ತುರ್ತು ಪರಿಸ್ಥಿತಿಯಲ್ಲಿಯೂ  ದೇಶದ ರಾಜಕಾರಣವನ್ನು ಬದಲಾಯಿಸಿದ್ದು ಜನಶಕ್ತಿ: ಸಿಎಂ

ಸುದ್ದಿ360 ಬೆಂಗಳೂರು, ಜೂನ್ 26: ತುರ್ತು ಪರಿಸ್ಥಿತಿಯಲ್ಲಿಯೂ  ಇಡೀ ದೇಶದ ರಾಜಕಾರಣ ಹಾಗೂ ಪ್ರಜಾಪ್ರಭುತ್ವವನ್ನು  ದೊಡ್ಡ ಪ್ರಮಾಣದಲ್ಲಿ ಬದಲಾಯಿಸಿದ್ದು ಜನಶಕ್ತಿ ಎಂದು ಮುಖ್ಯಮಂತ್ರಿ ಬಸವರಜ ಬೊಮ್ಮಾಯಿ ತಿಳಿಸಿದರು. ಅವರು ಶನಿವಾರ ತುರ್ತು ಪರಿಸ್ಥಿತಿ ಕರಾಳ ದಿನಾಚರಣೆಯ ಪ್ರಯುಕ್ತ ಫ್ರೀಡಂ ಪಾರ್ಕ್ ಗೆ ಭೇಟಿ ನೀಡಿ ಮಾತನಾಡುತ್ತಿದ್ದರು. ದೇಶದಲ್ಲಿ ಇಂಥದ್ದು ಘಟಿಸಿತ್ತು ಹಾಗೂ ಈ ದೇಶವನ್ನು ಉಳಿಸುವ ಶಕ್ತಿ ಜನಸಾಮಾನ್ಯರಿಗಿದೆ ಎನ್ನುವುದನ್ನು ತಿಳಿಸಲೆಂದು  ಕರಾಳ ದಿನಾಚರಣೆಯನ್ನು  ನಾವು ಆಚರಿಸಬೇಕಿದೆ. ಅಧಿಕಾರ ಎಂಬುದು ಸರ್ವ ಗುಣಧರ್ಮಗಳನ್ನು ಮರೀಚಿಕೆಯಾಗಿ  ಮಾಡಿ ತಾನು … Read more

ದೈವಜ್ಞ ಕೋ ಆಪರೇಟಿವ್‍ ಸೊಸೈಟಿ ರಜತ ಮಹೋತ್ಸವ ಕಟ್ಟಡ ಉದ್ಘಾಟನೆ (ಜೂ.26)

ಸುದ್ದಿ360, ದಾವಣಗೆರೆ, ಜೂ.25:  ದೈವಜ್ಞ ಬ್ರಾಹ್ಮಣ ಸಮಾಜ ಸಂಘದ ದೈವಜ್ಞ ಕ್ರೆಡಿಟ್‍ ಕೋ-ಆಪರೇಟಿವ್‍ ಸೊಸೈಟಿಯು ರಜತ ಮಹೋತ್ಸವ ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ರಜತ ಮಹೋತ್ಸವ ಕಟ್ಟಡದ ಉದ್ಘಾಟನೆ ಹಾಗೂ ದೈವಜ್ಞ ಕೈಪಿಡಿ ಬಿಡುಗಡೆ ಕಾರ್ಯಕ್ರಮವನ್ನು ಜೂ.26ರಂದು ಹಮ್ಮಿಕೊಂಡಿರುವುದಾಗಿ ಸೊಸೈಟಿಯ ಅಧ್ಯಕ್ಷ ಪ್ರಶಾಂತ್‍ ವಿ ವರ್ಣೇಕರ್ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ9 ಗಂಟೆಗೆ ನಗರದ ರಿಂಗ್‍ ರಸ್ತೆಯಲ್ಲಿರುವ ಶಾರದಾಂಬಾ ದೇವಸ್ಥಾನಕ್ಕೆ ಶ‍್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮಿಗಳು ಆಗಮಿಸಲಿದ್ದು, 10.30ರ ಸಮಯಕ್ಕೆ ದೇವಸ್ಥಾನದಿಂದ … Read more

