ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಬೆಂಗಳೂರು ನವೆಂಬರ್ 11 : ರಾಜ್ಯದ ಬಹುನಿರೀಕ್ಷಿತ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ವಿಶೇಷ ರೈಲಿಗೆ ಹಸಿರು ನಿಶಾನೆ ತೋರುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಇಂದು ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡಿದರು. ಎಂಟು ದಿನಗಳ ಕಾಶಿ ದರ್ಶನದ ಈ ರೈಲು ವಾರಣಾಸಿ, ಪ್ರಯಾಗ್ ರಾಜ್, ಅಯೋಧ್ಯಾ ಮುಂತಾದ ಪವಿತ್ರ ಸ್ಥಳಗಳಿಗೆ ಯಾತ್ರಿಕರನ್ನು ಕರೆದೊಯ್ಯುತ್ತದೆ. ಮುಜರಾಯಿ ಇಲಾಖೆ ಭಾರತ ಸರ್ಕಾರದ ಸಹಯೋಗದಲ್ಲಿ ಈ ಕಾಶಿ ದರ್ಶನ ಯಾತ್ರೆ ಆಯೋಜಿಸಲಾಗಿದೆ. ಈ ಯಾತ್ರೆಗೆ … Read more

ಪಿ. ರಾಜಕುಮಾರ್ ನಿಧನಕ್ಕೆ‌ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಂತಾಪ

ಸುದ್ದಿ360 ದಾವಣಗೆರೆ ಅ.23 : ಮಾಜಿ ಸಿಎಂ ಸಿದ್ದರಾಮಯ್ಯರ ಆಪ್ತರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಪಿ. ರಾಜಕುಮಾರ್ ಅವರ ನಿಧನಕ್ಕೆ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್‌. ಎಸ್. ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ. ಮಂಜಪ್ಪ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ಸೇರಿದಂತೆ ಪಾಲಿಕೆ ಸದಸ್ಯರು ಸಂತಾಪ ಸೂಚಿಸಿದ್ದಾರೆ‌. ಕುರುಬರ ಸಂಘದ ನಿರ್ದೇಶಕರಾಗಿದ್ದ ಪಿ. ರಾಜಕುಮಾರ್ ಅವರು ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ … Read more

ಕಾಂಗ್ರೆಸ್‌ ಮುಖಂಡ ರಾಜ್ ಕುಮಾರ್ ಹೃದಯಾಘಾತದಿಂದ ನಿಧನ

ಸುದ್ದಿ360 ದಾವಣಗೆರೆ, ಅ.23: ಕಾಂಗ್ರೆಸ್ ಮುಖಂಡರು, ಮಾವು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು ಕುರುಬ ಸಮಾಜದ ಮುಖಂಡರು ಪ್ರದೇಶ ಕುರುಬ ಸಂಘದ ನಿರ್ದೇಶಕರು ಹಾಗೂ ಕನಕ ಬ್ಯಾಂಕಿನ ಮಾಜಿ ಅಧ್ಯಕ್ಷರು. ನಿರ್ದೇಶಕರಾದ ಪಿ ರಾಜ್ ಕುಮಾರ್ (63) ಅವರು ಶನಿವಾರ ತಡರಾತ್ರಿ ವಿಧಿವಶರಾಗಿದ್ದಾರೆ. ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಸ್ಪತ್ರೆಗೆ ಹೋಗುವಷ್ಟರಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರ ಪಾರ್ಥಿವ ಶರೀರವನ್ನು ಶಾಮನೂರಿನ ಜರಿಕಟ್ಟೆ ರಸ್ತೆ .ಜೆ.ಹೆಚ್. ಪಟೇಲ್ ಬಡಾವಣೆಯ ಅವರ ಸ್ವಂತ ಮನೆಯಲ್ಲಿ ಮಧ್ಯಾಹ್ನ ಎರಡು ಗಂಟೆಯ … Read more

ಆನಂದ ಮಾಮನಿಯವರ ನಿಧನದಿಂದ ಉತ್ತಮ ಜನಪ್ರತಿನಿಧಿಯನ್ನು ಕಳೆದುಕೊಂಡಂತಾಗಿದೆ: ಸಿಎಂ

ಸುದ್ದಿ360 ಬೆಂಗಳೂರು, ಅ. 23 : ವಿಧಾನಸಭೆ ಉಪಾಧ್ಯಕ್ಷರಾಗಿದ್ದ ಆನಂದ ಮಾಮನಿ ಅವರ ನಿಧನದಿಂದ ಉತ್ತಮ ಜನಪ್ರತಿನಿಧಿಯನ್ನು ಹಾಗೂ ಕರ್ನಾಟಕ ರಾಜ್ಯ ಬೆಳೆಯುತ್ತಿರುವ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್. ಟಿ. ನಗರ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ :ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ಅವರ ನಿಧನ ದುರ್ದೈವದ ಸಂಗತಿ. ಅವರ ಪಾರ್ಥಿವ ಶರೀರ ಅವರ ಸ್ವಕ್ಷೇತ್ರವಾದ ಸವದತ್ತಿಗೆ ಒಯ್ಯಲಾಗಿದೆ. ಸಕಲ ಸರ್ಕಾರಿ … Read more

