ಎಸಿಬಿ ರದ್ದು: ಬಲಗೊಂಡ ಲೋಕಾಯುಕ್ತ
ಸುದ್ದಿ360 ಬೆಂಗಳೂರು, ಸೆ.09:ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಈ ಹಿಂದೆ ನೀಡಿದ್ದ ಅಧಿಕಾರಗಳನ್ನು ಮರುಸ್ಥಾಪಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಹೈಕೋರ್ಟ್ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಲಾಗಿದೆ. ಎಸಿಬಿಯಲ್ಲಿ ತನಿಖಾ ಹಂತದಲ್ಲಿರುವ ಪ್ರಕರಣಗಳು, ಬಾಕಿ ಉಳಿದಿರುವ ವಿಚಾರಣೆಗಳು, ಶಿಸ್ತುಕ್ರಮಕ್ಕೆ ಸಂಬಂಧಿಸಿದ ಪ್ರಕರಣಗಳು ಮತ್ತು ಖಾಸಗಿ ದೂರುಗಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.