ದಾವಣಗೆರೆ ಮಹಾನಗರ ಪಾಲಿಕೆ ಆಡಳಿತ ವೈಫಲ್ಯ – ಪಾಲಿಕೆಗೆ ಬೀಗ ಜಡಿಯಲು ಮುಂದಾದ ಕಾಂಗ್ರೆಸ್
ಸುದ್ದಿ360, ದಾವಣಗೆರೆ, ಜು.08: ಮಹಾನಗರ ಪಾಲಿಕೆ ಆಡಳಿತ ನಡೆಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ, ಬಿಜೆಪಿ ನಗರದ ಕುಂದುಕೊರತೆಗಳನ್ನು ನಿವಾರಿಸುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪಾಲಿಕೆ ಎದುರು ಪ್ರತಿಭಟನೆಗಿಳಿದರು. ಬಿಜೆಪಿಯ ಆಡಳಿತದಿಂದ ರೋಸಿ ಹೋಗಿದ್ದ ಕಾಗ್ರೆಸ್ ಕಾರ್ಯಕರ್ತರು ಈ ವೇಳೆ ಪಾಲಿಕೆ ಮುಖ್ಯದ್ವಾರಕ್ಕೆ ಬೀಗ ಜಡಿಯಲು ಮುಂದಾಗಿ, ಪೊಲೀಸರು ಇದನ್ನು ತಡೆದಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಮಹಾನಗರಪಾಲಿಕೆ ವಿಪಕ್ಷ ನಾಯಕ ಜಿ.ಎಸ್. ಗಡಿಗುಡಾಳ್ ಮಂಜುನಾಥ್, ನಗರದಾದ್ಯಂತ ಸಮಸ್ಯೆಗಳು ಉಲ್ಬಣಗೊಂಡಿವೆ. 5 ತಿಂಗಳಾದರೂ ಸಾಮಾನ್ಯಸಭೆ … Read more