ಕಾಂಗ್ರೆಸ್ಸಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.23: ಕಾಂಗ್ರೆಸ್ ಪಕ್ಷದವರದ್ದು ಹೆಜ್ಜೆ ಹೆಜ್ಜೆಗೂ ಸ್ಕ್ಯಾಮ್ಗಳಿವೆ. ಕಾಂಗ್ರೆಸ್ಸಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸಭೆಯ ಅಧಿವೇಶನ ಮುಕ್ತಾಯವಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಪಕ್ಷದ ವತಿಯಿಂದ ಪುಸಕ್ತವನ್ನೇ ಬಿಡುಗಡೆ ಮಾಡಿದ್ದೆವು. ಅವರು ಭ್ರಷ್ಟರಾಗಿದ್ದುಕೊಂಡು ಅಭಿಯಾನ ಮಾಡುತ್ತಾರಂತೆ. ಯಾವ ಅಭಿಯಾನವನ್ನಾದರೂ ಮಾಡಲಿ, ಕೊನೆಗೆ ಸತ್ಯಕ್ಕೆ ಜಯ ಸಿಗಲಿದೆ. ಒಂದು ಸಣ್ಣ ಪುರಾವೆ ಇಲ್ಲದೆ ಮಾತನಾಡುವ ಈ ಪ್ರವೃತ್ತಿ ಬಹಳ … Read more

ಎಲ್ಲಾ ಸ್ವಚ್ಛತಾ ಕಾರ್ಮಿಕರ ಖಾಯಮಾತಿಗೆ ಆಗ್ರಹ – ಪೌರ ಕಾರ್ಮಿಕ ದಿನಾಚರಣೆ ಬಹಿಷ್ಕಾರದ ಎಚ್ಚರಿಕೆ

ಸುದ್ದಿ360 ದಾವಣಗೆರೆ, ಸೆ. 21: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯಾದ್ಯಂತ ಸೆ.23ರಂದು ನಡೆಯಲಿರುವ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ, ಕಾರ್ಯಕ್ರಮ ಬಹಿಷ್ಕರಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿರ ಮಹಾ ಸಂಘ ಸರಕಾರವನ್ನು ಎಚ್ಚರಿಸಿದೆ. ಜಿಲ್ಲಾ ವರದಿಗಾರರ ಕೂಟದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷ ಎಲ್. ಎಂ. ಹನುಮಂತಪ್ಪ ಮಾತನಾಡಿ, … Read more

ಶಿವಮೊಗ್ಗ ಜಿಲ್ಲಾ ಒಳಾಂಗಣ ಕ್ರೀಡಾಂಗಣ ಶಟಲ್ ಗಾಗಿ ಮೀಸಲಾಯಿತೇ. . .?

ಇತರೆ ಕ್ರೀಡೆಗಳೆಡೆ ಮಹಾನಗರ ಪಾಲಿಕೆ, ಜಿಲ್ಲಾಡಳಿತದ ಧೋರಣೆಯಾದರೂ ಏನು..? ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ಹಾಗೂ ಕ್ರೀಡಾಪಟುಗಳಿಂದ ಪ್ರತಿಭಟನೆ ಸುದ್ದಿ360 ಶಿವಮೊಗ್ಗ, ಸೆ. 18: ಶಿವಮೊಗ್ಗ ನಗರದಲ್ಲಿರುವ ನೆಹರೂ ಒಳಾಂಗಣ ಕ್ರೀಡಾಂಗಣವನ್ನು ಇಲಾಖಾ ಕ್ರೀಡಾ ಚಟುವಟಿಕೆಗಳಿಗೆ ನೀಡಲು ನಿರಾಕರಿಸುತ್ತಿರುವ ಕ್ರೀಡಾಧಿಕಾರಿಯ ಧೋರಣೆಯನ್ನು ಖಂಡಿಸಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ಹಾಗೂ ಕ್ರೀಡಾಪಟುಗಳು ಭಾನುವಾರ ಕ್ರೀಡಾಂಗಣದ ಎದುರು ಪ್ರತಿಭಟನೆ ನಡೆಸಿದರು. ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಸ್ಮಾರ್ಟ್ ಸಿಟಿ ಅಡಿಯಲ್ಲಿ ಶಟಲ್ ಕೋರ್ಟ್ ಗಳಿಗಾಗಿ ಸಿಂಥೆಟಿಕ್ ಅಳವಡಿಕೆಯಿಂದ ಇತರೆ ಕ್ರೀಡೆಗಳಿಗೆ … Read more

