ದ್ವಿತೀಯ ಪಿಯುಸಿ: ಶೇ.61.88 ಫಲಿತಾಂಶ – ದಕ್ಷಿಣ ಕನ್ನಡ ಪ್ರಥಮ
ಸುದ್ದಿ360 ಬೆಂಗಳೂರು, ಜೂನ್ 18: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.61.88ರಷ್ಟು ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಸುದ್ದೀಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಒಟ್ಟು 5,99,794 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 4,02,697 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಗ್ರಾಮಾಂತರ ಪ್ರದೇಶದ ಫಲಿತಾಂಶ ಶೇ.62.18ರಷ್ಟಿದ್ದು ಉತ್ತಮವಾಗಿದೆ. ನಗರ ಪ್ರದೇಶದಲ್ಲಿ 61.78ರಷ್ಟಿದೆ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ … Read more