ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಹುಮಾತದೊಂದಿಗೆ ಗೆಲುವು ನಿಶ್ಚಿತ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು.18: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಆಯ್ಕೆಯನ್ನು ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ 2/3  ಬಹುಮತದೊಂದಿಗೆ ಗೆಲ್ಲುವುದು ನಿಶ್ಚಿತ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಷ್ಟ್ರಪತಿ ಚುನಾವಣೆಯಲ್ಲಿ ಇದ್ದ ಹಿಂದಿನ  ದಾಖಲೆಯನ್ನ ಮುರಿಯುವ ಎಲ್ಲಾ ಸಾಧ್ಯತೆಗಳಿವೆ.  ದ್ರೌಪದಿ ಮುರ್ಮು ಅವರು ಮಾನವೀಯ ಗುಣಗಳನ್ನು ಹೊಂದಿದ್ದು, ಅತ್ಯುನ್ನತ ಸ್ಥಾನ ಕ್ಕೇರುವುದು ಭಾರತದ ಪ್ರಜಾಪ್ರಭುತ್ವ ಹಾಗೂ ಭವಿಷ್ಯಕ್ಕೆ ಒಳ್ಳೆಯದಾಗಲಿದೆ ಎಂಬ ನಿರೀಕ್ಷೆ ನಮ್ಮದು ಎಂದರು. ದೇಶಾದ್ಯಂತ ರಾಷ್ಟ್ರಪತಿ … Read more

ಸರ್ಕಾರಿ ಕಚೇರಿ ಫೋಟೊ-ವೀಡಿಯೋ ಕುರಿತು ಇದ್ದ ನಿಷೇಧದ ಆದೇಶ ವಾಪಸ್

ಸುದ್ದಿ360, ಬೆಂಗಳೂರು, ಜು.16: ರಾಜ್ಯ ಸರ್ಕಾರದ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ವೀಡಿಯೋ ಮಾಡಬಾರದು ಎಂಬ ಆದೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ವಾಪಸ್ ಪಡೆಯಲಾಗಿದೆ. ಕರ್ನಾಟಕ ರಾಜ್ಯ ನೌಕರರ ಸಂಘ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯಬಾರದು ಮತ್ತು ವಿಡಿಯೋ ಮಾಡದಂತೆ ನಿಷೇಧಿಸಿ ಆದೇಶವನ್ನು ಹೊರಡಿಸಲಾಗಿತ್ತು. ಈ ಆದೇಶವನ್ನು ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಮಧ್ಯರಾತ್ರಿಯೇ … Read more

ರೈತರ ಬೇಡಿಕೆಗೆ ಮುಖ್ಯಮಂತ್ರಿಯಿಂದ ಸಕಾರಾತ್ಮಕ ಸ್ಪಂದನೆಯ ಭರವಸೆ

ಸುದ್ದಿ360, ದಾವಣಗೆರೆ, ಜು.12: ಕರ್ನಾಟಕ ರಾಜ್ಯ ರೈತ ಸಂಘದವರ ನಿಯೋಗ ಸೋಮವಾರ‌ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವ ನಿರ್ಧಾರ ಪ್ರಕಟಿಸಿದರು. ರೈತರ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಸಕಾರಾತ್ಮಕವಾಗಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ನಾರಾಯಣಗೌಡ, ಶಾಸಕ ಸಿ ಪಿ ಯೋಗೇಶ್ವರ  ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತರ ಧರ್ಮಗಳನ್ನು ಗೌರವಿಸಿ ಸಮನ್ವಯ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧ್ಯ

