ರಾಹುಲ್ ಗಾಂಧಿಗೆ ಇಡಿ ನೋಟಿಸ್ ಬಿಜೆಪಿ ಷಡ್ಯಂತ್ರ: ಸಿದ್ಧರಾಮಯ್ಯ

ಸುದ್ದಿ ೩೬೦, ಶಿವಮೊಗ್ಗ ಜೂ,15: ಸೋನಿಯಾ ಹಾಗೂ ರಾಹುಲ್ ಗಾಂಧಿಗೆ ಬಿಜೆಪಿಯಿಂದ ರಾಜಕೀಯ ಕಿರುಕುಳ ನೀಡಲಾಗುತ್ತಿದೆ. ರಾಹುಲ್ ಗಾಂಧಿಗೆ ಇಡಿ ನೋಟಿಸ್ ನೀಡಿರುವುದು ಬಿಜೆಪಿಯ ಷಡ್ಯಂತ್ರವಾಗಿದೆ. ಬಿಜೆಪಿ ರಾಜಕೀಯ ದ್ವೇಷ ಕಾರುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತೀರ್ಥಹಳ್ಳಿಯ ಜೂನಿಯರ್ ಕಾಲೇಜಿನ ಹೆಲಿಪ್ಯಾಡ್ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಷನಲ್ ಹೆರಾಲ್ಡ್ ಪತ್ರಿಕೆ 1938ರಲ್ಲಿ ನೆಹರೂ ಪ್ರಾರಂಭ ಮಾಡಿದ್ದು, ಈ ಪ್ರಕರಣದ ಬಗ್ಗೆ ಈ ಹಿಂದೆಯೇ ತನಿಖೆ ಮಾಡಿ, ರಿಪೋರ್ಟ್ … Read more

ಬಿದ್ದ ಮರಕ್ಕೆ ಬೈಕ್ ಡಿಕ್ಕಿ- ಬೈಕ್‌ ಸವಾರ  ಸ್ಥಳದಲ್ಲೆ ಸಾವು

ಸುದ್ದಿ360 ಬೆಳ್ತಂಗಡಿ, ಜೂ.15 : ಬೆಳಗ್ಗಿನ ಜಾವ ರಸ್ತೆಗೆ ಅಡ್ಡವಾಗಿ ಮರ ಬಿದ್ದಿದ್ದು ಇದನ್ನು ಗಮನಿಸದ ಬೈಕ್ ಸವಾರ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಳಿಯ ಅಡ್ಯಾಲ ಚಡವು ಎಂಬಲ್ಲಿ ಬೆಳಗಿನ ಜಾವ ಸುಮಾರು 5.30ರ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಬೈಕ್ ಸವಾರ ಕನ್ಯಾಡಿ ಬಳಿ ಇರುವ ಹೊಟೇಲ್ ಮಾಲಿಕ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಮುಗುಳಿಚತ್ರ ನಿವಾಸಿ ನೇಮಿರಾಜ್ … Read more

ಪಶ್ಚಿಮ ಶಿಕ್ಷಕರ ಕ್ಷೇತ್ರ: ಬಿಜೆಪಿಯ ಬಸವರಾಜ ಹೊರಟ್ಟಿ ದಾಖಲೆ ಜಯ

ಸುದ್ದಿ360 ಬೆಳಗಾವಿವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲವು ಸಾಧಿಸಿದ್ದಾರೆ. ಈ ಮೂಲಕ ಸತತ 8 ನೇ ಬಾರಿ ಹೊರಟ್ಟಿ ಇದೇ ಕ್ಷೇತ್ರದಲ್ಲಿ ತಮ್ಮ ಗೆಲುವಿನ ಓಟ ಮುಂದುವರಿಸಿದ್ದಾರೆ. ಬೆಳಗಾವಿಯ ಜ್ಯೋತಿ ಕಾಲೇಜಿನಲ್ಲಿ £ಬುಧವಾರ ಬೆಳಗ್ಗೆ 8 ಗಂಟೆಗೆ ಮತಗಳ ಎಣಿಕೆ ಆರಂಭವಾಗಿ, ಮೊದಲು ಅನರ್ಹ ಮತಗಳನ್ನು ಬೇರ್ಪಡಿಸಲಾಯಿತು. ಒಟ್ಟು 9,266 ಮತಗಳನ್ನು ಪಡೆದ ಹೊರಟ್ಟಿ, ಕಾಂಗ್ರೆಸ್ ಬಸವರಾಜ ಗುರಿಕಾರ ವಿರುದ್ಧ 4669 ದಾಖಲೆ ಮತಗಳ ಅಂತರದಲ್ಲಿ ವಿಜಯ … Read more

