ಕರ್ನಾಟಕ ರಾಜ್ಯ  ಹಿಂದುಳಿದ ವರ್ಗದ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾಗಿ ಮಲ್ಲಿಕಾರ್ಜುನ್ ಕಬ್ಬೂರು, ಕಾರ್ಯಾಧ್ಯಕ್ಷರಾಗಿ ರಾಜು ನದಾಫ್ ಅವಿರೋಧ ಅಯ್ಕೆ

mallikarjun-kabbur-as-state-president-raju-nadaf-as-working-president

ಸುದ್ದಿ360 ಬೆಂಗಳೂರು: ಕರ್ನಾಟಕ ರಾಜ್ಯ   ಹಿಂದುಳಿದ ವರ್ಗದ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾಗಿ ದಾವಣಗೆರೆಯ ಮಲ್ಲಿಕಾರ್ಜುನ್ ಕಬ್ಬೂರು ಹಾಗೂ ಕಾರ್ಯಾಧ್ಯಕ್ಷರಾಗಿ ಬೆಳಗಾವಿಯ ರಾಜು ನದಾಫ್ ಅವಿರೋಧ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ವರ್ತಾ ಇಲಾಖೆಯ ಸಭಾಂಗಣದಲ್ಲಿ ಇಂದು (ಬುಧವಾರ) ನಡೆದ ಹಿಂದುಳಿದ ವರ್ಗಗಳ ಜಿಲ್ಲಾ ಮತ್ತು ಪ್ರಾದೇಶಿಕ  ಪತ್ರಿಕೆ ಸಂಪಾದಕರ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ರಾಮನಗರದ ಮತ್ತಿಕೆರೆ ಜಯರಾಮ್  ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಂಡ್ಯದ ಶಿವಪ್ರಕಾಶ್ ಎಂ.ಎಸ್. ಆಯ್ಕೆಯಾಗಿದ್ದಾರೆ. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ್ ಕಬ್ಬೂರು ಮಾತನಾಡಿ, ಅಧ್ಯಕ್ಷ ಹುದ್ದೆ … Read more

ಕರ್ನಾಟಕದಲ್ಲಿ ಜಂಗಲ್ ರಾಜ್ಯ – ದಪ್ಪ ಚರ್ಮದ ಸರ್ಕಾರ : ಬಸವರಾಜ ಬೊಮ್ಮಾಯಿ

BJP protests against the state government - suddi360

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ ಸುದ್ದಿ360 ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು. ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿಯವರು, ಕರ್ನಾಟಕದಲ್ಲಿ ಜಂಗಲ್ ರಾಜ್ಯ ಶುರುವಾಗಿದೆ. ಸಾಮಾನ್ಯರು ಭಯ … Read more

ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರೆಂಟಿಗಳಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರ ಭಾಷಣ ನೋಡಿದಾಗ ಜನರ ನಿರೀಕ್ಷೆ ಈಡೇರಿಸುವ, ಭಿನ್ನ ಆಡಳಿತ ನೀಡುವ ಬರವಸೆ ಇಲ್ಲ. ಚರ್ವಿತ ಚರ್ವಣ ಭಾಷಣ ಇದಾಗಿದೆ ಎಂದು … Read more

ವಿಪಕ್ಷ ನಾಯಕ ಸ್ಥಾನಕ್ಕೆ ನಮ್ಮಲ್ಲಿ ಎಲ್ಲರೂ ಸಮರ್ಥರು: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು: ಕರ್ನಾಟಕ ವಿಧಾನಸಭೆ ಬಜೆಟ್‍ ಅಧಿವೇಶನವು ಇಂದಿನಿಂದ ಆರಂಭಗೊಂಡಿದ್ದು, 10 ದಿನಗಳ ಕಾಲ ನಡೆಯಲಿದೆ. ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ಪ್ರಮುಖ ವಿರೋಧ ಪಕ್ಷ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನು ಘೋಷಣೆ ಮಾಡದಿರುವುದು ಮುಖ್ಯಮಂತ್ರಿ ಸಿದ್ಧರಮಯ್ಯ ಸೇರಿದಂತೆ ಕಾಂಗ್ರೆಸ್‍ ಮುಖಂಡರ ಟೀಕೆಗೆ ಬಿಜೆಪಿ ಒಳಗಾಗಿದೆ. ನಮ್ಮಲ್ಲಿ ಎಲ್ಲರೂ ಸಮರ್ಥರು ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಾಳೆಯಿಂದ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ. … Read more

