ಪಿಯುಸಿ ಫಲಿತಾಂಶ: ದಾವಣಗೆರೆಗೆ 19ನೇ ಸ್ಥಾನ – ಕಾವ್ಯ ಎಂ.ಜಿ. ಜಿಲ್ಲೆಗೆ ಟಾಪರ್

ಸುದ್ದಿ360 ದಾವಣಗೆರೆ, ಜೂ.18: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಎಂದಿನAತೆ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದಲ್ಲಿ ಅತಿ ಕಡಿಮೆ ಫಲಿತಾಂಶ ಲಭ್ಯವಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಶೇ.62.72 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಜಿಲ್ಲೆ ರಾಜ್ಯ ಮಟ್ಟದಲ್ಲಿ 19ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 19,725 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 11,568 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕಲಾ ವಿಭಾಗದ 6302ರಲ್ಲಿ 2473 ವಿದ್ಯಾರ್ಥಿಗಳು(ಶೇ.39.24) ತೇರ್ಗಡೆಯಾಗಿದ್ದು, ವಾಣಿಜ್ಯ … Read more

ದ್ವಿತೀಯ ಪಿಯುಸಿ: ಶೇ.61.88 ಫಲಿತಾಂಶ – ದಕ್ಷಿಣ ಕನ್ನಡ ಪ್ರಥಮ

ಸುದ್ದಿ360 ಬೆಂಗಳೂರು, ಜೂನ್ 18:  ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.61.88ರಷ್ಟು ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‍ ತಿಳಿಸಿದ್ದಾರೆ. ಸುದ್ದೀಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು,  ಒಟ್ಟು 5,99,794 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 4,02,697 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಗ್ರಾಮಾಂತರ ಪ್ರದೇಶದ ಫಲಿತಾಂಶ ಶೇ.62.18ರಷ್ಟಿದ್ದು ಉತ್ತಮವಾಗಿದೆ. ನಗರ ಪ್ರದೇಶದಲ್ಲಿ 61.78ರಷ್ಟಿದೆ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ … Read more

ಜೂ.21, ದಾವಣಗೆರೆ ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಯೋಗ ದಿನಾಚರಣೆ

ಸುದ್ದಿ360 ನವದೆಹಲಿ, ಜೂನ್ 18: ಜಿಲ್ಲಾ ಆಡಳಿತದಿಂದ ಜೂನ್ 21 ರಂದು ನಡೆಯುವ 8 ನೇ ಅಂತರಾಷ್ಟಿçÃಯ ಯೋಗ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಗುತ್ತಿದ್ದು ಜಿಲ್ಲೆಯ 3 ಐತಿಹಾಸಿಕ ಸ್ಥಳಗಳಲ್ಲಿ ಯೋಗ ದಿನಾಚರಣೆ ಮಾಡುವ ಮೂಲಕ ಯೋಗಾಭ್ಯಾಸವನ್ನು ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು. ಅವರು ಜೂನ್.17 ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಔಪಚಾರಿಕವಾಗಿ ಪತ್ರಕರ್ತರೊಂದಿಗೆ ಮಾತನಾಡಿದರು. ಯೋಗ ದಿನಾಚರಣೆಯನ್ನು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಭಾರತೀಯ ಪುರಾತತ್ವ ಇಲಾಖೆ, ಸ್ಮಾರ್ಟ್ ಸಿಟಿ ಲಿಮಿಟೆಡ್, … Read more

