ನಮ್ಮದು ರಾಷ್ಟ್ರೀಯ ಪಕ್ಷ – ರಾಷ್ಟ್ರೀಯತೆಯೇ ನಮ್ಮ ನಿಲುವು: ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ, ಆ. 01: ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆಯೇ ನಮ್ಮ ನಿಲುವು. ಯಾರಿಗೂ ಬೇಧ-ಭಾವ ಮಾಡುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ತಿಳಿಸಿದರು. ಇಂದು ದಾವಣಗೆರೆಗೆ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಂತಹ ಸಂದರ್ಭ ಜಿಎಂಐಟಿ ಹಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾರಿಗೂ ಬೇಧಭಾವ ಮಾಡುವ ಮಾತೇ ಇಲ್ಲ. ಅಂತಹ ವಿಚಾರಗಳು ಹಿಂದಿನ ಸರ್ಕಾರಗಳು ಅವರ ಕಾಲದಲ್ಲಿ ಏನೇನು ಮಾಡಿದ್ದಾರೆ ಅದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಅವರು ಸುದ್ದಿಗಾರರ … Read more

ಯುವ ಮೋರ್ಚಾ ಕಾರ್ಯಕರ್ತರು ರಾಜೀನಾಮೆ ಕೊಟ್ಟ ತಕ್ಷಣ ಬಿಜೆಪಿ ಮುಳುಗಿಹೋಗಲ್ಲ- ಯಾರೂ ರಾಜೀನಾಮೆ ನೀಡಿಲ್ಲ : ಸಂಸದ ಸಿದ್ದೇಶ್ವರ

ಸುದ್ದಿ360, ದಾವಣಗೆರೆ ಜು.30: ಯುವ ಮೋರ್ಚಾ ಕಾರ್ಯಕರ್ತರು ಯಾರೂ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ರಾಜೀನಾಮೆ ಕೊಡುವ ಮುನ್ನ ನಮ್ಮ ಜಿಲ್ಲಾಧ್ಯಕ್ಷರು, ಶಾಸಕರು ನಮ್ಮ ಬಳಿ ಮಾತನಾಡಬೇಕು. ಅವರು ಪಕ್ಷಕ್ಕೆ ಇದುವರೆಗೂ ರಾಜೀನಾಮೆ ಸಲ್ಲಿಸಿಲ್ಲ. ಕೆಲವರು ಟಿವಿಯಲ್ಲಿ ಬರಬೇಕೆಂದು ರಾಜೀನಾಮೆ ಕೊಟ್ಟಿದ್ದೇವೆಂದು ಹೇಳಿರಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಸಾಲು ಸಾಲು ರಾಜೀನಾಮೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ … Read more

ಪ್ರವೀಣ್ ಹತ್ಯೆ ಯೋಜನಾಬದ್ಧವಾದ ಭಯೋತ್ಪಾದಕ ಕೃತ್ಯ: ಮುಖ್ಯಮಂತ್ರಿ ಬೊಮ್ಮಾಯಿ

ಸರ್ಕಾರ ಮತ್ತು ಬಿಜೆಪಿ ಪಕ್ಷದಿಂದ ತಲಾ 25 ಲಕ್ಷ ರೂ ಚೆಕ್ ಪ್ರವೀಣ್ ಕುಟುಂಬಕ್ಕೆ ಸುದ್ದಿ360 ಮಂಗಳೂರು, ಜು. 28 : ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಅವರು ಇಂದು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ಮಾಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರವೀಣ್ ತಮ್ಮ … Read more

ಸೂತಕದ ಛಾಯೆ ನಡುವೆಯೇ ರಾಜ್ಯ ಬಿಜೆಪಿ ಸರ್ಕಾರದಿಂದ ನೂತನ ಯೋಜನೆಗಳ ಲೋಕಾರ್ಪಣೆ

ಎಸ್ ಸಿ /ಎಸ್ ಟಿ ಸಮುದಾಯಗಳಿಗೆ 75 ಯೂನಿಟ್ ಉಚಿತ ವಿದ್ಯುತ್ , ಸ್ವಯಂ ಉದ್ಯೋಗ ಯೋಜನೆ , 8000 ಶಾಲಾ ಕೊಠಡಿಗಳ ನಿರ್ಮಾಣ, ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣ, ‘ಸ್ತ್ರೀ ಸಾಮರ್ಥ್ಯ’ ಯೋಜನೆ, ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ, ಪುಣ್ಯಕೋಟಿ ದತ್ತು ಯೋಜನೆ, ವಿದ್ಯಾನಿಧಿ ಯೋಜನೆ.

2023ರಲ್ಲಿ 135 ಕ್ಕೂ ಹೆಚ್ಚು ಸ್ಥಾನ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ

ದಾವಣಗೆರೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಸುದ್ದಿ360 ದಾವಣಗೆರೆ, ಜು.12:  2023ರಲ್ಲಿ ನೂರಕ್ಕೆ  ನೂರರಷ್ಟು ಕಾಂಗ್ರೆಸ್ ಸರ್ಕಾರ ಬರುತ್ತದೆ. 135 ಕ್ಕೂ ಹೆಚ್ಚು ಸ್ಥಾನಗಳನ್ನ ಕಾಂಗ್ರೆಸ್ ಗೆಲ್ಲುತ್ತದೆ. ಈಗ ಚುನಾವಣೆ ಮಾಡಿದರೂ ನಾವು ಚುನಾವಣೆಗೆ ಸಿದ್ಧರಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯ ನಾಯಕರಿಗೆ ಈಗಾಗಲೇ ಭಯ ಶುರುವಾಗಿದೆ. ವಿಶೇಷವಾಗಿ ಸಚಿವ ಸ್ಥಾನ ಕಳೆದುಕೊಂಡಿರುವ ಕೆಎಸ್ ಈಶ್ವರಪ್ಪ ಅವರಿಗೆ ಭಯ ಶುರುವಾಗಿದೆ‌. ಇದೇ ಕಾರಣಕ್ಕೆ ಅವರು ಅಮೃತ ಮಹೋತ್ಸವದ ಬಗ್ಗೆ … Read more

