ನ.1 ರಂದು ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

ಸುದ್ದಿ360 ಬೆಂಗಳೂರು, ಆ.05: ಚಿತ್ರನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ  ಸಂಘದ  ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ನಂತರ  ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಶಸ್ತಿ ಕೊಡಮಾಡಲು ಸಿದ್ಧತೆಗಳನ್ನು ಕೈಗೊಳ್ಳಲು ಸಮಿತಿಯನ್ನು ರಚಿಸಲಾಗುವುದು.  ರಾಜ್ ಕುಮಾರ್ ಅವರ ಕುಟುಂಬದ ಸದಸ್ಯರು ಸಹ … Read more

ಪ್ರವೀಣ್ ಹತ್ಯೆ ಪ್ರಕರಣ – ದುಷ್ಕರ್ಮಿಗಳ ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು. 27 : ಸಮಾಜದಲ್ಲಿ ಹಿಂಸೆ, ಕ್ಷೋಭೆ ಉಂಟು ಮಾಡುವಂತಹ ದುಷ್ಕೃತ್ಯವನ್ನು ಎಸಗಿರುವ ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಆರ್ ಟಿ ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿ, ಮಂಗಳೂರಿನಲ್ಲಿ ನಿನ್ನೆ ನಡೆದ ಪ್ರವೀಣ್ ಹತ್ಯೆ ವಿಚಾರವಾಗಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.  ಅಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಆದೇಶ ನೀಡಲಾಗಿದೆ. ಕೇರಳ ರಾಜ್ಯದ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿರಲಾಗಿದೆ. ಮಂಗಳೂರು ಹಾಗೂ ಕಾಸರಗೋಡು … Read more

ಮೀಸಲಾತಿ: ಜಿಲ್ಲಾಡಳಿತ ಕಚೇರಿ ಮುತ್ತಿಗೆಗೆ ಮುಂದಾದ ಎಸ್ಸಿ-ಎಸ್ಟಿ ಸಂಘಟನೆಗಳು

ಅರ್ಧಗಂಟೆಗೂ ಹೆಚ್ಚು ಕಾಲ ಜಿಲ್ಲಾಡಳಿತ ಭವನ ಮುಖ್ಯ ದ್ವಾರದ ಎದುರು ಪಿಬಿ ರಸ್ತೆ ತಡೆ ಸುದ್ದಿ360, ದಾವಣಗೆರೆ ಜು.11: ಕರ್ನಾಟಕ ಸ್ವಾಭಿಮಾನಿ ಎಸ್ಸಿ-ಎಸ್ಟಿ ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಸದಸ್ಯರು, ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೆ ಆಗ್ರಹಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಮುಂದಾದ ಘಟನೆ ಸೋಮವಾರ ನಗರದಲ್ಲಿ ಜರುಗಿತು. ಮುನ್ನೆಚ್ಚರಿಕೆ ಕ್ರಮವಾಗಿ ಪಿಬಿ ರಸ್ತೆಗೆ ಹೊಂದಿಕೊಂಡಿರುವ ಜಿಲ್ಲಾಡಳಿತ ಭವನದ ಮುಖ್ಯದ್ವಾರದ ಕಮಾನು ಬಳಿಯೇ ಪೊಲೀಸರು ಬ್ಯಾರಿಕೇಡ್ … Read more

47ನೇ ಜಿಎಸ್‍ಟಿ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ

ಸುದ್ದಿ360 ಚಂಡಿಗಡ, ಜೂನ್ 28: ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಅವರು ಇಂದು ಚಂಡಿಗಡದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಎರಡು ದಿನಗಳ 47ನೇ ಜಿಎಸ್ಟಿ ಸಭೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕಾಣಿಕೆ ನೀಡಿ ಗೌರವಿಸಿದರು. ನಂತರ ಕೆಲಕಾಲ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಯಿತು.  ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ , ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾ … Read more

ಭದ್ರಾ  ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆಗೆ ಒತ್ತಾಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ನವದೆಹಲಿ, ಜೂನ್ 18: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕೆಂದು ಒತ್ತಾಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶುಕ್ರವಾರ ನವದೆಹಲಿಯಲ್ಲಿ ಜಿ.ಎಸ್.ಟಿ ಸಚಿವರ ಮಂಡಳಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ. ಮೇಕೆದಾಟು ಯೋಜನೆಯ ಡಿಪಿಆರ್ ಗೆ … Read more

ಪಠ್ಯಪುಸ್ತಕ ಸಲಹೆಗೆ ಸರ್ಕಾರ ಮುಕ್ತವಾಗಿದೆ: ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ ಜೂ.16: ಈ ಹಿಂದಿನ ಪಠ್ಯಪುಸ್ತಕದ ಬಗ್ಗೆಯೂ ಆಕ್ಷೇಪಣೆಗಳಿವೆ.  ಯಾವುದನ್ನು ಸರಿಪಡಿಸಬೇಕು ಎಂಬುದರ ಬಗ್ಗೆ ಸಲಹೆಗೆ ಮುಕ್ತ ಅವಕಾಶವಿದೆ. ರಾಜ್ಯದ ಜನರ ಸಲಹೆ ಸೂಚನೆ ಪಡೆದು ವೆಬ್ ಸೈಟ್ ನಲ್ಲಿ ಹಾಕಲಾಗುವುದು. ಒಟ್ಟಾರೆ ಎಲ್ಲಾ ಆಕ್ಷೇಪಣೆಗಳಿಗೆ ಸಲಹೆ ಪಡೆದ ನಂತರ ಪಠ್ಯ ಪರಿಷ್ಕರಣೆ ಅಂತಿಮ ರೂಪ ಪಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯ ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಪ್ಪಳ್ಳಿಯಿಂದ ಬೆಂಗಳೂರಿಗೆ ಪ್ರಗತಿಪರರು ಪಾದಯಾತ್ರೆ ಮಾಡುತ್ತಿರುವ  ಕುರಿತ ಮಾಧ್ಯಮದವರ ಪ್ರಶ್ನೆಗೆ … Read more

error: Content is protected !!