ಶಿವಮೊಗ್ಗ: ಏ.10ರಂದು ಚೆಕ್ ಪೋಸ್ಟ್ ಗಳಲ್ಲಿ ಸಿಕ್ಕಿದ್ದು 30.60 ಲಕ್ಷ ನಗದು

ಶಿವಮೊಗ್ಗ,ಏ.11: ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆ ನಡೆಸಲಾಗುತ್ತಿದ್ದು, ಏ.10ರಂದು ಮೂರು ಪ್ರತ್ಯೇಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಒಟ್ಟು ರೂ 30,64,000/- ನಗದು ಹಣವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ 27,60,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ … Read more

ಏ.6ಕ್ಕೆ ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಸಮಾವೆಶ

ಸುದ್ದಿ360 ದಾವಣಗೆರೆ, ಏ.5: ಬಿಜೆಪಿ ರೈತ ಮೋರ್ಚಾ ಜಿಲ್ಲಾ ಸಮಾವೇಶ ಏ.6ರಂದು ಮಧ್ಯಾಹ್ನ 3 ಗಂಟೆಗೆ ನಗರದ ಮಾಗನೂರು ಬಸಪ್ಪ ಮೈದಾನದಲ್ಲಿ ಆಯೋಜಿಸಲಾಗಿರುವುದಾಗಿ ಮೋರ್ಚಾ ಜಿಲ್ಲಾಧ್ಯಕ್ಷ ಲೋಕಿಕೆರೆ ನಾಗರಾಜ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಂಸದೆ ಶೋಭಾ ಕರಂದ್ಲಾಜೆ, ರೈತ ಮೋರ್ಚಾದ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ, ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕ ಎಸ್.ಎ. ರವಿಂದ್ರನಾಥ್ ಸೇರಿದಂತೆ ಬಿಜೆಪಿ ಶಾಸಕರು, ಸಚಿವರು ಪಾಲ್ಗೊಳ್ಳಲಿರುವುದಾಗಿ ಹೇಳಿದರು. … Read more

ದಾವಣಗೆರೆ: ಅಶೋಕ ಅಂಡರ್‌ ಪಾಸ್ ಸಂಚಾರಕ್ಕೆ ಮುಕ್ತ – ತೊಡಕು ಜೀವಂತ

ಸುದ್ದಿ360 ದಾವಣಗೆರೆ ಏ.04: ನಗರದ ಅಶೋಕ ರಸ್ತೆ ರೈಲ್ವೆ ಗೇಟ್  ಮೂಲಕ ಹಾದು ಹೋಗುವ ವಾಹನ ಸವಾರರು ಇದೀಗ ಕೊಂಚ ರಿಲೀಫ್ ಆಗಿದ್ದಾರೆ.  ಇದರಿಂದ ಜನ ರೈಲ್ವೇ ಗೇಟ್ ಕಾಯುವುದು ತಪ್ಪಿರುವುದು ಎಷ್ಟು ಸತ್ಯವೋ ಹಾಗೆಯೇ ಕೆಲವು ಸಮಸ್ಯೆಗಳು ಉದ್ಭವಿಸಿರುವುದು ಅಷ್ಟೇ ಸತ್ಯವಾಗಿದೆ. ಹೌದು ವಾಹನ ದಟ್ಟಣೆ ನಿಯಂತ್ರಿಸಲು ನಿರ್ಮಿಸಿರುವ ಅಂಡರ್ ಪಾಸ್ ಸೋಮವಾರದಿಂದ ಸಂಚಾರಕ್ಕೆ ಮುಕ್ತವಾಗಿದೆ. ಇದರಿಂದ ನಾಗರೀಕರ ಹಲವು ದಶಕಗಳ ಬೇಡಿಕೆ ಈಡೇರಿದಂತಾಗಿದೆ. ಅಶೋಕ ಟಾಕೀಸ್ ಎದುರು ಎಡಕ್ಕೆ ಯು ಟರ್ನ್ ತೆಗೆದುಕೊಳ್ಳುವುದು ತುಂಬಾ … Read more

