ಮಾದಕ ವಸ್ತು ಸೇವಿಸುವವರ ಮೇಲೂ ಕ್ರಮ, ಹುಷಾರ್ . . .
ಸುದ್ದಿ360, ದಾವಣಗೆರೆ, ಜು.07: ಮಾದಕ ವಸ್ತು ನಿಯಂತ್ರಿಸುವ ನಿಟ್ಟಿನಲ್ಲಿ ಮಾದಕ ಸೇವಿಸುವವರ ಮೇಲೆಯೂ ಕಠಿಣ ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ದಾವಣಗೆರೆ ಹಾಗೂ ಚಿತ್ರದುರ್ಗ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ನೌಕರರು, ವಿದ್ಯಾರ್ಥಿಗಳು ಆಗಿರುತ್ತಾರೆ ಎಂಬ ಕಾರಣದಿಂದ ಮಾದಕ ದ್ರವ್ಯ ಸೇವಿಸುವವರ ಮೇಲೆ ಮೃದು ಧೋರಣೆಯನ್ನು ಹೊಂದಲಾಗಿತ್ತು. … Read more