ಪುಸ್ತಕ ಮಾರಾಟ ಅಭಿಯಾನ

ಸುದ್ದಿ360 ದಾವಣಗೆರೆ, ಆ.23: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 02 ರಿಂದ ಆ.29 ರವರಗೆ ನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಅಂಗವಾಗಿ ಅಮೃತ ಪುಸ್ತಕ ಮಾರಾಟ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನವನ್ನು ಆ.25 ರಂದು ಬೆಳಗ್ಗೆ 10 ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ಹಾಗೂ ಮಧ್ಯಾಹ್ನ 12 ಗಂಟೆಗೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಎಲ್ಲಾ ಪುಸ್ತಕಗಳನ್ನು ಶೇ.50% ರ ರಿಯಾಯಿತಿ ದರದಲ್ಲಿ ಮಾರಾಟ … Read more

ಜೀವನದಲ್ಲಿ ವಚನಗಳನ್ನು ಅಳವಡಿಸಿಕೊಂಡಲ್ಲಿ ವ್ಯಕ್ತಿ ವಿಶ್ವಮಾನವನಾಗುತ್ತಾನೆ: ಬಸವಪ್ರಭು ಶ್ರೀ

ಸುದ್ದಿ360 ದಾವಣಗೆರೆ, ಆ.23: ಪ್ರತಿಯೊಬ್ಬರೂ ವಚನಗಳನ್ನು ಓದಬೇಕು, ಕಲಿಯಬೇಕು ಮತ್ತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ವ್ಯಕ್ತಿ ವಿಶ್ವಮಾನವನಾಗುತ್ತಾನೆ ಎಂಬುದಾಗಿ  ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ದೊಡ್ಡಪೇಟೆಯ ಶ್ರೀ ಮುರುಘರಾಜೇಂದ್ರ ವಿರಕ್ತಮಠದಲ್ಲಿ ಇಂದು ಹಮ್ಮಿಕೊಂಡಿದ್ದ ವಚನ ಕಂಠಪಾಠ ಸ್ಪರ್ಧೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ವಚನ ಗ್ರಂಥಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ, ಆಶೀರ್ವಚನ ನೀಡಿದರು. ಸಮಾಜದಲ್ಲಿ ವೈದ್ಯರು, ಎಂಜಿನಿಯರ್, ಬುದ್ಧಿವಂತರು, ವಿದ್ಯಾವಂತರು, ವಿಜ್ಞಾನಿಗಳು ಸಿಗುತ್ತಾರೆ. ಆದರೆ ಸಾತ್ವಿಕರು ಸಿಗುವುದಿಲ್ಲ. ನಮ್ಮ … Read more

ಭಾರತವನ್ನು ಇಸ್ಲಾಂ ರಾಷ್ಟ್ರವಾಗಿಸುವ ಹುನ್ನಾರ: ಹಿಂದೂ ರಾಷ್ಟ್ರಸೇನೆ ಆರೋಪ – ಬಿಜೆಪಿ ವಿರುದ್ಧ ಹೋರಟಕ್ಕೂ ಸಿದ್ದ!

ಸುದ್ದಿ360 ದಾವಣಗೆರೆ, ಆ.22: ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳು ಕರ್ನಾಟಕ ಸೇರಿ ದೇಶಾದ್ಯಂತ ತಮ್ಮ ಚಟುವಟಿಕೆ ವಿಸ್ತರಿಸಿದ್ದು, ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಹುನ್ನಾರ ನಡೆಸಿವೆ ಎಂದು ಹಿಂದೂ ರಾಷ್ಟ್ರಸೇನೆ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಧನಂಜಯ ಜಯರಾಮ ದೇಸಾಯಿ ಆರೋಪಿಸಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳದಲ್ಲಿ ಜನ್ಮ ತಳೆದಿರುವ ಈ ಸಂಘಟನೆಗಳು 2047ರ ವೇಳೆಗೆ ಭಾರತವನ್ನು ಸಂಪೂರ್ಣ ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸುತ್ತಿವೆ. ಎಸ್‌ಡಿಪಿಐ ಸೇರಿದಂತೆ ಇತರೆ ಮುಸ್ಲಿಂ ಸಂಘಟನೆಗಳ ಈ ಪ್ರಯತ್ನಕ್ಕೆ ತಕ್ಕ … Read more

ಇದೀಗ ಪ್ರತಿ ಕನ್ನಡಿಗರಿಗೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ  ಸದಸ್ಯರಾಗುವ ಅವಕಾಶ

