ದಾವಣಗೆರೆ: ಜ. 31ರವರೆಗೆ ವೀಕೆಂಡ್ ಕರ್ಫ್ಯೂ ಮುಂದುವರಿಕೆ
ದಾವಣಗೆರೆ: ಕೋವಿಡ್ ಪ್ರಕರಣಗಳು ದಿಢೀರನೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಜ. 04 ರಂದು ಹೊರಡಿಸಿದ್ದ ಮಾರ್ಗಸೂಚಿ ಜ. 31 ರವರೆಗೂ ಮುಂದುವರೆಯಲಿದ್ದು, ವೀಕೆಂಡ್ ಕರ್ಫ್ಯೂ ಕೂಡ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ವಾರಾಂತ್ಯ ಕಫ್ರ್ಯೂ, ಚಿತ್ರಮಂದಿರ, ಹೋಟೆಲ್, ರೆಸ್ಟೋರೆಂಟ್ ಮುಂತಾದೆಡೆ ಶೇ. 50 ಆಸನ ಸಾಮರ್ಥ್ಯದೊಂದಿಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಸೇರಿದಂತೆ ಹಲವು ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಮಾರ್ಗಸೂಚಿಯನ್ನು ತಪ್ಪದೆ ಪಾಲಿಸುವುದರ ಮೂಲಕ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ … Read more