಡಿದೆ.

ಯಡಿಯೂರಪ್ಪನವರು ಕರ್ನಾಟಕದ ಸರ್ವೊಚ್ಚ ನಾಯಕರು – ಜೆಪಿ ನಡ್ಡಾ

ಸುದ್ದಿ360 ತುಮಕೂರು (ಶಿರಾ) ಜ.6:  80 ಕೋಟಿ ಜನರಿಗೆ ಉಚಿತ ರೇಷನ್ ಕೊಟ್ಟಿರುವ  ಬಿಜೆಪಿ ಸರ್ಕಾರ, ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಧ್ಯೇಯದೊಂದಿಗೆ ಕೆಲಸ ಮಾಡುತ್ತಿದೆ  ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ಶಿರಾ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು,  ಯಡಿಯೂರಪ್ಪನವರು ಕರ್ನಾಟಕದ ಸರ್ವೊಚ್ಚ ನಾಯಕರು. ಎನ್ ಡಿ ಎ ಸರ್ಕಾರ ಬಂದಾಗ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸೇರಿ‌ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ನದ್ದು ಜಾತಿ ಜಾತಿ ಎಂದು ಒಡೆದು … Read more

ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಸರಣಿ ಅಪಘಾತ – ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ – 7 ಕಾರುಗಳು ಜಖಂ

ಸುದ್ದಿ360 ದೇವನಹಳ್ಳಿ, ಜ.6: ರಾಷ್ಟ್ರೀಯ ಹೆದ್ದಾರಿ7ರಲ್ಲಿ ಘಟಿಸಿರುವ ಸರಣಿ ಅಪಘಾತದಿಂದ ಕಿಲೋಮೀಟರ್‍ಗಟ್ಟಲ್ಲೇ ಟ್ರಾಫಿಕ್ ಜಾಮ್ ಆದ ಪರಿಣಾಮ ವಾಹನ ಸವಾರರು ಪೇಚಾಡಬೇಕಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಕೆಂಪೇಗೌಡ ವೃತ್ತದ ಬಳಿ ಈ ಘಟನೆ ನಡೆದಿದ್ದು, ಕಾರುಗಳಿಗೆ ಯದ್ವಾ ತದ್ವಾ ಡಿಕ್ಕಿ ಹೊಡೆದಿರುವ ಟಿಪ್ಪರ್ ನಿಂದಾಗಿ 7 ಕಾರುಗಳ ಸರಣಿ ಅಪಘಾತಕ್ಕೆ ಕಾರಣವಾಯಿತು ಎಂದು ಹೇಳಲಾಗಿದೆ. ಇನ್ನು ಅಪಘಾತ ಸಂಭವಿಸುತ್ತಿದ್ದಂತೆ ಟಿಪ್ಪರ್ ಬಿಟ್ಟು ಚಾಲಕ  ಎಸ್ಕೇಪ್ ಆಗಿದ್ದು, ಪೊಲೀಸರು ಟಿಪ್ಪರ್ ವಶಕ್ಕೆ ಪಡೆದಿದ್ದಾರೆ. ಟಿಪ್ಪರ್ ಡಿಕ್ಕಿ … Read more

ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಕ್ಷರ ಜಾತ್ರೆ – ಸಾಹಿತ್ಯಾಸಕ್ತರಿಗಾಗಿ ವಿಶೇಷ ರೈಲುಗಳು

ಸುದ್ದಿ360 ಹಾವೇರಿ ಜ.6: ಸರ್ವಜ್ಞನ ನಾಡಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಹಾವೇರಿ ನಗರ ಅಕ್ಷರಶಃ ಅಕ್ಷರ ಜಾತ್ರೆಯಲ್ಲಿ ನುಡಿ ತೇರನೆಳೆಯಲು ಸಿದ್ಧವಾಗಿದೆ.ಸಾಹಿತ್ಯಾಸಕ್ತರು ಸಾಕಷ್ಟು ಮಂದಿ ಈಗಾಗಲೇ ನಗರದಲ್ಲಿ ಬೀಡುಬಿಟ್ಟಿದ್ದು, ನುಡಿ ಜಾತ್ರೆಯ ಸಂಭ್ರಮವನ್ನು ಕಣ್ತುಂಬಿಕೊಳ್ಳಲಲು ಮನದುಂಬಿಕೊಳ್ಳಲು ಜನ ಸಾಗರ ಹಾವೇರಿಯತ್ತ ಹರಿದುಬರುತ್ತಲೇ ಇದೆ.ಪ್ರತ್ಯೇಕ ಜಿಲ್ಲೆಯಾದ ನಂತರ ಹಾವೇರಿಯಲ್ಲಿ ಇದೇ ಮೊದಲ‌ಬಾರಿಗೆ ಅಖಿಲ ಭಾರತ‌ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿದ್ದು. ಸಾಮರಸ್ಯದ ಭಾವ – ಕನ್ನಡದ ಜೀವ … Read more

ಮಹಿಳೆಯರಿಗೆ ಉತ್ತಮ ಸಂದೇಶವಿರುವ ಚಿತ್ರ ‘ವೇದ’ ಪುರುಷರೂ ಸ್ವೀಕರಿಸಿ ಸೈ ಎಂದಿದ್ದಾರೆ – ಶಿವರಾಜ್ ಕುಮಾರ್

ಸುದ್ದಿ360 ದಾವಣಗೆರೆ,ಜ.05 : ವೇದ ಚಿತ್ರಕ್ಕೆ ರಾಜ್ಯದೆಲ್ಲೆಡೆ ಉತ್ತಮ ಯಶಸ್ಸು ದೊರೆತಿದೆ. ಮಹಿಳೆಯರಿಗೆ ಉತ್ತಮ ಸಂದೇಶ ನೀಡುವ ಚಿತ್ರ ಇದು. ಮಹಿಳೆಯರು ಮಾತ್ರವಲ್ಲದೇ ಪುರುಷರು ಈ ಚಿತ್ರದಲ್ಲಿನ ಸಂದೇಶವನ್ನು ಸ್ವೀಕರಿಸಿದ್ದಾರೆ. ಇಡೀ ಕುಟುಂಬ ಸಮೇತರಾಗಿ ಕುಳಿತು ನೋಡುವಂತಹ ಚಿತ್ರ ಇದಾಗಿದೆ. ಇವು ವೇದ ಚಿತ್ರ ಕುರಿತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದ ಮಾತುಗಳು. ವೇದ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಚಿತ್ರ ಸಕ್ಸಸ್ ಆದ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್, ಚಿತ್ರದ ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ … Read more

error: Content is protected !!