ಕೈಗಾರಿಕೋದ್ಯಮಿಗಳ ಪ್ರತಿಭಟನೆ, ವಿದ್ಯುತ್ ನೀತಿ ಹಳಿ ತಪ್ಪಿರುವುದಕ್ಕೆ ಸಾಕ್ಷಿ : ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360, ಬೆಂಗಳೂರು: ರಾಜ್ಯ ಸರ್ಕಾರದ ವಿದ್ಯುತ್ ನೀತಿ ಖಂಡಿಸಿ ಮೊದಲ ಬಾರಿಗೆ ಕೈಗಾರಿಕೋದ್ಯಮಿಗಳು ಮುಷ್ಕರ ನಡೆಸಿರುವುದು ರಾಜ್ಯದ ವಿದ್ಯುಶ್ಚಕ್ತಿ ಹಳಿ ತಪ್ಪಿರುವುದಕ್ಕೆ ಇದೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಕೈಗಾರಿಕೆಯಲ್ಲಿ ಅತ್ಯಂತ ಮುಂದುವರೆದ ರಾಜ್ಯವಾಗಿದೆ. ಇಲ್ಲಿ ಸಣ್ಣ ಉದ್ಯಮಗಳಿಂದ ಹಿಡಿದು ‌ಬೃಹತ್ ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿದ್ಯುತ್ ನೀತಿ ಗ್ರಾಹಕರು ಹಾಗೂ ಕೈಗಾರಿಕೋದ್ಯಮಿಗಳಿಗೆ ಮಾರಕವಾಗಿರುವುದು ದುರ್ದೈವ ಮತ್ತು ಖಂಡನೀಯ.ಮುಂದಿನ … Read more

ದ್ವೇಷದ ತೀರ್ಮಾನ ತೆಗೆದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪವಾಗಿದೆ: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಬೆಂಗಳೂರು: ರಾಜ್ಯದಲ್ಲಿ ‌ಮುಂಗಾರು ವೈಫಲ್ಯವಾಗಿ ಹಲವಾರು ಗ್ರಾಮದಲ್ಲಿ ಕುಡಿಯುವ ನಿರಿನ ಹಾಹಾಕಾರ ಉಂಟಾಗಿದೆ, ಅಂತರ ಜಲ ಕುಸಿದಿದೆ. ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು, ದ್ವೇಷದ ತೀರ್ಮಾನಗಳನ್ನು ತೆಗೆದುಕೊಂಡು ಸಂಕಷ್ಟದಲ್ಲಿರುವ ಕರ್ನಾಟಕದ ಜನರಿಗೆ ಈ ಸರ್ಕಾರ ಶಾಪವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ … Read more

ಪಠ್ಯ ಪರಿಷ್ಕರಣೆ, ಮತಾಂತರ ಬಿಲ್ ಜೊತೆಗೆ ಎಪಿಎಂಸಿ  ಕಾಯ್ದೆಯೂ ರದ್ದುಪಡಿಸಲು ಸಚಿವ ಸಂಪುಟ ನಿರ್ಧಾರ