ಕಲಾಕುಂಚ: ವಿಶ್ವ ಪರಿಸರ ದಿನಾಚರಣೆ – ಉಚಿತ ಚಿತ್ರ ಬರೆಯುವ ಸ್ಪರ್ಧೆ ಫಲಿತಾಂಶ

ಸುದ್ದಿ360 ದಾವಣಗೆರೆ, ಜೂನ್ 18: ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಉಚಿತ ಚಿತ್ರ ಬರೆಯುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಇದರ  ಫಲಿತಾಂಶ ಪ್ರಕಟಿಸಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ  ತಿಳಿಸಿದ್ದಾರೆ. ರಾಜ್ಯ ಮಟ್ಟದ ಈ ಉಚಿತ ಚಿತ್ರ ಬರೆಯುವ ಸ್ಪರ್ಧೆಗೆ ಕರ್ನಾಟಕ ವಿವಿಧ ಜಿಲ್ಲೆಗಳೂ ಸೇರಿದಂತೆ ನೆರೆ ರಾಜ್ಯಗಳಿಂದಲೂ ಸ್ಪರ್ಧಿಗಳು ಪಾಲ್ಗೊಂಡಿದ್ದರು. ಸುಮಾರು ಒಂದು ಸಾವಿರದ ಎಂಟುನೂರ ಆರವತ್ತಮೂರು ಚಿತ್ರಗಳು ಬಂದಿದ್ದವು ಎಂದು ಗಣೇಶ್‍ ಶೆಣೈ … Read more

ಯಕ್ಷರಂಗದಿಂದ ಯಕ್ಷಗಾನ ತರಬೇತಿ ಶಿಬಿರ

ಸುದ್ದಿ360 ದಾವಣಗೆರೆ, ಜೂನ್ 18: ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಯಕ್ಷರಂಗ-ಯಕ್ಷಗಾನ ಸಂಸ್ಥೆಯ ಆಶ್ರಯದಲ್ಲಿ ನಿರಂತರ ಯಕ್ಷಗಾನ ತರಬೇತಿ ಶಿಬಿರ ಹಮ್ಮಿಕೊಂಡಿದೆ. ತರಬೇತಿಯು ನಗರದ ಕೆ.ಬಿ. ಬಡಾವಣೆ, ಕುವೆಂಪು ರಸ್ತೆಯಲ್ಲಿರುವ (ಲಾಯರ್ ರಸ್ತೆ), ಕಲಾಕುಂಚ ಕಛೇರಿಯ ಸಭಾಂಗಣದಲ್ಲಿ ಪ್ರತೀ ಭಾನುವಾರ ಬೆಳಿಗ್ಗೆ 6-30 ರಿಂದ 9-00 ಗಂಟೆಯವರೆಗೆ ನಡೆಯಲಿದ್ದು, ಈ ಶಿಬಿರವನ್ನು ಖ್ಯಾತ ವೃತ್ತಿನಿರತ ಯಕ್ಷಗಾನ ಕಲಾವಿದ ಹಟ್ಟಿಯಂಗಡಿ ಆನಂದಶೆಟ್ಟಿಯವರು ನಡೆಸಿಕೊಡಲಿದ್ದಾರೆ ಎಂದು ಸಂಸ್ಥೆಗಳ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. ಯಾವುದೇ ವಯಸ್ಸಿನ … Read more

ಇಂದು ಜೈನ್ ಕಾಲೇಜಲ್ಲಿ ಎಥ್ನಿಕ್ ಡೇ

ಸುದ್ದಿ360 ದಾವಣಗೆರೆ, ಜೂನ್ 18: ನಗರದ ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಜನಾಂಗಿಯ ದಿನ (ಎಥ್ನಿಕ್ ಡೇ)ವನ್ನು ಜೂ.18 ರ ಇಂದು ಆಯೋಜಿಸಲಾಗಿದ್ದು, ಕಾಲೇಜಿನ ಎಲ್ಲಾ‌ ವಿಭಾಗದ ವಿದ್ಯಾರ್ಥಿಗಳು ಸಾಂಪ್ರಾದಾಯಿಕ ಉಡುಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಡಿ.ಬಿ. ಗಣೇಶ್ ತಿಳಿಸಿದ್ದಾರೆ.

