ನನ್ನ ಹೆಣ ಕೂಡ ಬಿಜೆಪಿ ಕಚೇರಿ ಮುಂದೆ ಹೋಗೋದಿಲ್ಲ : ಲಕ್ಷ್ಮಣ ಸವದಿ

ಕಮಲ ತೊರೆದು ‘ಕೈ’ ಸಿದ್ಧಾಂತಕ್ಕೆ ಯಸ್ ಎಂದ ಸವದಿ ಸುದ್ದಿ360 ಬೆಂಗಳೂರು ಏ.14: ಬಿಜೆಪಿಯಲ್ಲಿ ನನಗೆ ಅವಮಾನವಾಗಿದೆ ಎಂದು ಕೆಂಡದುಂಡೆಯಾಗಿರುವ ಸವದಿ ಇಂದು ಬಿಜೆಪಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ‘ಕೈ’ ಪಡೆಯನ್ನು ಸೇರಿದ್ದಾರೆ. ಸವದಿ ಬೆಂಗಳೂರಿಗೆ ಬರುತ್ತಿದ್ದಂತೆ ಡಿಕೆಶಿಯೊಂದಿಗೆ ಎರಡು ಗಂಟೆಗಳ ಕಾಲ ಸುಧೀರ್ಘ ಚರ್ಚೆ ನಡೆದಿದ್ದು, ಈ ವೇಳೆ ಮಾಜಿ ಸಿ.ಎಂ. ಸಿದ್ಧರಾಮಯ್ಯ, ರಣದೀಪ್ ಸುರ್ಜಿವಾಲ ಉಪಸ್ಥಿತರಿದ್ದರು. ಬಿಜೆಪಿಯಿಂದ ಟಿಕೆಟ್ ದಕ್ಕದಿದ್ದರಿಂದ ಕಾಂಗ್ರೆಸ್  ಕಡೆ ಮುಖ ಮಾಡಿರುವ ಲಕ್ಷ್ಮಣ ಸವದಿ, ರಾಜ್ಯ ಕಾಂಗ್ರೆಸ್ ನಾಯಕರ … Read more

ಮಾಸಾಶನ ಪಡೆಯುತ್ತಿರುವ ಕಲಾವಿದರು  ಜೀವಂತ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ದಾವಣಗೆರೆ; ಏ.13: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಶಾಸನ ಪಡೆಯುತ್ತಿರುವ ಸಾಹಿತಿ ಮತ್ತು ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರವನ್ನು ಏಪ್ರಿಲ್ 25 ರೊಳಗಾಗಿ ಸಲ್ಲಿಸಬೇಕು. ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಇತ್ತೀಚಿನ ಭಾವಚಿತ್ರ ಮತ್ತು ಬ್ಯಾಂಕ್ ಪಾಸ್ ಬುಕ್‍ನೊಂದಿಗೆ ಜೀವಿತಾವಧಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಬ್ಯಾಂಕ್ ಮ್ಯಾನೇಜರ್ ಸಹಿ ಪಡೆದು ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ.27 ರಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಮತ್ತು ಹೆಚ್ಚಿನ … Read more

ರಾಜಕಾರಣದಲ್ಲಿ ಪಕ್ಷಾಂತರ ಸಾಮಾನ್ಯ – ಭಿನ್ನಮತ ಶಮನವಾಗಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಮಂಗಳೂರು, ಏಪ್ರಿಲ್ 13: ರಾಜಕಾರಣದಲ್ಲಿ ಪಕ್ಷ ಬದಲಿಸೋದು ಸಾಮಾನ್ಯ ಆಗ್ತಾ ಇರುತ್ತೆ. ಅಸಮಾಧಾನಗೊಂಡವರ ಮನವೊಲಿಕೆ ಮಾಡುತ್ತೇವೆ.  ಪಕ್ಷದಲ್ಲಿ ಎದ್ದಿರುವ ಅಸಮಾಧಾನ ಸರಿಪಡಿಸಲಾಗುತ್ತಿದೆ.  ಕಾರ್ಯಕರ್ತರು ಗಟ್ಟಿ ಇದ್ದಾರೆ, ಇದರಿಂದ ಯಾವುದೇ ಹಾನಿಯಾಗುವುದಿಲ್ಲ  ಬಹುತೇಕ ಕಡೆ ಪಕ್ಷದ ಭಿನ್ನಮತ ಶಮನ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಅಸಮಾಧಾನಗೊಂಡ ನಾಯಕರ ಜೊತೆ ಪಕ್ಷದ ಹಿರಿಯರು ಮಾತನಾಡುತ್ತಿರುವುದಾಗಿ ತಿಳಿಸಿದರು. ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಾಗಿದೆ.  ಇನ್ನೂ 12 ಕ್ಷೇತ್ರ ಉಳಿದಿದೆ.  ಕೆಲವೆಡೆ … Read more