ಜೂನ್ 16: ದಾವಣಗೆರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ದಾವಣಗೆರೆ, ಜೂನ್ 14: ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇವರು ಜೂನ್ 16 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 16 ರ ಬೆಳಿಗ್ಗೆ 9,30ಕ್ಕೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 10,20 ಕ್ಕೆ ದಾವಣಗೆರೆ ಜಿ.ಎಂ.ಐ.ಟಿ.ಹೆಲಿಪ್ಯಾಡ್ ತಲುಪಲಿದ್ದಾರೆ. ಮಧ್ಯಾಹ್ನ 2.30 ರಿಂದ 4 ಗಂಟೆವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಜೆ 4 ಗಂಟೆಗೆ ಜಿ.ಎಂ.ಐ.ಟಿ ಹೆಲಿಪ್ಯಾಡ್ ನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಪ್ಪು ಮಾಡಿಲ್ಲವಾದರೆ ತನಿಖೆಗೆ ಸಹಕರಿಸಲಿ: ಸಂಸದ ತೇಜಸ್ವಿ ಸೂರ್ಯ

ದಾವಣಗೆರೆ, ಜೂ.14: ಸರಕಾರದ ಯಾವುದೇ ಸಂಸ್ಥೆಗಳು ನಮ್ಮನ್ನು ತನಿಖೆ ಮಾಡುವುದಿರಲಿ, ಪ್ರಶ್ನೆ ಮಾಡುವುದಕ್ಕೂ ಸಾಧ್ಯವಿಲ್ಲ ಎಂಬ ಭಾವನೆಯಲ್ಲಿ ರಾಹುಲ್, ಸೋನಿಯಾ ಹಾಗೂ ಕಾಂಗ್ರೆಸಿಗರಿದ್ದಾರೆ ಎಂಬುದು ಅವರ ಈ ಪ್ರತಿಭಟನೆಯ ಸಂಕೇತ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದು ಎಂಥವರಿಗೂ ಕಣ್ಣಿಗೆ ಕಾಣಿಸುವಂತಿದೆ. ಒಂದೊಮ್ಮೆ ಅವರು ತಪ್ಪು ಮಾಡಿಲ್ಲ, ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂದಾದರೆ ತನಿಖೆಗೆ ಸಹಕರಿಸಬೇಕಿತ್ತು. ಕೋರ್ಟ್‌ಗೆ ಹಾಜರಾಗಿ ಅಲ್ಲಿ ಬರುವ ತೀರ್ಪನ್ನು … Read more

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಧ್ಯೇಯ ಸರ್ಕಾರಕ್ಕಿದೆ : ಸಚಿವ ಬಿ.ಸಿ ನಾಗೇಶ್

ದಾವಣಗೆರೆ ಜೂ.14 : ರಾಜ್ಯಾದ್ಯಂತ ಅವಶ್ಯಕತೆ ಇರುವ ಸರ್ಕಾರಿ ಶಾಲೆಗಳಿಗೆ ಸುಸಜ್ಜಿತ ಕಟ್ಟಡದೊಂದಿಗೆ ಮೂಲಭೂತ ಸೌಲಭ್ಯಗಳನ್ನು ನೀಡಿ, ಗುಣಮಟ್ಟದ ಶಿಕ್ಷಣ ನೀಡುವ ಧ್ಯೇಯವನ್ನು ಸರ್ಕಾರ ಹೊಂದಿದೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ಹೇಳಿದರು. ಇಂದು ದಾವಣಗೆರೆ ತಾಲ್ಲೂಕಿನ ಹಳೆ ಬಿಸಲೇರಿ ಗ್ರಾಮದಲ್ಲಿ ದಾನಿಗಳಾದ ಶ್ರೀಮತಿ ಗೌರಮ್ಮ ಕುಂದೂರು ವೀರಭದ್ರಪ್ಪ ಟ್ರಸ್ಟ್ ಹಾಗೂ ಕುಂದೂರು ಕನ್‍ಸ್ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇವರುಗಳು ನಿರ್ಮಿಸಿರುವ ನೂತನ ಶಾಲಾ ಕಟ್ಟಡದ ಹಸ್ತಾಂತರ ಸಮಾರಂಭದಲ್ಲಿ ಭಾಗವಹಿಸಿ … Read more

ದಾವಣಗೆರೆಗೆ ಶಿಕ್ಷಣ ಸಚಿವರ ಭೇಟಿ

ದಾವಣಗೆರೆ, ಜೂ.13:  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಜೂ. 14 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 7.30 ಕ್ಕೆ ಬೆಂಗಳೂರಿನಿಂದ ಹೊರಟು 10.30 ಕ್ಕೆ ದಾವಣಗೆರೆಗೆ ಆಗಮಿಸುವರು. ನಂತರ 10.40 ಕ್ಕೆ ದಾವಣಗೆರೆ ದಕ್ಷಿಣ ವಲಯದ ಹಳೇ ಬಿಸಲೇರಿಯ ಕುಂದೂರು ಮುರಿಗೆಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಹಸ್ತಾಂತರ ಸಮಾರಂಭದಲ್ಲಿ ಭಾಗವಹಿಸುವರು. ತದ ನಂತರ ಮಧ್ಯಾಹ್ನ 3 ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ದಾವಣಗೆರೆ-ಚಿತ್ರದುರ್ಗ ಜಿಲ್ಲೆಗಳ ಇಲಾಖಾ … Read more