ಜೂ.27 ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಚುನಾವಣೆ

ಸುದ್ದಿ360, ದಾವಣಗೆರೆ, ಜೂ.25: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ 2022-27ನೇ ಸಾಲಿನ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಘಟಕದ ಚುನಾವಣ ಪ್ರಕ್ರಿಯೆ ಇದೇ ಜೂನ್‍ 27ರಿಂದ ಪ್ರಾರಂಭವಾಗಿ ಜುಲೈ 24ರವರೆಗೆ ಮೂರ ಹಂತಗಳಲ್ಲಿ ನಡೆಯಲಿರುವುದಾಗಿ ಜಿಲ್ಲಾಸಹ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಎಂ. ಮಂಜುನಾಥಯ್ಯ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುವುದು ಮತ್ತು ಸಹ ಶಿಕ್ಷಕರಲ್ಲಿ ಸ್ನೇಹ ಸೌಹಾರ್ಧತೆ, … Read more

ಕೆಐಎ ನಲ್ಲಿ ಶೀಘ್ರದಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜೂ. 24: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೀಘ್ರದಲ್ಲಿಯೇಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಯಿಂದ ಇಂದು ಹಿಂದಿರುಗಿದ ಸಂದರ್ಭದಲ್ಲಿ ಬೆಂಗಳೂರು ವಿಮಾನನಿಲ್ದಾಣದಲ್ಲಿರುವ ಕೆಂಪೇಗೌಡರ ಬೃಹತ್ ಮೂರ್ತಿಯ ನಿರ್ಮಾಣದ ಸ್ಥಳಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ವಿಮಾನನಿಲ್ದಾಣದಲ್ಲಿರುವ ಕೆಂಪೇಗೌಡರ ಬೃಹತ್ ಮೂರ್ತಿ ಅಂತಿಮ ಘಟ್ಟಕ್ಕೆ ಬಂದಿದೆ. ಸ್ಟೀಲ್ ಮತ್ತು ಕಂಚಿನಿಂದ ಮಾಡಲಾಗಿರುವ ಸುಮಾರು 108 ಅಡಿ ಎತ್ತರದ ಪ್ರತಿಮೆ 220 ಟನ್ … Read more

ಹೈವೆಯಲ್ಲಿ ಹೊತ್ತಿ ಉರಿದ ಕಾರು

ಸುದ್ದಿ360, ವಿಜಯನಗರ, ಜೂ.24: ಜಿಲ್ಲೆಯ ಹೊಸಪೇಟೆ ತಾಲೂಕಿನ ಧರ್ಮಸಾಗರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಾರಿನಲ್ಲಿ ಏಕಾಏಕಿ  ಬೆಂಕಿ ಕಾಣಿಸಿಕೊಂಡ ಪರಿಣಾಮ ಧಗಧಗನೆ ಹೊತ್ತಿ ಉರಿದ ಘಟನೆ ಇಂದು (ಶುಕ್ರವಾರ) ಸಂಜೆ ನಡೆದಿದೆ. ಹೊಸಪೇಟೆಯಿಂದ ಬಳ್ಳಾರಿ  ರಾಷ್ಟ್ರೀಯ ಹೆದ್ದಾರಿ 63 ರ ಧರ್ಮಸಾಗರದ ಬಳಿ ಇರುವ ಖನಿಜ ತನಿಖಾ ಠಾಣೆಯ ಘಟನೆ ಸಮೀಪ ನಡೆದಿದ್ದು, ರಸ್ತೆಯಲ್ಲಿ ನಿಂತಿದ್ದ ಮಾರುತಿ 800 ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೇಲ್ನೋಟಕ್ಕೆ ತಾಂತ್ರಿಕ ದೋಷದಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, … Read more

