ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360 ಚಿಕ್ಕಮಗಳೂರು, ಜ 18 : ಚಿಕ್ಕಮಗಳೂರು ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಅವಶ್ಯಕವಿರುವ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಚಿಕ್ಕಮಗಳೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ, ಕೃಷಿ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಅರಣ್ಯ ಇಲಾಖೆ ಇವರುಗಳ ಸಹಯೋಗದಲ್ಲಿ ಆಯೋಜಿಸಿರುವ “ಚಿಕ್ಕಮಗಳೂರು ಹಬ್ಬ” ಉದ್ಘಾಟಿಸಿ ಮಾತನಾಡಿದರು. ಚಿಕ್ಕಮಗಳೂರು ಅಂತರರಾಷ್ಟ್ರೀಯ ಮಟ್ಟದ ಪ್ರವಾಸಿ ಕೇಂದ್ರವಾಗಿಸಬೇಕಿದೆ. ಜಿಲ್ಲೆಯಲ್ಲಿ ಹೆಲಿಕಾಪ್ಟರ್ ರೈಡ್ ನ್ನು ಒಳಗೊಂಡಂತೆ ಪ್ರವಾಸಿ … Read more