ಜೂ.24ಕ್ಕೆ ಬೆಳ್ಳಿತೆರೆಯ ಮೇಲೆ ‘ತ್ರಿವಿಕ್ರಮ’

ನಾಯಕ ವಿಕ್ರಮ್, ನಾಯಕಿ ಆಕಾಂಕ್ಷಾ ಶರ್ಮಾ ಡ್ಯಾನ್ಸ್ ಗೆ ಯುವಪಡೆ ಫಿದಾ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅಭಿನಯದ ಮೊದಲ ಚಿತ್ರ ದಾವಣಗೆರೆ, ಜೂ.13: ದಾವಣಗೆರೆ ಜನ ನಮ್ಮ ತಂದೆಯನ್ನು ಅತ್ಯಂತ ಪ್ರೀತಿಯಿಂದ ಆಧರಿಸಿದ್ದಾರೆ. ಅಣ್ಣನಿಗೂ ಅದೇ ಪ್ರೀತಿ ಸಿಕ್ಕಿದೆ. ಇದೇ 24ರಂದು ನಗರದ ಅಶೋಕ ಚಿತ್ರಮಂದಿರದಲ್ಲಿ ನನ್ನ ಮೊದಲ ಚಿತ್ರ ‘ತ್ರಿವಿಕ್ರಮ’ ಬಿಡುಗಡೆಯಾಗಲಿದೆ.  ಬೆಣ್ಣೆ ನಗರಿ ಜನ ನನಗೂ ಅಷ್ಟೇ ಪ್ರೀತಿ ಕೊಟ್ಟು ಬೆಂಬಲಿಸುತ್ತಾರೆ ಎಂದು ಕ್ರೇಜಿಸ್ಟಾರ್ ರವಿಚಂದ್ರನ್ ದ್ವಿತೀಯ ಪುತ್ರ ವಿಕ್ರಮ್ ವಿಶ್ವಾಸ ವ್ಯಕ್ತಪಡಿಸಿದರು. … Read more

ಪಿಎಸ್‌ಐ ಭ್ರಷ್ಟಾಚಾರದಲ್ಲಿ ಭಾಗಿಯಾದವರಿಗೆ ತಕ್ಕ ಪಾಠ: ಗೃಹ ಮಂತ್ರಿ

ದಾವಣಗೆರೆ, ಜೂ.೦೮: ಪಿಎಸ್‌ಐ ಭ್ರಷ್ಟಾಚಾರಕ್ಕೆ ಸಂಬಂಧ ಪಟ್ಟಂತೆ ಯಾರನ್ನೂ ಬಿಡುವುದಿಲ್ಲ. ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಇಲಾಖೆಯ ಡಿವೈಎಸ್ಪಿಯವರನ್ನು ಕೂಡ ಬಂಧಿಸಲಾಗಿದೆ. ಅಲ್ಲದೆ ಸಿಐಡಿಯಿಂದ ಉತ್ತಮ ಟೀಮ್ ವರ್ಕ್ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಅವರು ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಪೊಲೀಸ್ ಘಟಕದ ಪರಿವೀಕ್ಷಣಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಎಕ್ಸಾಮಿನೇಷನ್ ಎಂದರೆ ಇಂತಹ ಭ್ರಷ್ಟಾಚಾರಗಳನ್ನು ಮಾಡಬಹುದು ಎಂದು ಕೆಲವರು ಅಂದುಕೊಂಡಿದ್ದಾರೆ. ಇದು ಇಂದಿನದಲ್ಲ … Read more

ಪಾದಯಾತ್ರೆ ಮೊಟಕುಗೊಳಿಸಿದ ಸಿದ್ಧರಾಮಯ್ಯ

ಹೆಗ್ಗನೂರು: ಕೊರೋನಾ ನಿಯಮ, ನಿರ್ಬಂಧಗಳ ನಡುವೆಯೇ ಮೇಕೆದಾಟು ಪಾದಯಾತ್ರೆಗೆ ಜ.09 ರಂದು ರಾಜ್ಯ ಕಾಂಗ್ರೆಸ್ ಚಾಲನೆ ನೀಡಿದೆ. ಪಾದಯಾತ್ರೆ ಕನಕಪುರದ ಹೆಗ್ಗನೂರು ತಲುಪಿದ್ದು, ಇದರಲ್ಲಿ ಭಾಗಿಯಾಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ, ಸುಸ್ತು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರು ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಸಿದ್ದರಾಮಯ್ಯ ಅವರ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಸಿದ್ದರಾಮಯ್ಯಗೆ ಆರೋಗ್ಯ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಸಚಿವ ಗೋವಿಂದ ಕಾರಜೋಳ “ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡಿದ್ದು … Read more

error: Content is protected !!