ಈ ಬಾರಿ ಲಿಂಗಾಯತ ಮುಖ್ಯಮಂತ್ರಿ: ಶಾಮನೂರು ಶಿವಶಂಕರಪ್ಪ

ದಾವಣಗೆರೆ ಉತ್ತರ-ದಕ್ಷಿಣದಲ್ಲಿ ನಮ್ಮದೇ ಮೇಲುಗೈ – ಬೇರೆ ಯಾರು ಬಂದರೂ ಸೋಲು ಖಚಿತ –  ಎಸ್ ಎಸ್ ಸುದ್ದಿ360 ದಾವಣಗೆರೆ ಏ. 4: ದಾವಣಗೆರೆಯ ದಕ್ಷಿಣ ಮತ್ತು ಉತ್ತರ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಲಿದ್ದು, ಇಲ್ಲಿ ಯಾರೇ ಬಂದು ನಿಂತರೂ ಅವರಿಗೆ ಸೋಲು ಖಚಿತ  ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಗಳ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ. ಚುನಾವಣೆ ಬಳಿಕ … Read more

ಹೈಕಮಾಂಡ್ ತೀರ್ಮಾನಕ್ಕೆ ಬದ್ಧ – ಆಯನೂರು ಮಂಜುನಾಥ್ ಕಾಂಗ್ರೆಸ್ಗೆ ಬರುವುದಾದರೆ ಸ್ವಾಗತ: ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್

ಸುದ್ದಿ360 ಶಿವಮೊಗ್ಗ, ಏ.4: ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಬರುವುದಾದರೆ ಯಾರು ಬೇಕಾದರೂ ಬರಬಹುದು. ಅದಕ್ಕೆ ಸ್ವಾಗತ ವಿದೆ. ಆಯನೂರು ಮಂಜುನಾಥ್ ಅವರೂ ಕೂಡ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ನಾನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ  ಎಂದು ಮಾಜಿ ಶಾಸಕ ಹಾಗೂ ಅಭ್ಯರ್ಥಿ ಆಕಾಂಕ್ಷಿ ಕೆ.ಬಿ. ಪ್ರಸನ್ನಕುಮಾರ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗ ವಿಧಾನ ಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ಹನ್ನೊಂದು ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿಯೇ ಯಾರಿಗಾದರೂ ಟಿಕೆಟ್ ಸಿಗಬಹುದೆಂಬ ನಂಬಿಕೆ ನಮಗಿದೆ. … Read more

ಜಿಎಂಐಟಿ: ಕಿರ್ಲೋಸ್ಕರ್ ಟೊಯೋಟಾ ಕಂಪನಿಗೆ ಮೆಕ್ಯಾನಿಕಲ್ ವಿಭಾಗದ 27 ವಿದ್ಯಾರ್ಥಿಗಳು ಆಯ್ಕೆ

ಸುದ್ದಿ360 ದಾವಣಗೆರೆ ಏ.4: ನಗರದ ಜಿ ಎಮ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಕಿರ್ಲೋಸ್ಕರ್ ಟೊಯೋಟಾ ಟೆಕ್ಸ್ಟೈಲ್ ಮಷೀನರಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಂದರ್ಶನ ಪ್ರಕ್ರಿಯೆಯಲ್ಲಿ ಒಟ್ಟು 27 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಎಂಐಟಿ ಕಾಲೇಜಿನ ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮತ್ತು ಅಂತಿಮ ವರ್ಷದ ವಿವಿಧ ಕಾಲೇಜಿನ ಡಿಪ್ಲೋಮೋ ಮೆಕ್ಯಾನಿಕಲ್ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಈ ಸಂದರ್ಶನ … Read more

ಅಧಿಕಾರಕ್ಕೆ ಬರದ ಕಾಂಗ್ರೆಸ್‍ನಲ್ಲಿ ಸಿಎಂ ಸ್ಥಾನಕ್ಕಾಗಿ ಹೋರಾಟ – ಬಸವರಾಜ ಬೊಮ್ಮಾಯಿ

ಬೆಂಗಳೂರು ಏ.4: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೋದ ಕಡೆಯಲ್ಲಿ ನಾನೇ ಸಿಎಂ ನನಗೆ ಆಶೀರ್ವಾದ ಮಾಡಿ ಎಂದು  ಹೇಳಿಕೊಂಡು ತಿರುಗುತ್ತಿದ್ದಾರೆ. ಸಿದ್ದರಾಮಯ್ಯ ಅವರು ನಾನೇ ಸಿಎಂ ಹೇಳುತ್ತಾರೆ.  ಮುಖ್ಯಮಂತ್ರಿ ಮಾಡೋದು ಜನ. ಆದರೆ ಜನರ  ಮನಸ್ಸಿನಲ್ಲಿ ಇವರಿಬ್ಬರೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ  ಮುಖ್ಯಮಂತ್ರಿ ಸ್ಥಾನದ   ಕನಸು ಕಾಣುತ್ತಿದ್ದಾರೆ.  ಆ ಕನಸು ನನಸಾಗೋದಿಲ್ಲ ಎಂದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ … Read more