ಸುದ್ದಿ360 ದಾವಣಗೆರೆ, ಆ.22: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಜೀವ ಸದಸ್ಯತ್ವ ಪಡೆಯಲು, ರೂಪಾಯಿ 250-00 ಆನ್ಲೈನ್ ಮೂಲಕವೇ  ಪಾವತಿಸಿ ಸದಸ್ಯತ್ವ ಪಡೆಯುವ ಸದಾವಕಾಶವನ್ನು 18 ವರ್ಷ ತುಂಬಿದ ಪ್ರತಿಯೊಬ್ಬ ಕನ್ನಡಿಗರಿಗೂ ಕಲ್ಪಿಸಿ ಕೊಟ್ಟಿದೆ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಬಿ ವಾಮದೇವಪ್ಪ ಅವರು  ತಮ್ಮ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾಡುವ ಸದುದ್ದೇಶದಿಂದಲೂ, ವಿಶ್ವದಾದ್ಯಂತ ಕನ್ನಡವನ್ನು ಒಗ್ಗೂಡಿಸಲು ಹೊರರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಹೊರದೇಶ ಘಟಕಗಳನ್ನು ಸ್ಥಾಪಿಸುವ … Read more

ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ನಿಧನ

ಸುದ್ದಿ360 ಬೆಂಗಳೂರು ಆ.22: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ (40) ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾದರು. ಇಂದು (ಆ.22) ಬೆಳಿಗ್ಗೆ ಜಿಮ್‌ಗೆ ಹೋಗಿದ್ದ ಅವರು ವರ್ಕ್ಔಟ್ ಮಾಡುವ ಸಮಯದಲ್ಲಿ ಕುಸಿದುಬಿದ್ದಿದ್ದರು. ತಕ್ಷಣ ಅವರನ್ನು ನಾಗರಭಾವಿಯ ಖಾಸಗಿ ಆಸ್ಪತ್ರೆಗೆ ಸಾಗಿಸಿತಾದರೂ ಪ್ರಯೋಜನ ಆಗಲಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ. ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದಾಗಲೂ ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಗುರುಲಿಂಗಸ್ವಾಮಿ ಅವರು ಅದಕ್ಕೂ ಮೊದಲು ವಿವಿಧ ಪತ್ರಿಕೆ, ಟಿವಿ ಚಾನೆಲ್‌ಗಳಲ್ಲಿ … Read more

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ – ಸಂಪೂರ್ಣ ತನಿಖೆಗೆ ಸಿಎಂ ಆದೇಶ

ಸುದ್ದಿ360 ಬೆಂಗಳೂರು, ಆ.19: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಒಡ್ಡಿರುವ  ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಹಾಗೂ ಸಂಪೂರ್ಣ ತನಿಖೆ ಮಾಡಿಸುವುದಾಗಿ  ಭರವಸೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶುಕ್ರವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರೊಂದಿಗೆ ನೇರವಾಗಿ ಮಾತನಾಡಿದ್ದು, ಅವರಿಗೆ  ಅಥವಾ  ಸಿಬ್ಬಂದಿಗೆ ಬೆದರಿಕೆ ಕರೆಗಳು ಬಂದಿದ್ದರೆ ವಿವರಗಳನ್ನು  ನೀಡಲು ತಿಳಿಸಿದ್ದೇನೆ ಎಂದರು. ಅದರ ಜೊತೆಗೆ ಡಿಜಿ ಅವರನ್ನು … Read more

ಮುಖ್ಯಮಂತ್ರಿಗಳು ನಾಳೆ ದಾವಣಗೆರೆಗೆ ಬರುತ್ತಿಲ್ಲ. .

shimoga-riots-were-the-result-of-the-governments-appeasement-policy-basavaraj-bommai

ಶಿಗ್ಗಾವಿ, ಸವಣೂರಿನಲ್ಲಿ ವಕೀಲರ ಸಂಘಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ಸುದ್ದಿ360 ಬೆಂಗಳೂರು, ಆ. 20: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಭಾನುವಾರ) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಶಿಕ್ಷಣ ಸೇವೆಯಲ್ಲಿ 75 ಸಾರ್ಥಕ ವಸಂತಗಳನ್ನು ಕಳೆದು ಲಕ್ಷಾಂತರ ವಿದ್ಯಾರ್ಥಿಗಳ ಬಾಳು ಹಸನು ಮಾಡುತ್ತಾ ಬಂದಿರುವ ಸಂತ ಪೌಲರ ಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಮುಖ್ಯಮಂತ್ರಿಗಳ ಹಾವೇರಿ ಹಾಗೂ … Read more

