ssucide

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ #KarnatakaSoapandDetergentCorporation ಅಧಿಕಾರಿಯೊಬ್ಬರು ಡೆತ್ ನೋಟ್  ಕೈಯಲ್ಲಿ ಹಿಡಿದುಕೊಂಡು ಆತ್ಮಹತ್ಯೆಗೆ #Sucide ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೃತ ಅಧಿಕಾರಿ ಅಮೃತ್ ಸಿರಿಯೂರ್ ಎಂದು ಗುರುತಿಸಲಾಗಿದೆ. ಕೈಯಲ್ಲಿ ಡೆತ್ ನೋಟ್ ಹಿಡಿದುಕೊಂಡು ಅಮೃತ್ ಸಿರಿಯೂರ್ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

ಅಮೃತ್ ಅವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದು ಇಂದು ಪ್ರಕರಣ ಬೆಳಕಿಗೆ ಬಂದಿದೆ.  ಕೆಎಸ್ಡಿಎಲ್ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಮೃತ್ ಸಿರಿಯೂರ್‍ ಡೆತ್ ನೋಟ್’ನಲ್ಲಿ ಹಿರಿಯ ಅಧಿಕಾರಿಗಳ ಹೆಸರನ್ನು ಉಲ್ಲೇಖ ಮಾಡಿದ್ದಾರೆ ಎಂದು ಹೇಳಲಾಗಿದ್ದರೂ, ಅಧಿಕೃತ ಮಾಹಿತಿ ಪೊಲೀಸ್ ಅಧಿಕಾರಿಗಳಿಂದ ಪ್ರಕಟಗೊಂಡಿಲ್ಲ.

ಕೆಲಸದ ಸಂಬಂಧ ಒತ್ತಡ ಹಾಗೂ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್ ನೋಟ್’ನಲ್ಲಿ ಆರೋಪಿಸಿದ್ದಾರೆ ಎಂದು ಹೇಳಲಾಗಿದ್ದು, ಪೊಲೀಸ್ ಅಧಿಕಾರಿಗಳಿಂದ ಅಧಿಕೃತ ಮಾಹಿತಿ ಹೊರಬೀಳಬೇಕಿದೆ. ಮಹಾಲಕ್ಷ್ಮೀ ಲೇಔಟ್‍ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

By admin

Leave a Reply

Your email address will not be published. Required fields are marked *

error: Content is protected !!