ಸಿದ್ಧರಾಮೋತ್ಸವಕ್ಕೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

ಸುದ್ದಿ360 ಬಾಗಲಕೋಟೆ, ಸೆ.16: ಸಿದ್ಧರಾಮಾತ್ಸವಕ್ಕೆಂದು ದಾವಣಗೆರೆಗೆ ತೆರಳಿದಾಗ ಕಾಣೆಯಾಗಿದ್ದ ಜಮಖಂಡಿ ತಾಲೂಕಿನ ಅಡಿಹುಡಿಯ ಗಿರಿಮಲ್ಲಪ್ಪ ಖಂಡೇಕರ್ ಅವರನ್ನು ಪೊಲೀಸರು ಹುಬ್ಬಳ್ಳಿಯಲ್ಲಿ ಪತ್ತೆ ಮಾಡಿದ್ದಾರೆ. ಗಿರಿಮಲ್ಲಪ್ಪಗಾಗಿ ಶೋಧನೆ ಕೈಗೊಂಡಿದ್ದ ಪೊಲೀಸರು ಈ ವ್ಯಕ್ತಿ ಪತ್ತೆಯಾಗುತ್ತಿದ್ದಂತೆ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಗ್ರಾಮದಿಂದ 50 ಜನ ಹುಬ್ಬಳ್ಳಿ ಗೆ ತೆರಳಿ ಗಿರಿಮಲ್ಲಪ್ಪ ಕರೆ ತಂದಿದ್ದಾರೆ. ಆತಂಕದಲ್ಲಿದ್ದ  ಗಿರಿಮಲ್ಲಪ್ಪ ಕುಟುಂಬದವರು ಸದ್ಯ ನಿಟ್ಟುಸಿರು ಬಿಟ್ಟಿದ್ದಾರೆ. ಆ. 2 ರಂದು ದಾವಣಗೆರೆಗೆ ಸಿದ್ದರಾಮಯ್ಯ ಜನ್ಮದಿನ ಕ್ಕಾಗಿ ಗಿರಿಮಲ್ಲಪ್ಪ ಊರಿನವರೊಂದಿಗೆ ದಾವಣಗೆರೆಗೆ ತೆರಳಿದ್ದರು. ಆದರೆ ಸಮಾರಂಭ … Read more

ಗುರುಶಿಷ್ಯರ ಸಂಬಂಧ ಮತ್ತು ಈ ಮಣ್ಣಿನ ಆಟದ ವೈಭವ ‘ಗುರುಶಿಷ್ಯರು’

ಸುದ್ದಿ360 ದಾವಣಗೆರೆ, ಸೆ.16: ಖೋ-ಖೋ ನಮ್ಮ ಈ ಮಣ್ಣಿನಲ್ಲೇ ಹುಟ್ಟಿ ಬೆಳೆದ, ನಮ್ಮ ಸಂಸ್ಕೃತಿಯ ಒಂದು ಭಾಗವಾಗಿ ಬೆಳೆದು ಬಂದಿರುವ ಆಟ. ಅಂತಹ ಆಟದ ಸೊಗಡಿನ ವೈಭವ ಕಟ್ಟಿಕೊಡುವ ಮತ್ತು ಗುರು ಶಿಷ್ಯ ಸಂಬಂಧದ ಕುರಿತಾಗಿ ಮೂಡಿಬಂದಿರುವ ಚಿತ್ರ ಗುರು ಶಿಷ್ಯರು. ಈ ಚಿತ್ರ ಸೆ.23ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ನಟ ಶರಣ್ ಹೇಳಿದರು. ನಗರದ ಪಿಬಿ ರಸ್ತೆಯಲ್ಲಿನ ಹೋಟೆಲ್ ಪೂಜಾ ಇಂಟರ್‌ನ್ಯಾಷನಲ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಗುರು ಶಿಷ್ಯರು ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ … Read more

ಸರಣಿ ಅಪಘಾತದಲ್ಲಿ ಇಬ್ಬರ ದುರ್ಮರಣ – ಪತಿಯ ಜೀವ ಉಳಿಸಲು ಮದುರೈನಿಂದ ಬಂದ ಪತ್ನಿಯ ದುರಂತ ಅಂತ್ಯ

ಸುದ್ದಿ360 ದಾವಣಗೆರೆ, ಸೆ.16: ಪತಿಯ ಜೀವ ಉಳಿಸಲು ಕಾಳಜಿ ವಹಿಸಿ ಆಂಬ್ಯುಲೆನ್ಸ್ ನಲ್ಲಿ ಕೂತಿದ್ದ ಪತ್ನಿಯೇ ದುರಂತ ಅಂತ್ಯ ಕಂಡಿರುವ ದಾರುಣ ಘಟನೆ ದಾವಣಗೆರೆ ಸಮೀಪದ ಕಲ್ಪನಹಳ್ಳಿ ರಾಷ್ಟ್ರೀಯ ಹೆದ್ದಾರಿ 6 ರಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ 6 ರಲ್ಲಿ ಕಲ್ಪನಹಳ್ಳಿ ಬಳಿ ನಡೆದ ಸರಣಿ ಅಪಘಾತದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕಿ ಸೇರಿ ಇಬ್ಬರು ಸಾವು ಕಂಡಿದ್ದಾರೆ. ಕಾರಿಗನೂರಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿ ಜ್ಯೋತಿ(43) ಮತ್ತು … Read more

error: Content is protected !!