ಆ.20, 21 ಸಂತ ಪೌಲರ ಶಾಲೆ ಅಮೃತ ಮಹೋತ್ಸವ

ಸುದ್ದಿ360 ದಾವಣಗೆರೆ, ಆ.19: ಸ್ವಾತಂತ್ರ್ಯ ಪೂರ್ವದಿಂದಲೂ ಶಿಕ್ಷಣ ಸೇವೆ ಸಲ್ಲಿಸುತ್ತಾ ಬಂದಿರುವ ಖ್ಯಾತಿಯನ್ನು ಹೊಂದಿರುವ ಸಂತ ಪೌಲರ ಶಾಲೆಯ ಅಮೃತ ಮಹೋತ್ಸವ ಸಮಾರಂಭ ಆ.20, 21ರಂದು ನಡೆಯಲಿರುವುದಾಗಿ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಗರದ ಚರ್ಚ್ ರಸ್ತೆಯಲ್ಲಿರುವ ಸಂತ ಪೌಲರ ಶಾಲೆ ಆವರಣದಲ್ಲಿ ಆ.21ರಂದು ಸಂಜೆ 5 ಗಂಟೆಗೆ ನಡೆಯುವ ಅಮೃತ ಮಹೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯ … Read more

ಗಾಂಧೀವಾದಿ ಮೀರಾತಾಯಿ ಕೊಪ್ಪೀಕರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಸುದ್ದಿ360, ಬೆಂಗಳೂರು, ಆ.19: ಸ್ವಾತಂತ್ರ್ಯ ಹೋರಾಟಗಾರ್ತಿ, ಗಾಂಧೀವಾದಿ ಮೀರಾತಾಯಿ ಕೊಪ್ಪಿಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಇಂದಿಗೂ ಪಾಲಿಸುತ್ತ ಬದುಕಿದ ಮೀರಾತಾಯಿ ಕೊಪ್ಪಿಕರ್ ಅವರು ವಿನೋಬಾ ಭಾವೆಯವರ ಅನುಯಾಯಿಯಾಗಿದ್ದರು. ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ವಾತ್ಸಲ್ಯ ಧಾಮವನ್ನು ಕಟ್ಟಿಕೊಂಡಿದ್ದ ಮೀರಾತಾಯಿ ಅವರು ಸರಳ ಜೀವನ, ಶ್ರಮದಾನ, ಹೈನುಗಾರಿಕೆ ಹಾಗೂ ಸಾವಯವ ಕೃಷಿಯನ್ನೇ ನೆಚ್ಚಿಕೊಂಡು ಜೀವನ ನಡೆಸುತ್ತಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿಕೊಂಡಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿಯೊಂದಿಗೆ ನೀಡಿದ್ದ ನಗದು ಬಹುಮಾನವನ್ನು ಬಡವರಿಗಾಗಿ … Read more

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಗ್ರಾಂಡ್ ಫಿನಾಲೆಗೆ ಜಿಎಂಐಟಿ ಕಾಲೇಜಿನ ಎರಡು ತಂಡಗಳು

ಸುದ್ದಿ360 ದಾವಣಗೆರೆ ಆ.17: ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಗ್ರಾಂಡ್ ಫಿನಾಲೆಗೆ ನಗರದ ಜಿಎಂಐಟಿ ಕಾಲೇಜಿನ ಎರಡು ತಂಡಗಳು ಆಯ್ಕೆಯಾಗಿವೆ. ಇದೆ ಆಗಸ್ಟ್ 25 ಮತ್ತು 26 ರಂದು ಮಹಾರಾಷ್ಟ್ರದಲ್ಲಿ ನಡೆಯುವ ಗ್ರಾಂಡ್ ಫಿನಾಲೆಯಲ್ಲಿ ತಂಡಗಳು ಭಾಗವಹಿಸಲಿರುವುದಾಗಿ ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಒಟ್ಟು 12 ತಂಡಗಳು ಮೊದಲನೇ ಸುತ್ತಿನಲ್ಲಿ ಭಾಗವಹಿಸಿ ಕೊನೆಗೆ ಎರಡು ಅತ್ಯುತ್ತಮ ತಂಡಗಳು ಗ್ರಾಂಡ್ ಫಿನಾಲೆಗೆ ಆಯ್ಕೆಯಾದವು ಎಂದು ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕರು ಮತ್ತು ಸ್ಮಾರ್ಟ್ … Read more

error: Content is protected !!