ಯೋಗ ನಡಿಗೆಗೆ ವಚಾನಾನಂದ ಶ್ರೀಗಳಿಂದ ಚಾಲನೆ- ಮಕ್ಕಳಿಗೆ ಸುಲಭ ಯೋಗಾಸನ

ಸುದ್ದಿ360 ದಾವಣಗೆರೆ, ಜೂನ್ 18: ಅಂತರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿಯಾಗಿ ಇಂದು (ಜೂ.18) ಬೆಳಿಗ್ಗೆ 7 ಗಂಟೆಗೆ ನಗರದ  ಹೈಸ್ಕೂಲ್ ಮೈದಾನದಿಂದ ಪ್ರಾರಂಭವಾದ ಯೋಗನಡಿಗೆ  ಮೋತಿ ವೀರಪ್ಪ ಕಾಲೇಜು ಕ್ರೀಡಾಂಗಣ ತಲುಪಿತು. ಹರಿಹರ ಪಂಚಮಸಾಲಿ ಪೀಠದ ಶ್ರೀವಚನಾನಂದ ಸ್ವಾಮೀಜಿ ಯೋಗ ನಡಿಗೆಗೆ ಚಾಲನೆ ನೀಡಿದರು. ನಗರದ 4 ವಲಯಗಳ 50ಕ್ಕೂ ಹೆಚ್ಚು ಶಾಲೆಗಳ 2000ಕ್ಕೂ ಅಧಿಕ ಮಕ್ಕಳು ಯೋಗನಡಿಗೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸ್‍ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‍, ಸ್ಮಾರ್ಟ್ ಸಿಟಿ ಎಂ.ಡಿ ರವೀಂದ್ರ ಮಲ್ಲಾಪುರ, ಬಿ.ಸಿ. … Read more

ದ್ವಿತೀಯ ಪಿಯುಸಿ ಫಲಿತಾಂಶ- ಈ ಲಿಂಕ್‍ ಕ್ಲಿಕ್‍ ಮಾಡಿ

ಸುದ್ದಿ360 ಬೆಂಗಳೂರು, ಜೂನ್ 18: ದ್ವೀತಿಯ ಪಿಯುಸಿ ಫಲಿತಾಂಶ ಇಂದು (ಜೂ.18) ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ ಎಂದು ಪಿಯು ಬೋರ್ಡ್ ಪ್ರಕಟಿಸಿದೆ.2022 ನೇ ಸಾಲಿಗೆ ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ವರೆಗ ಪರೀಕ್ಷೆ ನಡೆದಿತ್ತು. ಇದೀಗ ಉತ್ತರ ಪತ್ರಿಕೆಯ ಮೌಲ್ಯಮಾಪನ ಮುಕ್ತಾಯವಾಗಿ ಫಲಿತಾಂಶ ಪ್ರಕಟಣೆಗೆ ಸಿದ್ಧವಾಗಿದ್ದು, ಇಂದು ಬೆಳಿಗ್ಗೆ 11 ಗಂಟೆಗೆ ಫಲಿತಾಂಶ ಹೊರಬೀಳಲಿದೆ.ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದಾಗಿದೆ. ಈ ಬಾರಿ ಒಟ್ಟು … Read more

ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಇಂದು ಬೆಂಗಳೂರಿಗೆ

ಸುದ್ದಿ360 ಬೆಂಗಳೂರು, ಜೂನ್ 18: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶನಿವಾರ  ಬೆಂಗಳೂರು ಪ್ರವಾಸದಲ್ಲಿದ್ದು, ಪಕ್ಷದ ರಾಷ್ಟ್ರೀಯಒಬಿಸಿ ಮೋರ್ಚಾದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇಲ್ಲಿನ ಯಲಹಂಕ ಸಮೀಪದ ರಮಡಾ ರೆಸಾರ್ಟ್‍ನಲ್ಲಿ ನಡೆಯುತ್ತಿರುವ ಮೂರು ದಿನಗಳ ಸಮಾವೇಶ ಶನಿವಾರ ಮುಕ್ತಾಯವಾಗಲಿದ್ದು, ಈ ವೇಳೆ ನಡ್ಡಾ ಅವರು ಪಕ್ಷದ  ಒಬಿಸಿ ಶಾಸಕರು, ವಿಧಾನಪರಿಷತ್‍ ಸದಸ್ಯರು, ಮತ್ತು ಸಂಸದರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಿಳಿನ್‍ ಕುಮಾರ್‍ ಕಟೀಲ್‍ ಮತ್ತು ರಾಜ್ಯ … Read more

ಭದ್ರಾ  ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆಗೆ ಒತ್ತಾಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ನವದೆಹಲಿ, ಜೂನ್ 18: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕೆಂದು ಒತ್ತಾಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶುಕ್ರವಾರ ನವದೆಹಲಿಯಲ್ಲಿ ಜಿ.ಎಸ್.ಟಿ ಸಚಿವರ ಮಂಡಳಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ. ಮೇಕೆದಾಟು ಯೋಜನೆಯ ಡಿಪಿಆರ್ ಗೆ … Read more

error: Content is protected !!