ಸಿಇಟಿ, ನೀಟ್ ಮಾಜಿ ಸೈನಿಕರ ಮಕ್ಕಳ ಕೋಟಾಗೆ ದೃಢೀಕರಣ ಕಡ್ಡಾಯ

ಚುನಾವಣೆ ಹಿನ್ನೆಲೆ: ಕೊನೆ ದಿನಕ್ಕೆ ಕಾಯದಿರಲು ಸೂಚನೆ ಸುದ್ದಿ360: ಸಿ.ಇ.ಟಿ ಮತ್ತು ನೀಟ್‍ನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾಜಿ ಸೈನಿಕರ ಮಕ್ಕಳು ಮೀಸಲಾತಿ ಪಡೆಯಲು ಮಾಜಿ ಸೈನಿಕ ದೃಢೀಕರಣ ಪತ್ರವನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಪಡೆಯುವುದು ಕಡ್ಡಾಯವಾಗಿದೆ. ಈ ದೃಢೀಕರಣ ಪತ್ರವನ್ನು ವಿಶೇಷ ವರ್ಗಗಳ ದಾಖಲೆ ಮಂಡನೆ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.  ಪ್ರಸ್ತುತ ಸರ್ಕಾರಿ ನೌಕರರು, ಅಧಿಕಾರಿಗಳನ್ನು ಚುನಾವಣಾ ಕಾರ್ಯಗಳಲ್ಲಿ ಬಳಸಿಕೊಳ್ಳಬಹುದಾದ ಕಾರಣಗಳಿಂದ ಸಿ.ಇ.ಟಿ, ನೀಟ್‍ನಲ್ಲಿ ಮಾಜಿ ಸೈನಿಕನ ಮೀಸಲಾತಿ ಕೋರಿರುವ ಎಲ್ಲಾ ಮಾಜಿ ಸೈನಿಕರು ಕೊನೆಯ … Read more

ಡಾ.ಬಿ.ಆರ್ ಅಂಬೇಡ್ಕರ್ ರವರ 132ನೇ ಜಯಂತಿ ಸರಳ ಆಚರಣೆ

ದಾವಣಗೆರೆ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏಪ್ರಿಲ್ 14 ರಂದು ಬೆಳಿಗ್ಗೆ 10.30 ಗಂಟೆಗೆ ಡಾ. ಬಿ.ಆರ್ ಅಂಬೇಡ್ಕರ್ ರವರ 132ನೇ ಜಯಂತಿ ಆಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುತ್ತದೆ. ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಆಚರಣೆಯನ್ನು ಸರಳವಾಗಿ ಆಚರಿಸಲು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ

ದಾವಣಗೆರೆ: ಅಕ್ರಮ ಚುನಾವಣಾ ಪ್ರಚಾರ ಆರೋಪ – ಕಾರ್ಯಕರ್ತರ ಜಟಾಪಟಿ

59 ಲ್ಯಾಪ್ ಟಾಪ್ ಜಪ್ತಿ – ವಿಚಾರಣೆ ದಾವಣಗೆರೆ, ಸುದ್ದಿ 360: ಅನುಮತಿ ಪಡೆಯದೆ ಟೆಲಿಕಾಲಿಂಗ್ ಮೂಲಕ‌ ಮತಬೇಟೆಯ ತಂತ್ರದಲ್ಲಿ‌ ತೊಡಗಿದ್ದ ಬಿಜೆಪಿಯ ತಂತ್ರಗಾರಿಕೆಯನ್ನು ಕಾಂಗ್ರೆಸ್ ಬಟಾಬಯಲು ಮಾಡಿದೆ. ನಗರದ ಚೇತನಾ ಹೋಟೆಲ್ ಎದುರಿನ ಜೆಪಿ‌ ಫಂಕ್ಷನ್ ಹಾಲ್ನಲ್ಲಿ ಟೆಲಿಕಾಲಿಂಗ್ ಮೂಲಕ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿತ್ತು. ಇದರ ಸುಳಿವು‌ ಪತ್ತೆ ಹಚ್ಚಿದ ಕಾಂಗ್ರೆಸ್‌ ಮುಖಂಡರು ಪ್ರಕರಣ ಕುರಿತಾಗಿ‌‌ ದೂರು ನೀಡಿದ ಹಿನ್ನೆಲೆಯಲ್ಲಿ ದಾಳಿ ಮಾಡಿರುವ ಚುನಾವಣಾಧಿಕಾರಿಗಳು 59 ಲ್ಯಾಪ್ ಟಾಪ್ ಸೇರಿದಂತೆ ಕೆಲವರ  ಮೊಬೈಲ್ ಗಳನ್ನು … Read more

ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ – ಫಸ್ಟ್ ರಿಯಾಕ್ಷನ್ ಏನು?