ಡಾ. ಎಲ್.ಶಿವಲಿಂಗಯ್ಯನವರ ‘ನುಡಿ-ನಮನ’ ಕಾರ್ಯಕ್ರಮದಲ್ಲಿ ಸಿಎಂ ಅಭಿಮತ ಸುದ್ದಿ360, ಬೆಂಗಳೂರು, ಜು.10: ಇತರ ಧರ್ಮಗಳನ್ನು ಗೌರವಿಸುವ ಮೂಲಕ ಸಮನ್ವಯ ಸಾಧಿಸಬೇಕಿದೆ. ಸಮಾಜದ ಎಲ್ಲ ವರ್ಗದ ಜನರೊಂದಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಸಮನ್ವಯ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ಸಮಾನತೆಯ ಭಾವವನ್ನು ತರಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು  ಬೆಂಗಳೂರಿನಲ್ಲಿ ನಿವೃತ್ತ ಇಂಜಿನಿಯರ್ ಇನ್ ಚೀಫ್ ಹಾಗೂ ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ  ಡಾ. ಎಲ್.ಶಿವಲಿಂಗಯ್ಯನವರ ‘ನುಡಿ-ನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. … Read more

ಅಮರನಾಥ ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ

ಸುದ್ದಿ360, ಬೆಂಗಳೂರು ಜು.8: ಇಂದು ಸುಮಾರು 5:30 ರ ಸಮಯಕ್ಕೆ  ಶ್ರೀ ಅಮರನಾಥ ಗುಹೆಯ ಬಳಿ ಮೋಡದ ಸ್ಫೋಟದಿಂದಾಗಿ ಯಾತ್ರಿಕರ ವಾಸಸ್ಥಳಗಳಿಗೆ ಹಾನಿಯಾಗಿದೆ. NDRF, ITBP, ಭಾರತೀಯ ಸೇನೆ, CRPF, BSF, SDRF ಮತ್ತು ಜಮ್ಮು ಮತ್ತು ಕಾಶ್ಮೀರ್ ಪೋಲಿಸ್ ಜಂಟಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಸಂಕಷ್ಟದಲ್ಲಿ ಸಿಲುಕಿದವರಿಗೆ ಜಮ್ಮು ಕಾಶ್ಮೀರ ಸರ್ಕಾರವು ಸಹಾಯಹಸ್ತ ಚಾಚಿದೆ. ಶ್ರೀ ಅಮರನಾಥ ಗುಹೆಯ ಬಳಿ ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ ದಯವಿಟ್ಟು ಕೆಳಗಿನ ಸಂಖ್ಯೆಗೆ ಕರೆ ಮಾಡಿ ಸಂಪರ್ಕ ಮಾಡಬಹುದಾಗಿದೆ.‌  … Read more

ಸಾಲುಮರದ ತಿಮ್ಮಕ್ಕನಿಗೆ ಸಂಪುಟ ದರ್ಜೆ ಸ್ಥಾನಮಾನ

ಸುದ್ದಿ360, ಬೆಂಗಳೂರು ಜು.8: ರಾಜ್ಯ ಸರ್ಕಾರವು ಪರಿಸರ ರಾಯಭಾರಿಯನ್ನಾಗಿ ನೇಮಿಸಿರುವ ಸಾಲುಮರದ ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವುದಾಗಿ ಇತ್ತೀಚೆಗೆ ಘೋಷಿಸಿದ್ದರು. ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಶಿಷ್ಟಾಚಾರ ವಿಭಾಗ ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ತಿಮ್ಮಕ್ಕ ಅವರಿಗೆ ವೇತನ, ಭತ್ಯೆ, ವಸತಿಗೃಹ, ಸಿಬ್ಬಂದಿ ಕಾರು ಸೇರಿದಂತೆ ಸಂಪುಟ ದರ್ಜೆ ಸಚಿವರಿಗೆ ದೊರೆಯವ ಸೌಲಭ್ಯಗಳು ದೊರೆಯಲಿವೆ.

