ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಬಿ ಎಸ್ ವೈ ನೇಮಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಸ

ಸುದ್ದಿ360 ಬೆಂಗಳೂರು ಆ.17: ನಿಕಟ ಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿ ಸಭೆಯ ಸದಸ್ಯರಾಗಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ. ಬಿಜೆಪಿಯ ಅತ್ಯಂತ ಉನ್ನತ ಎನಿಸಿರುವ ಸಂಸದೀಯ ಮಂಡಳಿಗೆ ತಮ್ಮನ್ನು  ನೇಮಕ ಮಾಡುವುದರ ಮೂಲಕ ಪಕ್ಷ ತಮಗೆ ಅತಿ ದೊಡ್ಡ ಗೌರವದ ಸ್ಥಾನ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರ ನೇಮಕಾತಿ ಆದೇಶ ಹೊರ ಬರುತ್ತಿದ್ದಂತೆಯೆ ಸಿಎಂ ಅವರು ಕರೆ … Read more

ಎಫ್ ಆರ್ ಪಿ ದರ ಪರಿಷ್ಕರಿಸುವಂತೆ ಆಗ್ರಹಿಸಿ,  ಕಬ್ಬುಬೆಳೆಗಾರರಿಂದ ರಸ್ತೆ ತಡೆ – ಮನವಿ

ಸುದ್ದಿ360 ದಾವಣಗೆರೆ, ಆ.12: ಕೇಂದ್ರ ಸರ್ಕಾರ ಕಬ್ಬಿಗೆ ಘೋಷಿಸಿರುವ ಎಫ್ ಆರ್ ಪಿ ದರ ಅವೈಜ್ಞಾನಿಕವಾಗಿದ್ದು, ಕೂಡಲೇ ಪರಿಷ್ಕರಿಸುವಂತೆ ಆಗ್ರಹಿಸಿದ ಕಬ್ಬುಬೆಳೆಗಾರರು, ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ತೇಜಸ್ವಿ ವಿ. ಪಟೇಲ್ ನೇತೃತ್ವದಲ್ಲಿ ಇಂದು ರಸ್ತೆ ತಡೆ ನಡೆಸಿದರು. ದಾವಣಗೆರೆ ಜಿಲ್ಲಾ ಪಂಚಾಯತಿ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾಯಿಸಿದ ಕಬ್ಬು ಬೆಳೆಗಾರರು ತಸ್ತೆ ತಡೆ ನಡೆಸಿದರು. ಈ ವೇಳೆ ಮಾತನಾಡಿದ ತೇಜಸ್ವಿ ವಿ. ಪಟೇಲ್ ಕಳೆದ ಸಾಲಿನಲ್ಲಿ ರೂ. 2900  ಇದ್ದ ಎಫ್‌ಆರ್‌ಪಿಯನ್ನು 3050ಕ್ಕೆ … Read more

ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ – ಪೊಲೀಸ್ ಗೌರಗಳೊಂದಿಗೆ ಅಂತ್ಯಕ್ರಿಯೆ

ಸುದ್ದಿ360 ಬೆಂಗಳೂರು, ಆ.12: ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂಗೀತ ಪರಂಪರೆಯ ಮನೆತನದಿಂದ ಬಂದ ಸುಬ್ಬಣ್ಣ ಅವರು ಸುಗಮ ಸಂಗೀತ  ಹಾಗೂ ಚಲನ ಚಿತ್ರ ಹಿನ್ನಲೆ ಗಾಯಕರಾಗಿ ತಮ್ಮದೇ ಛಾಪು ಮೂಡಿಸಿದ್ದರು. ಅವರ ‘ಕಾಡು ಕುದುರೆ ಓಡಿ ಬಂದಿತ್ತಾ’ ಗೀತೆಯು ಇಂದಿಗೂ ಅಭಿಮಾನಿಗಳು ಗುನುಗುನಿಸುವ ಹಾಡು. ಇದಕ್ಕಾಗಿ ಭಾರತ ಸರ್ಕಾರದ ರಜತ ಕಮಲ ಪ್ರಶಸ್ತಿಗೂ ಭಾಜನರಾದರು. ಸಂತ ಶಿಶುನಾಳ ಶರೀಫರ ಗೀತೆಗಳಿಗೆ ದನಿಯಾಗಿ ಅವುಗಳನ್ನು … Read more

ಬಿಗ್ ಶಾಕಿಂಗ್ – ಪ್ರಸಿದ್ಧ ಗಾಯಕ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ

ಸುದ್ದಿ360 ಬೆಂಗಳೂರು, ಆ.11: ತಮ್ಮ ಮೋಹಕ ಕಂಠದಿಂದ ನಾಡಿನಾದ್ಯಂತ ಜನಪ್ರಿಯರೂ, ಕರ್ನಾಟಕ ಸುಗಮ ಸಂಗೀತದ ಪ್ರಸಿದ್ಧ ಗಾಯಕರೂ ಆಗಿದ್ದ ಶಿವಮೊಗ್ಗ ಸುಬ್ಬಣ (83) ಅವರು ಹೃದಯಾಘಾತದಿಂದ ಗುರುವಾರ ರಾತ್ರಿ ಇಹಲೋಕ ತ್ಯಜಿಸಿದರು. ಕಾಡು ಕುದುರೆ ಓಡಿಬಂದಿತ್ತಾ… ಕೋಡಗನ ಕೋಳಿ ನುಂಗಿತ್ತಾ… ಬಿದ್ದಿಯಬ್ಬೇ ಮುದುಕಿ ಬಿದ್ದೀಯಬ್ಬೇ.. ಹಾಡುಗಳ ಮೂಲಕ ಮನೆಮಾತಾಗಿದ್ದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ ಇನ್ನಿಲ್ಲ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಕನ್ನಡಿಗರು ಎಂಬ ಖ್ಯಾತಿ ಹೊಂದಿದ್ದರು. … Read more

ಯುವಾ ಬ್ರಿಗೇಡ್ ಹರಿಹರ ತಂಡದಿಂದ ಹಳೆಯ ದೇವರ ಫೋಟೊಗಳ ವಿಸರ್ಜನೆ

ಸುದ್ದಿ360 ದಾವಣಗೆರೆ, ಆ.08:  ಯುವಾ ಬ್ರಿಗೇಡ್ ಹರಿಹರ ತಂಡ ಹರಿಹರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಅಕ್ಕಪಕ್ಕ ಬಿದ್ದಿದ್ದ ಹಳೆಯ ದೇವರ ಫೋಟೋಗಳನ್ನು ಸಂಗ್ರಹಿಸಿ ಸೂಕ್ತರೀತಿಯಲ್ಲಿ ವಿಸರ್ಜಿಸಿದ್ದಾರೆ. ದೇವಸ್ಥಾನದ ಸುತ್ತಮುತ್ತಲು ಇಲ್ಲವೆ ಅಲ್ಲಿನ ಆಸುಪಾಸಿನ ಮರ ಇಲ್ಲವೇ ಯಾವುದಾದರೂ ಮರದ ಕೆಳಗಡೆ ಊನವಾದ ದೇವರ ಫೋಟೋಗಳು ಇಟ್ಟಿರುವುದನ್ನು ಸಾಮಾನ್ಯವಾಗಿ ಎಲ್ಲರೂ ನೋಡಿರುತ್ತೀರಿ. ಇದೂ ಸಹ ದೇವರಿಗೆ ಅಗೌರವ ತೋರಿಸಿದಂತೆಯೇ ಆಗುತ್ತದೆಯಲ್ಲದೆ. ಫೋಟೊಗೆ ಅಳವಡಿಸಲಾದ ಫ್ರೇಮ್ ಮತ್ತು ಗಾಜಿನ ಚೂರುಗಳು ಕಾಲ ಕ್ರಮೇಣ ಒಡೆದು ಸಾರ್ವಜನಿಕರಿಗೆ ಹಾನಿಯುಂಟು ಮಾಡುತ್ತದೆ. … Read more

ಹರ್ ಘರ್ ತಿರಂಗ: ರಾಜ್ಯದಲ್ಲಿ 1 ಕೋಟಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ

ಸುದ್ದಿ360 ಬೆಂಗಳೂರು, ಆ.08: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ‘ಹರ್ ಘರ್ ತಿರಂಗ’ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಈ ಅಭಿಯಾನದ ಸಿದ್ಧತೆಯನ್ನು ಪರಿಶೀಲಿಸಿ ಮಾತನಾಡಿದರು.  ಈ ಕಾರ್ಯಕ್ರಮವನ್ನು ಕೇವಲ ಕಾಟಾಚಾರಕ್ಕೆ ಮಾಡದೆ, ದೇಶದ ಮೇಲಿನ ಅಭಿಮಾನ ಪ್ರೀತಿಯಿಂದ ಆಯೋಜಿಸಬೇಕು. ಇದನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂಬ ತುಡಿತದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ರಾಜ್ಯದಲ್ಲಿ ಸುಮಾರು 1 ಕೋಟಿಗೂ ಹೆಚ್ಚು … Read more

ನೈಜ ಘಟನೆಯಾಧಾರಿತ ‘ತಾಜ್ ಮಹಲ್-2’ ಚಿತ್ರ ಸೆ.2ರಂದು ತೆರೆಗೆ

ಸುದ್ದಿ360 ದಾವಣಗೆರೆ, ಆ.07: ನೈಜ ಘಟನೆ ಆಧಾರಿತ ತಾಜ್ ಮಹಲ್-2 ಕನ್ನಡ ಚಲನಚಿತ್ರ ಸೆ.2ರಂದು ರಾಜ್ಯದ ಇನ್ನೂರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ ಎಂದು ಚಿತ್ರದ ನಟ, ನಿರ್ದೇಶಕ ದೇವರಾಜ್ ಕುಮಾರ್ ತಿಳಿಸಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ತಾಜ್ ಮಹಲ್ 2  ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ನೈಜ ಘಟನೆ ಆಧರಿಸಿದ ಕಥೆ ಹೊಂದಿರುವ ಚಿತ್ರವಾಗಿದೆ. ಚಿತ್ರದಲ್ಲಿ ನಾನೇ ನಾಯಕ ನಾಗಿ ಅಭಿನಯಿಸಬೇಕು ಎಂದು ನಿರ್ಧರಿಸಿ ಪ್ರಥಮ ಬಾರಿ ನಾಯಕನಾಗಿ ಅಭಿನಯ ಮಾಡಿರುವೆ. … Read more