ಕಾಂಗ್ರೆಸ್ಸಿಗೆ  ಅಂಬೇಡ್ಕರ್‌ ಮೇಲೆ ಪ್ರೀತಿ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಬೆಂಗಳೂರು, ಏಪ್ರಿಲ್ 03: ಕಾಂಗ್ರೆಸ್ ಗೆ ಅಂಬೇಡ್ಕರ್‌ ಅವರ ಮೇಲೆಯಾಗಲಿ ,  ಅವರು ಬರೆದಿರುವ ಸಂವಿಧಾನದ ಮೇಲೆಯಾಗಲಿ  ನಂಬಿಕೆ ಇಲ್ಲ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಂಗ್ರೆಸ್ ವಕ್ತಾರರು ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ  ಅವರು ಮೀಸಲಾತಿ ಬಗ್ಗೆ  ಟ್ವೀಟ್ ಮಾಡಿರುವ ಕುರಿತು  ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮೀಸಲಾತಿ ನೀಡಿರುವುದು ಕಾನೂನು ಬಾಹಿರ, ಸಂವಿಧಾನ ವಿರೋಧಿ ಎಂದು   ಕೆಳಮಟ್ಟದ ಶಬ್ದಗಳನ್ನು  ಬಳಸಿದ್ದಾರೆ.  ಜನಸಂಖ್ಯೆ ಆಧಾರಿತವಾಗಿ ಮೀಸಲಾತಿ ನೀಡಬೇಕು  ಎಂದು ಅಂಬೇಡ್ಕರ್ … Read more

ಏ.8ಕ್ಕೆ ಬಿಜೆಪಿ ಅಂತಿಮ ಪಟ್ಟಿ : ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಬೆಂಗಳೂರು, ಏ. 03: ಪಕ್ಷದ ಮೊದಲ ಪಟ್ಟಿಯ ಬಗ್ಗೆ ಕ್ಷೇತ್ರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.  ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು ನಾಳೆ ಮತ್ತು ನಾಡಿದ್ದು ರಾಜ್ಯಮಟ್ಟದ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ವೇಳೆಯಲ್ಲಿ ಮಾತನಾಡಿದ ಅವರು, ರಾಜ್ಯಮಟ್ಟದ ಕೋರ್ ಕಮಿಟಿ ಸಭೆಯ ನಂತರ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯಲಿದೆ.  ಬಹುತೇಕವಾಗಿ ಏಪ್ರಿಲ್  8 ರಂದು ಸಂಸದೀಯ ಮಂಡಳಿಯಲ್ಲಿ ಪಟ್ಟಿ ಅಂತಿಮಗೊಳ್ಳಲಿದೆ … Read more

ದಾವಣಗೆರೆ: ಅಭಿವೃದ್ಧಿ – ಮತದಾನ ಕುರಿತು ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದೇನು?

ದಾವಣಗೆರೆ, ಏ. 1: ಅಭಿವೃದ್ಧಿಯ ವಿಷಯ ಬಂದಾಗ ನೆನಪಾಗುವ ಮಲ್ಲಿಕಾರ್ಜುನ್, ಮತದಾನದ ಸಂದರ್ಭದಲ್ಲಿ ನೆನಪಾಗದಿರುವುದು ಬೇಸರದ ಸಂಗತಿ ಎಂದು ಎಸ್ ಎಸ್. ಮಲ್ಲಿಕಾರ್ಜುನ್ ಅವರ ಪತ್ನಿ  ಡಾ. ಪ್ರಭಾ ಮಲ್ಲಿಕಾರ್ಜುನ್ ಬೇಸರ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಸೇಂಟ್ ಜಾನ್ಸ್  ಶಾಲಾ ಆವರಣದಲ್ಲಿ 34ನೇ ವಾರ್ಡ್ ವ್ಯಾಪ್ತಿಯ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಡಾ. ಪ್ರಭಾ ಮಲ್ಲಿಕಾರ್ಜುನ ರವರು ಅಭಿವೃದ್ಧಿಯ ವಿಷಯ ಬಂದಾಗ ನೆನಪಾಗುವ ಮಲ್ಲಿಕಾರ್ಜುನ್, ಮತದಾನದ ಸಂದರ್ಭದಲ್ಲಿ ನೆನಪಾಗದಿರುವುದು ಮಾತ್ರ ಬೇಸರವಾಗುತ್ತದೆ … Read more

error: Content is protected !!