ರೈತರ ಬೇಡಿಕೆಗೆ ಮುಖ್ಯಮಂತ್ರಿಯಿಂದ ಸಕಾರಾತ್ಮಕ ಸ್ಪಂದನೆಯ ಭರವಸೆ

ಸುದ್ದಿ360, ದಾವಣಗೆರೆ, ಜು.12: ಕರ್ನಾಟಕ ರಾಜ್ಯ ರೈತ ಸಂಘದವರ ನಿಯೋಗ ಸೋಮವಾರ‌ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವ ನಿರ್ಧಾರ ಪ್ರಕಟಿಸಿದರು. ರೈತರ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಸಕಾರಾತ್ಮಕವಾಗಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ನಾರಾಯಣಗೌಡ, ಶಾಸಕ ಸಿ ಪಿ ಯೋಗೇಶ್ವರ  ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮಳೆ ಪೀಡಿತ  ಜಿಲ್ಲೆಗಳಿಗೆ ಸಿಎಂ ಪ್ರವಾಸ

ಸ್ಥಿತಿಗತಿ ಪರಿಶೀಲಿಸಿ ಪರಿಹಾರಕ್ಕೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360, ಬೆಂಗಳೂರು, ಜು.11: ಅತಿವೃಷ್ಟಿ ಯಿಂದ ಹಾನಿಗೊಳಗಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ನಾಳೆ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಮಲೆನಾಡು, ಕೊಡಗು, ಕರಾವಳಿ ಹಾಗೂ ಉತ್ತರ ಕನ್ನಡ ಭಾಗದಲ್ಲಿಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಈಗಾಗಲೇ ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ಹಾಗೂ ನೇರವಾಗಿಯೂ ಮಾತನಾಡಿದ್ದು, ಮಳೆ … Read more

ಭಾರಿ ಮಳೆ – ರಕ್ಷಣಾ, ಪರಿಹಾರ ಕಾರ್ಯಕ್ಕೆ ಸೂಚನೆ: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360,ಬೆಂಗಳೂರು, ಜುಲೈ 06 : ಭಾರಿ ಮಳೆಯಿಂದ  ಹಾನಿಗೊಳಗಾದ ಪ್ರದೇಶಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ರಕ್ಷಣಾ ಹಾಗೂ ಪರಿಹಾರ  ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ 36 ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದ ನಂತರ  ಮಾಧ್ಯಮದವರೊಂದಿಗೆ ಮಾತನಾಡಿದರು. ಕರಾವಳಿ ಮತ್ತು ಕೊಡಗು ಭಾಗಗಳಲ್ಲಿ ಮನೆಗಳಿಗೆ ಹಾನಿಯುಂಟಾಗಿರುವುದರಿಂದ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ತಂಡವನ್ನು ನಿಯೋಜಿಸಿ  … Read more

ಜು.11ಕ್ಕೆ ರೈತರಿಂದ ಮುಖ್ಯಮಂತ್ರಿ ಮನೆಗೆ ಮುತ್ತಿಗೆ

ಸುದ್ದಿ360 ದಾವಣಗೆರೆ, ಜು.02: ಕಬ್ಬು ಬೆಳೆಗೆ ಕನಿಷ್ಠ ಬೆಲೆ ನಿಗದಿ, ಹಳೇ ಬಾಕಿ ಪಾವತಿ ಹಾಗೂ ಕರ ನಿರಾಕರಣೆ ಚಳವಳಿಯಲ್ಲಿ ಕಟ್ಟದ ಗೃಹ ವಿದ್ಯುತ್ ಬಿಲ್ ಬಲತ್ಕಾರ ವಸೂಲಿ ಕ್ರಮದ ವಿರುದ್ಧ ಜು.11ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಅಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಮುಖ್ಯಮಂತ್ರಿಗಳ … Read more

ಜಿಎಸ್ ಟಿ ಪರಿಹಾರ: ಆಗಸ್ಟ್ ತಿಂಗಳಲ್ಲಿ  ಅಂತಿಮ ನಿರ್ಣಯ – ಸಿಎಂ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು, ಜೂನ್ 30: ಜಿಎಸ್ ಟಿ ಮಂಡಳಿ ಸಭೆಯಲ್ಲಿ ರಾಜ್ಯಗಳಿಗೆ ಜಿಎಸ್ ಟಿ ಪರಿಹಾರವನ್ನು ವಿಸ್ತರಿಸುವ ಬಗ್ಗೆ ಚರ್ಚೆಯಾಗಿದೆ. ಆಗಸ್ಟ್ ತಿಂಗಳಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಜಿ. ಎಸ್.ಟಿ ಕಾನೂನು ಸಮಿತಿಯು ಕಾನೂನು ತೊಡಕುಗಳನ್ನು ನಿವಾರಣೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ.  ಫಿಟ್ ಮೆಂಟ್ ಸಮಿತಿಯ ಶಿಫಾರಸ್ಸುಗಳನ್ನು ಅಂಗೀಕರಿಸಲಾಗಿದೆ ಎಂದು ತಿಳಿಸಿದರು.

error: Content is protected !!