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅನುಭವ ಇಡೀ ದೇಶಕ್ಕೆ ಲಾಭ ತಂದುಕೊಡಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು.08: ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಕನ್ನಡ ನಾಡಿನ ಸಮಗ್ರ ಜನತೆಗೆ ಬಹಳ ಸಂತಸವುಂಟಾಗಿದ್ದು, ಅವರ ಅಗಾಧವಾದ ಅನುಭವ ಇಡೀ ದೇಶಕ್ಕೆ ಲಾಭವನ್ನು ತಂದುಕೊಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಶ್ರೀಯುತರು ನಾಲ್ಕೈದು ದಶಕಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮಾತ್ರವಲ್ಲ, ರಾಜ್ಯದಾದ್ಯಂತ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ.  ಅವರ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮ ಬಹಳ ಯಶಸ್ವಿಯಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ, ಕೆರೆಗಳ ನಿರ್ಮಾಣ, … Read more

ಭಾರಿ ಮಳೆ – ರಕ್ಷಣಾ, ಪರಿಹಾರ ಕಾರ್ಯಕ್ಕೆ ಸೂಚನೆ: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360,ಬೆಂಗಳೂರು, ಜುಲೈ 06 : ಭಾರಿ ಮಳೆಯಿಂದ  ಹಾನಿಗೊಳಗಾದ ಪ್ರದೇಶಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ರಕ್ಷಣಾ ಹಾಗೂ ಪರಿಹಾರ  ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ 36 ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದ ನಂತರ  ಮಾಧ್ಯಮದವರೊಂದಿಗೆ ಮಾತನಾಡಿದರು. ಕರಾವಳಿ ಮತ್ತು ಕೊಡಗು ಭಾಗಗಳಲ್ಲಿ ಮನೆಗಳಿಗೆ ಹಾನಿಯುಂಟಾಗಿರುವುದರಿಂದ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ತಂಡವನ್ನು ನಿಯೋಜಿಸಿ  … Read more

ಡಾ. ಬಾಬು ಜಗಜೀವನ್‍ರಾಂ 36ನೇ ಪುಣ್ಯ ಸ್ಮರಣೆ – ಮುಖ್ಯಮಂತ್ರಿಯಿಂದ ಪುಷ್ಪ ನಮನ

ಸುದ್ದಿ360 ಬೆಂಗಳೂರು.ಜು.05: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಪಶ್ಚಿಮದ್ವಾರದ ಬಳಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ದಿವಂಗತ ಡಾ. ಬಾಬು ಜಗಜೀವನ್‍ರಾಂ ಅವರ 36ನೇ ಪುಣ್ಯ ಸ್ಮರಣೆಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಮಾಜಿ ಸಚಿವ ಎಚ್ ಆಂಜನೇಯ ಮತ್ತು ಇತರರು ಉಪಸ್ಥಿತರಿದ್ದರು.

ಸಿದ್ದರಾಮಯ್ಯರ ಅವಧಿಯಲ್ಲಿ ಪೊಲೀಸ್ ನೇಮಕಾತಿ ಹಗರಣಗಳಾದಾಗ ನೀವು ರಾಜಿನಾಮೆ ನೀಡಿದ್ರಾ ?

ವಿರೋಧ ಪಕ್ಷದ ನಾಯಕರಿಗೆ  ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನೆ ಸುದ್ದಿ360,ಬೆಂಗಳೂರು, ಜುಲೈ 06 : ವಿರೋಧಪಕ್ಷದ ನಾಯಕರಾದ ಸಿದ್ಧರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ನೇಮಕಾತಿ ಹಗರಣಗಳು ನಡೆದಿವೆ. ಅಂತಹ ಸಂದರ್ಭದಲ್ಲಿ ಅವರು ರಾಜಿನಾಮೆಯನ್ನು ನೀಡಿದ್ದರೆ? ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು. ಅವರು ಮಂಗಳವಾರ ಕಾವೇರಿ ನೀರಾವರಿ ನಿಗಮ ನಿಯಮಿತದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ನೇಮಕಾತಿ ಪರೀಕ್ಷಾ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕು … Read more

error: Content is protected !!