ದಾವಣಗೆರೆ ಜಿಲ್ಲಾ ಕಸಾಪ ವತಿಯಿಂದ ಮಹಾತ್ಮ ಗಾಂಧೀಜಿ – ಲಾಲ್ ಬಹದ್ದೂರ್ ಶಾಸ್ತ್ರಿಜಿ ಹುಟ್ಟುಹಬ್ಬ ಆಚರಣೆ

ಸುದ್ದಿ360 ದಾವಣಗೆರೆ ಅ.1: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅ.2ರ ಸೋಮವಾರ ಮುಂಜಾನೆ 8.30 ಘಂಟೆಗೆ ದಾವಣಗೆರೆ ವಿದ್ಯಾನಗರ ಮುಖ್ಯ ರಸ್ತೆಯಲ್ಲಿರುವ ಕುವೆಂಪು ಕನ್ನಡ ಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154 ನೇ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 119 ನೇ ಜನ್ಮ ದಿನಾಚರಣೆ ಆಚರಿಸಲಾಗುವುದು.

ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ವಹಿಸುವರು ಹಾಗೂ ವಿನೂತನ ಮಹಿಳಾ ಸಮಾಜದ ಸದಸ್ಯೆಯರಿಂದ ಸರ್ವ ಧರ್ಮ ಪ್ರಾರ್ಥನೆಯನ್ನು ಹಮ್ಮಿಕೊಳ್ಳಲಾಗಿದೆ. ಸದರಿ ಕಾರ್ಯಕ್ರಮಕ್ಕೆ ಜಿಲ್ಲೆಯ ಸಾಹಿತಿಗಳು, ಲೇಖಕರು, ಕವಿಗಳು, ಕಲಾವಿದರು, ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು ಹಾಗೂ ಸರ್ವ ಕನ್ನಡಿಗರು ಆಗಮಿಸಬೇಕಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.

Leave a Comment

error: Content is protected !!