ನಾಳೆ ದಾವಣಗೆರೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ದಾವಣಗೆರೆ: ನಗರದಲ್ಲಿ ಶ್ರೀ ಎಲ್.ಬಿ.ಕೆ. ಕಲ್ಯಾಣ ಟ್ರಸ್ಟ್ ವತಿಯಿಂದ 7 ನೇ ಬಾರಿಗೆ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಡಿ.30ರಂದು ಬೆಳಿಗ್ಗೆ11 ಗಂಟೆಗೆ ನಗರದ ಶ್ರೀ ರಾಜವೀರ ಮದಕರಿ ನಾಯಕ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ. ಹರಿಹರ ರಾಜನಹಳ್ಳಿ ವಾಲ್ಮೀಕಿ ಸಂಸ್ಥಾನದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಕೂಡಲಸಂಗಮದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಚಿತ್ರದುರ್ಗದ ಶ್ರೀ ಮಾದರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಜರುಗುವ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಮಾಜಿ … Read more