ಜೂ.26 ಗಾನಸುಧೆ ಕಲಾ ಬಳಗದಿಂದ ಪುನೀತ್‍ ರಾಜ್‍ಕುಮಾರ್ ಗೀತ ನುಡಿನಮನ

ಸುದ್ದಿ360, ರಾಮನಗರ, ಜೂ.24: ಗಾನಸುಧೆ ಕಲಾ ಬಳಗ ವತಿಯಿಂದ ಪುನೀತ್ ರಾಜ್ ಕುಮಾರ್ ಅವರಿಗೆ ಗೀತ ನುಡಿನಮನ ಮತ್ತು ಸುಗಮ ಸಂಗೀತ ಕಾರ್ಯಕ್ರಮವನ್ನು ಜೂ.26 ರ ಭಾನುವಾರ ಮಧ್ಯಾಹ್ನ 3ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ  ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಗೌರವಾಧ್ಯಕ್ಷ ಚಿಂದೋಡಿ ಶಂಭುಲಿಂಗಪ್ಪ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳಗದ  ಮೂರನೇ ವಾರ್ಷಿಕೋತ್ಸವ ಅಂಗವಾಗಿ  ದಾವಣಗೆರೆ ಫ್ರೆಂಡ್ಸ್ ಮೆಲೋಡಿ ಆರ್ಕೆಸ್ಟ್ರಾ ಇವರು ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಗೀತ ನಮನ ಸಲ್ಲಿಸಲಿದ್ದಾರೆ.  ಹಾಗೂ … Read more

ಡಿ.ಕೆ.ಸಹೋದರರ ಆಪ್ತ ಇಕ್ಬಾಲ್ ಹುಸೇನ್‌ಗೆ ಇಡಿ ನೋಟಿಸ್‍

ಸುದ್ದಿ360, ರಾಮನಗರ, ಜೂ.24: ಅಕ್ರಮ ಹಣ ವರ್ಗಾವಣೆ ಸಂಬಂಧ ’ಕಾಂಗ್ರೆಸ್ ಮುಖಂಡರೂ ಆದ ಡಿ.ಕೆ.ಸಹೋದರರ ಆಪ್ತ ಇಕ್ಬಾಲ್ ಹುಸೇನ್‌ಗೆ ಗುರುವಾರ ಸಂಜೆ ಇ-ಮೇಲ್‍ ಮೂಲಕ ಇಡಿ ನೋಟಿಸ್ ನೀಡಿದೆ. ಸೋಮವಾರ ಖುದ್ದು ಕಚೇರಿಗೆ ಆಗಮಿಸುವಂತೆ ಸೂಚನೆ ನೀಡಿದೆ. ನೋಟಿಸ್ ಪಡೆದ ಕೂಡಲೇ ದೆಹಲಿಗೆ ಹೋಗಿರುವ ಇಕ್ಬಾಲ್ ಹಿರಿಯ ನಾಯಕರ ಬೇಟಿಯ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಇರುವ ಮೂರು ದಿನದಲ್ಲಿ ಎಲ್ಲ ದಾಖಲೆಗಳ ಸಂಗ್ರಹ ಕಷ್ಟವಾಗುತ್ತದೆ ಎಂದು ಮೇಲ್ ಕಳುಹಿಸಿ ದೆಹಲಿಗೆ ಬಂದಿದ್ದೆನೆ. ವಿಮಾನ ಇಳಿಯುವ ಮುನ್ನವೇ ಮೇಲ್ ರಿಜಿಕ್ಟ್ … Read more

ದಾವಣಗೆರೆಯಲ್ಲಿ ವಿಜೃಂಭಣೆಯ ಗಂಗಾಜಯಂತಿ

ಸುದ್ದಿ 360 ಬೆಂಗಳೂರು, ಜೂ. 24: ನಗರದ ಹಳೇ ಪೇಟೆ ಗಂಗಾ ಮತಸ್ಥರು ಮತ್ತು ಜಿಲ್ಲಾ ಗಂಗಾಮತಸ್ಥರ ಸಂಘದಿಂದ ಗಂಗಾಜಯಂತಿ ಕಾರ್ಯಕ್ರಮ ಇಂದು ವಿಜೃಂಭಣೆಯಿಂದ ನೆರವೇರಿತು. ಗಂಗಾ ಜಯಂತೋತ್ಸವದಲ್ಲಿ ನೂರಾಒಂದು ಪೂರ್ಣ ಕುಂಭ ಹೊತ್ತ ಮಹಿಳೆಯರು ಜಾನಪದ ಕಲಾ ತಂಡಗಳಾದ ನಾದಸ್ವರ, ವೀರಗಾಸೆ, ಡೊಳ್ಳಿನ ತಂಡಗಳ ನೃತ್ಯ ಪ್ರದರ್ಶನದೊಂದಿಗೆ ಅದ್ಧೂರಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಮಾಜಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಯಶವಂತರಾವ್, ಮಾಜಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜನಳ್ಳಿ ಶಿವಕುಮಾರ್, ದಾವಣಗೆರೆ ಮೇಯರ್ ಜಯಮ್ಮ ಗೋಪಿನಾಯ್ಕ ಉಪ … Read more