ಎರಡು ಹೆಚ್ಚುವರಿ ಎಸ್.ಡಿ.ಆರ್.ಎಫ್. ತಂಡ ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ಸುದ್ದಿ360 ಬೆಂಗಳೂರು, ಆ. 06: ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ಎಸ್ ಡಿ ಆರ್ ಎಫ್ ತಂಡಗಳನ್ನು ರಚಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ, ಭೂಕುಸಿತ, ಬೆಳೆಹಾನಿ ಮೊದಲಾದ ವಿಷಯಗಳ ಕುರಿತು ಮಾಹಿತಿ ಪಡೆದ … Read more

ಕೇಂದ್ರ ನೀತಿ ಆಯೋಗ ಮಾದರಿಯಲ್ಲಿ ಕರ್ನಾಟಕ ರಾಜ್ಯ ಪರಿವರ್ತನಾ  ಸಂಸ್ಥೆ ರಚನೆಗೆ ಆದೇಶ

ಸುದ್ದಿ360 ಬೆಂಗಳೂರು, ಆ. 06:  ಕೇಂದ್ರ ನೀತಿ ಆಯೋಗದ ಮಾದರಿಯಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು  ಕರ್ನಾಟಕ ರಾಜ್ಯ ಪರಿವರ್ತನಾ  ಸಂಸ್ಥೆ ಎಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಚಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ನವ ಭಾರತಕ್ಕಾಗಿ ನವ ಕರ್ನಾಟಕವನ್ನು ನಿರ್ಮಿಸುವ ಉದ್ದೇಶದಿಂದ ರಚಿಸಲಾಗಿರುವ ಸಂಸ್ಥೆಗೆ  ಸರ್ಕಾರದ ಯೋಜನೆ ಹಾಗೂ ಸಂಬಂಧಿಸಿದ ವಿಷಯಗಳಲ್ಲಿ  ಪರಿಣಿತರಾದವರನ್ನು  ಸರ್ಕಾರದಿಂದ ಉಪಾಧ್ಯಕ್ಷರನ್ನಾಗಿ  ನಾಮನಿರ್ದೇಶನ ಮಾಡಲಾಗುವುದು. ಸಂಸ್ಥೆಯನ್ನು ಪರಿಣಾಮಕಾರಿಯಾಗಿ ನಡೆಸಲು ಹಾಗೂ ಗುರಿಗಳನ್ನು ಸಾಧಿಸಲು ವಾರ್ಷಿಕ 150 ಕೋಟಿ ರೂ.ಗಳನ್ನು  … Read more

ಸಮಾಜದ ತಲ್ಲಣಗಳಿಗೆ ಕಲೆಯ ಪ್ರತಿಸ್ಪಂದನೆ ಇರಲಿ

ಕಲಾ ವಿದ್ಯಾರ್ಥಿಗಳಿಗೆ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಿ. ಮಹೇಂದ್ರ ಕಿವಿಮಾತು ಸುದ್ದಿ360, ದಾವಣಗೆರೆ ಆ.06: ಕಲಾವಿದನಾದವನು ಸಾಮಾಜಿಕ ಬದ್ಧತೆಯನ್ನು ಹೊಂದಿರಬೇಕು. ಸಮಾಜದಲ್ಲಿ ಘಟಿಸುವ ತಲ್ಲಣಗಳಿಗೆ ಚಿತ್ರಕಲಾವಿದನಾದವನು ರಸ್ತೆಗಿಳಿಯುವುದಕ್ಕಿಂತ ತನ್ನ ಕಲೆಯ ಮೂಲಕ ಪ್ರತಿಸ್ಪಂದನೆಯನ್ನು ತೋರಬೇಕು ಎಂಬುದಾಗಿ ಲಲಿತಕಲಾ ಅಕಾಡೆಮಿ ಅಧ್ಯಕ್ಷರಾದ ಡಿ. ಮಹೇಂದ್ರ ಕಲಾ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಗರದ ಪ್ರೌಢಶಾಲಾ ಮೈದಾನದಲ್ಲಿರುವ ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರದ (ಡಯಟ್) ಸಭಾಂಗಣದಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿ ವತಿಯಿಂದ ಸಂಸ್ಕಾರ ಭಾರತಿ ದಾವಣಗೆರೆ ಜಿಲ್ಲಾ ಶಾಖೆ ಸಹಯೋಗದಲ್ಲಿ ಎರಡು … Read more

error: Content is protected !!