ವಿವಿಧ ಕಂಪನಿಗಳಿಗೆ ಆಯ್ಕೆಯಾದ 2023 ಸಾಲಿನ ವಿದ್ಯಾರ್ಥಿಗಳ ಗ್ರೂಪ್ ಫೋಟೋ ಅನಾವರಣ

ಸುದ್ದಿ360, ದಾವಣಗೆರೆ: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ 2023ರ ಸಾಲಿನ ವಿವಿಧ ಕಂಪನಿಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳ ಗ್ರೂಪ್ ಫೋಟೋ ಅನಾವರಣಗೊಳಿಸಲಾಯಿತು.

ಪ್ರತಿ ವರ್ಷದಂತೆ ಈ ವರ್ಷವೂ ಅಂದರೆ 2023ರ ಸಾಲಿನ  ವಿವಿಧ ಪ್ರತಿಷ್ಠಿತ ಕಂಪನಿಗಳಿಗೆ ಆಯ್ಕೆಯಾದ ಒಟ್ಟು 610 ವಿದ್ಯಾರ್ಥಿಗಳ ಗ್ರೂಪ್ ಫೋಟೋ ಅನಾವರಣಗೊಳಿಸುವ ಕಾರ್ಯಕ್ರಮಕ್ಕೆ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಚಾಲನೆ ನೀಡಿದರು. ಇವರಿಗೆ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ವೈ ಯು ಸುಭಾಷ್ ಚಂದ್ರ ಸಾತ್ ನೀಡಿದ್ದು ವಿಶೇಷವಾಗಿತ್ತು.

ನಂತರ ಮಾತನಾಡಿದ ಪ್ರಾಂಶುಪಾಲರು, ಪ್ರತಿ ವರ್ಷವೂ ವಿದ್ಯಾರ್ಥಿಗಳಿಗೆ ತರಬೇತಿಗಳನ್ನು ನೀಡುತ್ತಾ, ಪ್ರತಿಷ್ಠಿತ ಕಂಪನಿಗಳ ಸಂದರ್ಶನ ಪ್ರಕ್ರಿಯೆ ಮೂಲಕ ಅನೇಕ ವಿದ್ಯಾರ್ಥಿಗಳಿಗೆ ಕೆಲಸ ನೀಡುವ ವಿಶೇಷ ಕಾಳಜಿಯು ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಶ್ರಮವಹಿಸುವ ಮೂಲಕ ಕಾಲೇಜಿಗೆ ಸೇರ್ಪಡೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೂ ಕೆಲಸ ಸಿಗುವಂತಾಗಲಿ ಎಂದು ಹಾರೈಸಿದರು.

ಇದೆ ವೇಳೆ ಜಿಎಂಐಟಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾದ ಡಾ ಶ್ರೀಧರ್ ಬಿ ಆರ್, ಕಾಲೇಜಿನ ಅಕಾಡೆಮಿಕ್ ಡೀನ್ ಮತ್ತು ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ ಸುನಿಲ್ ಕುಮಾರ್ ಬಿಎಸ್, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ಉಪಸ್ಥಿತರಿದ್ದರು.

Leave a Comment

error: Content is protected !!