ಗ್ಯಾರೆಂಟಿ ಹೆಸರಲ್ಲಿ ಹೆಂಡ್ತಿಗೆ ನೀಡಿದ ಹಣ, ಗಂಡನಿಂದ ವಸೂಲಿ ಪಾಲಿಸಿ : ಬಸವರಾಜ ಬೊಮ್ಮಾಯಿ

ಬರಗಾಲದಲ್ಲಿ ನೀರು ಕೊಡದಿರುವ ಸರ್ಕಾರ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ

ಸುದ್ದಿ360 ಸೆ.25 ಬೆಂಗಳೂರು: ಬರಗಾಲದಲ್ಲಿ ನೀರು ಕೊಡದಿರುವ ಸರ್ಕಾರ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ. ಇದು ಸಾರಾಯಿ ಗ್ಯಾರೆಂಟಿ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವುದು ಸರ್ಕಾರದ ನೈತಿಕ ದಿವಾಳಿತನವನ್ನು ತೋರಿಸುತ್ತದೆ. ಒಂದೆಡೆ ಗ್ಯಾರೆಂಟಿ ಹೆಸರಲ್ಲಿ ಮಹಿಳೆಯರಿಗೆ 2000 ರೂ. ನೀಡುವುದಾಗಿ ಹೇಳುವ ಸರ್ಕಾರ ಅದೇ ಹಣವನ್ನು ಅವರ ಗಂಡಂದಿರಿಂದ ವಸೂಲಿ ಮಾಡಲು ಮದ್ಯ ಮಾರಾಟದ ಮಾರ್ಗ ಹುಡುಕಿಕೊಂಡಂತಿದೆ. ಹೆಂಡತಿಯ ದುಡ್ಡು ಗಂಡಂದಿರಿಂದ ಪಡೆಯುವ ಮನಿ ರಿಟರ್ನ್ ಪಾಲಿಸಿ ಹಾಕಿಕೊಂಡ ಹಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಸರ್ಕಾರಿ ಮದ್ಯದಂಗಡಿ ತೆರೆಯುತ್ತಿರುವುದಾಗಿ ಅಬಕಾರಿ ಸಚಿವರು ಹೇಳಿರುವುದು ಹಾಸ್ಯಾಸ್ಪದವಾಗಿದೆ. ಅಕ್ರಮ ತಡೆಯಲಾಗದಿದ್ದರೆ ನಿಮ್ಮ ಇಲಾಖೆ ಮಾಡುವುದಾದರೂ ಏನು ಎಂದು ಪ್ರಶ್ನಿಸಿದ್ದಾರೆ.

ಗ್ಯಾರೆಂಟಿ ಯೋಜನೆಯಲ್ಲಿ ಮನೆ ಯಜಮಾನಿ ಹುಡುಕುವ ಹೆಸರಲ್ಲಿ ಅತ್ತೆ ಸೊಸೆ ನಡುವೆ ಜಗಳ ಹಚ್ಚಿರುವ ಸರ್ಕಾರ ಇನ್ನು ಸಾರಾಯಿ ಕುಡಿಯಲು ಹಣಕ್ಕಾಗಿ ಗಂಡ ಹೆಂಡಿರ ನಡುವೆ ಜಗಳ ಹಚ್ಚಲು ಮುಂದಾಗಿದೆ. ಸರ್ಕಾರ ಆದಾಯ ಗಳಿಸಲು ಮದ್ಯ ಮಾರಾಟ ಮೊರೆ ಹೋದರೆ, ಸರ್ಕಾರದ ಗ್ಯಾರೆಂಟಿ ಪಡೆಯುವ ಮಹಿಳೆಯರೇ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವುದು ಸರ್ಕಾರದ ನೈತಿಕ ದಿವಾಳಿತನವನ್ನು ತೋರಿಸುತ್ತದೆ. ಒಂದೆಡೆ ಗ್ಯಾರೆಂಟಿ ಹೆಸರಲ್ಲಿ ಮಹಿಳೆಯರಿಗೆ 2000 ರೂ. ನೀಡುವುದಾಗಿ ಹೇಳುವ ಸರ್ಕಾರ ಅದೇ ಹಣವನ್ನು ಅವರ ಗಂಡಂದಿರಿಂದ ವಸೂಲಿ ಮಾಡಲು ಮದ್ಯ ಮಾರಾಟದ ಮಾರ್ಗ ಹುಡುಕಿಕೊಂಡಂತಿದೆ. ಹೆಂಡತಿಯ ದುಡ್ಡು ಗಂಡಂದಿರಿಂದ ಪಡೆಯುವ ಮನಿ ರಿಟರ್ನ್ ಪಾಲಿಸಿ ಹಾಕಿಕೊಂಡ ಹಾಗಿದೆ.

ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಸರ್ಕಾರಿ ಮದ್ಯದಂಡಗಿ ತೆರೆಯುತ್ತಿರುವುದಾಗಿ ಅಬಕಾರಿ ಸಚಿವರು ಹೇಳಿರುವುದು ಹಾಸ್ಯಾಸ್ಪದವಾಗಿದೆ. ಅಕ್ರಮ ತಡೆಯಲಾಗದಿದ್ದರೆ ನಿಮ್ಮ ಇಲಾಖೆ ಮಾಡುವುದಾದರೂ ಏನು ?

ಗ್ಯಾರೆಂಟಿ ಯೋಜನೆಯಲ್ಲಿ ಮನೆ ಯಜಮಾನಿ ಹುಡುಕುವ ಹೆಸರಲ್ಲಿ ಅತ್ತೆ ಸೊಸೆ ನಡುವೆ ಜಗಳ ಹಚ್ಚಿರುವ ಸರ್ಕಾರ ಇನ್ನು ಸಾರಾಯಿ ಕುಡಿಯಲು ಹಣಕ್ಕಾಗಿ ಗಂಡ ಹೆಂಡಿರ ನಡುವೆ ಜಗಳ ಹಚ್ಚಲು ಮುಂದಾಗಿದೆ.

ಸರ್ಕಾರ ಆದಾಯ ಗಳಿಸಲು ಮದ್ಯ ಮಾರಾಟ ಮೊರೆ ಹೋದರೆ, ಸರ್ಕಾರದ ಗ್ಯಾರೆಂಟಿ ಪಡೆಯುವ ಮಹಿಳೆಯರೇ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ.

ಬರಗಾಲದಲ್ಲಿ ನೀರು ಕೊಡದಿರುವ ಸರ್ಕಾರ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ. ಇದು ಸಾರಾಯಿ ಗ್ಯಾರೆಂಟಿ ಸರ್ಕಾರ ಎಂದಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!