ಬೆಂಗಳೂರು; ರಾಷ್ಟ್ರಗೀತೆ ಹಾಡುವ ಸ್ಥಳಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸುವುದು, ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು ಮಾಡುವುದು ಸೇರಿದಂತೆ ಹಲವು ನಿರ್ಧಾರಗಳಿಗೆ   ಸಚಿವ ಸಂಪುಟ ಸಭೆ ಅನುಮೋದಿಸಿದೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ  ಎಚ್ ಕೆ ಪಾಟೀಲ್ ಮಾತನಾಡಿ, ಪಠ್ಯ ಪರಿಷ್ಕರಣೆ, ಮತಾಂತರ ಬಿಲ್ ಜೊತೆಗೆ ಎಪಿಎಂಸಿ  ಕಾಯ್ದೆಯೂ ರದ್ದುಪಡಿಸಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ. ಸಾರಿಗೆ ನೌಕರರ ವೇತನ 15ರಷ್ಟು ಪರಿಷ್ಕರಣೆಗೆ ಕ್ಯಾಬಿನೆಟ್ ಒಪ್ಪಿದೆ. 28 … Read more

ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಸೇರಿದಂತೆ 36 ಕೈ ಮುಖಂಡರಿಗೆ ಕೋರ್ಟ್‍ ಸಮನ್ಸ್ : ಸಿಎಂ – ಡಿಸಿಎಂ ಗೆ ಖುದ್ಧು ಹಾಜರಾಗುವಂತೆ ಕೋರ್ಟ್‍ ಸೂಚನೆ

ಸುದ್ದಿ360 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ  ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ 36 ಕಾಂಗ್ರೆಸ್ ಮುಖಂಡರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರ ವಿರುದ್ಧ ಪೊಲೀಸರು ಪ್ರಕರಣ … Read more

ಟೊಯೋಟಾ ಆಟೋ ಪಾರ್ಟ್ಸ್ ಕಂಪನಿಗೆ ಜಿಎಂಐಟಿಯ 10 ವಿದ್ಯಾರ್ಥಿಗಳು ಆಯ್ಕೆ

ಸುದ್ದಿ360, ದಾವಣಗೆರೆ, ಏ.18: ಬೆಂಗಳೂರಿನ ಟೊಯೋಟಾ ಇಂಡಿಯಾ ಆಟೋ ಪಾರ್ಟ್ಸ್ ಪ್ರೈವೇಟ್ ಲಿಮಿಟೆಡ್ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ದಾವಣಗೆರೆ ಜಿಎಂಐಟಿ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ 10 ವಿದ್ಯಾರ್ಥಿಗಳು ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದೇ ಏ. 17ರಂದು ನಡೆದ ಸಂದರ್ಶನ ಪ್ರಕ್ರಿಯೆಯಲ್ಲಿ ಹಲವು ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸಂದರ್ಶನ ಸುತ್ತುಗಳಲ್ಲಿ ತಮ್ಮ … Read more

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅಸ್ತು – ಮಾರ್ಚ್ 27ರಿಂದ ಪರೀಕ್ಷೆ

ಸುದ್ದಿ360 ಬೆಂಗಳೂರು: ರಾಜ್ಯ ಪಠ್ಯಕ್ರಮದಂತೆ ಅಭ್ಯಾಸ ನಡೆಸುತ್ತಿರುವ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ (ಬೋರ್ಡ್) ಪರೀಕ್ಷೆ ನಡೆಸಲು ಹೈಕೋರ್ಟ್ ಹಸಿರು ನಿಶಾನೆ ನೀಡಿದೆ. ಈ ಮೂಲಕ  ಹೈಕೋರ್ಟ್ ವಿಭಾಗೀಯ ಪೀಠ ಈ ಹಿಂದೆ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿದ್ದು, ಬೋರ್ಡ್ ಪರೀಕ್ಷೆಗೆ ಷರತ್ತು ಬದ್ಧ ಅನುಮತಿ ನೀಡಿದೆ. ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿರುವ ವಿಭಾಗೀಯ ಪೀಠ ಯಾವುದೇ ವಿದ್ಯಾರ್ಥಿಯನ್ನು ಫೇಲ್ ಮಾಡುವಂತಿಲ್ಲ ಎಂದು ಆದೇಶಿಸಿದೆ. 5 ಮತ್ತು 8ನೇ ತರಗತಿಯ … Read more

error: Content is protected !!