ಹಳ್ಳದಲ್ಲಿ ಏಳು ಭ‍್ರೂಣಗಳು – ಭ್ರೂಣಲಿಂಗ ಪತ್ತೆ-ಹತ್ಯೆ ಶಂಕೆ

ಸುದ್ದಿ 360 ಬೆಳಗಾವಿ ಜೂ. 24: ಜಿಲ್ಲೆಯ ಮೂಡಲಗಿ ಪಟ್ಟಣ ಮಧ್ಯೆ ಹರಿಯುವ  ಹಳ್ಳವೊಂದರಲ್ಲಿ ಹತ್ಯೆಗೊಳಗಾದ  ಏಳು ಭ್ರೂಣಗಳು ಚಾಕೊಲೇಟ್‍ ಡಬ್ಬಿಯಲ್ಲಿ ತುಂಬಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ. ಶುಕ್ರವಾರ ಬೆಳಗ್ಗೆ ಹಳ್ಳಕ್ಕೆ ಬಟ್ಟೆ ತೊಳೆಯಲು ಬಂದ ಜನ ಈ ಭ್ರೂಣ ತುಂಬಿದ ಬಾಟಲ್‍ಗಳು ದಂಡೆಯಲ್ಲಿ ಬಿದ್ದಿರುವದನ್ನು ಕಂಡು ಹೌಹಾರಿದ್ದಾರೆ. ಈ ಕುರಿತು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭ್ರೂಣ ಲಿಂಗ ಹತ್ಯೆ ಕುರಿತಾಗಿ  ಕಠಿಣ ಕಾನೂನುಗಳು ಜಾರಿಯಲ್ಲಿದ್ದರೂ ಏಕ ಕಾಲಕ್ಕೆ ಏಳು ಭ್ರೂಣಗಳು ಹೀಗೆ ಪತ್ತೆಯಾಗಿರುವುದು ಜಿಲ್ಲೆಯಾದ್ಯಂತ ತೀವ್ರ … Read more

ದಾವಣಗೆರೆ ಎಕ್ಸಪ್ರೆಸ್ ಆರ್. ವಿನಯ್‍ಕುಮಾರ್ – ರೀಚಾ ಸಿಂಗ್‍ ದಂಪತಿಗೆ ಹೆಣ್ಣು ಮಗು ಜನನ

ಸುದ್ದಿ 360 ಬೆಂಗಳೂರು, ಜೂ. 24: ದಾವಣಗೆರೆ ಎಕ್ಸಪ್ರೆಸ್, ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಆರ್. ವಿನಯ್ ಕುಮಾರ್ ತಂದೆಯಾಗಿದ್ದಾರೆ. ವಿನಯ್ ಕುಮಾರ್ ಪತ್ನಿ ರೀಚಾ ಸಿಂಗ್ ಗುರುವಾರ ಹೆಣ್ಣು  ಮಗುವಿಗೆ ಜನ್ಮ ನೀಡಿದ್ದಾರೆ. ಕಾರಣ ವಿನಯ್ ಕುಮಾರ್ ಮನೆಯಲ್ಲಿ ಸಂತಸ ಮನೆ ಮಾಡಿದೆ. ಪತ್ನಿ ರೀಚಾ ಸಿಂಗ್ ಹಾಗೂ ಮಗಳ ಜೊತೆ ಇರುವ ಚಿತ್ರವೊಂದನ್ನು ವಿನಯ್ ಕುಮಾರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಭಿಮಾನಿಗಳು, … Read more

error: Content is protected !!