ಶಿವಮೊಗ್ಗ ಏ. 11:  ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಉಪಮುಖ್ಯಮಂತ್ರಿ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪ ಧಿಡೀರ್ ಬೆಳವಣಿಗೆಯಲ್ಲಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿಸಿಕೊಂಡಿದ್ದಾರೆ. ಕಳೆದ 40ಕ್ಕೂ ಹೆಚ್ಚು ವರ್ಷದ … Read more

ಶಿವಮೊಗ್ಗ: ಏ.10ರಂದು ಚೆಕ್ ಪೋಸ್ಟ್ ಗಳಲ್ಲಿ ಸಿಕ್ಕಿದ್ದು 30.60 ಲಕ್ಷ ನಗದು

ಶಿವಮೊಗ್ಗ,ಏ.11: ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆ ನಡೆಸಲಾಗುತ್ತಿದ್ದು, ಏ.10ರಂದು ಮೂರು ಪ್ರತ್ಯೇಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಒಟ್ಟು ರೂ 30,64,000/- ನಗದು ಹಣವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ 27,60,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ … Read more

ಏ.6ಕ್ಕೆ ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಸಮಾವೆಶ

ಸುದ್ದಿ360 ದಾವಣಗೆರೆ, ಏ.5: ಬಿಜೆಪಿ ರೈತ ಮೋರ್ಚಾ ಜಿಲ್ಲಾ ಸಮಾವೇಶ ಏ.6ರಂದು ಮಧ್ಯಾಹ್ನ 3 ಗಂಟೆಗೆ ನಗರದ ಮಾಗನೂರು ಬಸಪ್ಪ ಮೈದಾನದಲ್ಲಿ ಆಯೋಜಿಸಲಾಗಿರುವುದಾಗಿ ಮೋರ್ಚಾ ಜಿಲ್ಲಾಧ್ಯಕ್ಷ ಲೋಕಿಕೆರೆ ನಾಗರಾಜ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಂಸದೆ ಶೋಭಾ ಕರಂದ್ಲಾಜೆ, ರೈತ ಮೋರ್ಚಾದ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ, ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕ ಎಸ್.ಎ. ರವಿಂದ್ರನಾಥ್ ಸೇರಿದಂತೆ ಬಿಜೆಪಿ ಶಾಸಕರು, ಸಚಿವರು ಪಾಲ್ಗೊಳ್ಳಲಿರುವುದಾಗಿ ಹೇಳಿದರು. … Read more

ದಾವಣಗೆರೆ: ಅಶೋಕ ಅಂಡರ್‌ ಪಾಸ್ ಸಂಚಾರಕ್ಕೆ ಮುಕ್ತ – ತೊಡಕು ಜೀವಂತ

ಸುದ್ದಿ360 ದಾವಣಗೆರೆ ಏ.04: ನಗರದ ಅಶೋಕ ರಸ್ತೆ ರೈಲ್ವೆ ಗೇಟ್  ಮೂಲಕ ಹಾದು ಹೋಗುವ ವಾಹನ ಸವಾರರು ಇದೀಗ ಕೊಂಚ ರಿಲೀಫ್ ಆಗಿದ್ದಾರೆ.  ಇದರಿಂದ ಜನ ರೈಲ್ವೇ ಗೇಟ್ ಕಾಯುವುದು ತಪ್ಪಿರುವುದು ಎಷ್ಟು ಸತ್ಯವೋ ಹಾಗೆಯೇ ಕೆಲವು ಸಮಸ್ಯೆಗಳು ಉದ್ಭವಿಸಿರುವುದು ಅಷ್ಟೇ ಸತ್ಯವಾಗಿದೆ. ಹೌದು ವಾಹನ ದಟ್ಟಣೆ ನಿಯಂತ್ರಿಸಲು ನಿರ್ಮಿಸಿರುವ ಅಂಡರ್ ಪಾಸ್ ಸೋಮವಾರದಿಂದ ಸಂಚಾರಕ್ಕೆ ಮುಕ್ತವಾಗಿದೆ. ಇದರಿಂದ ನಾಗರೀಕರ ಹಲವು ದಶಕಗಳ ಬೇಡಿಕೆ ಈಡೇರಿದಂತಾಗಿದೆ. ಅಶೋಕ ಟಾಕೀಸ್ ಎದುರು ಎಡಕ್ಕೆ ಯು ಟರ್ನ್ ತೆಗೆದುಕೊಳ್ಳುವುದು ತುಂಬಾ … Read more

error: Content is protected !!