ಜು. 15, 16 ಅಕ್ಕಿಗಿರಣಿ, ಆಹಾರ ಧಾನ್ಯಗಳ ಸಗಟು ವ್ಯಾಪರ ಬಂದ್

ಆಹಾರ ಧಾನ್ಯಗಳ ಮೇಲಿನ ಜಿ ಎಸ್ ಟಿಗೆ ವಿರೋಧ ಸುದ್ದಿ360, ದಾವಣಗೆರೆ, ಜು.13: ಸಾರ್ವಜನಿಕರ ದಿನನಿತ್ಯದ ಅತ್ಯಾವಶ್ಯಕ ಆಹಾರ ಧಾನ್ಯಗಳ ಮೇಲೆ ಜಿಎಸ್ ಟಿ ವಿಧಿಸಿರುವುದನ್ನು ಖಂಡಿಸಿ, ಅಕ್ಕಿ ಗಿರಣಿದಾರರ ಸಂಘ ಜು.15 ಮತ್ತು 16ರಂದು ಜಿಲ್ಲೆಯಾದ್ಯಂತ ಅಕ್ಕಿ ಗಿರಣಿಗಳ ಬಂದ್ ಮತ್ತು ಆಹಾರ ಧಾನ್ಯಗಳ ಮಾರಾಟ ವಹಿವಾಟನ್ನು ನಿಲ್ಲಿಸುವುದಾಗಿ ಜಿಲ್ಲಾ ಅಕ್ಕಿಗಿರಣಿದಾರರ ಸಂಘದ ಕಾರ್ಯದರ್ಶಿ ಕೋಗುಂಡಿ ಬಕ್ಕೇಶಪ್ಪ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಜಿಎಸ್ ಟಿ ಮಂಡಳಿ ಅಹಾರ ಧಾನ್ಯಗಳ … Read more

ಸ್ವರಾಜ್ಯಕ್ಕೆ ಮುಕ್ಕಾಲು ನೂರು ಸಂಭ್ರಮಕ್ಕೆ ಕನ್ನಡ ತೇರು

ಜು.14ರಿಂದ 17ರವರೆಗೆ ದಾವಣಗೆರೆ ಜಿಲ್ಲಾ ಸಂಚಾರ ಸುದ್ದಿ360, ದಾವಣಗೆರೆ, ಜು.13: ಭಾರತದ 75ನೇ ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವ ನಿಮಿತ್ತ ಯುವಾ ಬ್ರಿಗೇಡ್ ವತಿಯಿಂದ ಸ್ವರಾಜ್ಯಕ್ಕೆ ಮುಕ್ಕಾಲು ನೂರು ಸಂಭ್ರಮಕ್ಕೆ ಕನ್ನಡ ತೇರು ಹೆಸರಿನ ತೇರು ದಾವಣಗೆರೆ ಜಿಲ್ಲೆಯಲ್ಲಿ ಜುಲೈ 14ರಂದು ದಾವಣಗೆರೆ ಜಿಲ್ಲೆ ಪ್ರವೇಶಿಸಿ 17ರವರೆಗೆ ಸಂಚರಿಸಲಿದೆ ಎಂದು ಯುವಾ ಬ್ರಿಗೇಡ್ ನ ಜಿಲ್ಲಾ ಸಂಚಾಲಕ ಕೆ.ಎಸ್. ಗಜೇಂದ್ರ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜೂನ್ 27ರಂದು ಬೀಳಗಿಯಿಂದ ಸಂಚಾರ ಆರಂಭಿಸಿರುವ ತೇರು 100 … Read more

2023ರಲ್ಲಿ 135 ಕ್ಕೂ ಹೆಚ್ಚು ಸ್ಥಾನ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ

ದಾವಣಗೆರೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಸುದ್ದಿ360 ದಾವಣಗೆರೆ, ಜು.12:  2023ರಲ್ಲಿ ನೂರಕ್ಕೆ  ನೂರರಷ್ಟು ಕಾಂಗ್ರೆಸ್ ಸರ್ಕಾರ ಬರುತ್ತದೆ. 135 ಕ್ಕೂ ಹೆಚ್ಚು ಸ್ಥಾನಗಳನ್ನ ಕಾಂಗ್ರೆಸ್ ಗೆಲ್ಲುತ್ತದೆ. ಈಗ ಚುನಾವಣೆ ಮಾಡಿದರೂ ನಾವು ಚುನಾವಣೆಗೆ ಸಿದ್ಧರಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯ ನಾಯಕರಿಗೆ ಈಗಾಗಲೇ ಭಯ ಶುರುವಾಗಿದೆ. ವಿಶೇಷವಾಗಿ ಸಚಿವ ಸ್ಥಾನ ಕಳೆದುಕೊಂಡಿರುವ ಕೆಎಸ್ ಈಶ್ವರಪ್ಪ ಅವರಿಗೆ ಭಯ ಶುರುವಾಗಿದೆ‌. ಇದೇ ಕಾರಣಕ್ಕೆ ಅವರು ಅಮೃತ ಮಹೋತ್ಸವದ ಬಗ್ಗೆ … Read more

ನಿಗಮ ಮಂಡಳಿ: ಹೊಸಬರಿಗೆ ಅವಕಾಶ

ಸುದ್ದಿ360 ಮೈಸೂರು, ಜು.12: ನಿಗಮ ಮಂಡಳಿಗಳಿಗೆ ಹೊಸಬರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನಿಗಮ ಮಂಡಳಿಗಳ ಕೋರ್ ಕಮಿಟಿಯಲ್ಲಿ  ಒಂದೂವರೆ ವರ್ಷ ಮೇಲ್ಪಟ್ಟವರನ್ನು ತೆಗೆದು ಹೊಸಬರಿಗೆ ಅವಕಾಶ ನೀಡಬೇಕು ಎನ್ನುವ ತೀರ್ಮಾನ ಆರು ತಿಂಗಳ ಹಿಂದೆಯೇ ಆಗಿದೆ. ಈ ನಿಟ್ಟಿನಲ್ಲಿ ಬೇರೆಯವರಿಗೂ ಅವಕಾಶ ಒದಗಿಸುವ ಕಾರ್ಯ ನಡೆಯುತ್ತಿದೆ ಎಂದಿದ್ದಾರೆ.

ರೈತರ ಬೇಡಿಕೆಗೆ ಮುಖ್ಯಮಂತ್ರಿಯಿಂದ ಸಕಾರಾತ್ಮಕ ಸ್ಪಂದನೆಯ ಭರವಸೆ

ಸುದ್ದಿ360, ದಾವಣಗೆರೆ, ಜು.12: ಕರ್ನಾಟಕ ರಾಜ್ಯ ರೈತ ಸಂಘದವರ ನಿಯೋಗ ಸೋಮವಾರ‌ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವ ನಿರ್ಧಾರ ಪ್ರಕಟಿಸಿದರು. ರೈತರ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಸಕಾರಾತ್ಮಕವಾಗಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ನಾರಾಯಣಗೌಡ, ಶಾಸಕ ಸಿ ಪಿ ಯೋಗೇಶ್ವರ  ಸೇರಿದಂತೆ ಇತರರು ಉಪಸ್ಥಿತರಿದ್ದರು.

ಶರಣ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳಿ: ಬಸವಪ್ರಭುಶ್ರೀ

ಸುದ್ದಿ360, ದಾವಣಗೆರೆ ಜು.11: ಮಾನವ ಬದುಕಿನಲ್ಲಿ ಸತ್ ಚಿಂತನೆ ಬೇಕು , ಸತ್ ಚಿಂತನೆ ಇಲ್ಲದೇ ಹೋದರೆ ಬದುಕು ದುಷ್ಕೃತ್ಯದ ಗೂಡು ಆಗುತ್ತದೆ ಎಂದು ಬಸವಪ್ರಭು ಸ್ವಾಮೀಜಿ ಹೇಳಿದರು. ನಗರದ ಶ್ರೀ ಶಿವಯೋಗಾಶ್ರಮದಲ್ಲಿ ಸೋಮವಾರ ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 65 ನೇ ಸ್ಮರಣೋತ್ಸವ, ಶರಣ ಸಂಸ್ಕೃತಿ ಉತ್ಸವದ ನಿಮಿತ್ತ ಜರುಗಿದ ವಿಶೇಷ ಪ್ರವಚನ ಮಾಲೆಯ ಸಾನಿಧ್ಯ ವಹಿಸಿ ಅವರಯ ಆಶೀರ್ವಚನ ನೀಡಿದರು. ಶರಣ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳಿ ಪ್ರತಿಯೊಬ್ಬ ವ್ಯಕ್ತಿಯಲ್ಲಿ ದುಷ್ಟ ವಿಚಾರಗಳು ಬಂದೇ ಬರುತ್ತವೆ. … Read more

ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಾಪಶಿ

ಸುದ್ದಿ360, ದಾವಣಗೆರೆ ಜು.11: ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಾಪಶಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ತಕ್ಷಣದಿಂದಲೇ ಆದೇಶ ಜಾರಿಗೆ ಬರುವಂತೆ ದಾವಣಗೆರೆ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನೇಮಿಸಿದೆ. ಶಿವಾನಂದ ಕಾಪಶಿ ಅವರು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ‌ ವ್ಯವಸ್ಥಾಪಕ ನಿರ್ದೇಶಕರಾಗಿ ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಮಹಾಂತೇಶ್ ಬೀಳಗಿ ಅವರಿಗೆ ವರ್ಗಾವಣೆ ಆಗಿದ್ದು ಈವರೆಗೂ ಯಾವುದೇ ಸ್ಥಳ ತೋರಿಸಿಲ್ಲ. ಕರ್ನಾಟಕ ರಾಜ್ಯಪಾಲರ ಆದೇಶದ … Read more

ಮೀಸಲಾತಿ: ಜಿಲ್ಲಾಡಳಿತ ಕಚೇರಿ ಮುತ್ತಿಗೆಗೆ ಮುಂದಾದ ಎಸ್ಸಿ-ಎಸ್ಟಿ ಸಂಘಟನೆಗಳು

ಅರ್ಧಗಂಟೆಗೂ ಹೆಚ್ಚು ಕಾಲ ಜಿಲ್ಲಾಡಳಿತ ಭವನ ಮುಖ್ಯ ದ್ವಾರದ ಎದುರು ಪಿಬಿ ರಸ್ತೆ ತಡೆ ಸುದ್ದಿ360, ದಾವಣಗೆರೆ ಜು.11: ಕರ್ನಾಟಕ ಸ್ವಾಭಿಮಾನಿ ಎಸ್ಸಿ-ಎಸ್ಟಿ ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಸದಸ್ಯರು, ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೆ ಆಗ್ರಹಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಮುಂದಾದ ಘಟನೆ ಸೋಮವಾರ ನಗರದಲ್ಲಿ ಜರುಗಿತು. ಮುನ್ನೆಚ್ಚರಿಕೆ ಕ್ರಮವಾಗಿ ಪಿಬಿ ರಸ್ತೆಗೆ ಹೊಂದಿಕೊಂಡಿರುವ ಜಿಲ್ಲಾಡಳಿತ ಭವನದ ಮುಖ್ಯದ್ವಾರದ ಕಮಾನು ಬಳಿಯೇ ಪೊಲೀಸರು ಬ್ಯಾರಿಕೇಡ್ … Read more

ಸಿದ್ಧರಾಮೋತ್ಸವ ಅಲ್ಲ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ: ಎಚ್. ಎಮ್. ರೇವಣ್ಣ

ಸುದ್ದಿ360, ದಾವಣಗೆರೆ ಜು.11: ಸಿದ್ಧರಾಮೋತ್ಸವ ಅಲ್ಲ ಇದು ಸಿದ್ಧರಾಮಯ್ಯರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ. ಅವರ ಜೀವನದಲ್ಲಿನ ಒಂದು ಸಂಭ್ರಮದ ಸನ್ನಿವೇಶ ಇದಾಗಿದೆ ಎಂದು ಕುರುಬರ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷರಾದ ಎಚ್. ಎಮ್. ರೇವಣ್ಣ ತಿಳಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ಧರಾಮಯ್ಯನವರು ತಮ್ಮ ರಾಜಕೀಯ ಜೀವನದಲ್ಲಿ ಕಳಂಕರವಹಿತವಾಗಿ ಉತ್ತಮ ಜೀವನ ನಡೆಸುವುದರ ಜೊತೆಗೆ, ಕಷ್ಟ-ಸುಖಗಳನ್ನು ಅನುಭವಿಸಿ, ರಾಜ್ಯದಲ್ಲಿ ಬಲಿಷ್ಟ ನಾಯಕನಾಗಿ ಬೆಳೆದು, ಐದು ವರ್ಷ ಉತ್ತಮ ಆಡಳಿತ ಕೊಟ್ಟಿದ್ದಾರೆ. ನೆಚ್ಚಿನ ನಾಯಕ 75 ವಸಂತಗಳನ್ನು ಕಳೆದಿರುವ … Read more

ಭೂಕುಸಿತ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ನಿರ್ಭಂಧ: ಬದಲಿ ಸಂಚಾರ ವ್ಯವಸ್ಥೆ

ಸುದ್ದಿ360, ಶಿವಮೊಗ್ಗ ಜು.10: ಭಾರಿ ಮಳೆಯಿಂದಾಗಿ ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಸ್ಥಳದಲ್ಲಿ ಭೂ ಕುಸಿತದ ಮಣ್ಣು ಮತ್ತು ಮರಮಟ್ಟುಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ವಾಹನಗಳ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು. … Read more

error: Content is protected !!